Menu

ನನ್ನ ಬದುಕಿನ ದರ್ಶನ ಎಂದಿಗೂ ಜೀವಪರ, ಪ್ರಜಾಪ್ರಭುತ್ವ ಕೇವಲ ವ್ಯವಸ್ಥೆಯಲ್ಲ, ಅದು ಮೌಲ್ಯ: ಬಾನು ಮುಷ್ತಾಕ್

ಮೈಸೂರು ದಸರಾ ನಾಡಿನ ನಾಡಿ, ಸಂಸ್ಕೃತಿಯ ಉತ್ಸವ, ಎಲ್ಲರನ್ನೂ ಒಗ್ಗೂಡಿಸುವ ಸಮನ್ವಯದ ಮೇಳ ಎಂದು 2025ರ ಬುಕರ್ ವಿಜೇತ ಸಾಹಿತಿ ಬಾನು ಮುಷ್ತಾಕ್ ಹೇಳಿದರು. ನನ್ನ ಬದುಕು ಕಲಿಸಿದ ಮುಖ್ಯ ಪಾಠವೆಂದರೆ ವ್ಯಕ್ತಿಯಿಂದ ಸಮಷ್ಠಿಯೆಡೆಗೆ ಸಾಗುವ ದಾರಿ ಮಾತ್ರ ನಿಜವಾದ ದಾರಿ. ನನ್ನ ಧಾರ್ಮಿಕ ನಂಬಿಕೆಗಳು, ನನ್ನ ಜೀವನ ದರ್ಶನ ಎಂದಿಗೂ ಜೀವಪರ. ಅವು ಮರದ ನೆರಳಿನಂತೆ, ತಂಪಾದ ನದಿಯಂತೆ ಎಂದರು. ಮೈಸೂರಿನಲ್ಲಿ ನಾಡದೇವತೆ ಶ್ರೀ ಚಾಮುಂಡೇಶ್ವರಿ ದೇವಿಯ ಅಗ್ರಪೂಜೆಯೊಂದಿಗೆ

ಬನ್ನಿ ಚುನಾವಣೆಯಲ್ಲಿ ರಾಜಕಾರಣ ಮಾಡೋಣ: ನಾಡ ಹಬ್ಬದ ವಿಚಾರದಲ್ಲಿ ಕೆಟ್ಟ ರಾಜಕಾರಣ ಬೇಡ: ಸಿಎಂ ಸಿದ್ದರಾಮಯ್ಯ 

ಗೋಡಾ ಹೈ-ಮೈದಾನ್ ಹೈ: ಬನ್ನಿ ಚುನಾವಣೆಯಲ್ಲಿ ರಾಜಕಾರಣ ಮಾಡೋಣ. ನಾಡ ಹಬ್ಬದ ವಿಚಾರದಲ್ಲಿ ಕೆಟ್ಟ ರಾಜಕಾರಣ ಬೇಡ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸವಾಲು ಎಸೆದರು. ಮೈಸೂರಿನಲ್ಲಿ  ತಾಯಿ ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿದ ಬಳಿಕ ನಾಡಹಬ್ಬ ಐತಿಹಾಸಿಕ ದಸರಾ ಉದ್ಘಾಟನೆ ಬಳಿಕ

ಮೈಸೂರಿನಲ್ಲಿ ಚಾಮುಂಡೇಶ್ವರಿಗೆ ಪುಷ್ಪಾರ್ಚನೆ ಮೂಲಕ ದಸರಾಗೆ ಚಾಲನೆಯಿತ್ತ ಬಾನು ಮುಷ್ತಾಕ್‌

ಯುವ ಶಕ್ತಿಯೊಂದಿಗೆ ಸೇರಿ ಮಾನವೀಯ ಮೌಲ್ಯಗಳ ಪ್ರೀತಿಯ ಹೊಸ ಸಮಾಜವನ್ನು ಕಟ್ಟೋಣ. ಅದರಲ್ಲಿ ಎಲ್ಲರಿಗೂ ಸಮಪಾಲು, ಸಮಬಾಳು ಇರಲಿ. ನಮ್ಮ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಒಂದು ಚಿಗುರು ನಮ್ಮ ಎದೆಯಲ್ಲಿ ಒಡೆಯಲಿ ಸೌಹಾರ್ದವೇ ನಮ್ಮ ಶಕ್ತಿ,  ನಮ್ಮ ಸಂಸ್ಕೃತಿ ನಮ್ಮ

ಶ್ರೀರಂಗಪಟ್ಟಣದ ಟಿಪ್ಪು ವಕ್ಫ್ ಎಸ್ಟೇಟ್‌ನಲ್ಲಿ ಭ್ರಷ್ಟಾಚಾರ ಆರೋಪ

ಮಂಡ್ಯದ ಶ್ರೀರಂಗಪಟ್ಟಣದ ಷಹೀದ್ ಟಿಪ್ಪು ವಕ್ಫ್ ಎಸ್ಟೇಟ್ ನಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ ನಡೆದಿದೆ ಎಂಬ ಆರೋಪ ಕೇಳಿ ಬಂದಿದೆ.  ಮೈಸೂರಿನ‌ ಶಾಸಕ ಹಾಗೂ ಟಿಪ್ಪು ವಕ್ಫ್ ಕಮಿಟಿ ಅಧ್ಯಕ್ಷ ತನ್ವೀರ್ ಸೇಠ್ ಹಾಗೂ ಕಾರ್ಯದರ್ಶಿ ಇರ್ಫಾನ್ ವಿರುದ್ಧ ಭ್ರಷ್ಟಾಚಾರ ಹಾಗೂ ಅಧಿಕಾರ

ಮೈಸೂರಿನಲ್ಲಿ ನದಿಗೆ ಹಾರಿದ ಯುವತಿ, ಹಾಸನದಲ್ಲಿ ನೇಣು ಬಿಗಿದು ಯುವಕ ಆತ್ಮಹತ್ಯೆ

ಹುಣಸೂರು ತಾಲೂಕು ಲಕ್ಷ್ಮಣ ತೀರ್ಥ ನದಿ ತೂಗುಸೇತುವೆ ಬಳಿ ನೀರಿಗೆ ಜಿಗಿದು ಯುವತಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಹರವೆ ಗ್ರಾಮದ ನಿವಾಸಿ ನಂಜುಂಡಸ್ವಾಮಿ ಮತ್ತು ಅಂಬುಜ ಪುತ್ರಿ ದೀಪಿಕಾ ಆತ್ಮಹತ್ಯೆಗೆ ಮಾಡಿಕೊಂಡ ಯುವತಿ. ಮೈಸೂರಿನ ಜಯಲಕ್ಷ್ಮಿಪುರಂ ನಲ್ಲಿರುವ ವಿಶ್ವಕವಿ ಕುವೆಂಪು ಕಾಲೇಜಿನಲ್ಲಿ ದ್ವಿತೀಯ

ನಿಮ್ಮನ್ನು ಸ್ವಾಮಿ ಮಾಡಿದ್ದು ನಾನು, ಸಿಎಂ ಪರ ಬೀದಿಗಿಳಿದ್ರೆ ತಲೆದಂಡ ಹುಷಾರ್‌: ಕಾಗಿನೆಲೆ  ಶ್ರೀಗಳಿಗೆ ಎಚ್.ವಿಶ್ವನಾಥ್  ಬೆದರಿಕೆ? 

ನಿಮ್ಮನ್ನು ಸ್ವಾಮಿ ಮಾಡಿದ್ದು ನಾನು. ಮೊದಲ ಪೀಠಾಧ್ಯಕ್ಷ ಮಾಡಿದ್ದೆ ನಾನು, ಯಾವುದೇ ಕಾರಣಕ್ಕೂ ಸಿದ್ದರಾಮಯ್ಯ ಪರ ಬೀದಿಗೆ ಬರಬಾರದು.ಬಂದರೆ ನಾವು ಸುಮ್ಮನಿರಲ್ಲ. ನಿಮಗೂ ತಲೆ ದಂಡ ಮಾಡಬೇಕಾಗುತ್ತದೆ ಹುಷಾರ್ ಎಂದು  ಎಂದು ಕಾಗಿನೆಲೆ ಪೀಠದ ಶ್ರೀಗಳಿಗೆ ವಿಧಾನಪರಿಷತ್ ಸದಸ್ಯ ಎಚ್.ವಿಶ್ವನಾಥ್ ಎಚ್ಚರಿಕೆ

ಮುಡಾ ಅಕ್ರಮ: ಮಾಜಿ ಆಯುಕ್ತ ದಿನೇಶ್‌ ಕುಮಾರ್ ವಿರುದ್ಧ ತನಿಖೆಗೆ ಸರ್ಕಾರ ಸಮ್ಮತಿ

ಮುಡಾ ಅಕ್ರಮ ಸೈಟ್ ಹಂಚಿಕೆ ಆರೋಪದಡಿ ಮುಡಾದ ಮಾಜಿ ಆಯುಕ್ತ ದಿನೇಶ್‌ ಕುಮಾರ್ ವಿರುದ್ಧ ತನಿಖೆಗೆ ಸರ್ಕಾರ ಅನುಮತಿ ನೀಡಿದೆ. ಮುಡಾದ ಮಾಜಿ ಅಧ್ಯಕ್ಷ ಹೆಚ್.ವಿ. ರಾಜೀವ್ ಮತ್ತು ದಿನೇಶ್ ವಿರುದ್ಧ ತನಿಖೆ ನಡೆಸಲು ಅನುಮತಿ ನೀಡುವಂತೆ ಲೋಕಾಯುಕ್ತ ಪೊಲೀಸರು ಪ್ರಾಸಿಕ್ಯೂಷನ್

ದಸರಾ ಮತ್ತು ಬಾನು ಮುಷ್ತಾಕ್‌: ಯಾವುದೇ ಹಕ್ಕು ಉಲ್ಲಂಘನೆಯಾಗಿಲ್ಲವೆಂದು ಮೂರು ಪಿಐಎಲ್ ವಜಾಗೊಳಿಸಿದ ಹೈಕೋರ್ಟ್‌

ನಾಡಹಬ್ಬ ಮೈಸೂರು ದಸರಾ ಉದ್ಘಾಟಕರಾಗಿ ಸರ್ಕಾರ ಸಾಹಿತಿ, ಬುಕರ್‌ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್‌ ಅವರನ್ನು ಆಯ್ಕೆ ಮಾಡಿರುವುದನ್ನು ವಿರೋಧಿಸಿ ಹೈಕೋರ್ಟ್‌ಗೆ ಸಲ್ಲಿಕೆಯಾಗಿರುವ ಮೂರು ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು ಹೈಕೋರ್ಟ್‌ ವಜಾಗೊಳಿಸಿದೆ. ಅರ್ಜಿಗಳ  ವಿಚಾರಣೆ ನಡೆಸಿದ ಸಿಜೆ ವಿಭು ಬಖ್ರು ಹಾಗೂ

ದಸರಾ ಮತ್ತು ಬಾನು ಮುಷ್ತಾಕ್‌: ಮೂರು ಪಿಐಎಲ್ ವಿಚಾರಣೆ ಇಂದು

ನಾಡಹಬ್ಬ ಮೈಸೂರು ದಸರಾ ಉದ್ಘಾಟಕರಾಗಿ ಸರ್ಕಾರ ಸಾಹಿತಿ, ಬುಕರ್‌ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್‌ ಅವರನ್ನು ಆಯ್ಕೆ ಮಾಡಿರುವುದನ್ನು ವಿರೋಧಿಸಿ ಹೈಕೋರ್ಟ್‌ಗೆ ಸಲ್ಲಿಕೆಯಾಗಿರುವ ಮೂರು ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ ವಿಚಾರಣೆ ಇಂದು ನಡೆಯಲಿದೆ. ಮಾಜಿ ಸಂಸದ ಪ್ರತಾಪ್ ಸಿಂಹ , ಗಿರೀಶ್

ಮಾಜಿ ಸಂಸದ ಪ್ರತಾಪ್ ಸಿಂಹ ಶಾಂತಿಭಂಗ ಕೆಲಸ ಮಾಡಿದರೆ ಪೊಲೀಸ್‌ ಕ್ರಮ: ಸಿಎಂ ಸಿದ್ದರಾಮಯ್ಯ

ದಸರಾ ಉದ್ಘಾಟಕರ ವಿಚಾರದಲ್ಲಿ ಉದ್ಘಾಟನೆಗೆ ಅವಕಾಶ ಕೊಡಬಾರದು ಎಂದು ನ್ಯಾಯಾಲಯಕ್ಕೆ ಅರ್ಜಿ ಹಾಕಿರುವ ಬಗ್ಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ,   ನ್ಯಾಯಾಲಯದಲ್ಲಿ ವಿಷಯ ಇತ್ಯರ್ಥವಾಗಲಿ.  ದಸರಾ ಒಂದು ಧರ್ಮಕ್ಕೆ ಸೇರಿದ ಕಾರ್ಯಕ್ರಮವಲ್ಲ. ಸಾಂಸ್ಕೃತಿಕವಾಗಿ ಎಲ್ಲ ಧರ್ಮದ ಜನರು ಇದರಲ್ಲಿ ಭಾಗವಹಿಸುತ್ತಾರೆ. ದಸರಾ