Menu

ಮಂತ್ರಾಲಯದಲ್ಲಿ ಅಡ್ವಾನ್ಸ್ ರೂಂ ಬುಕ್ ಹೆಸರಿನಲ್ಲಿ ವಂಚನೆ ಜಾಲ

ಶ್ರೀ ಗುರು ರಾಘವೇಂದ್ರ ಸ್ವಾಮಿ ಸನ್ನಿಧಿ ಮಂತ್ರಾಲಯದಲ್ಲಿ ಅಡ್ವಾನ್ಸ್ ರೂಂ ಬುಕ್ ಮಾಡುವ ಭಕ್ತರನ್ನು ವಂಚಿಸುವ ಜಾಲವೊಂದು ಕಾರ್ಯಾಚರಿಸುತ್ತಿರುವುದು ಬಯಲಾಗಿದೆ. ಹೀಗಾಗಿ ಭಕ್ತರು ಈ ಬಗ್ಗೆ ಎಚ್ಚರಿಕೆ ವಹಿಸಬೇಕಿದೆ. ರೂಂ ಬುಕ್ಕಿಂಗ್, ಪ್ರಸಾದ, ವಿವಿಧ ಸೇವೆಗಳ ಸೌಲಭ್ಯ ಒದಗಿಸುವ ಹೆಸರಲ್ಲಿ ವಂಚಕರ ಜಾಲ ಭಕ್ತರಿಂದ ಹಣ ವಸೂಲಿ ಮಾಡುತ್ತಿದ್ದು, ಈ ಕುರಿತು ಮಂತ್ರಾಲಯ ರಾಯರ ಮಠದ ಆಡಳಿತ ಮಂಡಳಿ ಪ್ರಕಟಣೆ ಹೊರಡಿಸಿದೆ. ಮಂತ್ರಾಲಯ ಗುರು ರಾಘವೇಂದ್ರ ಸ್ವಾಮಿ ಮಠದ ಹೆಸರಿನಲ್ಲಿ

ದಾವಣಗೆರೆ ಮಹಿಳೆಗೆ ಮೈಕ್ರೋ ಫೈನಾನ್ಸ್ ಸಿಬ್ಬಂದಿ ಕಿರುಕುಳ

ದಾವಣಗೆರೆಯ ಕತ್ತಲಗೆರೆ ಗ್ರಾಮದ ರೇಣುಕಮ್ಮ ಎಂಬ ಮಹಿಳೆಗೆ ಮೈಕ್ರೋ ಫೈನಾನ್ಸ್ ಸಿಬ್ಬಂದಿ ಕಿರುಕುಳ ನೀಡುತ್ತಿರುವ ಆರೋಪ ಕೇಳಿಬಂದಿದೆ. ಈ ಹಿಂದೆ ರೇಣುಕಮ್ಮ ಫೈನಾನ್ಸ್ ಕಂಪನಿ ಒಂದರಲ್ಲಿ ಸಾಲ ಮಾಡಿದ್ದರು. ನಂತರ ಫೈನಾನ್ಸ್ ಕಂಪನಿ ಸಿಬ್ಬಂದಿಯ ಕಿರುಕುಳಕ್ಕೆ ಬೇಸತ್ತು ಹಸು ಮಾರಿ ಸಾಲವನ್ನು

ವಿಧಾನ ಸಭೆ ಸಚಿವಾಲಯದಲ್ಲಿ ಪುಸ್ತಕ ಮೇಳ: ಲಾಂಛನದ ವಿನ್ಯಾಸ ಆಹ್ವಾನ

ಕರ್ನಾಟಕ ವಿಧಾನ ಸಭೆ ಸಚಿವಾಲಯದ ವತಿಯಿಂದ ಫೆಬ್ರುವರಿ 28, 2025 ರಿಂದ ಮಾರ್ಚ 03, 2025ರ ವರೆಗೆ ನಾಲ್ಕು ದಿನಗಳ ಕಾಲ ಪುಸ್ತಕ ಮೇಳವನ್ನು ವಿಧಾನಸೌಧ ಆವರಣದಲ್ಲಿ ಆಯೋಜಿಸಲಾಗುತ್ತಿದೆ. ಪುಸ್ತಕ ಮೇಳಕ್ಕೆ ಸಂಬಂಧಿಸಿದ ಲಾಂಛನವನ್ನು ವಿನ್ಯಾಸಗೊಳಿಸಲು ಉದ್ದೇಶಿಸಿದ್ದು, ಲಾಂಛನ ವಿನ್ಯಾಸಗೊಳಿಸಲು ಸಾರ್ವಜನಿಕರಿಗೆ

ರಕ್ತದಾನ ಮಾಡಿ ಜನರ ಜೀವ ಉಳಿಸುವುದು ಪುಣ್ಯದ ಕೆಲಸ: ಬಸವರಾಜ ಬೊಮ್ಮಾಯಿ

ಗದಗ: ರಕ್ತದಾನ ಮಾಡಿ ಜನರ ಜೀವ ಉಳಿಸುವ ಪುಣ್ಯದ ಕೆಲಸವನ್ನು ಔಷಧ ವ್ಯಾಪಾರಿಗಳ ಸಂಘ ಮಾಡುತ್ತಿರುವುದು ಅಭಿನಂದನೀಯ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು. ಇಂದು ಗದಗ ಶಹರದ ರೋಟರಿ ಸೆಂಟ್ರಲ್ ಹಾಲ್ ನಲ್ಲಿ ಗದಗ ಜಿಲ್ಲಾ

ರಾಷ್ಟ್ರಪತಿಗಳ ಔತಣಕೂಟಕ್ಕೆ ದಾವಣಗೆರೆಯ ವೈದ್ಯ ಸುರೇಶ್‌ಗೆ ಆಹ್ವಾನ

ದಾವಣಗೆರೆಯ ವೈದ್ಯ ಡಾ. ಸುರೇಶ್ ಹನಗವಾಡಿಗೆ ರಾಷ್ಟ್ರಪತಿಗಳ ಔತಣಕೂಟಕ್ಕೆ ಆಹ್ವಾನ ಬಂದಿದೆ. ಸಚಿನ್ ತೆಂಡೂಲ್ಕರ್‌ ಸೇರಿದಂತೆ ದಿಗ್ಗಜರ ಜತೆ ಡಾ. ಸುರೇಶ್ ಹನಗವಾಡಿ ರಾಷ್ಟ್ರಪತಿಗಳ ಔತಣಕೂಟದಲ್ಲಿ ಪಾಲ್ಗೊಳ್ಳಲಿದ್ದಾರೆ. ಒಟ್ಟಾರೆಯಾಗಿ ದೇಶದ 528 ಗಣ್ಯರಿಗೆ ಔತಣಕೂಟದ ಆಹ್ವಾನ ಬಂದಿದೆ. ಜನವರಿ 26ರ ಗಣರಾಜ್ಯೋತ್ಸವ

ಫೈನಾನ್ಸ್​ ಕಿರುಕುಳಕ್ಕೆ ಬೇಸತ್ತ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ 

ಫೈನಾನ್ಸ್​ ಕಿರುಕುಳಕ್ಕೆ ಬೇಸತ್ತು ಬಾವಿಗೆ ಹಾರಿ ಮಹಿಳೆ ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ಯಮನಾಪುರ ಹೊರವಲಯದಲ್ಲಿ ನಡೆದಿದೆ. ಹುಕ್ಕೇರಿ ತಾಲೂಕಿನ ಶಿರೂರಿನ ಸರೋಜಾ ಕಿರಬಿ(52) ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ಕಾಕತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಫೈನಾನ್ಸ್​​ನಲ್ಲಿ ಸಬ್ಸಿಡಿಗೆ 2.30 ಲಕ್ಷ ರೂ.

ಭದ್ರಾ ಮೇಲ್ದಂಡೆ ಯೋಜನೆಗೆ ಅನುದಾನ ನೀಡದ ಕೇಂದ್ರ: ಡಿಕೆಶಿ ವಾಗ್ದಾಳಿ

ಭದ್ರಾ ಮೇಲ್ದಂಡೆ ಯೋಜನೆಗೆ ₹ 5,300 ಕೋಟಿ ಅನುದಾನ ನೀಡುವುದಾಗಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರ ಬಜೆಟ್ ನಲ್ಲಿ ಘೋಷಣೆ ಮಾಡಿತ್ತು. ಬಸವರಾಜ ಬೊಮ್ಮಾಯಿ ಅವರು ಕೂಡ ರಾಜ್ಯ ಬಜೆಟ್ ನಲ್ಲಿ ಈ ವಿಚಾರ ಸೇರಿಸಿದ್ದರು. ಆದರೆ ಇದುವರೆಗೂ

ಟ್ರ್ಯಾಕ್ಟರ್ -ಕೆಎಸ್ಸಾರ್ಟಿಸಿ ಬಸ್ ಡಿಕ್ಕಿ: ಗರ್ಬಿಣಿ ಸೇರಿ ಇಬ್ಬರ ಸಾವು

ಸಾರಿಗೆ ಬಸ್ ಮತ್ತು ರೈತರ ಟ್ರ್ಯಾಕ್ಟರ್ ನಡುವೆ ಸಂಭವಿಸಿದ  ಡಿಕ್ಕಿಯಲ್ಲಿ ಗರ್ಭಿಣಿ ಸೇರಿ ಇಬ್ಬರು ಸಾವಿಗಿಡಾಗಿರುವ ಘಟನೆ ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕಿನಲ್ಲಿ ಸಂಭವಿಸಿದೆ. ಮುದಗಲ್ ಪೊಲೀಸ್ ಠಾಣಾ ವ್ಯಾಪ್ತಿಯ ಬನ್ನಿಗೋಳ ಸಮೀಪ ಗುರುವಾರ ಮುಂಜಾನೆ ಜರುಗಿದ್ದು, ಶ್ರೀದೇವಿ ರಾಮಣ್ಣ (18)

ಮಲೆ ಮಹದೇಶ್ವರ ಬೆಟ್ಟ ವನ್ಯ ಜೀವಿಧಾಮದಲ್ಲಿ ಪಕ್ಷಿಗಳ ಸಮೀಕ್ಷೆ

ಅರಣ್ಯ ಪ್ರದೇಶದಲ್ಲಿ ಯಾವೆಲ್ಲ ಪ್ರಭೇದದ ಪಕ್ಷಿಗಳಿವೆ ಎಂಬುದನ್ನು ಅರಿಯಲು ರಾಜ್ಯದಲ್ಲೇ ಮೊದಲ ಬಾರಿಗೆ ಪಕ್ಷಿಗಳ ಸಮೀಕ್ಷೆ ನಡೆಸಲು ಅರಣ್ಯ ಇಲಾಖೆ ಮುಂದಾಗಿ, ಫೆ.1 ಮತ್ತು 2ರಂದು ಮಲೆ ಮಹದೇಶ್ವರ ಬೆಟ್ಟ ವನ್ಯ ಜೀವಿಧಾಮದಲ್ಲಿ ಸಮೀಕ್ಷೆ ನಡೆಯಲಿದೆ. ತಮಿಳುನಾಡು ಗಡಿಭಾಗಕ್ಕೆ ಹೊಂದಿಕೊಂಡಿರುವ ಈ

ಸಕಲೇಶಪುರದಲ್ಲಿ ಶಾಲೆಗೆಂದು ತೆರಳಿದ ಮೂವರು ವಿದ್ಯಾರ್ಥಿಗಳು ನಾಪತ್ತೆ

ಹಾಸನದ ಸಕಲೇಶಪುರ ತಾಲೂಕಿನ ಕುನಿಗನಹಳ್ಳಿ ಗ್ರಾಮದಲ್ಲಿ ಶಾಲೆಗೆ ಹೋಗುವುದಾಗಿ ಹೇಳಿ ಮನೆಯಿಂದ ತೆರಳಿದ್ದ ಮೂವರು ಮಕ್ಕಳು ನಾಪತ್ತೆಯಾಗಿದ್ದಾರೆ. ಕುನಿಗನಹಳ್ಳಿ ಗ್ರಾಮದ ಧರ್ಮಪ್ರಕಾಶ್, ಮನು ಹಾಗೂ ಕಿರುಹುಣಸೆ ಗ್ರಾಮದ ಮಹೇಂದ್ರ ಎಂಬವರ ಮಕ್ಕಳಾದ ಶರತ್ (16), ಧನಂಜಯ್ (16), ಮುರುಳಿ (16) ನಾಪತ್ತೆಯಾದವರು.