Tuesday, February 03, 2026
Menu

ಪ್ರೊ.ಮುಜಾಫರ್‌ ಅಸ್ಸಾದಿ, ಜಿ.ಸಿ.ಬಯ್ಯಾರೆಡ್ಡಿಗೆ ಸಿಎಂ ಸಂತಾಪ

ಚಿಂತಕ, ಲೇಖಕ ಪ್ರೊ.ಮುಜಾಫರ್‌ ಅಸ್ಸಾದಿ (63) ಮತ್ತು ಸಿಪಿಐ(ಎಂ) ನಾಯಕ ಮತ್ತು ಕರ್ನಾಟಕ ಪ್ರಾಂತ ರೈತ ಸಂಘದ ರಾಜ್ಯಾಧ್ಯಕ್ಷ ಜಿ.ಸಿ.ಬಯ್ಯಾರೆಡ್ಡಿ ಅವರು  ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ  ನಿಧನರಾಗಿದ್ದಾರೆ. ಈ ಇಬ್ಬರು ಸಮಾಜಮುಖಿ ಗಣ್ಯರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂತಾಪ ವ್ಯಕ್ತಪಡಿಸಿದ್ದಾರೆ. ಮುಜಾಫರ್‌ ಅಸ್ಸಾದಿ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ಮೈಸೂರಿನ ಸರಸ್ವತಿಪುರಂನ ಮುಸ್ಲಿಂ ವಿದ್ಯಾರ್ಥಿನಿಲಯದಲ್ಲಿ ವ್ಯವಸ್ಥೆ ಮಾಡಲಾಗಿದೆ. ಮೈಸೂರು ವಿಶ್ವವಿದ್ಯಾಲಯದಲ್ಲಿ ರಾಜ್ಯಶಾಸ್ತ್ರ ಅಧ್ಯಯನ ವಿಭಾಗದ ಪ್ರಾಧ್ಯಾಪಕರಾಗಿ, ಮುಖ್ಯಸ್ಥರಾಗಿ ಅಸ್ಸಾದಿ ಸೇವೆ ಸಲ್ಲಿಸಿದ್ದರು.

ಸಿಎಂ ತವರಲ್ಲೇ ದಲಿತ ಕುಟುಂಬಕ್ಕೆ ಬಹಿಷ್ಕಾರ

ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿನಿಧಿಸುವ ವಿಧಾನಸಭಾ ಕ್ಷೇತ್ರ ವರುಣಾ ವ್ಯಾಪ್ತಿಯಲ್ಲಿ ಬರುವ ಸಿದ್ದರಾಮಯ್ಯಹುಂಡಿ ಬಳಿಯ ಶ್ರೀನಿವಾಸಪುರ ಗ್ರಾಮದಲ್ಲಿ ಕುಟುಂಬವೊಂದಕ್ಕೆ ಸಾಮಾಜಿಕ ಬಹಿಷ್ಕಾರ ಹಾಕಿರುವ ಘಟನೆ ಮಾಧ್ಯಮಗಳಲ್ಲಿ ವರದಿಯಾಗಿದೆ. ನೊಂದ ಕುಟುಂಬದವರು ಜಿಲ್ಲಾಧಿಕಾರಿ, ಪೊಲೀಸರು ಹಾಗೂ ತಹಶೀಲ್ದಾರ್​ಗೆ ದೂರು ನೀಡಿದರೂ ಯಾವುದೇ ಪ್ರಯೋಜನವಾಗಿಲ್ಲ ಎನ್ನಲಾಗಿದೆ.

ಕಾಂಗ್ರೆಸ್ ಗೆ ಚುನಾವಣೆ ಸಮಯದಲ್ಲೇ ಸೇರುತ್ತಿದ್ದೆ: ಪ್ರತಾಪ್ ಸಿಂಹ

ಮೈಸೂರು: ಸಿದ್ದರಾಮಯ್ಯ ಹೆಸರಿಡಿ ಅಂದ ತಕ್ಷಣ ನಾನು ಸಿದ್ದರಾಮಯ್ಯ ಪರ ಅಥವಾ ಕಾಂಗ್ರೆಸ್ ಪರ ಅಂತಲ್ಲ. ಕಾಂಗ್ರೆಸ್ ಕೂಡ ಸೇರಲ್ಲ ಎಂದು ಮಾಜಿ ಸಂಸದ ಪ್ರತಾಪ್ ಸಿಂಹ ಹೇಳಿದರು. ಮೈಸೂರಿನಲ್ಲಿ ಮಾತನಾಡಿದ ಅವರು, ಕೆ.ಆರ್.ಎಸ್ ರಸ್ತೆಗೆ ಸಿದ್ದರಾಮಯ್ಯ ಹೆಸರಿಡುವ ವಿಚಾರವಾಗಿ ನಾನು

ರಸ್ತೆಗೆ ಸಿಎಂ ಸಿದ್ದರಾಮಯ್ಯ ಹೆಸರಿಡುವುದು ತಪ್ಪಲ್ಲ: ಪ್ರತಾಪ ಸಿಂಹ

ಮೈಸೂರು:  ಮೈಸೂರಿನ ಪ್ರಮುಖ ರಸ್ತೆಯೊಂದಕ್ಕೆ ಸಿಎಂ ಸಿದ್ದರಾಮಯ್ಯ ಹೆಸರಿಡಲು ಮೈಸೂರು ನಗರ ಪಾಲಿಕೆ ಮುಂದಾಗಿದ್ದು, ಇದಕ್ಕೆ ಪರ–ವಿರೋಧ  ವ್ಯಕ್ತವಾಗಿದೆ. ಈ ಸಂಬಂಧ ಸಿಎಂ ಸಿದ್ದರಾಮಯ್ಯ ಪರ ಮಾಜಿ ಸಂಸದ ಪ್ರತಾಪ್ ಸಿಂಹ ಬ್ಯಾಟ್ ಬೀಸಿದ್ದಾರೆ. ಈ ಕುರಿತು ಮಾತನಾಡಿರುವ ಮಾಜಿ ಸಂಸದ