ಜಿಲ್ಲಾ ಸುದ್ದಿ
ಚೇನಂಡ ಹಾಕಿ ಪಂದ್ಯಾವಳಿಗೆ ಒಂದು ಕೋಟಿ ಅನುದಾನ: ಸಿಎಂ ಘೋಷಣೆ
ಕೊಡವರು ಅಂದ್ರೆ ಹಾಕಿ. ಹಾಕಿ ಅಂದ್ರೆ ಕೊಡವರು. ಚೆನ್ನಡ ಹಾಕಿ ಪಂದ್ಯಾವಳಿಗೆ ಸರ್ಕಾರದಿಂದ ಒಂದು ಕೋಟಿ ಅನುದಾನ ಒದಗಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭರವಸೆ ನೀಡಿದರು. ಗೃಹ ಕಚೇರಿ ಕೃಷ್ಣದಲ್ಲಿ “ಚೇನಂಡ ಹಾಕಿ ಪಂದ್ಯಾವಳಿ”ಯ ಲೋಗೋ ಬಿಡುಗಡೆ ಮಾಡಿ ಮಾತನಾಡಿದರು. ಅಂತಾರಾಷ್ಟ್ರೀಯ ಮಟ್ಟದಲ್ಲಿ ಕೊಡಗಿನ ಹಾಕಿ ಪಟುಗಳು ಮಿಂಚಿದ್ದಾರೆ. ದೇಶಕ್ಕೆ ಕೀರ್ತಿ ತಂದಿದ್ದಾರೆ. ಏಷ್ಯಾ ಗೇಮ್ಸ್ ಸೇರಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ದೇಶಕ್ಕೆ ಹೆಮ್ಮೆ ಮತ್ತು ಘನತೆ ತಂದುಕೊಟ್ಟಿದ್ದಾರೆ ಎಂದು
ಶ್ರೀರಂಗಪಟ್ಟಣದಲ್ಲಿ ಬಾಲಕಿಯ ರಕ್ಷಣೆಗೆ ಹೋದ ನಾಲ್ವರು ಮಕ್ಕಳು ನೀರುಪಾಲು
ಬಟ್ಟೆ ತೊಳೆಯುವಾಗ ಕಾಲು ಜಾರಿ ಬಿದ್ದ ಬಾಲಕಿಯ ರಕ್ಷಣೆಗೆ ಹೋದ ನಾಲ್ವರು ಮಕ್ಕಳು ನೀರುಪಾಲಾಗಿರುವ ಘಟನೆ ಶ್ರೀರಂಗಪಟ್ಟಣ ತಾಲೂಕಿನ ಮಂಡ್ಯ ಕೊಪ್ಪಲು ಬಳಿ ನಡೆದಿದೆ. ಇಬ್ಬರು ಬಾಲಕಿಯರ ಮೃತದೇಹ ಪತ್ತೆಯಾಗಿದ್ದು, ಇನ್ನಿಬ್ಬರಿಗಾಗಿ ಹುಡುಕಾಟ ಮುಂದುವರಿದಿದೆ. ನೀರಿನಲ್ಲಿ ಮುಳುಗಿದ್ದ ಬಾಲಕಿಯನ್ನು ರಕ್ಷಣೆ ಮಾಡಿದ್ದರೂ
ಹೊಸಕೋಟೆ ರಸ್ತೆ ಬದಿ ಪೊದೆಯಲ್ಲಿ ನವಜಾತ ಶಿಶು ಪತ್ತೆ
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆಯಲ್ಲಿ ನವಜಾತ ಹೆಣ್ಣು ಶಿಶುವನ್ನು ಪಾಪಿಗಳು ರಸ್ತೆ ಬದಿ ಎಸೆದು ಹೋಗಿರುವುದು ಪತ್ತೆಯಾಗಿದೆ. ಜನಿಸಿದ ಕೆಲವೇ ಗಂಟೆಗಳಲ್ಲಿ ಹೆಣ್ಣು ಶಿಶು ಬೀದಿಪಾಲಾಗಿದೆ. ದುರುಳರು ಕಪ್ಪು ಬಣ್ಣದ ಬಟ್ಟೆಯಲ್ಲಿ ಕಟ್ಟಿ ಮಗುವನ್ನು ಪೊದೆಗೆ ಎಸೆದು ಹೋಗಿರುವುದು ಹೊಸಕೋಟೆ ನಗರದ
ಇಬ್ಬರು ಮಕ್ಕಳನ್ನು ಕೊಂದು ಆತ್ಮಹತ್ಯೆ ಮಾಡಿಕೊಂಡ ತಾಯಿ
ಪಿರಿಯಾಪಟ್ಟಣ : ತಾಲೂಕಿನ ಬೆಟ್ಟದಪುರ ಗ್ರಾಮದಲ್ಲಿ ಹೆತ್ತ ತಾಯಿಯೇ ಹಸು ಗೂಸನ್ನು ಕೊಂದು ತಾನು ಆತ್ಮಹತ್ಯೆ ಮಾಡಿಕೊಂಡಿರುವ ಮನಕಲಕುವ ಘಟನೆ ನಡೆದಿದೆ. 9 ದಿನದ ಮಗು ಮತ್ತು ಎರಡು ವರ್ಷದ ಮಗುವನ್ನು ಕೊಂದು ತಾನು ಆತ್ಮಹತ್ಯೆ ಮಾಡಿಕೊಂಡಿರುವ ವ್ಯಕ್ತಿಯೇ ಅರ್ಬಿಯಾ ಬಾನು.
ನನಗೆ ಜಾತಿಗೆಟ್ಟ ಬುದ್ದಿ ಇಲ್ಲ, ಪಕ್ಷ ನಿಷ್ಠೆ ಇರುವ ವ್ಯಕ್ತಿ: ಜಿಟಿ ದೇವೇಗೌಡ
ಮೈಸೂರು: ನನಗೆ ಆ ಜಾತಿಗೆಟ್ಟ ಬುದ್ಧಿ ಇಲ್ಲ. ನಾನು ಪಕ್ಷ ನಿಷ್ಠೆ ಇರುವ ವ್ಯಕ್ತಿ ಎಂದು ಜೆಡಿಎಸ್ ಶಾಸಕ ಜಿ.ಟಿ. ದೇವೇಗೌಡ ಹೇಳಿದ್ದಾರೆ. ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚಾಮುಂಡಿ ಬೆಟ್ಟದಲ್ಲಿ ಸಿದ್ದರಾಮಯ್ಯ ಪರ ಹೇಳಿಕೆ ಕೊಟ್ಟೆ ಎಂದು ನಾನು ಕಾಂಗ್ರೆಸ್
ನವ ಕಲಬುರಗಿ ನಿರ್ಮಾಣಕ್ಕೆ ಬದ್ಧ: ಸಚಿವ ಪ್ರಿಯಾಂಕ್ ಖರ್ಗೆ
ಕಲಬುರಗಿ ಜಲ್ಲೆಯ ಸಮಸ್ತ ಅಭಿವೃದ್ದಿಗೆ ನೀಲಿ ನಕ್ಷೆ ತಯಾರಾಗಿದ್ದು ಅದರ ಅಡಿಯಲ್ಲಿ ಮುಂದಿನ ವರ್ಷದೊಳಗೆ ಜಿಲ್ಲೆಯನ್ನು ಅಭಿವೃದ್ದಿಪಡಿಸಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು. ನಗರದ ಗಂಜ್ ಪ್ರದೇಶದಲ್ಲಿರುವ ನಗರೇಶ್ವರ
ಶೃಂಗೇರಿಯಲ್ಲಿ ಕಾಡಾನೆ ದಾಳಿಗೆ ರೈತರಿಬ್ಬರು ಬಲಿ
ಶೃಂಗೇರಿ ತಾಲೂಕಿನ ಕೆರೆಮನೆ ಗ್ರಾಮದಲ್ಲಿ ಕಾಡಾನೆ ದಾಳಿಗೆ ಇಬ್ಬರು ರೈತರು ಬಲಿಯಾಗಿದ್ದಾರೆ. ಮೃತಪಟ್ಟ ರೈತರನ್ನು ಹರೀಶ್ (44) ಮತ್ತು ಉಮೇಶ್ (40) ಎಂದು ಗುರುತಿಸಲಾಗಿದೆ. ಕೊಟ್ಟಿಗೆಗೆ ಸೊಪ್ಪು ತರಲೆಂದು ಇಬ್ಬರೂ ಕಾಡಿಗೆ ಹೋಗಿದ್ದಾಗ ಆನೆ ದಾಳಿ ನಡೆಸಿ ಈ ದುರಂತ ಸಂಭವಿಸಿದೆ.
ವರದಕ್ಷಿಣೆ ಕಿರುಕುಳ ಆರೋಪ: ಚಿಕ್ಕಮಗಳೂರಿನಲ್ಲಿ ವಿಷ ಸೇವಿಸಿದ್ದ ಮಹಿಳೆ ಸಾವು
ಚಿಕ್ಕಮಗಳೂರು ಜಿಲ್ಲೆಯ ಎನ್ ಆರ್ ಪುರ ತಾಲೂಕಿನ ಮಾವಿನಕೆರೆ ಶೆಟ್ಟಿಕೊಪ್ಪದಲ್ಲಿ ಕೌಟುಂಬಿಕ ಕಲಹದಿಂದ ಬೇಸತ್ತ ಮಹಿಳೆಯೊಬ್ಬರು ವಿಷ ಸೇವಿಸಿದ್ದು, ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಪೂಜಾ ಎಂದು (30) ಮೃತಪಟ್ಟ ಮಹಿಳೆ ಎಂದು ಗುರುತಿಸಲಾಗಿದೆ. ತೀರ್ಥಹಳ್ಳಿಯ ಕೋಣಂದೂರು ಸಮೀಪದ ಶಂಕರಳ್ಳಿ
ಬಿಜೆಪಿಯ ಆಂತರಿಕ ಕಲಹವೇ ಧರ್ಮಸ್ಥಳ ಪ್ರಕರಣಕ್ಕೆ ಕಾರಣವೆಂಬ ಹೇಳಿಕೆಗೆ ಬದ್ಧ: ಡಿಸಿಎಂ
“ಧರ್ಮಸ್ಥಳ ಪ್ರಕರಣಕ್ಕೆ ಬಿಜೆಪಿ ನಾಯಕರ ಆಂತರಿಕ ಕಲಹವೇ ಕಾರಣ ಎನ್ನುವ ಹೇಳಿಕೆಗೆ ನಾನು ಈಗಲೂ ಬದ್ಧನಾಗಿದ್ದೇನೆ. ಅದಕ್ಕೆ ಸಂಬಂಧಪಟ್ಟಂತೆ ಹೇಳಿಕೆಗಳು, ಮಾತುಗಳು ನಿಮ್ಮ (ಮಾಧ್ಯಮಗಳ) ಮುಂದಿವೆ” ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು. ವಿಧಾನಸೌಧದ ಬಳಿ ಮಾಧ್ಯಮಗಳ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದರು. ಧರ್ಮಸ್ಥಳ
ತರೀಕೆರೆಯಲ್ಲಿ ನಾಳೆ ಮದುವೆ: ವಧು ಇಂದು ಹೃದಯಾಘಾತಕ್ಕೆ ಬಲಿ
ಚಿಕ್ಕಮಗಳೂರು ಜಿಲ್ಲೆಯ ಅಜ್ಜಂಪುರ ತಾಲೂಕಿನ ಸೊಲ್ಲಾಪುರ ಗ್ರಾಮದ ವಧು ಶೃತಿ (32) ಅವರ ಮದುವೆ ನಾಳೆ ತರೀಕೆರೆಯಲ್ಲಿ ನಡೆಯಲು ಎಲ್ಲ ಸಿದ್ಧತೆ ಆಗಿತ್ತು, ಆದರೆ ಇಂದು ಆಕೆ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ನಾಳೆ ತರೀಕೆರೆ ನಗರದ ಅನ್ನಪೂರ್ಣೇಶ್ವರಿ ಕಲ್ಯಾಣ ಮಂಟಪದಲ್ಲಿ ಶೃತಿ ಮತ್ತು




