Menu

ಮದ್ಯ ಕುಡಿಯಲು ಹಣ ಕೊಡಲಿಲ್ಲವೆಂದು ತಾಯಿಯ ಕೊಲೆ

ಪಿರಿಯಾಪಟ್ಟಣ ತಾಲೂಕಿನ ನವಿಲೂರ ಗ್ರಾಮದಲ್ಲಿ ಮದ್ಯ ಸೇವನೆಗೆ ಹಣ ನೀಡಲಿಲ್ಲ ಎಂದು ತಾಯಿಯನ್ನೇ ಮಗ ಕೊಲೆ ಮಾಡಿದ್ದಾನೆ. ಸ್ವಾಮಿ ಕೊಲೆ ಆರೋಪಿ, ಜಯಮ್ಮ ಕೊಲೆಯಾದವರು. ಗಂಡನಿಗೆ ಹುಷಾರಿಲ್ಲದ ಕಾರಣ ಚಿಕಿತ್ಸೆಗೆಂದು ಜಯಮ್ಮ 90 ಸಾವಿರ ರೂ. ಕೂಡಿಟ್ಟಿದ್ದರು. ಆ ಹಣ ನೀಡುವಂತೆ ಮಗ ಪೀಡಿಸುತ್ತಿದ್ದ. ತಂದೆ ಆಸ್ಪತ್ರೆಗೆ ತೆರಳಿದ ವೇಳೆ ತಾಯಿಯನ್ನು ಹೊಡೆದು ಕೊಲೆ ಮಾಡಿದ್ದಾನೆ. ಬೈಲುಕುಪ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸ್ಟ್ರಿಕ್ಟ್ ಮಾಡ್ತಿದ್ದರು ಎಂಬ ಸಿಟ್ಟಿಗೆ ಮಗನೊಬ್ಬ

ಎಲ್ಲಾ ಜಾತಿಯ ಬಡವರಿಗೆ ಶಿಕ್ಷಣ ಸಿಗಬೇಕು: ಮುಖ್ಯಮಂತ್ರಿ ಸಿದ್ದರಾಮಯ್ಯ

ಮುಸಲ್ಮಾನರಿಗೆ, ಹಿಂದುಳಿದವರಿಗೆ ಮಾತ್ರವಲ್ಲದೆ , ಎಲ್ಲಾ ಧರ್ಮದ, ಎಲ್ಲಾ ಜಾತಿಯ ಬಡವರಿಗೆ ಶಿಕ್ಷಣ ಸಿಗಬೇಕು , ಸಾಮಾಜಿಕ ಆರ್ಥಿಕ ಶಕ್ತಿ ತುಂಬಬೇಕು. ಇದೇ ನಮ್ಮ ಗುರಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಬೆಳಗಾವಿ ಸಾಂಭ್ರಾ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರ ಜೊತೆ ಮಾತನಾಡಿ, ಸಾಮಾಜಿಕ,

ಕಾರವಾರದಲ್ಲಿ ನಗರಸಭೆ ಮಾಜಿ ಅಧ್ಯಕ್ಷನ ಕೊಲೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದಲ್ಲಿ ಬಿಎಸ್​ಎನ್​ಎಲ್​ ಕಚೇರಿ ಬಳಿ ದುಷ್ಕರ್ಮಿಗಳು ಚಿತ್ತಾಕುಲ ನಿವಾಸಿ, ನಗರಸಭೆ ಮಾಜಿ ಸದಸ್ಯನನ್ನು ಇರಿದು ಕೊಲೆ ಮಾಡಿ ಪರಾರಿ ಆಗಿದ್ದಾರೆ. ಸತೀಶ್ ಕೋಳಂಕರ್ ಕೊಲೆಯಾದ ನಗರಸಭೆ ಮಾಜಿ ಸದಸ್ಯ. ಬೆಳಗ್ಗೆ ವಾಯುವಿಹಾರಕ್ಕೆ ತೆರಳಿದ್ದಾಗ ಚಾಕು ಇರಿಯಲಾಗಿದೆ. ತಕ್ಷಣ ಸತೀಶ್

ನಮಗೆ ಧರ್ಮ ಬೇಕು, ಧರ್ಮಕ್ಕೆ ನಾವಲ್ಲ: ಡಿಕೆ ಶಿವಕುಮಾರ್

ನಮಗೆ ಧರ್ಮ ಬೇಕು, ಧರ್ಮಕ್ಕೆ ನಾವಲ್ಲ. ನಾವು ಧರ್ಮವನ್ನು ಕಾಪಾಡಬೇಕು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಧರ್ಮಸ್ಥಳದ ಮಂಜುನಾಥ ದೇವಾಲಯಕ್ಕೆ ಭೇಟಿ ಮಾಡಿದ ಬಳಿಕ ಶಿವಕುಮಾರ್  ಮಾಧ್ಯಮಗಳಿಗೆ  ಪ್ರತಿಕ್ರಿಯೆ ನೀಡಿದರು. ಈ ಧರ್ಮಕ್ಷೇತ್ರ ಜನಸೇವೆ, ಸಾಮಾಜಿಕ, ಶೈಕ್ಷಣಿಕ ಸೇವೆ ಮಾಡಿಕೊಂಡು

ಮೈಸೂರಿನಲ್ಲಿ ಕೋ ಆಪರೇಟಿವ್ ಬ್ಯಾಂಕ್‌ನಿಂದ 1.41 ಕೋಟಿ ರೂ. ವಂಚನೆ: ಮಹಿಳೆ ದೂರು

ಮೈಸೂರಿನ ನವನಗರ ಕ್ರೆಡಿಟ್ ಕೋ ಆಪರೇಟಿವ್ ಬ್ಯಾಂಕ್ ತನಗೆ 1.41 ಕೋಟಿ ರೂ. ವಂಚನೆ ಮಾಡಿರುವುದಾಗಿ ಗ್ರಾಹಕಿಯೊಬ್ಬರು ಆರೋಪಿಸಿದ್ದಾರೆ. ತನ್ನ ಬ್ಯಾಂಕ್ ಉಳಿತಾಯ ಖಾತೆಯಲ್ಲಿದ್ದ 1 ಕೋಟಿ 41 ಲಕ್ಷ ರೂಪಾಯಿಗಳನ್ನು ನನ್ನ ಅನುಮತಿಯಿಲ್ಲದೆ ಬ್ಯಾಂಕಿನ 2 ಅನ್ಯ ಖಾತೆಗೆ ಟ್ರಾನ್ಸಫರ್

ದಾಂಡೇಲಿಯಲ್ಲಿ ನಕಲಿ ನೋಟು: ಆರೋಪಿ ಲಕ್ನೋದಲ್ಲಿ ಸೆರೆ

ಕಾರವಾರದ ದಾಂಡೇಲಿಯ ಗಾಂಧಿನಗರ ಬಡಾವಣೆಯ ಮನೆಯೊಂದರಲ್ಲಿ ಕಂತೆ ಕಂತೆ ನಕಲಿ ಕರೆನ್ಸಿ ನೋಟುಗಳು ಪತ್ತೆಯಾದ ಪ್ರಕರಣದ  ಆರೋಪಿಯನ್ನು ಪತ್ತೆ ಹಚ್ಚಿ  ಲಕ್ನೋದಲ್ಲಿ ಪೊಲೀಸರು ಬಂಧಿಸಿದ್ದಾರೆ. ಗೋವಾ,ಹೈದರಾಬಾದ್ ಎಂದು ಪೊಲೀಸರನ್ನು ಯಾಮಾರಿಸಿದ್ದ ಆರೋಪಿ ಅರ್ಷದ್ ಅಂಜುಂ ಖಾನ್‌ನನ್ನು ಉತ್ತರ ಪ್ರದೇಶದ ಲಖನೌನಲ್ಲಿ ಬಂಧಿಸಿ

ತೀರ್ಥಹಳ್ಳಿಯಲ್ಲಿ ಮಂಗನ ಕಾಯಿಲೆಯಿಂದ ಬಾಲಕ ಸಾವು

ತೀರ್ಥಹಳ್ಳಿ ತಾಲೂಕಿನ ದತ್ತರಾಜಪುರ ಗ್ರಾಮದಲ್ಲಿ ಮಂಗನ ಕಾಯಿಲೆಯಿಂದ 8 ವರ್ಷದ ಬಾಲಕ ಮೃತಪಟ್ಟಿದ್ದಾನೆ. ರಾಮು ಹಾಗೂ ಮಮತಾ ಎಂಬವರ ಮಗ ರಚಿತ್ ಮೃತ ಬಾಲಕ. ಉಡುಪಿಯ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಬಾಲಕ ಅಸು ನೀಗಿದ್ದಾನೆ. ಈ ಮೂಲಕ ತೀರ್ಥಹಳ್ಳಿ ತಾಲೂಕಿನಲ್ಲಿ

ಮಂತ್ರಾಲಯ ಪ್ರವಾಸದಲ್ಲಿ ದೇವನಹಳ್ಳಿಯ ವಿದ್ಯಾರ್ಥಿಗಳಿಬ್ಬರು ತುಂಗಭದ್ರಾ ಪಾಲು

ತುಂಗಭದ್ರಾ ನದಿಯಲ್ಲಿ ಈಜಲು ತೆರಳಿದ ಬೆಂಗಳೂರಿನ ಇಬ್ಬರು ವಿದ್ಯಾರ್ಥಿಗಳು ಮೃತಪಟ್ಟ ಘಟನೆ ರಾಯಚೂರಿನ ಯರಗೇರಾ ಪೊಲೀಸ್ ಠಾಣಾ ವ್ಯಾಪ್ತಿಯ ಎಲೆಬಿಚ್ಚಾಲಿ ಗ್ರಾಮದ ಬಳಿ ನಡೆದಿದೆ. ಮಂತ್ರಾಲಯಕ್ಕೆ ಪ್ರವಾಸಕ್ಕೆ ತೆರಳಿದ್ದ ದೇವನಹಳ್ಳಿ ತಾಲೂಕಿನ ಚಿನವಂಡನಹಳ್ಳಿಯ ಮುತ್ತುರಾಜು(23) ಹಾಗೂ ಮದನ್(20) ಮೃತ ವಿದ್ಯಾರ್ಥಿಗಳು. ದೇವನಹಳ್ಳಿಯ

ರಿಕ್ಕಿ ರೈ ಮೇಲೆ ಗುಂಡಿನ ದಾಳಿ: ಮುತ್ತಪ್ಪ ರೈ 2ನೇ ಪತ್ನಿ ಸೇರಿ ನಾಲ್ವರ ವಿರುದ್ಧ ಕೇಸ್‌

ಮಾಜಿ ಡಾನ್ ಮುತ್ತಪ್ಪ ರೈ ಕಿರಿಯ ಪುತ್ರ ರಿಕ್ಕಿ ರೈ ಮೇಲೆ ಗುಂಡಿನ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮುತ್ತಪ್ಪ ರೈ ಅವರ 2ನೇ ಪತ್ನಿ ಅನುರಾಧಾ ಸೇರಿ ನಾಲ್ವರ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ. ರಾಕೇಶ್‌ಮಲ್ಲಿ, 2ನೇ ಪತ್ನಿ ಅನುರಾಧ, ನಿತೇಶ್ ಶೆಟ್ಟಿ, ವೈದ್ಯನಾಥನ್

ತಡೆಗೋಡೆಗೆ ಡಿಕ್ಕಿ ಹೊಡೆದ ಗೂಡ್ಸ್ ಪಿಕಪ್ ವಾಹನ: ನಾಲ್ವರು ಸ್ಥಳದಲ್ಲೇ ದುರ್ಮರಣ

ರಾಯಚೂರು: ನಿಯಂತ್ರಣ ತಪ್ಪಿದ ಗೂಡ್ಸ್ ಪಿಕಪ್ ವಾಹನ ರಸ್ತೆಬದಿಯ ತಡೆಗೋಡೆಗೆ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಜಿಲ್ಲೆಯ ದೇವದುರ್ಗ ತಾಲೂಕಿನ ಅಮರಾಪುರ ಬಳಿ ಗುರುವಾರ ಸಂಭವಿಸಿದೆ. ತೆಲಂಗಾಣದ ಹಿಂದೂಪುರ ನಿವಾಸಿಗಳಾದ ನಾಗರಾಜ್ (28), ಸೋಮು (38),