Thursday, September 24, 2026
Menu

ಅಧಿಕಾರಿಗಳ ಜೊತೆ ಚರ್ಚಿಸಿ ಕಸ್ತೂರಿ ರಂಗನ್ ವರದಿ ಭೌತಿಕ ಸಮೀಕ್ಷೆ ಬಗ್ಗೆ ತೀರ್ಮಾನ: ಸಿಎಂ

ಕಸ್ತೂರಿ ರಂಗನ್ ವರದಿಗೆ ಸಂಬಂಧಿದಂತೆ ಈ ಭಾಗದ ಸಂಘಟನೆಗಳು ಹಾಗೂ ಜನ ಪ್ರತಿನಿಧಿಗಳು ಭೌತಿಕ ಸಮೀಕ್ಷೆ ನಡೆಸುವ ಬಗ್ಗೆ ಸಲಹೆ ನೀಡಿದ್ದು, ಈ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚಿಸಿ ತೀರ್ಮಾನ ಮಾಡಲಾಗುವುದು ಎಂದು ಸಿಎಂ ಡಿಕೆ ಶಿವಕುಮಾರ್ ಭರವಸೆ ನೀಡಿದರು. ಉಡುಪಿ ಜಿಲ್ಲೆಯ ಹೆಬ್ರಿಯಲ್ಲಿ ಕಸ್ತೂರಿ ರಂಗನ್ ವರದಿ ಕುರಿತ ಸಾಧಕ ಬಾಧಕಗಳ ಕುರಿತು ಶಿವಕುಮಾರ್  ಸ್ಥಳೀಯ ಜನರ ಜೊತೆ ಸಭೆ ನಡೆಸಿ ಮಾತನಾಡಿದರು. ನೀವು ಕಸ್ತೂರಿ ರಂಗನ್ ವರದಿ, ಪರಿಸರ

ತುಳು 2ನೇ ಅಧಿಕೃತ ರಾಜ್ಯ ಭಾಷೆ: ಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಘೋಷಣೆ

ಮಂಗಳೂರಿನಲ್ಲಿ ಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ತುಳುವನ್ನು ಎರಡನೇ ಅಧಿಕೃತ ರಾಜ್ಯ ಭಾಷೆ ಎಂದು ಘೋಷಿಸಲು ನಿರ್ಧಾರ ಕೈಗೊಳ್ಳಲಾಗಿದೆ ಎಂದು  ಸಿಎಂ ಘೋಷಣೆ ಮಾಡಿದ್ದಾರೆ. ಬಹುಕಾಲದಿಂದ ನಿರೀಕ್ಷೆಯಲ್ಲಿದ್ದ ಮಹತ್ವದ ತುಳು ಭಾಷೆಗೆ ಎರಡನೇ ಹೆಚ್ಚುವರಿ ಆಡಳಿತ

ಗ್ಯಾರಂಟಿಗಳ ಪಾರದರ್ಶಕ ಅನುಷ್ಠಾನಕ್ಕೆ ಗ್ರಾ.ಪಂ, ವಾರ್ಡ್ ಮಟ್ಟದಲ್ಲಿ 6 ಸದಸ್ಯರ ಸಮಿತಿ: ರೇವಣ್ಣ

ರಾಜ್ಯ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳ ಪಾರದರ್ಶಕ ಅನುಷ್ಠಾನ ಹಾಗೂ ಮರುಪರಿಶೀಲನೆಗಾಗಿ ಪ್ರತಿ ಗ್ರಾಮ ಪಂಚಾಯಿತಿ ಮತ್ತು ವಾರ್ಡ್ ಮಟ್ಟದಲ್ಲಿ ‘ಗ್ರಾಮ ಗ್ಯಾರಂಟಿ ಸಮಿತಿ’ ರಚಿಸಲಾಗುವುದು ಎಂದು ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಎಚ್‌.ಎಂ. ರೇವಣ್ಣ  ಹೇಳಿದ್ದಾರೆ. ಮಂಗಳೂರಿನಲ್ಲಿ

ಸೌಜನ್ಯ ಕೇಸ್‌ ತನಿಖೆಯಲ್ಲಿ ಏನು ಮಾಡಿದ್ದೀರಿ: ಸಿಬಿಐಗೆ ಸುಪ್ರೀಂ ತರಾಟೆ

ಸೌಜನ್ಯ ಕೇಸ್‌ಗೆ ಸಂಬಂಧಿಸಿದಂತೆ ಸಿಐಡಿ ವರದಿ ಟ್ರಾನ್ಸ್‌ಲೇಟ್‌ ಬಿಟ್ಟು ಮತ್ತೇನು ಮಾಡಿದ್ದೀರಿ ಎಂದು ಸುಪ್ರೀಂ ಕೋರ್ಟ್‌ ಸಿಬಿಐಯನ್ನು ತರಾಟೆಗೆ ತೆಗೆದುಕೊಂಡಿದೆ. ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ತ್ತು ಕೊಲೆ ಪ್ರಕರಣದ ಮರು ತನಿಖೆಗೆ ಸಂಬಂಧಿಸಿದ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಆದೇಶ

ಬಂಟ್ವಾಳ ಬಸ್‌ ನಿಲ್ದಾಣದಲ್ಲಿ ಯುವತಿಯ ಹತ್ಯೆಗೈದ ಯುವಕ 

ದಕ್ಷಿಣ ಕನ್ನಡ ಜಿಲ್ಲೆಯ ಬಿ.ಸಿ.ರೋಡ್‌ ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದ ಬಳಿ ಯುವಕನೊಬ್ಬ ಯುವತಿ ಮೇಲೆ ಮಾರಕಾಸ್ತ್ರದಿಂದ ಹಲ್ಲೆ ನಡೆಸಿ ಹತ್ಯೆ ಮಾಡಿರುವ ಘಟನೆ ನಡೆದಿದೆ.  ಕಕ್ಯಪದವು ನಿವಾಸಿ ಲಾವಣ್ಯ (21) ಕೊಲೆಯಾದ ಯುವತಿ. ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಚಿಕಿತ್ಸೆಗೆ

ಮಂಗಳೂರಿನಲ್ಲಿ ಎಂಟು ಬಾಂಗ್ಲಾದೇಶಿಗಳ ಬಂಧನ

ಅಕ್ರಮವಾಗಿ ಭಾರತ ಪ್ರವೇಶಿಸಿ, ನಕಲಿ ಆಧಾರ್ ಕಾರ್ಡ್‌ಗಳನ್ನು ಬಳಸಿ ಮಂಗಳೂರಿನ ಮುಕ್ಕಾ ಪ್ರದೇಶದ ಕಟ್ಟಡ ನಿರ್ಮಾಣ ಕಾಮಗಾರಿಯಲ್ಲಿ ತೊಡಗಿದ್ದ 8 ಮಂದಿ ಬಾಂಗ್ಲಾದೇಶದ ಪ್ರಜೆಗಳನ್ನು ಸುರತ್ಕಲ್ ಪೊಲೀಸರು  ಪತ್ತೆ ಹಚ್ಚಿದ್ದಾರೆ ಎಂದು ಮಂಗಳೂರು ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ  ತಿಳಿಸಿದ್ದಾರೆ.

ಬೆಳ್ತಂಗಡಿಯಲ್ಲಿ ಬಿಎಲ್​ಒಗೆ ಜಾತಿ ನಿಂದನೆ: ಕೇಸ್ ದಾಖಲು

ಎಸ್​​ಐಆರ್​​​ಗೆ ಮತದಾರರ ಮನೆಗೆ ತೆರಳಿದ್ದ ಬಿಎಲ್​​​​ಒಗೆ ಜಾತಿ ನಿಂದನೆ ಮಾಡಿದ ಆರೋಪ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಶಿರ್ಲಾಲು ಗ್ರಾಮದಲ್ಲಿ ಕೇಳಿಬಂದಿದೆ. ಬಿಎಲ್​​​​ಒ ದಲಿತ ಎಂಬ ಕಾರಣಕ್ಕೆ ಹೊರಗೆ ನಿಲ್ಲಿಸಿ ಜಾತಿ ನಿಂದನೆ ಮಾಡಲಾಗಿದ್ದು, ಅಟ್ರಾಸಿಟಿ ಕೇಸ್ ದಾಖಲಾಗಿದೆ. ಎಸ್ಐಆರ್

ಕರಾವಳಿ, ಮಲೆನಾಡುಗಳಲ್ಲಿ ಮುಂದಿನ ಮೂರು ದಿನ ಬಿರುಗಾಳಿ ಮಳೆ, ಭೂಕುಸಿತ ಸಾಧ್ಯತೆ

ರಾಜ್ಯದ ಹಲವು ಜಿಲ್ಲೆಗಳಲ್ಲಿ ನಿರಂತರ ಭಾರಿ ಮಳೆಯಾಗುತ್ತಿದ್ದು, ಕರಾವಳಿ ಮತ್ತು ಮಲೆನಾಡುಗಳಲ್ಲಿ ಇನ್ನು ಮೂರು ದಿನ ೬೦ ಕಿಮೀ ವೇಗದಲ್ಲಿ ಬಿರುಗಾಳಿ ಸಹಿತ ವಿಪರೀತ ಮಳೆ ಸುರಿಯಲಿದೆ. ಮಲೆನಾಡು ಹಾಗೂ ಕರಾವಳಿಯನ್ನು ಸಂಪರ್ಕಿಸುವ ಪ್ರಮುಖ ಘಟ್ಟ ರಸ್ತೆಗಳಲ್ಲಿ ಜುಲೈ 11ರವರೆಗೆ ಭೂಕುಸಿತ

ಬ್ರಿಡ್ಜ್ ಮ್ಯಾನ್’ ಪದ್ಮಶ್ರೀ ಪುರಸ್ಕೃತ ಗಿರೀಶ್ ಭಾರದ್ವಾಜ್ ನಿಧನ

ದೇಶದ ಬ್ರಿಡ್ಜ್‌ ಮ್ಯಾನ್‌ ಎಂದು ಹೆಸರಾಗಿದ್ದ ಪದ್ಮಶ್ರೀ ಪುರಸ್ಕೃತ ಡಾ. ಗಿರೀಶ್ ಭಾರದ್ವಾಜ್ (76) ಮಂಗಳವಾರಮುಂಜಾನೆ ಸುಳ್ಯದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಕೆಲವು ದಿನಗಳಿಂದ ಹೃದಯ ಸಂಬಂಧಿ ಸಮಸ್ಯೆಯಿಂದ ಬಳಲುತ್ತಿದ್ದ ಸುಳ್ಯದ ಕೆವಿಜಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರು ಪತ್ನಿ ಉಷಾ ಹಾಗೂ

ಮಂಗಳೂರಿನಲ್ಲಿ ಮಳೆಗೆ ಮನೆ ಕುಸಿದು ಮೂವರ ಸಾವು

ದಕ್ಷಿಣ ಕನ್ನಡದಲ್ಲಿ ವ್ಯಾಪಕ ಮಳೆ ಸುರಿಯುತ್ತಿದ್ದು, ಮಂಗಳೂರಿನ ಕಂಕನಾಡಿಯಲ್ಲಿ ಹಳೆಯ ಹಂಚಿನ ಮನೆಯೊಂದರ ಚಾವಣಿ ಹಾಗೂ ಗೋಡೆ ಕುಸಿದು ಬಿದ್ದು, ನಿದ್ದೆಯಲ್ಲಿದ್ದ ಮೂವರು ಸ್ಥಳದಲ್ಲೇ ಅಸು ನೀಗಿದ್ದಾರೆ. ಒಬ್ಬ ಮಹಿಳೆ ಹಾಗೂ ಇಬ್ಬರು ಬಾಲಕಿಯರು ಮೃತಪಟ್ಟವರು. ಸ್ಥಳೀಯರು ಹಾಗೂ ಅಗ್ನಿಶಾಮಕ ದಳದ