Tuesday, September 22, 2026
Menu

ಬಾಗಲಕೋಟೆ ಆಸ್ಪತ್ರೆಯಲ್ಲಿ ಹೆರಿಗೆಯಾಗಿ ಬಾಣಂತಿ ಸಾವು

ಬಾಗಲಕೋಟೆಯ ಕುಮಾರೇಶ್ವರ ಆಸ್ಪತ್ರೆಯಲ್ಲಿ ಹೆರಿಗೆಗೆ ದಾಖಲಾಗಿದ್ದ ಪೂರ್ಣಿಮಾ ರಾಠೋಡ್ ಎಂಬವರು ಹೃದಯಾಘಾತದಿಂದ ಮೃತಪಟ್ಟಿದ್ದು, ಕುಟುಂಬ ಸದಸ್ಯರು ಆಸ್ಪತ್ರೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೆಳಗಾವಿ ಜಿಲ್ಲೆಯ ಅರೆಬೆಂಚಿ ತಾಂಡದ ನಿವಾಸಿ ಪೂರ್ಣಿಮಾ ಅವರಿಗೆ ಹೆರಿಗೆ ನೋವು ಉಂಟಾದ ಕಾರಣ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಶನಿವಾರ ಮಧ್ಯಾಹ್ನ ಪೂರ್ಣಿಮಾ ಅವರಿಗೆ ಸಿಜೇರಿಯನ್ ಮೂಲಕ ಹೆರಿಗೆ ಮಾಡಲಾಗಿತ್ತು. ಹೆರಿಗೆ ನಂತರ ಆರೋಗ್ಯವಾಗಿಯೇ ಇದ್ದರು. ಸಂಜೆ ಹೃದಯಾಘಾತವಾಗಿ ಅಸು ನೀಗಿದ್ದಾರೆ. ಅಸ್ವಸ್ಥಗೊಂಡ ಸಮಯದಲ್ಲಿ ವೈದ್ಯರು ಬಾರದೇ ನರ್ಸಗಳು ಆಕೆಗೆ

ಆರ್.ಜಾಲಪ್ಪ ನೇರ ಸತ್ಯ ನಿಷ್ಠುರ ಹೃದಯವಂತ: ಸಿಎಂ ಸಿದ್ದರಾಮಯ್ಯ

ಆರ್.ಜಾಲಪ್ಪ ಅವರ ವ್ಯಕ್ತಿತ್ವ ನೇರ-ನಿಷ್ಠುರ ಮತ್ತು ಹೃದಯವಂತಿಕೆಯಿಂದ ಕೂಡಿತ್ತು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.  ಆರ್.ಎಲ್.ಜಾಲಪ್ಪ ಜನ್ಮ ಶತಮಾನೋತ್ಸವ ಪ್ರಯುಕ್ತ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಜಾಲಪ್ಪ ಅಕಾಡೆಮಿ, ಜಾಲಪ್ಪ ಕಾನೂನು ಮಹಾವಿದ್ಯಾಲಯ, ಶತಮಾನೋತ್ಸವ ಭವನಗಳನ್ನು ಉದ್ಘಾಟಿಸಿ ಹಾಗೂ ದೇವರಾಜ ಅರಸು ವಸತಿ ಶಾಲೆ

ಚಿತ್ತಾಪುರದಲ್ಲಿ ಆರೆಸ್ಸೆಸ್‌ ಪಥ ಸಂಚಲನ: ಅರ್ಜಿ ವಿಚಾರಣೆ ಅ. 24ಕ್ಕೆ ಮುಂದೂಡಿದ ಕೋರ್ಟ್‌

ಚಿತ್ತಾಪುರದಲ್ಲಿ ಆರ್‌ಎಸ್‌ಎಸ್ ಪಥಸಂಚಲನಕ್ಕೆ ಅನುಮತಿ ನೀಡುವಂತೆ ಸಲ್ಲಿಸಿದ ಅರ್ಜಿಯ ವಿಚಾರಣೆ ನಡೆಸಿದಕಲಬುರಗಿ ಹೈಕೋರ್ಟ್ ಪೀಠ ಮತ್ತೊಮ್ಮೆ ಅರ್ಜಿ ಸಲ್ಲಿಸುವಂತೆ ಅರ್ಜಿದಾರರಿಗೆ ಸೂಚಿಸಿದೆ. ಅರ್ಜಿದಾರರ ಮನವಿಯನ್ನು ಪರಿಗಣಿಸುವಂತೆ ಸರ್ಕಾರಕ್ಕೆ ನ್ಯಾಯಾಲಯ ಸೂಚನೆ ನೀಡಿ, ವಿಚಾರಣೆಯನ್ನು ಅಕ್ಟೋಬರ್ 24ಕ್ಕೆ ಮುಂದೂಡಿದೆ. ಸಚಿವ ಪ್ರಿಯಾಂಕ್ ಖರ್ಗೆ

ಯಾದಗಿರಿ ಕಾಟನ್‌ ಮಿಲ್‌ನಲ್ಲಿ ಪಡಿತರ ಅಕ್ಕಿ, ಜೋಳ ಆಯ್ತು, ಈಗ ಶಾಲಾ ಮಕ್ಕಳ ಹಾಲಿನ ಪೌಡರ್‌ ಪತ್ತೆ

ಯಾದಗಿರಿ ಕಾಟನ್‌ ಮಿಲ್‌ನಲ್ಲಿ ಪಡಿತರದ ಅನ್ನಭಾಗ್ಯ ಅಕ್ಕಿ, ಜೋಳ ಆಯ್ತು, ಈಗ ಕ್ಷೀರ ಯೋಜನೆಯಡಿ ಶಾಲೆಗಳಿಗೆ ಪೂರೈಕೆಯಾಗುವ ಶಾಲಾ ಮಕ್ಕಳ ಹಾಲಿನ ಪೌಡರ್‌ ಪತ್ತೆಯಾಗಿದೆ.  ಗುರುಮಠಕಲ್ ಪಟ್ಟಣದ ಹೊರಭಾಗದ ನಾರಾಯಣಪುರ ಗ್ರಾಮದ ಶ್ರೀ ಲಕ್ಷ್ಮಿ ತಿಮ್ಮಪ್ಪ ವೇರ್ ಹೌಸ್ ಹಾಗೂ ಶ್ರೀ

ಸಹಕಾರಿ ರಂಗದಲ್ಲಿ ಜಿಲ್ಲೆಯ ರೈತರ ಸೇವೆ ಮಾಡಲು ನನಗೆ ಮತ್ತೊಂದು ಅವಕಾಶ: ಕೆಎನ್ ರಾಜಣ್ಣ

ಸಹಕಾರಿ ರಂಗದಲ್ಲಿ ಜಿಲ್ಲೆಯ ರೈತರ ಸೇವೆ ಮಾಡಲು ನನಗೆ ಮತ್ತೊಂದು ಅವಕಾಶ ದೊರೆತಿದ್ದು, ಹಳ್ಳಿಗಾಡಿನ ರೈತರಿಗೆ ಸಾಲ ಸೌಲಭ್ಯ ಒದಗಿಸುವ ಗುರಿಯನ್ನು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ಹೊಂದಿದೆ ಎಂದು ಡಿಸಿಸಿ ಬ್ಯಾಂಕ್ ಅಧ್ಯಕ್ಷ ಹಾಗೂ ಶಾಸಕ ಕೆ.ಎನ್. ರಾಜಣ್ಣ ಹೇಳಿದ್ದಾರೆ.

ಅಂಬೇಡ್ಕರ್ ಸಂವಿಧಾನ ವಿರೋಧಿಸಿದ್ದ ಆರೆಸ್ಸೆಸ್‌ ಬಗ್ಗೆ ಎಚ್ಚರವಿರಲಿ: ಸಿಎಂ ಸಿದ್ದರಾಮಯ್ಯ

ಸಂಘ ಪರಿವಾರ ಮತ್ತು RSS ನವರು ಅಂಬೇಡ್ಕರ್ ಅವರ ಸಂವಿಧಾನವನ್ನು ವಿರೋಧಿಸಿದ್ದರು. ಈಗಲೂ ವಿರೋಧಿಸುತ್ತಿದ್ದಾರೆ. ಹೀಗಾಗಿ ಇವರ ಬಗ್ಗೆ ಎಚ್ಚರಿಕೆಯಿಂದ  ಇರಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ  ಹೇಳಿದರು. ಮೈಸೂರು ವಿಶ್ವ ವಿದ್ಯಾಲಯದ ರಜತ ಮಹೋತ್ಸವ ಹಾಗೂ ನೂತನ ಜ್ಞಾನ ದರ್ಶನ ಕಟ್ಟಡವ

ಹುಲಿ ದಾಳಿಗೊಳಗಾದ ಮಹದೇವಗೌಡರಿಗೆ ಸರ್ಕಾರದಿಂದ ಚಿಕಿತ್ಸಾ ವೆಚ್ಚ, ಪೂರ್ಣ ಪ್ರಮಾಣದ ಪರಿಹಾರ

ಚಾಮರಾಜನಗರದ ಬಡಗಲಾಪುರದಲ್ಲಿ ಹುಲಿ ದಾಳಿಗೆ ತುತ್ತಾದ ಮಹದೇವಗೌಡ ಅವರ ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸಲಿದ್ದು, ಕುಟುಂಬಕ್ಕೆ ಸಂಪೂರ್ಣ ಪರಿಹಾರದ ಮೊತ್ತ ಬಿಡುಗಡೆ ಮಾಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ  ಸೂಚನೆ ನೀಡಿದರು. ಅಪೊಲೋ  ಆಸ್ಪತ್ರೆಗೆ ಭೇಟಿ ನೀಡಿದ ಮುಖ್ಯಮಂತ್ರಿಗಳು ಚಿಕಿತ್ಸೆಗೆ ಒಳಗಾಗಿರುವ ಮಹದೇವಗೌಡ ಅವರ ಕುಟುಂಬದವರ

ವಿಜಯಪುರದಲ್ಲಿ ಕೃಷಿ ಹೊಂಡಕ್ಕೆ ಬಿದ್ದು ಮೂರು ಮಕ್ಕಳ ಸಾವು

ವಿಜಯಪುರ ಮಿಂಚನಾಳ ತಾಂಡಾದ ಮಹದೇವ ನಗರದಲ್ಲಿ ಆಟವಾಡುತ್ತಿದ್ದ ಮೂವರು ಮಕ್ಕಳು ಆಕಸ್ಮಿಕವಾಗಿ ಕೃಷಿ ಹೊಂಡಕ್ಕೆ ಬಿದ್ದು ಮೃತಪಟ್ಟಿದ್ದಾರೆ. ಶಿವಮ್ಮ‌ ರಾಜು ರಾಠೋಡ್ (8), ಕಾರ್ತಿಕ ವಿಶ್ವ ರಾಠೋಡ್ (7) ಹಾಗೂ ಸ್ವಪ್ನಾ ರಾಜು ರಾಠೋಡ್ (12) ಮೃತ ಮಕ್ಕಳು. ಈ ದಾರುಣ

ರಂಗಭೂಮಿ ಕಲಾವಿದ ನಿತಿನ್ ಶಿವಾಂಶ್ ಜೊತೆ ಗಾಯಕಿ ಸುಹಾನ ಮದುವೆ

ಸರಿಗಮಪ ರಿಯಾಲಿಟಿ ಶೋ ಮೂಲಕ ಕನ್ನಡಿಗರ ಮನ ಗೆದ್ದ ಗಾಯಕಿ ಶಿವಮೊಗ್ಗದ ಸುಹಾನ ಸೈಯದ್ ಸ್ನೇಹಿತ ಹಾಗೂ ರಂಗಭೂಮಿ ಕಲಾವಿದ ನಿತಿನ್ ಶಿವಾಂಶ್ ಅವರನ್ನು ಮದುವೆಯಾಗಿದ್ದಾರೆ. ಬಹಳ ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದ ಸುಹಾನಾ ಸೈಯದ್ ಮತ್ತು ನಿತಿನ್ ಶಿವಾಂಶ್, ಕುಟುಂಬದವರು ಮತ್ತು

ಸಾಲ ತೀರಿಸಲಾಗದೆ ಚಿತ್ರದುರ್ಗದ ಯುವಕ ಆತ್ಮಹತ್ಯೆ

ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ತಾಲೂಕಿನ ಮಳಲಿ ಗ್ರಾಮದಲ್ಲಿ ಸಾಲದ ವಿಚಾರದಲ್ಲಿ ಮರ್ಯಾದೆಗೆ ಅಂಜಿ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಸತೀಶ್ (27) ಆತ್ಮಹತ್ಯೆಗೆ ಮಾಡಿಕೊಂಡ ಯುವಕ. ಆತ ಗ್ರಾಮದ ನಾಗೇಶ್ ಎಂಬಾತನ ಬಳಿ ಸಾಲ ಪಡೆದಿದ್ದ. 80 ಸಾವಿರ ಸಾಲ ವಾಪಸ್ ಕೊಟ್ಟಿಲ್ಲ ಎಂದು