ಮೈಸೂರು
ಮೈಸೂರು ಅಪಾರ್ಟ್‌ಮೆಂಟ್‌ನಲ್ಲಿ ತಾಯಿ, ಪತ್ನಿ, ಮಗನಿಗೆ ವಿಷವುಣಿಸಿ ಸಾಯಿಸಿ ವ್ಯಕ್ತಿ ಆತ್ಮಹತ್ಯೆ ಶಂಕೆ
ಮೈಸೂರಿನ ವಿಶ್ವೇಶ್ವರಯ್ಯನಗರದ ಅಪಾರ್ಟ್‌ಮೆಂಟ್‌ನಲ್ಲಿ ಬಾಲಕ ಸೇರಿ ಒಂದೇ ಕುಟುಂಬದ ನಾಲ್ವರು ಮೃತಪಟ್ಟ ಸ್ಥಿತಿ ಯಲ್ಲಿ ಪತ್ತೆಯಾಗಿದ್ದಾರೆ. ಕುಶಾಲ್ (15), ಚೇತನ್ (45), ರೂಪಾಲಿ (43), ಪ್ರಿಯಂವಧಾ (62)ಮೃತಪಟ್ಟವರು. ಚೇತನ್ ಮೊದಲಿಗೆ ತಾಯಿ ಪ್ರಿಯಂವಧಾ, ಪತ್ನಿ ರೂಪಾಲಿ ಮತ್ತು ಮಗ ಕುಶಾಲ್ಗೆ ವಿಷವುಣಿಸಿ ಸಾಯಿಸಿರುವ ಅನುಮಾನ ವ್ಯಕ್ತವಾಗಿದೆ. ಮೂವರಿಗೆ ವಿಷವುಣಿಸಿ ಸಾಯಿಸಿ ಬಳಿಕ ಚೇತನ್ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಮೈಸೂರು ಪೊಲೀಸ್ ಕಮಿಷನರ್ ಸೀಮಾ ಲಾಟ್ಕರ್, ಡಿಸಿಪಿ
ಮುತ್ತತ್ತಿಯಲ್ಲಿ ಕಾವೇರಿ ನದಿ ಪಾಲಾದ ಇಬ್ಬರು ಯುವತಿಯರು!
ಕಾವೇರಿ ನದಿಯಲ್ಲಿ ಮುಳುಗಿ ಇಬ್ಬರು ಯುವತಿಯರು ಮೃತಪಟ್ಟ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಪ್ರಸಿದ್ಧ ಕ್ಷೇತ್ರ ಮುತ್ತತ್ತಿಯಲ್ಲಿ ಸಂಭವಿಸಿದೆ. ಮೃತರನ್ನು ಕನಕಪುರ ತಾಲೂಕಿನ ಗಾಣಾಳು ಗ್ರಾಮದ ಶೋಭಾ (23) ಮತ್ತು ನದಿಯಾ (19) ಎಂದು ಗುರುತಿಸಲಾಗಿದೆ. 50ಕ್ಕೂ ಹೆಚ್ಚು ಮಂದಿ
ಮೈಸೂರು ಗಲಭೆ: ಪೊಲೀಸರ ಸಮಯಪ್ರಜ್ಞೆಗೆ ಡಿಕೆ ಶಿವಕುಮಾರ್ ಅಭಿನಂದನೆ
ಮೈಸೂರು: ಮೈಸೂರಿನ ಉದಯಗಿರಿ ಗಲಭೆ ಪ್ರಕರಣದಲ್ಲಿ ಪೊಲೀಸರ ಸಮಯ ಪ್ರಜ್ಞೆಯ ಕಾರ್ಯವೈಖರಿಗೆ ಅಭಿನಂದನೆ ಸಲ್ಲಿಸುವುದಾಗಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದರು. ಮೈಸೂರಿನಲ್ಲಿ ಮಾತನಾಡಿದ ಅವರು, ಉದಯಗಿರಿ ಪೊಲೀಸ್ ಠಾಣೆಯ ಕಲ್ಲು ತೂರಾಟ ವಿಚಾರದಲ್ಲಿ ಯಾರೇ ತಪ್ಪು ಮಾಡಿದ್ದರು ಕಠಿಣ ಕ್ರಮ ಆಗುತ್ತದೆ.
ಧರ್ಮದ ಅವಹೇಳನೆಯ ಪೋಸ್ಟ್: ಮೈಸೂರಿನಲ್ಲಿ ಘರ್ಷಣೆ
ಮೈಸೂರು: ರಾಜಕೀಯ ನಾಯಕರ ಅರೆ ಬೆತ್ತಲೆ ಚಿತ್ರದ ಮೇಲೆ ಒಂದು ಧರ್ಮದ ಕುರಿತು ಅವಹೇಳನಕಾರಿ ಪದಗಳ ಬಳಸಿದ ಚಿತ್ರವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟ ಹಿನ್ನೆಲೆಯಲ್ಲಿ ಉದಯಗಿರಿಯಲ್ಲಿ ಘರ್ಷಣೆ ನಡೆದಿರುವ ಪ್ರಸಂಗ ತಡವಾಗಿ ಬೆಳಕಿಗೆ ಬಂದಿದೆ. ನಿನ್ನೆ ರಾತ್ರಿ ವ್ಯಕ್ತಿಯೊಬ್ಬರೂ ರಾಷ್ಟ್ರೀಯ ರಾಜಕೀಯ ನಾಯಕರ
ಟಿ. ನರಸೀಪುರದಲ್ಲಿ ಇಂದಿನಿಂದ ಕುಂಭಮೇಳ ಸಂಭ್ರಮ
ದಕ್ಷಿಣ ಭಾರತದ ಕುಂಭಮೇಳಕ್ಕೆ ಟಿ. ನರಸೀಪುರ ಸಜ್ಜುಗೊಂಡಿದ್ದು, ಇಂದಿನಿಂದ ಮೇಳ ಆರಂಭಗೊಳ್ಳುತ್ತಿದೆ. ಕಾವೇರಿ, ಕಪಿಲ ಹಾಗೂ ಸ್ಫಟಿಕ ಸರೋವರಗಳು ಸೇರುವ ಮೈಸೂರು ಜಿಲ್ಲೆಯ ಟಿ.ನರಸೀಪುರದ ತ್ರಿವೇಣಿ ಸಂಗಮದಲ್ಲಿ ಇಂದಿನಿಂದ 3 ದಿನ 13ನೇ ಕುಂಭಮೇಳ ನಡೆಯಲಿದೆ. ಜಿಲ್ಲಾ ಉಸ್ತುವಾರಿ ಸಚಿವ ಡಾ.
ಮೈಸೂರಿನಲ್ಲಿ ಎಬಿವಿಪಿ ರಾಷ್ಟ್ರೀಯ ಏಕಾತ್ಮಕಾ ಯಾತ್ರೆಗೆ ಹೆಚ್‌ಡಿಕೆ ಚಾಲನೆ
ಈಶಾನ್ಯ ಭಾರತದ ರಾಜ್ಯಗಳ ಅಭಿವೃದ್ಧಿಗೆ ನರೇಂದ್ರ ಮೋದಿ ಅವರ ಸರ್ಕಾರ ಕಟಿಬದ್ಧವಾಗಿ ದುಡಿಯುತ್ತಿದೆ ಎಂದು ಹೇಳಿದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ, ಕಳೆದ ಹತ್ತು ವರ್ಷಗಳಲ್ಲಿ ಈ ರಾಜ್ಯಗಳ ಶ್ರೇಯೋವೃದ್ಧಿಗೆ ಐದೂವರೆ ಲಕ್ಷ ಕೋಟಿಗೂ ಅಧಿಕ ಮೊತ್ತದ ಅಭಿವೃದ್ಧಿ ಯೋಜನೆಗಳನ್ನು ಹಮ್ಮಿಕೊಂಡಿದ್ದಾಗಿ ತಿಳಿಸಿದ್ದಾರೆ.
ಮುಡಾ ಹಗರಣ ಸಿಬಿಐಗಿಲ್ಲ: ಸಿದ್ದರಾಮಯ್ಯಗೆ ರಿಲೀಫ್ ನೀಡಿದ ಹೈಕೋರ್ಟ್
ಮುಡಾದಲ್ಲಿ ನಡೆದಿದೆ ಎನ್ನಲಾಗಿರುವ ಹಗರಣಕ್ಕೆ ಸಂಬಂಧಿಸಿದಂತೆ, ಕರ್ನಾಟಕ ಹೈಕೋರ್ಟ್ನ ಧಾರವಾಡ ಪೀಠ ತೀರ್ಪು ಪ್ರಕಟಿಸಿದ್ದು, ದೂರುದಾರ ಸ್ನೇಹಮಯಿ ಕೃಷ್ಣ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ವಜಾ ಗೊಳಿಸಿದೆ. ಲೋಕಾಯುಕ್ತ ಪೊಲೀಸರ ತನಿಖೆ ಅಸಮರ್ಪಕ ಎನ್ನುವುದಕ್ಕೆ ಕಾರಣಗಳಿಲ್ಲ, ಲೋಕಾಯುಕ್ತ ತನಿಖೆ ಪಕ್ಷಪಾತದಿಂದ ಕೂಡಿದೆ ಎಂಬುದಕ್ಕೆ
ಮೈಸೂರಿನ ಹಲವೆಡೆ ಐಟಿ ಅಧಿಕಾರಿಗಳಿಂದ ರೇಡ್
ಸರ್ಕಾರದ ಕಾಮಗಾರಿಗಳ ಗುತ್ತಿಗೆ ವಹಿಸಿಕೊಂಡಿರುವ ಕಾಂಟ್ರಾಕ್ಟರ್ ರಾಮಕೃಷ್ಣೇಗೌಡ ಮನೆ, ಎಂ ಪ್ರೋ ಪ್ಯಾಲೇಸ್, ಹೋಟೆಲ್, ಕಲ್ಯಾಣ ಮಂಟಪ ಸೇರಿದಂತೆ ಮೈಸೂರಿನ ಹಲವೆಡೆ ಬುಧವಾರ ಬೆಳಗ್ಗೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. 10ಕ್ಕೂ ಹೆಚ್ಚು ಐಟಿ ಅಧಿಕಾರಿಗಳ ತಂಡ ದಾಳಿ
ಸಾಲ ಪಡೆದ ಜನರು ತಪ್ಪು ನಿರ್ಧಾರ ಕೈಗೊಳ್ಳಬೇಡಿ: ಸಿಎಂ ಸಿದ್ದರಾಮಯ್ಯ ಮನವಿ
ಮೈಸೂರು: ಆರ್ ಬಿಐ ನಿಯಮಾವಳಿ ಉಲ್ಲಂಘಿಸುವ ,ಹೆಚ್ಚಿನ ಬಡ್ಡಿದರ ವಸೂಲು ಮಾಡುವ ಹಾಗೂ ಕಾನೂನು ಬಾಹಿರವಾಗಿ ಕಾರ್ಯನಿರ್ವಹಿಸುತ್ತಿರುವ ಮೈಕ್ರೋ ಫೈನಾನ್ಸ್ ಸಂಸ್ಥೆಗಳ ಮೇಲೆ ಸರ್ಕಾರ ಕಾನೂನು ಕ್ರಮ ಕೈಗೊಳ್ಳಲಿದ್ದು, ಜನರು ಆತಂಕಕ್ಕೊಳಗಾಗಿ ಆತ್ಮಹತ್ಯೆಯಂತಹ ತಪ್ಪು ನಿರ್ಧಾರಗಳನ್ನು ಕೈಗೊಳ್ಳಬಾರದು ಎಂದು ರಾಜ್ಯದ ಜನರಲ್ಲಿ
ಬಸವಣ್ಣನವರ ಆಶಯಗಳೆಲ್ಲಾ ನಮ್ಮ ಸಂವಿಧಾನದಲ್ಲಿ ಅಡಕ: ಸಿಎಂ ಸಿದ್ದರಾಮಯ್ಯ
ಮೈಸೂರು: ಬಸವಣ್ಣನವರ ಆಶಯಗಳೆಲ್ಲಾ ನಮ್ಮ ಸಂವಿಧಾನದಲ್ಲಿ ಅಡಕವಾಗಿವೆ. ಇದನ್ನು ಇಡೀ ಸಮಾಜ ಅರಿತುಕೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು. ಮೈಸೂರು ಸುತ್ತೂರಿನ ಶಿವರಾತ್ರೀಶ್ವರ ಶಿವಯೋಗಿಗಳ ಜಾತ್ರಾ ಮಹೋತ್ಸವದಲ್ಲಿ ಪಾಲ್ಗೊಂಡು ಮಹದೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿ ಗದ್ದುಗೆ