ಮೈಸೂರು
ಬಾನು ದಸರಾ ಉದ್ಘಾಟನೆ ವಿರೋಧಿಸಿ ಹೈಕೋರ್ಟ್‌ಗೆ ಅರ್ಜಿ; ಬದುಕಿದ್ದೇವೆ ಎಂದು ತೋರಿಸಿಕೊಳ್ಳುವ ಪ್ರಯತ್ನವೆಂದ ಡಿಕೆ ಶಿವಕುಮಾರ್
“ತಾವು ಬದುಕಿದ್ದೇವೆ ಎಂದು ತೋರಿಸಿಕೊಳ್ಳಲು ಕೆಲವರು ಬಾನು ಮುಸ್ತಾಕ್ ಅವರಿಂದ ದಸರಾ ಉದ್ಘಾಟನೆ ವಿರೋಧಿಸಿ ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದಾರೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿರುಗೇಟು ನೀಡಿದ್ದಾರೆ. ಸದಾಶಿವನಗರ ನಿವಾಸದ ಬಳಿ ಶಿವಕುಮಾರ್ ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯೆ ನೀಡಿದರು. ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಅವರನ್ನು ಆಹ್ವಾನಿಸಿರುವುದನ್ನು ಪ್ರಶ್ನಿಸಿ ಮಾಜಿ ಸಂಸದ ಪ್ರತಾಪ್ ಸಿಂಹ ಅವರು ಹೈ ಕೋರ್ಟ್ ಮೆಟ್ಟಿಲೇರಿರುವ ಬಗ್ಗೆ ಕೇಳಿದಾಗ, “ಈ ಬಗ್ಗೆ ಸಿಎಂ ಈಗಾಗಲೇ ಉತ್ತರ
ಬಿಜೆಪಿ ಮಾಡ್ತಿರೋದು ಧರ್ಮಯಾತ್ರೆಯಲ್ಲ, ರಾಜಕೀಯ ಯಾತ್ರೆ: ಸಿಎಂ ಸಿದ್ದರಾಮಯ್ಯ
ಧರ್ಮಸ್ಥಳಕ್ಕೆ ಬಿಜೆಪಿ ಕೈಗೊಂಡಿರುವುದು ಧರ್ಮ ಯಾತ್ರೆಯಲ್ಲ ರಾಜಕೀಯ ಯಾತ್ರೆಯೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿಪ್ರಾಯ ಪಟ್ಟರು. ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ತನಿಖೆ ನಡೆಯುತ್ತಿದೆ. ಬಿಜೆಪಿ ಈಗ ಎನ್ ಐ ಎ ತನಿಖೆಗೆ ಒತ್ತಾಯಿಸುತ್ತಿದ್ದಾರೆ. ಹಾಗಾದರೆ ನಮ್ಮ ಪೊಲೀಸರ
ಮಗು ಹೊಟ್ಟೆಯಲ್ಲಿರುವಾಗಲೇ ವಾಕ್ ಶ್ರವಣ ಸಮಸ್ಯೆ ಪತ್ತೆ ನಿಜಕ್ಕೂ ದೊಡ್ಡ ಸಾಧನೆ: ಸಿಎಂ
ಮಗು ಹೊಟ್ಟೆಯಲ್ಲಿರುವಾಗಲೇ ಮಗುವಿನ ವಾಕ್ ಮತ್ತು ಶ್ರವಣ ಸಮಸ್ಯೆ ಪತ್ತೆ ಹಚ್ಚಲು ಸಾಧ್ಯವಾಗಿರುವುದು ನಿಜಕ್ಕೂ ದೊಡ್ಡ ಸಾಧನೆ. ಇದಕ್ಕಾಗಿ ಮೈಸೂರಿನ ವಾಕ್ ಮತ್ತು ಶ್ರವಣ ಸಂಸ್ಥೆ ಅಭಿನಂದನೀಯವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಅಖಿಲ ಭಾರತ ವಾಕ್-ಶ್ರವಣ ಸಂಸ್ಥೆ (ಆಯಿಷ್) ಮೈಸೂರು
ನನ್ನ ಊರಿನ ಋಣ ನನ್ನ ಮೇಲೆ ಸದಾ ಇರುತ್ತದೆ: ಮುಖ್ಯಮಂತ್ರಿ ಸಿದ್ದರಾಮಯ್ಯ
ಊರಿನ ಋಣ ಯಾವಾಗಲೂ ನನ್ನ ಮೇಲೆ ಇದ್ದೇ ಇರುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ವರುಣಾ ವಿಧಾನಸಭಾ ಕ್ಷೇತ್ರದ ಸಿದ್ದರಾಮನಹುಂಡಿಯಲ್ಲಿ ಪಿಎಂಶ್ರೀ ಕರ್ನಾಟಕ ಪಬ್ಲಿಕ್ ಶಾಲೆಯ ನೂತನ ಕಟ್ಟಡವನ್ನು ಉದ್ಘಾಟಿಸಿ ಮಾಧ್ಯಮದವರ ಜೊತೆ ಅವರು ಮಾತನಾಡಿದರು. ನನ್ನ ಊರಿನ ಶಾಲೆಯಲ್ಲಿ ನಾನು
ಎಲ್ಲಾ ಜಾತಿಯವರ ಅಭಿವೃದ್ಧಿಯಷ್ಟೆ ನಮ್ಮ ಸರ್ಕಾರದ ಗುರಿ: ಸಿಎಂ ಸಿದ್ದರಾಮಯ್ಯ
ಶೂದ್ರ ಶ್ರಮಿಕ ವರ್ಗಗಳಿಗೆ ಆರ್ಥಿಕ ಚೈತನ್ಯ ಕೊಡಲು ಅಂದು ಭಾಗ್ಯಗಳು-ಇಂದು ಗ್ಯಾರಂಟಿಗಳು ವರದನವಾಗಿವೆ. ನಮ್ಮ ಸರ್ಕಾರ ಜಾತಿ ನೋಡಲ್ಲ. ಎಲ್ಲಾ ಜಾತಿಯವರ ಅಭಿವೃದ್ಧಿಯಷ್ಟೆ ನಮ್ಮ ಗುರಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಮೈಸೂರು ಜಿಲ್ಲಾಡಳಿತ ಆಯೋಜಿಸಿದ್ದ ಭಗೀರಥ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ,
ಚಾಮುಂಡೇಶ್ವರಿ ದೇವಾಲಯದ ಪಾವಿತ್ರ್ಯತೆಗೆ ಧಕ್ಕೆಯಾದರೆ ‘ಚಾಮುಂಡೇಶ್ವರಿ ಚಲೋ’ : ಆರ್.ಅಶೋಕ
ಚಾಮುಂಡೇಶ್ವರಿ ದೇವಾಲಯದ ಪಾವಿತ್ರ್ಯತೆಗೆ ಧಕ್ಕೆಯಾದರೆ ‘ಧರ್ಮಸ್ಥಳ ಚಲೋ’ ಮಾದರಿಯಲ್ಲಿ ‘ಚಾಮುಂಡೇಶ್ವರಿ ಚಲೋ’ ಹೋರಾಟ ಮಾಡಲಾಗುವುದು ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಸರ್ಕಾರಕ್ಕೆ ಎಚ್ಚರಿಕೆ ನೀಡಿದರು. ಚಾಮುಂಡಿ ಬೆಟ್ಟದ ದೇವಾಲಯಕ್ಕೆ ಭೇಟಿ ನೀಡಿ, ದೇವರ ದರ್ಶನ ಪಡೆದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು. ಕಾಂಗ್ರೆಸ್ ಸರ್ಕಾರಕ್ಕೆ
ದಸರಾ ಧರ್ಮಾತೀತ, ಜಾತ್ಯಾತೀತ ಹಬ್ಬ: ಬಾನು ಮುಷ್ತಾಕ್ ಉದ್ಘಾಟಿಸುವುದು ಸೂಕ್ತವೆಂದ ಸಿಎಂ
ದಸರಾ ನಾಡ ಹಬ್ಬವನ್ನು ಎಲ್ಲರೂ ಆಚರಿಸುತ್ತಾರೆ. ಆದ್ದರಿಂದ ಇದನ್ನು ಸಾಹಿತಿ, ಹೋರಾಟಗಾರ್ತಿ ಬಾನು ಮುಷ್ತಾಕ್ ಉದ್ಘಾಟನೆ ಮಾಡುವುದು ಸೂಕ್ತವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು. ಅವರು ಮೈಸೂರಿನ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಮೈಸೂರು ದಸರಾ ಉದ್ಘಾಟಕರ ಆಯ್ಕೆಗೆ ಸಂಬಂಧಿಸಿದಂತೆ ಉನ್ನತ ಮಟ್ಟದ
ಸಂದೇಶ್ ನಾಗರಾಜ್ ಯಾವುದೇ ಕ್ಷೇತ್ರದಲ್ಲಿದ್ದರೂ ಯಶಸ್ಸು ಸಾಧಿಸುತ್ತಾರೆ: ಸಿದ್ದರಾಮಯ್ಯ
ಸಂದೇಶ್ ನಾಗರಾಜ್ ಸ್ನೇಹಮಯಿ ವ್ಯಕ್ತಿತ್ವದವರಾಗಿದ್ದು ಯಾವುದೇ ಕ್ಷೇತ್ರದಲ್ಲಿದ್ದರೂ ಯಶಸ್ಸು ಅವರಿಗೆ ಸಿಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ವಸ್ತು ಪ್ರದರ್ಶನ ಮೈದಾನದಲ್ಲಿ ನಡೆದ ಮಾಜಿ ವಿಧಾನ ಪರಿಷತ್ ಸದಸ್ಯರಾದ ಚಿತ್ರ ನಿರ್ಮಾಪಕ ಸಂದೇಶ್ ನಾಗರಾಜ್ ಅವರ 80ನೇ ವರ್ಷದ ಜನ್ಮ ದಿನ
ಭರ್ತಿಯಾಗುತ್ತಿವೆ ಕಬಿನಿ, ತಾರಕ ಜಲಾಶಯ: ನದಿಪಾತ್ರದ ಜನರಿಗೆ ಸ್ಥಳಾಂತರ ಸೂಚನೆ
ಮೈಸೂರಿನಲ್ಲಿ ಕಬಿನಿ ಹಾಗೂ ತಾರಕ ಜಲಾಶಯಗಳು ಭರ್ತಿಯಾಗಿದ್ದು, ನದಿ ಪಾತ್ರದ ಜನರು ಎಚ್ಚರಿಕೆಯಿಂದ ಇರುವಂತೆ ಸೂಚಿಸಲಾಗಿದೆ. ಕೇರಳದ ವಯನಾಡುವಿನಲ್ಲಿ ಹೆಚ್ಚು ಮಳೆಯಾಗುತ್ತಿರುವುದರಿಂದ, ಹೆಚ್.ಡಿ.ಕೋಟೆ ತಾಲೂಕಿನಲ್ಲಿರುವ ಕಬಿನಿ ಜಲಾಶಯಕ್ಕೆ ಹೆಚ್ಚಿನ ಪ್ರಮಾಣದಲ್ಲಿ ನೀರು ಹರಿದುಬರುತ್ತಿದ್ದು, ಹೊರ ಹರಿವು ಹೆಚ್ಚಾಗುತ್ತಿದೆ. ಹೀಗಾಗಿ ನದಿ ಪಾತ್ರದ
ಮೈಸೂರು ವಿವಿಗೆ 10 ಲಕ್ಷ, ರಾಮಕೃಷ್ಣ ಆಶ್ರಮಕ್ಕೆ 5 ಲಕ್ಷ ರೂ. ಎಸ್.ಎಂ.ಕೃಷ್ಣ ದತ್ತಿನಿಧಿ ಡಿಡಿ ಹಸ್ತಾಂತರ
ಮೈಸೂರು: ಮಾಜಿ ಮುಖ್ಯಮಂತ್ರಿಗಳು ಹಾಗೂ ಹಿರಿಯ ಮುತ್ಸದ್ದಿ ಎಸ್.ಎಂ.ಕೃಷ್ಣರವರ ಹೆಸರಿನಲ್ಲಿ ಸ್ಥಾಪಿಸಿರುವ ದಿವ್ಯ ಚೇತನ ಎಸ್.ಎಂ.ಕೃಷ್ಣ ದತ್ತಿನಿಧಿ ಡಿಡಿಯನ್ನು ಶಾಸಕರುಗಳಾದ ಕೆ.ಎಂ.ಉದಯ್ ಹಾಗೂ ದಿನೇಶ್ ಗೂಳಿಗೌಡ ರಾಮಕೃಷ್ಣ ಆಶ್ರಮದಲ್ಲಿ ಹಸ್ತಾಂತರಿಸಿದರು. ಮೈಸೂರು ವಿಶ್ವ ವಿದ್ಯಾನಿಲಯದಲ್ಲಿ ಪ್ರಥಮ ಸ್ಥಾನ ಪಡೆದ ಇಬ್ಬರು ವಿದ್ಯಾರ್ಥಿಗಳಿಗೆ