Menu

ಕನ್ನಡದ ಖ್ಯಾತ ಕಾದಂಬರಿಕಾರ ಎಸ್‌.ಎಲ್‌ ಭೈರಪ್ಪ ಇನ್ನಿಲ್ಲ

ಕನ್ನಡದ ಖ್ಯಾತ ಕಾದಂಬರಿಕಾರ, ಸರಸ್ವತಿ ಸಮ್ಮಾನ್‌ ಪುರಸ್ಕೃತ ಸಾಹಿತಿ ಎಸ್‌ ಎಲ್‌ ಭೈರಪ್ಪ ( 94) ನಿಧನರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಬೆಂಗಳೂರಿನ ರಾಷ್ಟ್ರೋತ್ಥಾನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಭೈರಪ್ಪ ಅವರು ಪತ್ನಿ, ಇಬ್ಬರು ಮಕ್ಕಳನ್ನು ಅಗಲಿದ್ದಾರೆ. ಭಾರತ ಸರ್ಕಾರವು 2023ನೇ ಸಾಲಿನಲ್ಲಿ ಪದ್ಮಭೂಷಣ ಪ್ರಶಸ್ತಿ ನೀಡಿ ಕನ್ನಡದ ಈ ಮೇರು ಸಾಹಿತಿಯನ್ನು ಗೌರವಿಸಿದೆ. ಕೇಂದ್ರ ಅಕಾಡೆಮಿ ಪ್ರಶಸ್ತಿಗೂ ಭಾಜನರಾಗಿದ್ದರು. ಭೈರಪ್ಪನರು 1931ರ ಆಗಸ್ಟ್ 20ರಂದು ಚನ್ನರಾಯಪಟ್ಟಣದ ಬಳಿಯ ಸಂತೆಶಿವರ

ಪ್ರೀತಿಸುತ್ತಿದ್ದ ಜೋಡಿ ಮನೆಯವರ ವಿರೋಧಕ್ಕೆ ನೊಂದು ಆತ್ಮಹತ್ಯೆ ಯತ್ನ: ಯುವತಿ ಸಾವು

ಭದ್ರಾವತಿ ತಾಲೂಕಿನ ಅಂತರಗಂಗೆಯಲ್ಲಿ ಪ್ರೀತಿಗೆ ಕುಟುಂಬದವರು ವಿರೋಧಿಸುತ್ತಿದ್ದಾರೆಂದು ಮನನೊಂದ ಯುವಜೋಡಿ ಸಾಯಲೆಂದು ಕಾಲುವೆಗೆ ಹಾರಿದ್ದು, ಯುವತಿ ಮೃತಪಟ್ಟರೆ ಯುವಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಸ್ವಾತಿ (19) ಮೃತಪಟ್ಟ ಯುವತಿ. ಈಕೆಯೊಂದಿಗೆ ಆತ್ಮಹತ್ಯೆಗೆ ಯತ್ನಿಸಿ ಸೂರ್ಯ (20) ಬದುಕುಳಿದಿದ್ದು ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.

ಪೊನ್ನಂಪೇಟೆಯಲ್ಲಿ ಪತ್ನಿಗೆ ಗುಂಡು ಹಾರಿಸಿದ ಯೋಧ

ಪೊನ್ನಂಪೇಟೆ ತಾಲೂಕಿನ ಹುದಿಕೇರಿ ಸಮೀಪದ ಕೊಣಗೇರಿಯಲ್ಲಿ ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಭಾರತೀಯ ಸೇನೆಯ ಯೋಧನೊಬ್ಬ ಪತ್ನಿಯ ಮೇಲೆ ಗುಂಡು ಹಾರಿಸಿದ್ದು, ತೀವ್ರವಾಗಿ ಗಾಯಗೊಂಡಿರುವ ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ವಿನು ಕಾರ್ಯಪ್ಪ ಗುಂಡಿಕ್ಕಿದ ಆರೋಪಿ, ಆತನ ಪತ್ನಿ ದೀಪಿಕಾ ದೇಚಮ್ಮ (32) ಗುಂಡೇಟಿನಿಂದ

ಚೆನ್ನೈ ಮೂಲದ ಕನ್ಯಾಡಿ ಸ್ವಾಮೀಜಿಯ ಜಾಗ ಧರ್ಮಸ್ಥಳದವರ ಪಾಲಾಯ್ತಾ?

ಧರ್ಮಸ್ಥಳದಲ್ಲಿ ನಡೆದಿರುವ ಸೌಜನ್ಯ ಸಾವಿನ ತನಿಖೆಗೆ ಸಂಬಂಧಿಸಿದಂತೆ ಹಲವು ವರ್ಷಗಳಿಂದ ಹೋರಾಟ ನಡೆಸುತ್ತ ಬಂದಿರುವ ತಿಮರೋಡಿ ಮಹೇಶ್‌ ಶೆಟ್ಟಿಯವರ ಜೊತೆ ಅವರ ಮನೆಯಲ್ಲೇ ಈಗ ಎಸ್‌ಐಟಿ ವಿಚಾರಣೆಯಲ್ಲಿರುವ ಚಿನ್ನಯ್ಯ 2023 ರ ಆಗಸ್ಟ್ ನಲ್ಲಿ ಮಾತನಾಡಿರುವ ವೀಡಿಯೊ ಸಂಚಲನ ಸೃಷ್ಟಿಸಿದೆ. ಆಗ

ಗಿಗ್ ಕಾರ್ಮಿಕರಿಗೆ ವಿಮಾ ಯೋಜನೆ ಜಾರಿಗೊಳಿಸಿದ ದೇಶದ ಮೊದಲ ರಾಜ್ಯ ಕರ್ನಾಟಕ

ಕರ್ನಾಟಕ ರಾಜ್ಯದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಗಿಗ್ ಕಾರ್ಮಿಕರಿಗೆ ವಿಮಾ ಯೋಜನೆಯನ್ನು ಜಾರಿಗೆ ತರಲಾಗಿದ್ದು, ದೇಶದಲ್ಲಿಯೇ ಮೊದಲು ಜಾರಿಗೆ ತಂದ ರಾಜ್ಯ ನಮ್ಮದು. ಅಪಘಾತದಿಂದ ಮರಣ ಹೊಂದಿದಲ್ಲಿ ವಿಮಾ ಪರಿಹಾರ ರೂ. ೨ ಲಕ್ಷ ಹಾಗೂ ಜೀವ ವಿಮಾ ರೂ. ೨ ಲಕ್ಷ

ಬಸವಜಯ ಮೃತ್ಯುಂಜಯ ಸ್ವಾಮೀಜಿ ಉಚ್ಛಾಟನೆ ವಿರೋಧಿಸಿ ಸೆ.27ರಂದು ಪಂಚಮಸಾಲಿ ಶಾಸಕರ ಸಭೆ

ಪಂಚಮಸಾಲಿ ಸಮಾಜದ ಪ್ರಥಮ ಜಗದ್ಗುರು ಕೂಡಲಸಂಗಮ ಪಂಚಮಸಾಲಿ ಪೀಠದಿಂದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಉಚ್ಛಾಟನೆ ವಿರೋಧಿಸಿ ಸೆ.27ರಂದು ಪಂಚಮಸಾಲಿ ಸಮಾಜದ ಶಾಸಕರು ಬಾಗಲಕೋಟೆಯಲ್ಲಿ ಸಭೆ ನಡೆಸಲಿದ್ದಾರೆ. ಸ್ವಾಮೀಜಿ ಉಚ್ಛಾಟನೆಗೆ ಶಾಸಕರು ತೀವ್ರ ವಿರೋಧ ವ್ಯಕ್ತಪಡಿಸಿದ್ದು, ಅಂದಿನ ಸಭೆಯಲ್ಲಿ ಸ್ವಾಮೀಜಿಯೊಂದಿಗೆ ಚರ್ಚಿಸಿ ನಿರ್ಧಾರ

ಕಾರ್ಮಿಕರು ಅಪಘಾತದಲ್ಲಿ ಮೃತಪಟ್ಟರೆ ಆಶ್ರಿತ ಕುಟುಂಬಗಳಿಗೆ 15 ಲಕ್ಷ ಪರಿಹಾರ: ಸಚಿವ ಸಂತೋಷ್‌ ಲಾಡ್‌

ಶ್ರಮಿಕ ವರ್ಗಕ್ಕಾಗಿ ಸೆಸ್‌ನಲ್ಲಿ ಹಣವನ್ನು ಮೀಸಲಿಟ್ಟು, ಸುಮಾರು 1.30 ಕೋಟಿ ಕಾರ್ಮಿಕ ಶ್ರಮಿಕ ಸಮುದಾಯದಲ್ಲಿ  ಕಾರ್ಮಿಕರು ಅಪಘಾತದಲ್ಲಿ ಮೃತಪಟ್ಟರೆ ಅವಲಂಬಿತ  ಕುಟುಂಬಕ್ಕೆ ಇಲಾಖೆಯ ಮೂಲಕ 15 ಲಕ್ಷ ಪರಿಹಾರ ನೀಡುವ ಕುರಿತು ಯೋಜನೆಯನ್ನು ರೂಪಿಸಲಾಗಿದೆ. ಮುಂದಿನ ದಿನದಲ್ಲಿ ಮುಖ್ಯಮಂತ್ರಿಗಳಿಂದ ಅನುಮೋದನೆ ಪಡೆದು

ಹಾಸನದಲ್ಲಿ ಎಡಗಾಲು ಬದಲು ಬಲಗಾಲಿಗೆ ಆಪರೇಷನ್‌: ಹಾಸಿಗೆ ಹಿಡಿದ ಮಹಿಳೆ

ಎಡಗಾಲಿನ ರಾಡ್‌ ತೆಗೆಸಲೆಂದು ಶಸ್ತ್ರಕ್ರಿಯೆಗಾಗಿ ಹಾಸನ ಹಿಮ್ಸ್‌ ಗೆ ದಾಖಲಾಗಿದ್ದ ಮಹಿಳೆಯ ಬಲಗಾಲನ್ನು ವೈದ್ಯರು ಆಪರೇಷನ್‌ ಮಾಡಿ ಆಕೆ ಓಡಾಡಲು ಆಗದೆ ಹಾಸಿಗೆ ಹಿಡಿಯುವಂತೆ ಮಾಡಿರುವುದಾಗಿ ಆರೋಪ ಕೇಳಿ ಬಂದಿದೆ. ಜ್ಯೋತಿ ಎಂಬವರು ಎಡಗಾಲಿನಲ್ಲಿದ್ದ ರಾಡ್‌ ತೆಗೆಸಲು ಆಸ್ಪತ್ರೆಗೆ ದಾಖಲಾಗಿದ್ದರು. ಭಾನುವಾರ

ಇಂದು ಮೈಸೂರಿನಲ್ಲಿ ಚಾಮುಂಡಿ ದರ್ಶನವಿಲ್ಲದೆ ಭಕ್ತರು ವಾಪಸ್‌ ಏಕೆ

ಮೈಸೂರು ಚಾಮುಂಡೇಶ್ವರಿ ಸನ್ನಿಧಿಯಲ್ಲಿ ದಸರಾದ ಎರಡನೇ ದಿನವಾದ ಮಂಗಳವಾರ ಸೂತಕ ಆವರಿಸಿದೆ. ಸೋಮವಾರ ತಡ ರಾತ್ರಿ ಚಾಮುಂಡಿಬೆಟ್ಟದ ಶಿವಾರ್ಚಕ ರಾಜು ಮೃತಪಟ್ಟಿದ್ದು, ಚಾಮುಂಡೇಶ್ವರಿ ದೇವಿ ದರ್ಶನಕ್ಕೆ ಅವಕಾಶ ಇಲ್ಲವಾಗಿದೆ. ಸಾರ್ವಜನಿಕರಿಗೆ ಇಂದು ಬೆಳಗ್ಗೆಯಿಂದ ರಾತ್ರಿಯವರೆಗೂ ದೇವಿಯ ದರ್ಶನ ಇಲ್ಲದಂತಾಗಿದೆ. ಈ ಸೂತಕದ

ಆನೇಕಲ್: ಪೋಷಕರ ನಿರ್ಲಕ್ಷ್ಯಕ್ಕೆ ತ್ರಿವಳಿ ಶಿಶುಗಳು ತಾಯಿ ಗರ್ಭದಲ್ಲೇ ಸಾವು!

ಪೋಷಕರ ನಿರ್ಲಕ್ಷ್ಯಕ್ಕೆ ಜನಿಸಿದ ಕೂಡಲೇ ಮೂರು ನವಜಾತ ಶಿಶುಗಳು ದುರ್ಮರಣ ಹೊಂದಿರುವ ಹೃದಯವಿದ್ರಾವಕ ಘಟನೆ ಆನೇಕಲ್ ತಾಲೂಕಿನ ಗೊಲ್ಲಹಳ್ಳಿಯಲ್ಲಿ ನಡೆದಿದೆ. ಮೃತ ಶಿಶುಗಳು ಆನಂದ–ಮಂಜುಳಾ ದಂಪತಿಯ ತ್ರಿವಳಿ ಮಕ್ಕಳು ಎಂದು ತಿಳಿದು ಬಂದಿದೆ. ಬಡತನ, ಪೌಷ್ಟಿಕಾಂಶದ ಕೊರತೆ, ಅಜ್ಞಾನ ಮತ್ತು ವೈದ್ಯಕೀಯ