Tuesday, September 22, 2026
Menu

6 ತಿಂಗಳ ಹಿಂದೆ ಮದುವೆ: ಗುಡಿಬಂಡೆಯಲ್ಲಿ ಪತಿಯ ಕಿರುಕುಳವೆಂದು ಪತ್ನಿ ಆತ್ಮಹತ್ಯೆ

ಚಿಕ್ಕಬಳ್ಳಾಪುರ ಗುಡಿಬಂಡೆ ತಾಲೂಕಿನ ಕೊಂಡಾವಲಹಳ್ಳಿ ಗ್ರಾಮದಲ್ಲಿ 6 ತಿಂಗಳ ಹಿಂದೆ ಮದುವೆಯಾಗಿದ್ದ ಮಹಿಳೆ ಪತಿಯ ಕಿರುಕುಳಕ್ಕೆ ಬೇಸತ್ತು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೆ.ಎಸ್. ಜಯಶ್ರೀ (25)  ಆತ್ಮಹತ್ಯೆ ಮಾಡಿಕೊಂಡವರು, ಆರು ತಿಂಗಳ ಹಿಂದೆ ಚಂದ್ರಶೇಖರ್​ ಎಂಬವರ ಜೊತೆ ಮದುವೆಯಾಗಿತ್ತು. ಶಿಡ್ಲಘಟ್ಟ ಕೊಂಡಪ್ಪನಹಳ್ಳಿ ಗ್ರಾಮದ ಚಂದ್ರಶೇಖರ್​ ಮತ್ತು ಜಯಶ್ರೀ ವಿವಾಹದ ಬಳಿಕ ಚೆನ್ನಾಗಿಯೇ ಇದ್ದರು, ನಂತರ ಚಂದ್ರಶೇಖರ್​ ಬೇರೆ ಯುವತಿ ಜೊತೆ ಸದಾ ಚಾಟಿಂಗ್​ ಮಾಡುತ್ತಿರುವುದನ್ನು ಜಯಶ್ರೀ ಪ್ರಶ್ನಿಸಿದ್ದಾರೆ. ಆ

ಮೂಡಲಗಿಯಲ್ಲಿ ಐದು ತಿಂಗಳ ಹಿಂದೆ ಮದುವೆ: ಪತ್ನಿಯ ಕೊಲೆಗೈದು ಪತಿ ಪರಾರಿ

ಐದು ತಿಂಗಳ ಹಿಂದೆ ಮದುವೆಯಾಗಿರುವ ವ್ಯಕ್ತಿ ಪತ್ನಿಯನ್ನು ಕೊಲೆ ಮಾಡಿ ಶವವನ್ನು ಬೆಡ್ ಕೆಳಗೆ ಅಡಗಿಸಿಟ್ಟು ಪರಾರಿಯಾಗಿರುವ ದಾರುಣ ಘಟನೆಯೊಂದು ಬೆಳಗಾವಿಯ ಮೂಡಲಗಿ ತಾಲೂಕಿನ ಕಮಲದಿನ್ನಿ ಗ್ರಾಮದಲ್ಲಿ ನಡೆದಿದೆ. ಪತ್ನಿ ಸಾಕ್ಷಿ ಕಂಬಾರ (20) ಕೊಲೆಯಾದವರು, ಪತಿ ಆಕಾಶ್ ಕಂಬಾರ ಕೊಲೆ

ಮೈಸೂರು ದಸರಾದಲ್ಲಿ ಬಲೂನ್‌ ಮಾರಾಟಕ್ಕೆ ಬಂದಿದ್ದ ಬಾಲಕಿಯ ಶವ ಪತ್ತೆ, ಅತ್ಯಾಚಾರವೆಸಗಿ ಕೊಲೆ ಶಂಕೆ

ಮೈಸೂರಿನಲ್ಲಿ ನಾಡ ಹಬ್ಬ ದಸರಾದಲ್ಲಿ ಬಲೂನ್ ವ್ಯಾಪಾರಕ್ಕೆ ಬಂದಿದ್ದ ಹಕ್ಕಿಪಿಕ್ಕಿ ಸಮುದಾಯದ ಬಡ ಕುಟುಂಬವೊಂದರ ಹತ್ತು ವರ್ಷದ ಬಾಲಕಿಯ ಶವ ನಜರ್‌ಬಾದ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪತ್ತೆಯಾಗಿದೆ. ಅತ್ಯಾಚಾರವೆಸಗಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದ್ದು, ದಸರಾ ಹಬ್ಬದ ಸಂಭ್ರಮದ ನಡುವೆ ಈ ಪೈಶಾಚಿಕ

ಅಸಂಘಟಿತ ಕಾರ್ಮಿಕರಿಗೆ ಸಾಮಾಜಿಕ ಹಾಗೂ ಆರ್ಥಿಕ ಭದ್ರತೆ ಒದಗಿಸುವ ಸ್ಮಾರ್ಟ್ ಕಾರ್ಡ್

ಅಸಂಘಟಿತ ವಲಯದಲ್ಲಿ ದುರ್ಬಲರಾಗಿರುವ ಕಾರ್ಮಿಕರಿಗೆ ಸಾಮಾಜಿಕ ಹಾಗೂ ಆರ್ಥಿಕ ಭದ್ರತೆ ಒದಗಿಸಲು ಅಂಬೇಡ್ಕರ್ ಕಾರ್ಮಿಕ ಸಹಾಯಹಸ್ತ ಯೋಜನೆ, ಆಶಾ ದೀಪ ಯೋಜನೆ, ಗಿಗ್ ಕಾರ್ಮಿಕರ ವಿಮಾ ಯೋಜನೆ ಸೇರಿದಂತೆ ಹಲವಾರು ಯೋಜನೆಗಳನ್ನು ಜಾರಿಗೆ ತರಲಾಗಿದೆ ಎಂದು ಕಾರ್ಮಿಕ ಸಚಿವ ಸಂತೋಷ್‌ ಎಸ್‌

ತುಮಕೂರಿನಲ್ಲಿ ಮಗುವಿಗೆ ಜನ್ಮವಿತ್ತ ಅಪ್ರಾಪ್ತ ವಯಸ್ಕ ಬಾಲಕಿ: ಆರೋಪಿ ಅರೆಸ್ಟ್‌

ತುಮಕೂರಿನಲ್ಲಿ ಅಪ್ರಾಪ್ತ ವಯಸ್ಕ ಬಾಲಕಿಯೊಬ್ಬಳು ಹೆಣ್ಣು ಮಗುವಿಗೆ ಜನ್ಮ ನೀಡಿದ್ದು, ಆಕೆ ಮೇಲೆ ಅತ್ಯಾಚಾರವೆಸಗಿ ಗರ್ಭ ಧರಿಸಲು ಕಾರಣನಾದ ಆರೋಪದಡಿ ಮೇಲೆ ವಿನಯ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. 15 ವರ್ಷದ ಬಾಲಕಿಯನ್ನು ಮದುವೆ ಮಾಡಿಕೊಳ್ಳುವುದಾಗಿ ನಂಬಿಸಿ ಅತ್ಯಾಚಾರವೆಸಗಿದ್ದ ವಿನಯ್ ವಿರುದ್ಧ ಕ್ರಮ

ತುಮಕೂರಿನಲ್ಲಿ ಕಾರ್ಮಿಕ ಭವನ ಉದ್ಘಾಟಿಸಿದ ಸಚಿವ ಸಂತೋಷ್‌ ಲಾಡ್‌

ತುಮಕೂರು ನಗರದ ಹನುಮಂತಪುರದ ಗಣೇಶನಗರದಲ್ಲಿ ರೂ 3.20 ಕೋಟಿ ವೆಚ್ಚದಲ್ಲಿ ನೂತನವಾಗಿ ನಿರ್ಮಿಸಿರುವ ಕಾರ್ಮಿಕ ಭವನವನ್ನು ಕಾರ್ಮಿಕ ಸಚಿವ ಸಂತೋಷ ಎಸ್.ಲಾಡ್   ಉದ್ಘಾಟಿಸಿದರು. ಸರ್ಕಾರವು ಕಾರ್ಮಿಕರ ಮಕ್ಕಳ ಶಿಕ್ಷಣ, ಆರೋಗ್ಯ ಮತ್ತು ವಸತಿ ಸೌಲಭ್ಯಗಳಿಗೆ ಹೆಚ್ಚು ಪ್ರಾಮುಖ್ಯತೆ ನೀಡುತ್ತಿರುವ ನಿಟ್ಟಿನಲ್ಲಿ, ಈ

ಹೊನ್ನಾಳಿಯಲ್ಲಿ ಬಾಯ್ಲರ್‌ ಸ್ಫೋಟ: ಬಾಲಕಿ ಸಾವು

ಹೊನ್ನಾಳಿ ಪಟ್ಟಣದ ದುರ್ಗಿಗುಡಿ ಉತ್ತರ ಭಾಗದಲ್ಲಿ ಮನೆಯಲ್ಲಿ ಬಾಯ್ಲರ್ ಸ್ಫೋಟಗೊಂಡು 11 ವರ್ಷದ ಬಾಲಕಿ ಮೃತಪಟ್ಟಿದ್ದು, ಘಟನೆಯಲ್ಲಿ ಮೂವರು ಗಂಭೀರ ಗಾಯಗೊಂಡಿದ್ದಾರೆ. ಸ್ವೀಕೃತಿ ಮೃತ ಬಾಲಕಿ, ತೀರ್ಥಿಬಾಯಿ, ಹೂವಾ ನಾಯ್ಕ್, ಸುನೀತಾ ಬಾಯಿ ಗಂಭೀರವಾಗಿ ಗಾಯಗೊಂಡವರು. ಮನೆಯಲ್ಲಿ ಬೆಳಗ್ಗೆ ಬಾಯ್ಲರ್ ಆನ್

ಕುವೈತ್‌ ಡಿಫೆನ್ಸ್ ಆಸ್ಪತ್ರೆಯಲ್ಲಿ ಉದ್ಯೋಗ ಆಮಿಷವೊಡ್ಡಿ ಲಕ್ಷಾಂತರ ರೂ. ವಂಚನೆ

ಕುವೈತ್‌ ಡಿಫೆನ್ಸ್ ಆಸ್ಪತ್ರೆಯಲ್ಲಿ ಉತ್ತಮ ಸಂಬಳದ ಉದ್ಯೋಗವಿದೆ ಎಂದು ನಂಬಿಸಿ 30 ಯುವಕರಿಂದ 52 ಲಕ್ಷ ರೂಪಾಯಿ  ಪಡೆದು ತಂಡವೊಂದು ವಂಚಿಸಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದಲ್ಲಿ ಬಹಿರಂಗಗೊಂಡಿದೆ. ಹೊನ್ನಾವರ ತಾಲೂಕಿನ ಹೇರಂಗಡಿಯ ಜಾಫರ್ ಸಾದಿಕ್ ಮೋಕ್ತೆಸರ್, ನೌಶಾದ್ ಕ್ವಾಜಾ

ಕೆಆರ್‌ಪೇಟೆ ಬಾಲಕಿಯ ಸಾಮೂಹಿಕ ಅತ್ಯಾಚಾರ: ವೃದ್ಧನಿಗೆ ಜಾಮೀನು ನಿರಾಕರಿಸಿದ ಹೈಕೋರ್ಟ್‌

ಅಪ್ರಾಪ್ತ ವಯಸ್ಕ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಆರೋಪ ಎದುರಿಸುತ್ತಿರುವ 68 ವರ್ಷದ ವ್ಯಕ್ತಿಗೆ ಜಾಮೀನು ನೀಡಲು ಕರ್ನಾಟಕ ಹೈಕೋರ್ಟ್‌ ನಿರಾಕರಿಸಿದೆ. ಪ್ರಕರಣದಲ್ಲಿ ಜಾಮೀನು ಮಂಜೂರು ಮಾಡಲು ಕೋರಿ ಆರೋಪಿ ಚನ್ನಪ್ಪರ್ ಅಲಿಯಾಸ್​ ರಾಜಯ್ಯ (68) ಸಲ್ಲಿಸಿದ್ದ ಮೇಲ್ಮನವಿ ವಜಾಗೊಳಿಸಿದ

ನಾಳೆಯಿಂದ ಇತಿಹಾಸ ಪ್ರಸಿದ್ಧ ಹಾಸನಾಂಬ ಜಾತ್ರಾ ಸಂಭ್ರಮ

ವರ್ಷಕ್ಕೊಮ್ಮೆ ಮಾತ್ರ ಭಕ್ತರಿಗೆ ದೇವಿಯ ದರ್ಶನ ಸಿಗುವ ಇತಿಹಾಸ ಪ್ರಸಿದ್ಧ ಹಾಸನಾಂಬ ಜಾತ್ರೆ ಅಕ್ಟೋಬರ್ 9 ರಿಂದ ಆರಂಭಗೊಳ್ಳುತ್ತಿದೆ. ಅದ್ಧೂರಿಯಾಗಿ ಜಾತ್ರೆ ಆಚರಿಸಲು ಸಿದ್ಧತೆಗಳು ಭರದಿಂದ ಸಾಗಿವೆ. ಅ.9 ರಂದು ಮಧ್ಯಾಹ್ನ 12 ಗಂಟೆ ನಂತರ ಅರಸು ವಂಶಸ್ಥರು ಬನ್ನಿ ಕಡಿದ