ಮೈಸೂರು
ನಂಜನಗೂಡಿನಲ್ಲಿ ಬಿದ್ದಿದ್ದ ವಿದ್ಯುತ್ ತಂತಿ ಸ್ಪರ್ಶ: ವ್ಯಕ್ತಿ, ಎರಡು ಹಸು ಬಲಿ
ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಏಚಗಳ್ಳಿ ಗ್ರಾಮದಲ್ಲಿ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ಸ್ಪರ್ಶಗೊಂಡು ವ್ಯಕ್ತಿ ಹಾಗೂ ಎರಡು ಹಸುಗಳು ಪ್ರಾಣ ಕಳೆದುಕೊಂಡಿವೆ. ಸಿದ್ದರಾಜು (52) ಮತ್ತು ಅವರು ಜಮೀನಿನಲ್ಲಿ ಮೇಯಿಸುತ್ತಿದ್ದ ಎರಡು ಹಸುಗಳು ಮೃತಪಟ್ಟಿವೆ. ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ಹಸುಗಳಿಗೆ ಸ್ಪರ್ಶವಾದಾಗ ಹಸುಗಳನ್ನು ರಕ್ಷಿಸಲು ಹೋದ ಸಿದ್ದರಾಜುವಿಗೂ ವಿದ್ಯುತ್ ಸ್ಪರ್ಶವಾಗಿ ಅಸು ನೀಗಿದ್ದಾರೆ. ಸಂಜೆಯಾದರೂ ಸಿದ್ದರಾಜು ಮನೆಗೆ ಬಾರದ ಹಿನ್ನೆಲೆಯಲ್ಲಿ ಕುಟುಂಬ ಸದಸ್ಯರು ಜಮೀನಿಗೆ ಬಂದು ನೋಡಿದಾಗ
ಅನ್ಯ ಜಾತಿಯವನ ಮದುವೆಯಾಗ ಹೊರಟಾಕೆಯ ತಂದೆ, ತಾಯಿ, ತಂಗಿ ಆತ್ಮಹತ್ಯೆ
ಮೈಸೂರಿನ ಹೆಚ್‌ಡಿ.ಕೋಟೆ ತಾಲೂಕಿನ ಬೂದನೂರು ಗ್ರಾಮದಲ್ಲಿ ಮರ್ಯಾದೆಗೆ ಅಂಜಿ ಒಂದೇ ಕುಟುಂಬದ ಮೂವರು ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿ ದ್ದಾರೆ. ಕಾಲುಗಳಿಗೆ ಹಗ್ಗ ಕಟ್ಟಿ ಮಹದೇವಸ್ವಾಮಿ, ಪತ್ನಿ ಮಂಜುಳಾ ಹಾಗೂ ಕಿರಿಯ ಮಗಳು ಹರ್ಷಿತಾ ನದಿಗೆ ಹಾರಿ ಪ್ರಾಣ ಕಳೆದುಕೊಂಡಿದ್ದಾರೆ. ಮಹದೇವಸ್ವಾಮಿ
ಸಕಲ ವೃತ್ತಿ ಪವಿತ್ರವೆಂಬ ಸಂದೇಶವಿತ್ತ ಬಸವಣ್ಣ ಕ್ರಾಂತಿಪುರುಷ, ಮಹಾನ್ ಆರ್ಥಿಕ ತಜ್ಞ: ಸಿಎಂ ಸಿದ್ದರಾಮಯ್ಯ
ನಮ್ಮ ಸರ್ಕಾರ ಆರಂಭಿಸಿರುವ 600 ಕೋಟಿಗೂ ಅಧಿಕ ವೆಚ್ಚದ ಅನುಭವ ಮಂಟಪವನ್ನು ಮುಂದಿನ ವರ್ಷ ಪೂರ್ಣಗೊಳಿಸಿ ಲೋಕಾರ್ಪಣೆಗೊಳಿಸಲಾಗು ವುದು. ಸಕಲ ವೃತ್ತಿಗಳೂ ಪವಿತ್ರ ಎನ್ನುವ ಮಹಾನ್ ಮಾನವೀಯ ಸಂದೇಶವನ್ನು ಜಗತ್ತಿಗೆ ನೀಡಿದ ಬಸವಣ್ಣನವರು ಕ್ರಾಂತಿಪುರುಷ ಮಾತ್ರವಲ್ಲ, ವಿಶ್ವ ವಿಖ್ಯಾತ ಆರ್ಥಿಕ ತಜ್ಞರೂ
ಹಿನಕಲ್ ಗ್ರಾಮದ ಸಂಪೂರ್ಣ ಅಭಿವೃದ್ಧಿಗೆ ನಾನು ಬದ್ಧ: ಸಿಎಂ
ಹಿನಕಲ್ ಗ್ರಾಮ ನನಗೆ ರಾಜಕೀಯವಾಗಿ ಶಕ್ತಿ ಕೊಟ್ಟ ಗ್ರಾಮ. ಹಂತ ಹಂತವಾಗಿ ಹಿನಕಲ್ ನ ಸಂಪೂರ್ಣ ಅಭಿವೃದ್ಧಿಗೆ ನಾನು ಸಿದ್ದ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಮೈಸೂರಿನ ಹಿನಕಲ್ ನಲ್ಲಿ 9 ಇಂದಿರಾ ಕ್ಯಾಂಟೀನ್ ಗಳನ್ನು ಜನಾರ್ಪಣೆಗೊಳಿಸಿ ಅವರು ಮಾತನಾಡಿದರು. ಮೊದಲ
ರಾಮನಗರಕ್ಕೆ ಮರುನಾಮಕರಣ ಅಧಿಕಾರ ರಾಜ್ಯ ಸರ್ಕಾರಕ್ಕೆ ಇದೆ: ಸಿಎಂ ಸಿದ್ದರಾಮಯ್ಯ
ರಾಮನಗರಕ್ಕೆ ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರುನಾಮಕರಣ ಮಾಡಲು ರಾಜ್ಯ ಸರ್ಕಾರಕ್ಕೆ ಅಧಿಕಾರ ವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಎಂದು ಮರುನಾಮಕರಣ ಮಾಡುವ ಮೂಲಕ ಜಿಲ್ಲೆಯ ಇತಿಹಾಸವನ್ನು ತಿರುಚಲಾಗುತ್ತಿದೆ ಎಂದು
ಮೈಸೂರು ವಿವಿಗೆ 10 ಲಕ್ಷ, ರಾಮಕೃಷ್ಣ ಆಶ್ರಮಕ್ಕೆ 5 ಲಕ್ಷ ರೂ. ಎಸ್.ಎಂ.ಕೃಷ್ಣ ದತ್ತಿನಿಧಿ ಡಿಡಿ ಹಸ್ತಾಂತರ
ಮೈಸೂರು: ಮಾಜಿ ಮುಖ್ಯಮಂತ್ರಿಗಳು ಹಾಗೂ ಹಿರಿಯ ಮುತ್ಸದ್ದಿ ಎಸ್.ಎಂ.ಕೃಷ್ಣರವರ ಹೆಸರಿನಲ್ಲಿ ಸ್ಥಾಪಿಸಿರುವ ದಿವ್ಯ ಚೇತನ ಎಸ್.ಎಂ.ಕೃಷ್ಣ ದತ್ತಿನಿಧಿ ಡಿಡಿಯನ್ನು ಶಾಸಕರುಗಳಾದ ಕೆ.ಎಂ.ಉದಯ್ ಹಾಗೂ ದಿನೇಶ್ ಗೂಳಿಗೌಡ ರಾಮಕೃಷ್ಣ ಆಶ್ರಮದಲ್ಲಿ ಹಸ್ತಾಂತರಿಸಿದರು. ಮೈಸೂರು ವಿಶ್ವ ವಿದ್ಯಾನಿಲಯದಲ್ಲಿ ಪ್ರಥಮ ಸ್ಥಾನ ಪಡೆದ ಇಬ್ಬರು ವಿದ್ಯಾರ್ಥಿಗಳಿಗೆ
ನಾಲ್ಕು ತಿಂಗಳಲ್ಲಿ ಗ್ರೇಟರ್ ಬೆಂಗಳೂರು ಚುನಾವಣೆಗೆ ಸಿದ್ಧತೆ: ಡಿ.ಕೆ.ಶಿವಕುಮಾರ್
ಮುಂದಿನ ನಾಲ್ಕು ತಿಂಗಳಲ್ಲಿ ಗ್ರೇಟರ್ ಬೆಂಗಳೂರು ಚುನಾವಣೆಗೆ ಸಿದ್ಧತೆ ನಡೆಸಲಾಗುವುದು. ಮೊದಲು ಮೀಸಲಾತಿ ಹಾಗೂ ವಲಯವಾರು ವಿಭಾಗಗಳನ್ನು ರಚಿಸಲಾಗುವುದು. ಚುನಾವಣೆ ವಿಳಂಬ ಮಾಡುವುದರಲ್ಲಿ ಯಾವುದೇ ಅರ್ಥ ವಿಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಮೈಸೂರಿನ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯೆ
ಪುನೀತ್ ಕೆರೆಹಳ್ಳಿಗೆ ಸೋಷಿಯಲ್ ಮೀಡಿಯಾದಲ್ಲಿ ಜೀವ ಬೆದರಿಕೆ
ಹಿಂದೂ ಪರ ಹೋರಾಟಗಾರ ಎನ್ನಲಾಗುವ ಪುನೀತ್ ಕೆರೆಹಳ್ಳಿಗೆ ಮೈಸೂರು ಮೂಲದ ವ್ಯಕ್ತಿ ಜೀವ ಬೆದರಿಕೆ ಒಡ್ಡಿರುವುದು ಬಹಿರಂಗಗೊಂಡಿದೆ. ಮೈಸೂರಿನ ಉದಯಗಿರಿ ನಿವಾಸಿ ಅಕ್ರಮ್ ಖಾನ್ ಎಂಬ ವ್ಯಕ್ತಿ ಇದ್ರಿಷ್ ಪಾಷ ಸಾವಿಗೆ ಪ್ರತೀಕಾರವಾಗಿ ನಿನ್ನ ಮುಗಿಸುತ್ತೇವೆ ಎಂಬುದಾಗಿ ಸಾಮಾಜಿಕ ಜಾಲತಾಣದಲ್ಲಿ ಬಹಿರಂಗವಾಗಿ
ನಂಜನಗೂಡು: ಚಿರತೆ ದಾಳಿಯಿಂದ ನಾಲ್ಕು ಹಸುಗಳಿಗೆ ಗಂಭೀರ ಗಾಯ
ನಂಜನಗೂಡು ತಾಲೂಕಿನ ದಾಸನೂರು ಗ್ರಾಮದಲ್ಲಿ ನಾಲ್ಕು ಹಸುಗಳ ಮೇಲೆ ಚಿರತೆ ದಾಳಿ ನಡೆಸಿದ್ದು, ಹಸುಗಳು ಗಂಭೀರ ಗಾಯಗೊಂಡಿವೆ. ಗ್ರಾಮದ ರೈತ ಬಸವಣ್ಣ ಜಮೀನಿನಲ್ಲಿ ಹಸುಗಳನ್ನು ಮೇಯಿಸುತ್ತಿದ್ದ ವೇಳೆ ಚಿರತೆ ದಾಳಿ ಮಾಡಿದೆ. ಚಿರತೆಯಿಂದ ತಪ್ಪಿಸಿಕೊಳ್ಳಲು ಹಸುಗಳು ದಿಕ್ಕಾಪಾಲಾಗಿ ಓಡಿವೆ. ಓಡುವಾಗ ಹಸುಗಳು
ಮೈಸೂರಲ್ಲಿ ಮಹಿಳೆಗೆ ಬ್ಲಾಕ್ ಮೇಲ್ ಮಾಡಿ 1.5 ಲಕ್ಷ ವಸೂಲಿ ಮಾಡಿದ್ದಾತ ಸೆರೆ
ಹುಣಸೂರು ನಗರದ ಮಹಿಳೆಗೆ ಬ್ಲ್ಯಾಕ್ ಮೇಲ್ ಮಾಡಿ 1.5 ಲಕ್ಷ ರೂಪಾಯಿ ವಸೂಲಿ ಮಾಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ವಿಜಯನಗರ ಜಿಲ್ಲೆಯ ಹೂವಿನ ಹಡಗಲಿ ತಾಲೂಕಿನ ಸೋಗಿ ಗ್ರಾಮದ ವೀರೇಶ್ ಕುಮಾರ್ 28 ಬಂಧಿತ ಆರೋಪಿ. ಆರೋಪಿಯು ವಾಟ್ಸಪ್ ಮೂಲಕ ಪರಿಚಯವಾಗಿದ್ದ