Menu

ಮುಡಾ ಪ್ರಕರಣ ಬಿಜೆಪಿ-ಜೆಡಿಎಸ್ ಕುತಂತ್ರ ಹೆಚ್ಚು ದಿನ ನಡೆಯಲ್ಲ: ಡಿಕೆ ಶಿವಕುಮಾರ್

ಮುಡಾ ಪ್ರಕರಣ ಬಿಜೆಪಿ ಹಾಗೂ ಜೆಡಿಎಸ್ ಕುತಂತ್ರ, ಇದು ಹೆಚ್ಚಿನ ದಿನ ನಡೆಯುವುದಿಲ್ಲ  ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಅವರು ಪ್ರತಿಕ್ರಿಯೆ ನೀಡಿದರು. ಮುಡಾ ಪ್ರಕರಣದಲ್ಲಿ ಲೋಕಾಯುಕ್ತ ಸಂಸ್ಥೆ ಬಿ ರಿಪೋರ್ಟ್ ಸಲ್ಲಿಕೆ ಮಾಡಿ ಸಿದ್ದರಾಮಯ್ಯ ಅವರಿಗೆ ಕ್ಲೀನ್ ಚಿಟ್ ನೀಡಿದೆ ಎಂದು ಕೇಳಿದಾಗ, ಈ ಪ್ರಕರಣದ ಪ್ರಾರಂಭದಲ್ಲೇ ನಾನು ಏನು ಹೇಳ ಬೇಕೋ ಹೇಳಿದ್ದೆ. ಇದು ರಾಜಕೀಯ ಪ್ರೇರಿತ ಆರೋಪ. ಯಾವ

ಉದಯಗಿರಿಯಲ್ಲಿ ಕಲ್ಲು ತೂರಾಟಕ್ಕೆ ಪ್ರಚೋದನೆ ಆರೋಪಿ ಮೌಲ್ವಿ ಮುಫ್ತಿ ಮುಸ್ತಾಕ್‌ ಬಂಧನ

ಮೈಸೂರಿನ ಉದಯಗಿರಿ ಠಾಣೆ ಮೇಲೆ ಕಲ್ಲು ತೂರಾಟ ಪ್ರಕರಣಕ್ಕೆ ಪ್ರಚೋದನೆ ನೀಡಿದ್ದ ಆರೋಪದಲ್ಲಿ ಮೌಲ್ವಿ ಮುಫ್ತಿ ಮುಸ್ತಾಕ್‌ನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಸಾರ್ವಜನಿಕರ ಹಾಗೂ ಪ್ರತಿಪಕ್ಷಗಳ ಒತ್ತಡಡಿಂದ ಗಲಾಟೆ ನಡೆದು 11 ದಿನಗಳ ಬಳಿಕ ಆರೋಪಿ ಮೌಲ್ವಿಯನ್ನು ಬಂಧಿಸಲಾಗಿದೆ. ಪ್ರಕರಣ ಸಂಬಂಧ

“ಮುಡಾ” ಲೋಕಾಯುಕ್ತದಿಂದ ಪೂರ್ವ ನಿಯೋಜಿತ ವರದಿ: ಆರ್.ಅಶೋಕ ಆಕ್ರೋಶ

ಮುಡಾ ಹಗರಣ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕ್ಲೀನ್ ಚಿಟ್ ನೀಡಲು ಲೋಕಾಯುಕ್ತ ಮುಂದಾಗಿದೆ. ಪೂರ್ವ ನಿಯೋಜಿತವಾಗಿ ತನಿಖಾ ವರದಿ ರೂಪಿಸಲಾಗಿದೆ. ಆದರೆ ಬಿಜೆಪಿಯಿಂದ ಹೋರಾಟ ಮುಂದುವರಿಯಲಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿ,  ಸಿಎಂ ಸಿದ್ದರಾಮಯ್ಯ ಹಾಗೂ

ಆನ್‌ಲೈನ್‌ ಬೆಟ್ಟಿಂಗ್‌: ಮೈಸೂರಿನಲ್ಲಿ ಒಂದೇ ಕುಟುಂಬದ ಮೂವರು ಸೂಸೈಡ್‌

ಮೈಸೂರು ತಾಲೂಕಿನ ಹಂಚ್ಯಾ ಗ್ರಾಮದ ಬಳಿ ಐಪಿಎಲ್​ ಹಾಗೂ ಇತರ ಆನ್​ಲೈನ್ ಬೆಟ್ಟಿಂಗ್​ಗೆ ಒಂದೇ ಕುಟುಂಬದ ಮೂವರು ಮೃತಪಟ್ಟಿದ್ದಾರೆ. ಜೋಶಿ ಆಂಥೋನಿ, ಜೋಬಿ ಆಂಥೋನಿ, ಶರ್ಮಿಳಾ ಮೃತಪಟ್ಟವರು. ಜೋಬಿ ಆಂಥೋನಿ ಹಾಗೂ ಜೋಷಿ ಆಂಥೋನಿ ಸಹೋದರರಾಗಿದ್ದು, ಜೋಶಿ ಆಂಥೋನಿ ತನ್ನ ತಮ್ಮನಾದ

ಮೈಸೂರು ಅಪಾರ್ಟ್‌ಮೆಂಟ್‌ನಲ್ಲಿ ತಾಯಿ, ಪತ್ನಿ, ಮಗನಿಗೆ ವಿಷವುಣಿಸಿ ಸಾಯಿಸಿ ವ್ಯಕ್ತಿ ಆತ್ಮಹತ್ಯೆ ಶಂಕೆ

ಮೈಸೂರಿನ ವಿಶ್ವೇಶ್ವರಯ್ಯನಗರದ ಅಪಾರ್ಟ್ಮೆಂಟ್​​ನಲ್ಲಿ ಬಾಲಕ ಸೇರಿ ಒಂದೇ ಕುಟುಂಬದ ನಾಲ್ವರು ಮೃತಪಟ್ಟ ಸ್ಥಿತಿ ಯಲ್ಲಿ ಪತ್ತೆಯಾಗಿದ್ದಾರೆ. ಕುಶಾಲ್ ​(15), ಚೇತನ್​​ (45), ರೂಪಾಲಿ (43), ಪ್ರಿಯಂವಧಾ (62)ಮೃತಪಟ್ಟವರು. ಚೇತನ್​​​ ಮೊದಲಿಗೆ ತಾಯಿ ಪ್ರಿಯಂವಧಾ, ಪತ್ನಿ ರೂಪಾಲಿ ಮತ್ತು ಮಗ ಕುಶಾಲ್​ಗೆ ವಿಷವುಣಿಸಿ

ಮುತ್ತತ್ತಿಯಲ್ಲಿ ಕಾವೇರಿ ನದಿ ಪಾಲಾದ ಇಬ್ಬರು ಯುವತಿಯರು!

ಕಾವೇರಿ ನದಿಯಲ್ಲಿ ಮುಳುಗಿ ಇಬ್ಬರು ಯುವತಿಯರು ಮೃತಪಟ್ಟ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಪ್ರಸಿದ್ಧ ಕ್ಷೇತ್ರ ಮುತ್ತತ್ತಿಯಲ್ಲಿ ಸಂಭವಿಸಿದೆ. ಮೃತರನ್ನು ಕನಕಪುರ ತಾಲೂಕಿನ ಗಾಣಾಳು ಗ್ರಾಮದ ಶೋಭಾ (23) ಮತ್ತು ನದಿಯಾ (19) ಎಂದು ಗುರುತಿಸಲಾಗಿದೆ. 50ಕ್ಕೂ ಹೆಚ್ಚು ಮಂದಿ

ಮೈಸೂರು ಗಲಭೆ: ಪೊಲೀಸರ ಸಮಯಪ್ರಜ್ಞೆಗೆ ಡಿಕೆ ಶಿವಕುಮಾರ್ ಅಭಿನಂದನೆ

ಮೈಸೂರು: ಮೈಸೂರಿನ ಉದಯಗಿರಿ ಗಲಭೆ ಪ್ರಕರಣದಲ್ಲಿ ಪೊಲೀಸರ ಸಮಯ ಪ್ರಜ್ಞೆಯ ಕಾರ್ಯವೈಖರಿಗೆ ಅಭಿನಂದನೆ ಸಲ್ಲಿಸುವುದಾಗಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದರು. ಮೈಸೂರಿನಲ್ಲಿ ಮಾತನಾಡಿದ ಅವರು, ಉದಯಗಿರಿ ಪೊಲೀಸ್ ಠಾಣೆಯ ಕಲ್ಲು ತೂರಾಟ ವಿಚಾರದಲ್ಲಿ ಯಾರೇ ತಪ್ಪು ಮಾಡಿದ್ದರು ಕಠಿಣ ಕ್ರಮ ಆಗುತ್ತದೆ‌.

ಧರ್ಮದ ಅವಹೇಳನೆಯ ಪೋಸ್ಟ್: ಮೈಸೂರಿನಲ್ಲಿ ಘರ್ಷಣೆ

ಮೈಸೂರು: ರಾಜಕೀಯ ನಾಯಕರ ಅರೆ ಬೆತ್ತಲೆ ಚಿತ್ರದ ಮೇಲೆ ಒಂದು ಧರ್ಮದ ಕುರಿತು ಅವಹೇಳನಕಾರಿ ಪದಗಳ ಬಳಸಿದ ಚಿತ್ರವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟ ಹಿನ್ನೆಲೆಯಲ್ಲಿ ಉದಯಗಿರಿಯಲ್ಲಿ ಘರ್ಷಣೆ ನಡೆದಿರುವ ಪ್ರಸಂಗ ತಡವಾಗಿ ಬೆಳಕಿಗೆ ಬಂದಿದೆ. ನಿನ್ನೆ ರಾತ್ರಿ ವ್ಯಕ್ತಿಯೊಬ್ಬರೂ ರಾಷ್ಟ್ರೀಯ ರಾಜಕೀಯ ನಾಯಕರ

ಟಿ. ನರಸೀಪುರದಲ್ಲಿ ಇಂದಿನಿಂದ ಕುಂಭಮೇಳ ಸಂಭ್ರಮ

ದಕ್ಷಿಣ ಭಾರತದ ಕುಂಭಮೇಳಕ್ಕೆ ಟಿ. ನರಸೀಪುರ ಸಜ್ಜುಗೊಂಡಿದ್ದು, ಇಂದಿನಿಂದ ಮೇಳ ಆರಂಭಗೊಳ್ಳುತ್ತಿದೆ. ಕಾವೇರಿ, ಕಪಿಲ ಹಾಗೂ ಸ್ಫಟಿಕ ಸರೋವರಗಳು ಸೇರುವ ಮೈಸೂರು ಜಿಲ್ಲೆಯ ಟಿ.ನರಸೀಪುರದ ತ್ರಿವೇಣಿ ಸಂಗಮದಲ್ಲಿ ಇಂದಿನಿಂದ 3 ದಿನ 13ನೇ ಕುಂಭಮೇಳ ನಡೆಯಲಿದೆ. ಜಿಲ್ಲಾ ಉಸ್ತುವಾರಿ ಸಚಿವ ಡಾ.

ಮೈಸೂರಿನಲ್ಲಿ ಎಬಿವಿಪಿ ರಾಷ್ಟ್ರೀಯ ಏಕಾತ್ಮಕಾ ಯಾತ್ರೆಗೆ ಹೆಚ್‌ಡಿಕೆ ಚಾಲನೆ

ಈಶಾನ್ಯ ಭಾರತದ ರಾಜ್ಯಗಳ ಅಭಿವೃದ್ಧಿಗೆ ನರೇಂದ್ರ ಮೋದಿ ಅವರ ಸರ್ಕಾರ ಕಟಿಬದ್ಧವಾಗಿ ದುಡಿಯುತ್ತಿದೆ ಎಂದು ಹೇಳಿದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ, ಕಳೆದ ಹತ್ತು ವರ್ಷಗಳಲ್ಲಿ ಈ ರಾಜ್ಯಗಳ ಶ್ರೇಯೋವೃದ್ಧಿಗೆ  ಐದೂವರೆ ಲಕ್ಷ ಕೋಟಿಗೂ ಅಧಿಕ ಮೊತ್ತದ ಅಭಿವೃದ್ಧಿ ಯೋಜನೆಗಳನ್ನು ಹಮ್ಮಿಕೊಂಡಿದ್ದಾಗಿ ತಿಳಿಸಿದ್ದಾರೆ.