ಜಿಲ್ಲಾ ಸುದ್ದಿ
ಚಿಕ್ಕಬಳ್ಳಾಪುರದಲ್ಲಿ ನವವಿವಾಹಿತೆ ಆತ್ಮಹತ್ಯೆ: ಸಂಬಂಧಿಕರ ಪ್ರತಿಭಟನೆ
ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿರುವ ಸಿರೀಶಾನಾವರ ಮೃತದೇಹವನ್ನು ಬಶೆಟ್ಟಿಹಳ್ಳಿ ರಸ್ತೆಯಲ್ಲಿ ಇಟ್ಟು ಸಂಬಂಧಿಕರು ಪ್ರತಿಭಟನೆ ನಡೆಸುತ್ತಿದ್ದಾರೆ. ಶ್ರೀನಾಥ್ ಎಂಬುವರನ್ನು ಪ್ರತಿಸಿ ವಿವಾಹವಾಗಿದ್ದ ಸಿರೀಶಾ ಕ್ರಿಮಿನಾಶಕ ಮಾತ್ರೆ ತಿಂದು ಆತ್ಮಹತ್ಯೆ ಮಾಡಿಕೊಂಡಿದ್ದರು. ಮೃತರ ಕುಟುಂಬದವರು ದೂರು ದಾಖಲಿಸಿದರೂ ಪೊಲೀಸರು ಆರೋಪಿಗಳನ್ನು ಬಂಧಿಸಿಲ್ಲ ಎಂದು ಆರೋಪಿಸಲಾಗಿದೆ. ಪೊಲೀಸರ ವಿರುದ್ಧ ಧಿಕ್ಕಾರ ಕೂಗಿ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಡು ರಸ್ತೆಯಲ್ಲಿ ಮೃತದೇಹ ಇಟ್ಟು ಪ್ರತಿಭಟನೆ ನಡೆಸಿದ ಹಿನ್ನೆಲೆ ಒಂದು ಕಿ.ಮೀವರೆಗೆ ಟ್ರಾಫಿಕ್
ಹಳೆ ವೈಷಮ್ಯ ಶಂಕೆ: ವಿಜಯಪುರದಲ್ಲಿ ಜೋಡಿ ಕೊಲೆ
ವಿಜಯಪುರ ತಾಲೂಕಿನ ಕನ್ನೂರು ಗ್ರಾಮದಲ್ಲಿ ಕಲ್ಲಿನಿಂದ ಜಜ್ಜಿ ಇಬ್ಬರನ್ನು ಕೊಲೆ ಮಾಡಿರುವ ಪ್ರಕರಣ ಬೆಳಕಿಗೆ ಬಂದಿದೆ. ಸಾಗರ ಬೆಳುಂಡಗಿ (25) ಹಾಗೂ ಇಸಾಕ್ ಖರೇಷಿ (24) ಕೊಲೆಯಾದವರು, ಅಪರಿಚಿತರಿಂದ ಕೊಲೆಯಾಗಿರುವುದಾಗಿ ಹೇಳಲಾಗಿದೆ. ಹತ್ಯೆ ಬಳಿಕ ಕೊಲೆಗಟುಕರು ಪರಾರಿಯಾಗಿದ್ದು, ಹಳೆಯ ವೈಷಮ್ಯದಿಂದ ಹಲ್ಲೆ
ಧಾರವಾಡದಲ್ಲಿ ಕ್ರೂಸರ್ ವಾಹನ ಮರಕ್ಕೆ ಡಿಕ್ಕಿಯಾಗಿ ಇಬ್ಬರ ಸಾವು
ಧಾರವಾಡದ ತೇಗೂರು ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕ್ರೂಸರ್ ವಾಹನ ಮರಕ್ಕೆ ಡಿಕ್ಕಿ ಹೊಡೆದು ಇಬ್ಬರು ಮೃತಪಟ್ಟಿದ್ದಾರೆ. ಘಟನೆಯಲ್ಲಿ ಎಂಟು ಮಂದಿ ಗಂಭೀರ ಗಾಯಗೊಂಡಿದ್ದಾರೆ. ಸುರೇಶ ತುಪ್ಪದ (52), ಮಹಾಂತಪ್ಪ ತುಪ್ಪದ (65) ಮೃತಪಟ್ಟವರು. ಗದಗ ಮೂಲದ
ಕೊಪ್ಪಳದಲ್ಲಿ ವಿಚಾರಣಾಧೀನ ಕೈದಿಯಿಂದ ಪೊಲೀಸ್ ಮೇಲೆ ಹಲ್ಲೆ ಯತ್ನ
ಕೊಪ್ಪಳ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆಗೆಂದು ಕರೆತರಲಾಗಿದ್ದ ವಿಚಾರಣಾಧೀನ ಕೈದಿ, ಕುಖ್ಯಾತ ಕಳ್ಳ ಬಾಂಬೆ ಸಲೀಂ ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ್ದಾನೆ. ಟಿನ್ನರ್ ಕುಡಿದು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಪೊಲೀಸರಿಗೆ ಬೆದರಿಕೆ ಹಾಕಿ ಡ್ರಾಮಾ ಮಾಡಿದ್ದಾನೆ. ಪೊಲೀಸ್ ಸಿಬ್ಬಂದಿ ಸಂತೋಷ್ ಹಾಗೂ ಹುಲಗಪ್ಪ ಎಂಬುವರ
ಚಿಕ್ಕಮಗಳೂರು: ಮದುವೆಯಾದ ಕೆಲವೇ ದಿನಕ್ಕೆ ತೊರೆದ ಪತ್ನಿಯ ಕೊಲೆಗೈದ ಪತಿ
ಚಿಕ್ಕಮಗಳೂರು ತಾಲೂಕಿನ ಆಲ್ದೂರು ಪಟ್ಟಣ ಸಮೀಪದ ಹವ್ವಳ್ಳಿ ಗ್ರಾಮದಲ್ಲಿ ಐದು ತಿಂಗಳ ಹಿಂದೆ ಮದುವೆಯಾಗಿರುವ ದಂಪತಿ ಮಧ್ಯೆ ಕೌಟುಂಬಿಕ ಕಲಹ ತೀವ್ರಗೊಂಡು ಹೆಂಡತಿಯು ಗಂಡನ ಮನೆ ತೊರೆದು ತವರು ಮನೆಗೆ ವಾಪಸ್ ಆಗಿದ್ದಳು. ಇದರಿಂದ ರೊಚ್ಚಿಗೆದ್ದ ಪತಿ ಆಕೆಯನ್ನು ಮಚ್ಚಿನಿಂದ ಕೊಚ್ಚಿ
ಚಿಕ್ಕಮಗಳೂರಿನಲ್ಲಿ ಡ್ರಗ್ಸ್ ಪತ್ತೆಗೆ ರುದ್ರ ನಿಯೋಜನೆ
ಮಾದಕ ದ್ರವ್ಯ ಪತ್ತೆ ಕಾರ್ಯಕ್ಕಾಗಿ ಚಿಕ್ಕಮಗಳೂರು ಜಿಲ್ಲಾ ಪೊಲೀಸ್ ಶ್ವಾನ ದಳಕ್ಕೆ ಹೊಸ ಸದಸ್ಯ ಸೇರ್ಪಡೆಯಾಗಿದೆ. ವಿಶೇಷ ತರಬೇತಿ ಪಡೆದ ‘ರುದ್ರ’ ಹೆಸರಿನ ಶ್ವಾನ ಅಧಿಕೃತವಾಗಿ ಜಿಲ್ಲೆಯ ಪೊಲೀಸ್ ಕರ್ತವ್ಯದ ಭಾಗವಾಗಿದೆ. 21 ಆಗಸ್ಟ್ 2024ರಂದು ಜನಿಸಿದ ರುದ್ರ ಶ್ವಾನವು ಬೆಂಗಳೂರಿನ
ಹಾಸನಾಂಬೆ ಜಾತ್ರೆ: ಸಾಧ್ಯವಾದರೆ ಅ.18ರೊಳಗೆ ದರ್ಶನ ಪಡೆಯಲು ಸಚಿವ ಕೃಷ್ಣ ಭೈರೇಗೌಡ ಮನವಿ
ಶನಿವಾರ ರಾತ್ರಿ 9 ಗಂಟೆಯ ವೇಳೆಗೆ 1.2 ಲಕ್ಷಕ್ಕೂ ಹೆಚ್ಚು ಭಕ್ತರು ಹಾಸನಾಂಬೆ ದರ್ಶನ ಪಡೆದಿದ್ದು, ಜಾತ್ರಾ ಮಹೋತ್ಸವದ ವ್ಯವಸ್ಥೆಗಳು ಯೋಜನೆಯಂತೆ ಸುಗಮವಾಗಿ ನಡೆಯುತ್ತಿವೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣ ಭೈರೇಗೌಡ ಶ್ಲಾಘಿಸಿದ್ದಾರೆ. ₹ 1000 ಟಿಕೆಟ್ ದರ್ಶನವು ದಿನವಿಡೀ
ಯಲ್ಲಾಪುರದಲ್ಲಿ ಶೀಲ ಶಂಕಿಸಿ ಬೆಂಕಿ ಹಚ್ಚಿದ ಗಂಡ: ಏಳು ದಿನ ನರಳಿ ಮೃತಪಟ್ಟ ಪತ್ನಿ
ಪತ್ನಿಯ ಶೀಲ ಶಂಕಿಸಿ ಪತ್ನಿ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಏಳು ದಿನಗಳ ಬಳಿಕ ಆಕೆ ಮೃತಪಟ್ಟಿರುವ ಘಟನೆ ಉತ್ತರಕನ್ನಡದ ಯಲ್ಲಾಪುರ ತಾಲೂಕಿನ ಕಿರವತ್ತಿ ಬೊಂಬಡಿಕೊಪ್ಪದಲ್ಲಿ ನಡೆದಿದೆ. ಪತಿ ಬಾಬು ಎಕ್ಕು ಖಾತ್ರೋಟ ಎಂಬಾತ ಪತ್ನಿ ಜನ್ನಿ ಬಾಬು ಖಾತ್ರೋಟ
ಗೌರಿಬಿದನೂರಿನಲ್ಲಿ ತಂದೆಯ ಸಾವಿನಿಂದ ನೊಂದ ಮಗಳೂ ಆತ್ಮಹತ್ಯೆ
ಚಿಕ್ಕಬಳ್ಳಾಪುರದ ಗೌರಿಬಿದನೂರು ನಗರದ ನಾಗಿರೆಡ್ಡಿ ಬಡಾವಣೆಯ ಯುವತಿ ಸ್ವರ್ಣ (22) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆಕೆ ಬೆಂಗಳೂರಿನ ಮಹಾರಾಣಿ ಕಾಲೇಜಿನಲ್ಲಿ ಎಂಎಸ್ಸಿ ಪದವಿ ವ್ಯಾಸಂಗ ಮಾಡುತ್ತಿದ್ದರು. ಕಾಲೇಜಿನ ಹಾಸ್ಟೆಲ್‌ನಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿ ಮನೆಗೆ ಬಂದಿದ್ದ ಸ್ವರ್ಣರನ್ನು ತಾಯಿ ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಗೆ
ಬಸವಕಲ್ಯಾಣದಲ್ಲಿ ಆಟವಾಡುತ್ತಿದ್ದ ಮಗು ಬಾವಿಗೆ ಬಿದ್ದು ಸಾವು
ಬೀದರ್‌ನ ಬಸವಕಲ್ಯಾಣ ಪಟ್ಟಣದ ಈಶ್ವರ ಕಾಲೊನಿಯಲ್ಲಿ ಆಟ ಆಡುವಾಗ ಬಾವಿಗೆ ಬಿದ್ದು ಆರು ವರ್ಷದ ಮಗು ಮೃತಪಟ್ಟಿದೆ. ಬಸವಕಲ್ಯಾಣ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮನೆಯ ಪಕ್ಕದಲ್ಲಿ ಆಟವಾಡುತ್ತಿದ್ದಾಗ ಆಕಸ್ಮಿಕವಾಗಿ ಬಾವಿಗೆ ಬಿದ್ದು ಶೇಖ್ ನುಸ್ತಕಿಮ್ ಅಕ್ಬರಲಿ ಎಂಬ ಮಗು ಅಸು




