ಮೈಸೂರು
ಸಂದೇಶ್ ನಾಗರಾಜ್ ಯಾವುದೇ ಕ್ಷೇತ್ರದಲ್ಲಿದ್ದರೂ ಯಶಸ್ಸು ಸಾಧಿಸುತ್ತಾರೆ: ಸಿದ್ದರಾಮಯ್ಯ
ಸಂದೇಶ್ ನಾಗರಾಜ್ ಸ್ನೇಹಮಯಿ ವ್ಯಕ್ತಿತ್ವದವರಾಗಿದ್ದು ಯಾವುದೇ ಕ್ಷೇತ್ರದಲ್ಲಿದ್ದರೂ ಯಶಸ್ಸು ಅವರಿಗೆ ಸಿಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ವಸ್ತು ಪ್ರದರ್ಶನ ಮೈದಾನದಲ್ಲಿ ನಡೆದ ಮಾಜಿ ವಿಧಾನ ಪರಿಷತ್ ಸದಸ್ಯರಾದ ಚಿತ್ರ ನಿರ್ಮಾಪಕ ಸಂದೇಶ್ ನಾಗರಾಜ್ ಅವರ 80ನೇ ವರ್ಷದ ಜನ್ಮ ದಿನ ಆಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು. 80 ವರ್ಷ ಪೂರೈಸಿ ಉತ್ತಮ ಆರೋಗ್ಯ ಕಾಪಾಡಿಕೊಂಡಿದ್ದಾರೆ. ಇವರು ಶತಾಯುಷಿ ಮಾತ್ರವಲ್ಲ, ಅದಕ್ಕಿಂತ ಹೆಚ್ಚು ಕಾಲ ಆರೋಗ್ಯಕರವಾಗಿ ಜೀವಿಸಲಿ ಎಂದು ಹಾರೈಸಿದರು. ರಾಜಕೀಯವಾಗಿ ಇಬ್ಬರೂ
ಭರ್ತಿಯಾಗುತ್ತಿವೆ ಕಬಿನಿ, ತಾರಕ ಜಲಾಶಯ: ನದಿಪಾತ್ರದ ಜನರಿಗೆ ಸ್ಥಳಾಂತರ ಸೂಚನೆ
ಮೈಸೂರಿನಲ್ಲಿ ಕಬಿನಿ ಹಾಗೂ ತಾರಕ ಜಲಾಶಯಗಳು ಭರ್ತಿಯಾಗಿದ್ದು, ನದಿ ಪಾತ್ರದ ಜನರು ಎಚ್ಚರಿಕೆಯಿಂದ ಇರುವಂತೆ ಸೂಚಿಸಲಾಗಿದೆ. ಕೇರಳದ ವಯನಾಡುವಿನಲ್ಲಿ ಹೆಚ್ಚು ಮಳೆಯಾಗುತ್ತಿರುವುದರಿಂದ, ಹೆಚ್.ಡಿ.ಕೋಟೆ ತಾಲೂಕಿನಲ್ಲಿರುವ ಕಬಿನಿ ಜಲಾಶಯಕ್ಕೆ ಹೆಚ್ಚಿನ ಪ್ರಮಾಣದಲ್ಲಿ ನೀರು ಹರಿದುಬರುತ್ತಿದ್ದು, ಹೊರ ಹರಿವು ಹೆಚ್ಚಾಗುತ್ತಿದೆ. ಹೀಗಾಗಿ ನದಿ ಪಾತ್ರದ
ಮೈಸೂರು ವಿವಿಗೆ 10 ಲಕ್ಷ, ರಾಮಕೃಷ್ಣ ಆಶ್ರಮಕ್ಕೆ 5 ಲಕ್ಷ ರೂ. ಎಸ್.ಎಂ.ಕೃಷ್ಣ ದತ್ತಿನಿಧಿ ಡಿಡಿ ಹಸ್ತಾಂತರ
ಮೈಸೂರು: ಮಾಜಿ ಮುಖ್ಯಮಂತ್ರಿಗಳು ಹಾಗೂ ಹಿರಿಯ ಮುತ್ಸದ್ದಿ ಎಸ್.ಎಂ.ಕೃಷ್ಣರವರ ಹೆಸರಿನಲ್ಲಿ ಸ್ಥಾಪಿಸಿರುವ ದಿವ್ಯ ಚೇತನ ಎಸ್.ಎಂ.ಕೃಷ್ಣ ದತ್ತಿನಿಧಿ ಡಿಡಿಯನ್ನು ಶಾಸಕರುಗಳಾದ ಕೆ.ಎಂ.ಉದಯ್ ಹಾಗೂ ದಿನೇಶ್ ಗೂಳಿಗೌಡ ರಾಮಕೃಷ್ಣ ಆಶ್ರಮದಲ್ಲಿ ಹಸ್ತಾಂತರಿಸಿದರು. ಮೈಸೂರು ವಿಶ್ವ ವಿದ್ಯಾನಿಲಯದಲ್ಲಿ ಪ್ರಥಮ ಸ್ಥಾನ ಪಡೆದ ಇಬ್ಬರು ವಿದ್ಯಾರ್ಥಿಗಳಿಗೆ
ನಾಲ್ಕು ತಿಂಗಳಲ್ಲಿ ಗ್ರೇಟರ್ ಬೆಂಗಳೂರು ಚುನಾವಣೆಗೆ ಸಿದ್ಧತೆ: ಡಿ.ಕೆ.ಶಿವಕುಮಾರ್
ಮುಂದಿನ ನಾಲ್ಕು ತಿಂಗಳಲ್ಲಿ ಗ್ರೇಟರ್ ಬೆಂಗಳೂರು ಚುನಾವಣೆಗೆ ಸಿದ್ಧತೆ ನಡೆಸಲಾಗುವುದು. ಮೊದಲು ಮೀಸಲಾತಿ ಹಾಗೂ ವಲಯವಾರು ವಿಭಾಗಗಳನ್ನು ರಚಿಸಲಾಗುವುದು. ಚುನಾವಣೆ ವಿಳಂಬ ಮಾಡುವುದರಲ್ಲಿ ಯಾವುದೇ ಅರ್ಥ ವಿಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಮೈಸೂರಿನ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯೆ
ಪುನೀತ್ ಕೆರೆಹಳ್ಳಿಗೆ ಸೋಷಿಯಲ್ ಮೀಡಿಯಾದಲ್ಲಿ ಜೀವ ಬೆದರಿಕೆ
ಹಿಂದೂ ಪರ ಹೋರಾಟಗಾರ ಎನ್ನಲಾಗುವ ಪುನೀತ್ ಕೆರೆಹಳ್ಳಿಗೆ ಮೈಸೂರು ಮೂಲದ ವ್ಯಕ್ತಿ ಜೀವ ಬೆದರಿಕೆ ಒಡ್ಡಿರುವುದು ಬಹಿರಂಗಗೊಂಡಿದೆ. ಮೈಸೂರಿನ ಉದಯಗಿರಿ ನಿವಾಸಿ ಅಕ್ರಮ್ ಖಾನ್ ಎಂಬ ವ್ಯಕ್ತಿ ಇದ್ರಿಷ್ ಪಾಷ ಸಾವಿಗೆ ಪ್ರತೀಕಾರವಾಗಿ ನಿನ್ನ ಮುಗಿಸುತ್ತೇವೆ ಎಂಬುದಾಗಿ ಸಾಮಾಜಿಕ ಜಾಲತಾಣದಲ್ಲಿ ಬಹಿರಂಗವಾಗಿ
ನಂಜನಗೂಡು: ಚಿರತೆ ದಾಳಿಯಿಂದ ನಾಲ್ಕು ಹಸುಗಳಿಗೆ ಗಂಭೀರ ಗಾಯ
ನಂಜನಗೂಡು ತಾಲೂಕಿನ ದಾಸನೂರು ಗ್ರಾಮದಲ್ಲಿ ನಾಲ್ಕು ಹಸುಗಳ ಮೇಲೆ ಚಿರತೆ ದಾಳಿ ನಡೆಸಿದ್ದು, ಹಸುಗಳು ಗಂಭೀರ ಗಾಯಗೊಂಡಿವೆ. ಗ್ರಾಮದ ರೈತ ಬಸವಣ್ಣ ಜಮೀನಿನಲ್ಲಿ ಹಸುಗಳನ್ನು ಮೇಯಿಸುತ್ತಿದ್ದ ವೇಳೆ ಚಿರತೆ ದಾಳಿ ಮಾಡಿದೆ. ಚಿರತೆಯಿಂದ ತಪ್ಪಿಸಿಕೊಳ್ಳಲು ಹಸುಗಳು ದಿಕ್ಕಾಪಾಲಾಗಿ ಓಡಿವೆ. ಓಡುವಾಗ ಹಸುಗಳು
ಮೈಸೂರಲ್ಲಿ ಮಹಿಳೆಗೆ ಬ್ಲಾಕ್ ಮೇಲ್ ಮಾಡಿ 1.5 ಲಕ್ಷ ವಸೂಲಿ ಮಾಡಿದ್ದಾತ ಸೆರೆ
ಹುಣಸೂರು ನಗರದ ಮಹಿಳೆಗೆ ಬ್ಲ್ಯಾಕ್ ಮೇಲ್ ಮಾಡಿ 1.5 ಲಕ್ಷ ರೂಪಾಯಿ ವಸೂಲಿ ಮಾಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ವಿಜಯನಗರ ಜಿಲ್ಲೆಯ ಹೂವಿನ ಹಡಗಲಿ ತಾಲೂಕಿನ ಸೋಗಿ ಗ್ರಾಮದ ವೀರೇಶ್ ಕುಮಾರ್ 28 ಬಂಧಿತ ಆರೋಪಿ. ಆರೋಪಿಯು ವಾಟ್ಸಪ್ ಮೂಲಕ ಪರಿಚಯವಾಗಿದ್ದ
ಸರ್ವಪಕ್ಷ ಸಭೆ ಮಾಡಿ ಕದನ ವಿರಾಮ ಘೋಷಣೆ ಮಾಡಬೇಕಿತ್ತು: ಸಿಎಂ
ಇಂದಿರಾ ಗಾಂಧಿ ರೀತಿ ಯುದ್ಧ ಮಾಡಬೇಕು ಎಂಬ ವಿಚಾರ ಬಗ್ಗೆ ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯ, ಇಂದಿರಾ ಗಾಂಧಿ ಸಮಯದ ಯುದ್ಧ ಆಗಿ ತುಂಬಾ ವರ್ಷಗಳೇ ಆಗಿವೆ. ಸದ್ಯಕ್ಕೆ ಈಗ ನಾನು ಆ ಬಗ್ಗೆ ಏನು ಹೇಳಲ್ಲ. ಸರ್ವಪಕ್ಷ ಸಭೆ ಹಾಗೂ ಸಂಸತ್
ಪದ್ಮಶ್ರೀ ಪುರಸ್ಕೃತ ಕೃಷಿ ವಿಜ್ಞಾನಿ ಡಾ.ಸುಬ್ಬಣ್ಣ ಅಯ್ಯಪ್ಪನ್ ಶವ ಪತ್ತೆ
ಪದ್ಮಶ್ರೀ ಪುರಸ್ಕೃತ ಕೃಷಿ ವಿಜ್ಞಾನಿ ಡಾ.ಸುಬ್ಬಣ್ಣ ಅಯ್ಯಪ್ಪನ್ ನಿಗೂಢವಾಗಿ ಮೃತಪಟ್ಟಿದ್ದು, ಅವರ ಶವ ಶ್ರೀರಂಗ ಪಟ್ಟಣದ ಸಾಯಿ ಆಶ್ರಮ ಬಳಿ ಕಾವೇರಿ ನದಿಯಲ್ಲಿ ಪತ್ತೆಯಾಗಿದೆ. ಈ ಸಾವು ಹಲವು ಅನುಮಾನಗಳಿಗೆ ಎಡೆಮಾಡಿ ಕೊಟ್ಟಿದೆ. ಮೈಸೂರಿನ ಅಪಾರ್ಟ್ಮೆಂಟ್ ಒಂದರಲ್ಲಿ ಪತ್ನಿ ಜೊತೆ ವಾಸವಾಗಿದ್ದ
ವೀಡಿಯೊ ಪೋಸ್ಟ್ ಮಾಡಿ ಸಿಎಂಗೆ ಅವಹೇಳನಗೈದ ಪೇದೆ ಅಮಾನತು
ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ನಿಂದಿಸಿ ಸಾಮಾಜಿಕ ಜಾಲತಾಣದಲ್ಲಿ ವೀಡಿಯೊ ಪೋಸ್ಟ್ ಮಾಡಿದ್ದ ಕೇಂದ್ರ ಕಾರಾಗೃಹದ ಕಾನ್ಸ್ಟೆಬಲ್ ಎಚ್.ಎನ್.ಮಧು ಕುಮಾರ್ ಅವರನ್ನು ಸೇವೆಯಿಂದ ಅಮಾನತುಗೊಳಿಸಿ ಕಾರಾಗೃಹದ ಮುಖ್ಯ ಅಧೀಕ್ಷಕ ಪಿ.ಎಸ್.ರಮೇಶ್ ಆದೇಶಿಸಿದ್ದಾರೆ. ಸಿಎಂ ಅವರು ಬೆಳಗಾವಿಯಲ್ಲಿ ಪೊಲೀಸ್ ಅಧಿಕಾರಿ ವಿರುದ್ಧ ಕೈ ಎತ್ತಿದ




