Tuesday, February 03, 2026
Menu

ಎಲ್ಲಾ ಜಾತಿಯವರ ಅಭಿವೃದ್ಧಿಯಷ್ಟೆ ನಮ್ಮ ಸರ್ಕಾರದ ಗುರಿ: ಸಿಎಂ ಸಿದ್ದರಾಮಯ್ಯ

ಶೂದ್ರ ಶ್ರಮಿಕ ವರ್ಗಗಳಿಗೆ ಆರ್ಥಿಕ‌ ಚೈತನ್ಯ ಕೊಡಲು ಅಂದು ಭಾಗ್ಯಗಳು-ಇಂದು ಗ್ಯಾರಂಟಿಗಳು ವರದನವಾಗಿವೆ. ನಮ್ಮ ಸರ್ಕಾರ ಜಾತಿ ನೋಡಲ್ಲ. ಎಲ್ಲಾ ಜಾತಿಯವರ ಅಭಿವೃದ್ಧಿಯಷ್ಟೆ ನಮ್ಮ ಗುರಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಮೈಸೂರು ಜಿಲ್ಲಾಡಳಿತ ಆಯೋಜಿಸಿದ್ದ ಭಗೀರಥ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ, “ಉಪ್ಪಾರ ಸಮುದಾಯ ಭವನದ” ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದರು. ಈ ನೆಲದ ದಾರ್ಶನಿಕರು, ಮಹಾನುಭಾವರ ಮನುಕುಲದ ಕೊಡುಗೆ ಗಮನಿಸಿ ಅವರೆಲ್ಲರ ಜಯಂತಿಯನ್ನು ಸರ್ಕಾರವೇ ಆಚರಿಸುತ್ತಿದೆ. ಇವರೆಲ್ಲರೂ ಜಾತ್ಯತೀತ ಮನೋಭಾವದಿಂದ ನೀಡಿದ

ಚಾಮುಂಡೇಶ್ವರಿ ದೇವಾಲಯದ ಪಾವಿತ್ರ್ಯತೆಗೆ ಧಕ್ಕೆಯಾದರೆ ‘ಚಾಮುಂಡೇಶ್ವರಿ ಚಲೋ’ :  ಆರ್.ಅಶೋಕ

ಚಾಮುಂಡೇಶ್ವರಿ ದೇವಾಲಯದ ಪಾವಿತ್ರ್ಯತೆಗೆ ಧಕ್ಕೆಯಾದರೆ ‘ಧರ್ಮಸ್ಥಳ ಚಲೋ’ ಮಾದರಿಯಲ್ಲಿ ‘ಚಾಮುಂಡೇಶ್ವರಿ ಚಲೋ’ ಹೋರಾಟ ಮಾಡಲಾಗುವುದು ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಸರ್ಕಾರಕ್ಕೆ ಎಚ್ಚರಿಕೆ ನೀಡಿದರು. ಚಾಮುಂಡಿ ಬೆಟ್ಟದ ದೇವಾಲಯಕ್ಕೆ ಭೇಟಿ ನೀಡಿ, ದೇವರ ದರ್ಶನ ಪಡೆದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು. ಕಾಂಗ್ರೆಸ್ ಸರ್ಕಾರಕ್ಕೆ

ದಸರಾ ಧರ್ಮಾತೀತ, ಜಾತ್ಯಾತೀತ ಹಬ್ಬ: ಬಾನು ಮುಷ್ತಾಕ್  ಉದ್ಘಾಟಿಸುವುದು ಸೂಕ್ತವೆಂದ ಸಿಎಂ

ದಸರಾ ನಾಡ ಹಬ್ಬವನ್ನು ಎಲ್ಲರೂ ಆಚರಿಸುತ್ತಾರೆ. ಆದ್ದರಿಂದ ಇದನ್ನು ಸಾಹಿತಿ, ಹೋರಾಟಗಾರ್ತಿ ಬಾನು ಮುಷ್ತಾಕ್ ಉದ್ಘಾಟನೆ ಮಾಡುವುದು ಸೂಕ್ತವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು. ಅವರು  ಮೈಸೂರಿನ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಮೈಸೂರು ದಸರಾ ಉದ್ಘಾಟಕರ ಆಯ್ಕೆಗೆ ಸಂಬಂಧಿಸಿದಂತೆ ಉನ್ನತ ಮಟ್ಟದ

ಸಂದೇಶ್ ನಾಗರಾಜ್ ಯಾವುದೇ ಕ್ಷೇತ್ರದಲ್ಲಿದ್ದರೂ ಯಶಸ್ಸು ಸಾಧಿಸುತ್ತಾರೆ: ಸಿದ್ದರಾಮಯ್ಯ

ಸಂದೇಶ್ ನಾಗರಾಜ್ ಸ್ನೇಹಮಯಿ ವ್ಯಕ್ತಿತ್ವದವರಾಗಿದ್ದು ಯಾವುದೇ ಕ್ಷೇತ್ರದಲ್ಲಿದ್ದರೂ ಯಶಸ್ಸು ಅವರಿಗೆ ಸಿಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ವಸ್ತು ಪ್ರದರ್ಶನ ಮೈದಾನದಲ್ಲಿ ನಡೆದ ಮಾಜಿ ವಿಧಾನ‌ ಪರಿಷತ್ ಸದಸ್ಯರಾದ ಚಿತ್ರ‌ ನಿರ್ಮಾಪಕ ಸಂದೇಶ್ ನಾಗರಾಜ್ ಅವರ 80ನೇ ವರ್ಷದ ಜನ್ಮ ದಿನ

ಭರ್ತಿಯಾಗುತ್ತಿವೆ ಕಬಿನಿ, ತಾರಕ ಜಲಾಶಯ: ನದಿಪಾತ್ರದ ಜನರಿಗೆ ಸ್ಥಳಾಂತರ ಸೂಚನೆ

ಮೈಸೂರಿನಲ್ಲಿ ಕಬಿನಿ ಹಾಗೂ ತಾರಕ ಜಲಾಶಯಗಳು ಭರ್ತಿಯಾಗಿದ್ದು, ನದಿ ಪಾತ್ರದ ಜನರು ಎಚ್ಚರಿಕೆಯಿಂದ ಇರುವಂತೆ ಸೂಚಿಸಲಾಗಿದೆ. ಕೇರಳದ ವಯನಾಡುವಿನಲ್ಲಿ ಹೆಚ್ಚು ಮಳೆಯಾಗುತ್ತಿರುವುದರಿಂದ, ಹೆಚ್​.ಡಿ.ಕೋಟೆ ತಾಲೂಕಿನಲ್ಲಿರುವ ಕಬಿನಿ ಜಲಾಶಯಕ್ಕೆ ಹೆಚ್ಚಿನ ಪ್ರಮಾಣದಲ್ಲಿ ನೀರು ಹರಿದುಬರುತ್ತಿದ್ದು, ಹೊರ ಹರಿವು ಹೆಚ್ಚಾಗುತ್ತಿದೆ. ಹೀಗಾಗಿ ನದಿ ಪಾತ್ರದ

ಮೈಸೂರು ವಿವಿಗೆ 10 ಲಕ್ಷ, ರಾಮಕೃಷ್ಣ ಆಶ್ರಮಕ್ಕೆ 5 ಲಕ್ಷ ರೂ. ಎಸ್.ಎಂ.ಕೃಷ್ಣ ದತ್ತಿ‌ನಿಧಿ ಡಿಡಿ ಹಸ್ತಾಂತರ

ಮೈಸೂರು: ಮಾಜಿ‌ ಮುಖ್ಯಮಂತ್ರಿಗಳು ಹಾಗೂ ಹಿರಿಯ ಮುತ್ಸದ್ದಿ‌ ಎಸ್.ಎಂ.ಕೃಷ್ಣರವರ ಹೆಸರಿನಲ್ಲಿ ಸ್ಥಾಪಿಸಿರುವ ದಿವ್ಯ ಚೇತನ ಎಸ್.ಎಂ.ಕೃಷ್ಣ ದತ್ತಿ‌ನಿಧಿ  ಡಿಡಿಯನ್ನು ಶಾಸಕರುಗಳಾದ ಕೆ.ಎಂ.ಉದಯ್ ಹಾಗೂ ದಿನೇಶ್ ಗೂಳಿಗೌಡ ರಾಮಕೃಷ್ಣ ಆಶ್ರಮದಲ್ಲಿ ಹಸ್ತಾಂತರಿಸಿದರು. ಮೈಸೂರು ವಿಶ್ವ ವಿದ್ಯಾನಿಲಯದಲ್ಲಿ ಪ್ರಥಮ ಸ್ಥಾನ ಪಡೆದ ಇಬ್ಬರು ವಿದ್ಯಾರ್ಥಿಗಳಿಗೆ

ನಾಲ್ಕು ತಿಂಗಳಲ್ಲಿ ಗ್ರೇಟರ್ ಬೆಂಗಳೂರು ಚುನಾವಣೆಗೆ ಸಿದ್ಧತೆ: ಡಿ.ಕೆ.ಶಿವಕುಮಾರ್

ಮುಂದಿನ ನಾಲ್ಕು ತಿಂಗಳಲ್ಲಿ ಗ್ರೇಟರ್ ಬೆಂಗಳೂರು ಚುನಾವಣೆಗೆ ಸಿದ್ಧತೆ ನಡೆಸಲಾಗುವುದು. ಮೊದಲು ಮೀಸಲಾತಿ ಹಾಗೂ ವಲಯವಾರು ವಿಭಾಗಗಳನ್ನು ರಚಿಸಲಾಗುವುದು. ಚುನಾವಣೆ ವಿಳಂಬ ಮಾಡುವುದರಲ್ಲಿ ಯಾವುದೇ ಅರ್ಥ ವಿಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಮೈಸೂರಿನ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯೆ

ಪುನೀತ್ ಕೆರೆಹಳ್ಳಿಗೆ ಸೋಷಿಯಲ್‌ ಮೀಡಿಯಾದಲ್ಲಿ ಜೀವ ಬೆದರಿಕೆ

ಹಿಂದೂ ಪರ ಹೋರಾಟಗಾರ ಎನ್ನಲಾಗುವ ಪುನೀತ್ ಕೆರೆಹಳ್ಳಿಗೆ ಮೈಸೂರು ಮೂಲದ ವ್ಯಕ್ತಿ ಜೀವ ಬೆದರಿಕೆ ಒಡ್ಡಿರುವುದು ಬಹಿರಂಗಗೊಂಡಿದೆ. ಮೈಸೂರಿನ ಉದಯಗಿರಿ ನಿವಾಸಿ ಅಕ್ರಮ್ ಖಾನ್ ಎಂಬ ವ್ಯಕ್ತಿ ಇದ್ರಿಷ್ ಪಾಷ ಸಾವಿಗೆ ಪ್ರತೀಕಾರವಾಗಿ ನಿನ್ನ ಮುಗಿಸುತ್ತೇವೆ ಎಂಬುದಾಗಿ ಸಾಮಾಜಿಕ ಜಾಲತಾಣದಲ್ಲಿ ಬಹಿರಂಗವಾಗಿ

ನಂಜನಗೂಡು: ಚಿರತೆ ದಾಳಿಯಿಂದ ನಾಲ್ಕು ಹಸುಗಳಿಗೆ ಗಂಭೀರ ಗಾಯ

ನಂಜನಗೂಡು ತಾಲೂಕಿನ ದಾಸನೂರು ಗ್ರಾಮದಲ್ಲಿ ನಾಲ್ಕು ಹಸುಗಳ ಮೇಲೆ ಚಿರತೆ ದಾಳಿ ನಡೆಸಿದ್ದು, ಹಸುಗಳು ಗಂಭೀರ ಗಾಯಗೊಂಡಿವೆ. ಗ್ರಾಮದ ರೈತ ಬಸವಣ್ಣ ಜಮೀನಿನಲ್ಲಿ ಹಸುಗಳನ್ನು ಮೇಯಿಸುತ್ತಿದ್ದ ವೇಳೆ ಚಿರತೆ ದಾಳಿ ಮಾಡಿದೆ. ಚಿರತೆಯಿಂದ ತಪ್ಪಿಸಿಕೊಳ್ಳಲು ಹಸುಗಳು ದಿಕ್ಕಾಪಾಲಾಗಿ ಓಡಿವೆ. ಓಡುವಾಗ ಹಸುಗಳು

ಮೈಸೂರಲ್ಲಿ ಮಹಿಳೆಗೆ ಬ್ಲಾಕ್ ಮೇಲ್ ಮಾಡಿ 1.5 ಲಕ್ಷ ವಸೂಲಿ ಮಾಡಿದ್ದಾತ ಸೆರೆ

ಹುಣಸೂರು ನಗರದ ಮಹಿಳೆಗೆ ಬ್ಲ್ಯಾಕ್ ಮೇಲ್ ಮಾಡಿ 1.5 ಲಕ್ಷ ರೂಪಾಯಿ ವಸೂಲಿ ಮಾಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ವಿಜಯನಗರ ಜಿಲ್ಲೆಯ ಹೂವಿನ ಹಡಗಲಿ ತಾಲೂಕಿನ ಸೋಗಿ ಗ್ರಾಮದ ವೀರೇಶ್ ಕುಮಾರ್ 28 ಬಂಧಿತ ಆರೋಪಿ. ಆರೋಪಿಯು ವಾಟ್ಸಪ್ ಮೂಲಕ ಪರಿಚಯವಾಗಿದ್ದ