ಜಿಲ್ಲಾ ಸುದ್ದಿ
ಅಸಂಘಟಿತ ವಲಯದ ಕಾರ್ಮಿಕರು ಈ ರಾಜ್ಯದ ಬಹು ದೊಡ್ಡ ಆಸ್ತಿ: ಸಂತೋಷ್ ಲಾಡ್
ಅಸಂಘಟಿತ ವಲಯದ ಕಾರ್ಮಿಕರು ಈ ರಾಜ್ಯದ ಬಹು ದೊಡ್ಡ ಆಸ್ತಿ ಎಂದು ಕಾರ್ಮಿಕ ಸಚಿವ ಸಂತೋಷ ಎಸ್ ಲಾಡ್ ಹೇಳಿದರು. ಬೀದರ್ ನಗರದ ಘಾಳೆ ಕಲ್ಯಾಣ ಮಂಟಪದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕಾರ್ಮಿಕ ಇಲಾಖೆ, ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿ ಹಾಗೂ ಸಾರಿಗೆ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಆಯೋಜಿಸಲಾಗಿದ್ದ ಬೀದರ ಜಿಲ್ಲೆಯ ವಿವಿಧ ವರ್ಗದ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಣೆ ಹಾಗೂ ಯೋಜನೆಗಳ ಕುರಿತು ಅರಿವು
ಲಕ್ಕುಂಡಿಗೆ ಯುನೆಸ್ಕೋ ಸ್ಥಾನಮಾನಕ್ಕಾಗಿ ಸರ್ಕಾರ ಪ್ರಯತ್ನ: ಎಚ್.ಕೆ. ಪಾಟೀಲ
ಗದಗ ಜಿಲ್ಲೆಯ ಲಕ್ಕುಂಡಿಯನ್ನು ಯುನೆಸ್ಕೋ ಜಾಗತಿಕ ಪಾರಂಪರಿಕ ತಾಣದ ಸ್ಥಾನಮಾನವನ್ನು ದೊರಕಿಸಲು ಕರ್ನಾಟಕ ಸರ್ಕಾರ ಕಾರ್ಯೋನ್ಮುಖವಾಗಿದೆ, ತನ್ಮೂಲಕ ಕರ್ನಾಟಕವನ್ನು ಪಾರಂಪರಿಕ ಪ್ರವಾಸೋದ್ಯಮದ ಮುಂಚೂಣಿ ರಾಜ್ಯವನ್ನಾಗಿ ಪರಿವರ್ತಿಸಲು ಶ್ರಮಿಸುತ್ತಿದೆ ಎಂದು ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರಗಳು, ಶಾಸನ ರಚನೆ ಹಾಗೂ
ಮೈಸೂರಿನಲ್ಲಿ ಅಕ್ಟೋಬರ್ 17ರಂದು ಬೃಹತ್ ಉದ್ಯೋಗ ಮೇಳ
ಮೈಸೂರು: ಸಾಂಸ್ಕೃತಿಕ ರಾಜಧಾನಿ ಮೈಸೂರು ಜಿಲ್ಲೆಯ ಮಹಾರಾಜ ಕಾಲೇಜು ಮೈದಾನದಲ್ಲಿ ಅಕ್ಟೋಬರ್ 17 ರಂದು ನಡೆಯಲಿರುವ ಮೈಸೂರು ವಿಭಾಗ ಮಟ್ಟದ ಬೃಹತ್ ಉದ್ಯೋಗ ಮೇಳ ನಡೆಯಲಿದೆ. ಈಗಾಗಲೇ 24000 ಅಭ್ಯರ್ಥಿಗಳು ನೋಂದಣಿ ಮಾಡಿಕೊಂಡಿದ್ದಾರೆ. 221 ಕಂಪನಿಗಳು ಭಾಗವಹಿಸಲಿದೆ ಎಂದು ವೈದ್ಯಕೀಯ ಶಿಕ್ಷಣ
ಮಾಲೂರು ವಿಧಾನಸಭಾ ಕ್ಷೇತ್ರದ ಮರು ಮತಎಣಿಕೆಗೆ ಸುಪ್ರೀಂ ಸೂಚನೆ
ಮಾಲೂರು ವಿಧಾನಸಭಾ ಕ್ಷೇತ್ರದ ಮರು ಮತಎಣಿಕೆಗೆ ಸುಪ್ರೀಂಕೋರ್ಟ್ ಸೂಚನೆ ನೀಡಿದ್ದು, ಇದರಿಂದ ಮಾಲೂರು ಕಾಂಗ್ರೆಸ್ ಶಾಸಕ ಕೆವೈ ನಂಜೇಗೌಡ ಸದ್ಯಕ್ಕೆ ನಿರಾಳರಾಗಿದ್ದಾರೆ. ನಂಜೇಗೌಡ ವಿರುದ್ಧ ಕರ್ನಾಟಕ ಹೈಕೋರ್ಟ್ ನೀಡಿದ್ದ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ ನೀಡಿದ್ದು, ಮತಗಳ ಮರುಎಣಿಕೆ ನಡೆಸಿ ಫಲಿತಾಂಶವನ್ನು
ತಾಕತ್ತಿದ್ದರೆ ಪಿಎಫ್ ಐ, ಎಸ್ ಡಿಪಿಐ ಬ್ಯಾನ್ ಮಾಡಲಿ: ಸಿ.ಸಿ.ಪಾಟೀಲ
ಆರ್ ಎಸ್ ಎಸ್ ಬ್ಯಾನ್ ಮಾಡಲು ಪತ್ರ ಬರೆದಿರುವ ಸಚಿವ ಪ್ರಿಯಾಂಕ್ ಖರ್ಗೆಗೆ ತಾಕತ್ತಿದ್ದರೆ ಪಿಎಫ್ ಐ, ಎಸ್ ಡಿಪಿಐ ಬ್ಯಾನ್ ಮಾಡಲಿ ಎಂದು ನರಗುಂದ ಶಾಸಕ ಸಿ.ಸಿ. ಪಾಟೀಲ ಸವಾಲು ಹಾಕಿದರು. ಗದಗ ನಗರದ ಪ್ರವಾಸಿ ಮಂದಿರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ
ಯಾವುದೇ ಜಾತಿ, ಧರ್ಮಕ್ಕೆ ಸೇರಿದ್ದರೂ ನಾವು ಮನುಷ್ಯರು: ಮುಖ್ಯಮಂತ್ರಿ
ಜನರಲ್ಲಿ ಪರಸ್ಪರ ಪ್ರೀತಿಯಿರಬೇಕು. ದೇಶದಲ್ಲಿ ಹಾಗೂ ಜಗತ್ತಿನಲ್ಲಿ ಅನೇಕ ಧರ್ಮ, ಜಾತಿಗಳಿವೆ. ಜಾತಿ ಧರ್ಮಗಳನ್ನು ನಾವು ಮಾಡಿಲ್ಲ, ಮೊದಲಿನಿಂದ ನಮ್ಮಲ್ಲಿ ಬೆಳೆದುಕೊಂಡು ಬಂದಿದೆ. ನಾವು ಯಾವುದೇ ಧರ್ಮ, ಜಾತಿಗೆ ಸೇರಿದ್ದರೂ ಬೇರೆ ಜಾತಿಯವರನ್ನು ಪ್ರೀತಿಸಬೇಕೇ ಹೊರತು ದ್ವೇಷಿಸಬಾರದು. ಯಾವುದೇ ಜಾತಿ, ಧರ್ಮಕ್ಕೆ
ಇತಿಹಾಸ ಪ್ರಸಿದ್ಧ ಹಾಸನಾಂಬ ಜಾತ್ರಾ ಸಂಭ್ರಮ: ನಾಳೆಯಿಂದ 3 ದಿನದ ವೇಳಾಪಟ್ಟಿ
ವರ್ಷಕ್ಕೊಮ್ಮೆ ಮಾತ್ರ ಭಕ್ತರಿಗೆ ದೇವಿಯ ದರ್ಶನ ಸಿಗುವ ಇತಿಹಾಸ ಪ್ರಸಿದ್ಧ ಹಾಸನಾಂಬ ಜಾತ್ರೆ ಅಕ್ಟೋಬರ್ 9 ರಿಂದ ಆರಂಭಗೊಂಡಿದ್ದು, ಅ.23ರಂದು ದೇವಾಲಯದ ಬಾಗಿಲು ಮುಚ್ಚಲಿದೆ. ಈಗಾಗಲೇ ಸಂಭ್ರಮದ ಜಾತ್ರೆಯಲ್ಲಿ ಹಲವು ಕಾರ್ಯಕ್ರಮಗಳು ನಡೆದಿವೆ, ನಾಳೆಯಿಂದ ಮೂರು ದಿನಗಳ ಅಂದರೆ ಅಕ್ಟೋಬರ್ 15,
ಚಿಕ್ಕಬಳ್ಳಾಪುರದಲ್ಲಿ ಡ್ರಾಪ್ ಕೊಡುವುದಾಗಿ ಹೇಳಿ ಯುವತಿಯ ಗ್ಯಾಂಗ್ ರೇಪ್
ಚಿಕ್ಕಬಳ್ಳಾಪುರದ ಮಂಚೇನಹಳ್ಳಿಯಲ್ಲಿ ಡ್ರಾಪ್ ಕೊಡುವುದಾಗಿ ಸ್ಕೂಟರ್ ಹತ್ತಿಸಿಕೊಂಡ ವ್ಯಕ್ತಿ ಮತ್ತು ಆತನ ಸ್ನೇಹಿತ ಯುವತಿಯ ಮೇಲೆ ಅತ್ಯಾಚಾರ ಎಸಗಿ ಪರಾರಿಯಾಗಿದ್ದರು. ಪೊಲೀಸರು ಇಬ್ಬರು ಆರೋಪಿಗಳನ್ನೂ ಬಂಧಿಸಿದ್ದಾರೆ. ಆರೋಪಿಗಳು ಅದೇ ಊರಿನ ಸಿಕಂದರ್ ಬಾಬಾ ಹಾಗೂ ಜನಾರ್ಧನಾಚಾರಿ ಎಂದು ಗುರುತಿಸಲಾಗಿದ್ದು, ಸಿಸಿಟಿವಿ ದೃಶ್ಯ
ವೀರೇಂದ್ರ ಪಪ್ಪಿ ಬಿಡುಗಡೆ ಕೋರಿ ಅರ್ಜಿ: ಆದೇಶ ಕಾಯ್ದಿರಿಸಿದ ಹೈಕೋರ್ಟ್
ಆನ್‌ಲೈನ್ ಬೆಟ್ಟಿಂಗ್ ದಂಧೆ ಸೇರಿದಂತೆ ಅಕ್ರಮ ವ್ಯವಹಾರಗಳಿಗೆ ಸಂಬಂಧಿಸಿದಂತೆ ಇಡಿ ಬಂಧನದಲ್ಲಿರುವ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಬಿಡುಗಡೆಗೆ ಕೋರಿದ್ದ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ಆದೇಶವನ್ನು ಕಾಯ್ದಿರಿಸಿದೆ. ಪಪ್ಪಿ ಬಂಧನ ಕಾನೂನುಬಾಹಿರವೆಂದು ಬಿಡುಗಡೆ ಕೋರಿ ಅರ್ಜಿ ಸಲ್ಲಿಕೆಯಾಗಿದ್ದು, ಇಡಿ ಪರ ಎಎಸ್‌ಜಿ
ಕೋಲಾರದಲ್ಲಿ ದ್ವಿಚಕ್ರ ವಾಹನಗಳ ಕಳ್ಳ ಅರೆಸ್ಟ್
ಕೋಲಾರದಲ್ಲಿ ಹೊಂಚು ಹಾಕಿ ದ್ವಿಚಕ್ರ ವಾಹನಗಳ ಕಳ್ಳತನ ಮಾಡುತ್ತಿದ್ದ ಕಳ್ಳನನ್ನು ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನ ಸಲೀಂಖಾನ್(27) ಬಂಧಿತ ಕಳ್ಳ. ವಿಚಾರಣೆ ವೇಳೆ ಸಹಚರ ನವಾಜ್ ಜೊತೆ ಸೇರಿ ದ್ವಿಚಕ್ರ ವಾಹನಗಳ ಕಳವು ಮಾಡುತ್ತಿರುವುದಾಗಿ ತಪ್ಪು ಒಪ್ಪಿಕೊಂಡಿದ್ದಾನೆ. ಕೋಲಾರ ನಗರದ ತೇರಹಳ್ಳಿ ಬೆಟ್ಟದ




