ಜಿಲ್ಲಾ ಸುದ್ದಿ
ಬೆಳಗಾವಿಯಲ್ಲಿ ಕುದಿಯುತ್ತಿದ್ದ ಅಡುಗೆ ಎಣ್ಣೆ ಸುರಿದು ಪತಿಯ ಹತ್ಯೆಗೆ ಯತ್ನ
ಬೆಳಗಾವಿ ತಾಲೂಕಿನ ಮಚ್ಚೆ ಗ್ರಾಮದ ರಾಮನಗರದಲ್ಲಿ ಮಹಿಳೆಯೊಬ್ಬರು ಕುದಿಯುತ್ತಿದ್ದ ಅಡುಗೆ ಎಣ್ಣೆ ಸುರಿದು ಪತಿಯ ಹತ್ಯೆಗೆ ವಿಫಲ ಯತ್ನ ನಡೆಸಿದ್ದಾರೆ. ವೈಶಾಲಿ ಪಾಟೀಲ್ (48) ಕಾದ ಅಡುಗೆ ಎಣ್ಣೆಯನ್ನು ಪತಿ ಸುಭಾಷ ಪಾಟೀಲ್ (55)ಗೆ ಸುರಿದಿದ್ದು, ಅವರು ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಂತಾಜನಕ ಸ್ಥಿತಿಯಲ್ಲಿದ್ದಾರೆ. ಬೆಳಗಾವಿ ಗ್ರಾಮೀಣ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ. ಸುಭಾಷ್ ಪಾಟೀಲ್ ಸಿಲಿಂಡರ್ ವಿತರಣೆ ಕೆಲಸ ಮಾಡುತ್ತಿದ್ದರು. ಕೆಲಸ
ಕೊಪ್ಪಳದಲ್ಲಿ ಹುಲಿಗೆಮ್ಮ ದೇಗುಲ ಪಾದಯಾತ್ರೆ: ಬಸ್ ಹರಿದು ಮೂವರು ಭಕ್ತರ ಸಾವು
ಕೊಪ್ಪಳ ತಾಲೂಕಿನ ಹುಲಿಗೆಮ್ಮ ದೇವಸ್ಥಾನಕ್ಕೆ ಪಾದಯಾತ್ರೆ ತೆರಳುತ್ತಿದ್ದ ಭಕ್ತರ ಮೇಲೆ ಖಾಸಗಿ ಸ್ಲೀಪರ್ ಕೋಚ್ ಬಸ್ ಹರಿದು ಮೂವರು ಪ್ರಾಣ ಕಳೆದುಕೊಂಡಿದ್ದಾರೆ. ಕೂಕನಪಳ್ಳಿ ಗ್ರಾಮದ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ಈ ದುರಂತ ಸಂಭವಿಸಿದೆ. ಅನ್ನಪೂರ್ಣ (40), ಪ್ರಕಾಶ್ (25), ಶರಣಪ್ಪ (19)
ಬಂಗಾರಪೇಟೆ: ಎಕ್ಸ್‌ಪ್ರೆಸ್ ಹೈವೇನಲ್ಲಿ ಅಪಘಾತಕ್ಕೆ ಮೂವರು ಬಲಿ
ಕೋಲಾರದ ಬಂಗಾರಪೇಟೆ ತಾಲೂಕಿನ ಕಲ್ಕೆರೆ ಬಳಿ ಸೋಮವಾರ ರಾತ್ರಿ ಬೆಂಗಳೂರು- ಚೆನ್ನೈ ಎಕ್ಸ್‌ಪ್ರೆಸ್ ಹೈವೇನಲ್ಲಿ ಭೀಕರ ಅಪಘಾತ ಸಂಭವಿಸಿ ಮೂವರು ಮೃತಪಟ್ಟಿದ್ದಾರೆ. ಶಿವರಾಜ್ , ಅಶೋಕ, ವಿಕ್ರಂಪಾಲ್ ಮೃತಪಟ್ಟವರು. ಅಡುಗೆ ಕ್ಯಾಟರಿಂಗ್ ಗೆ ತೆರಳುತ್ತಿದ್ದ ಟೆಂಪೋ ಹಾಗೂ ಈಚರ್ ವಾಹನ ಡಿಕ್ಕಿಯಾಗಿ
ಹಿರಿಯೂರಿನಲ್ಲಿ ಶೀಲ ಶಂಕಿಸಿ ಪತ್ನಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಕೊಲೆ
ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲೂಕಿನ ಕಣಜನಹಳ್ಳಿ ಗ್ರಾಮದಲ್ಲಿ ವ್ಯಕ್ತಿಯೊಬ್ಬ ಪತ್ನಿಯ ಶೀಲ ಶಂಕಿಸಿ ಆಕೆಗೆ ಪೆಟ್ರೋಲ್ ಸುರಿದು ಬೆಂಕ ಹಚ್ಚಿ ಕೊಂದಿದ್ದಾನೆ. ಸುನೀತಾ (25) ಕೊಲೆಯಾದ ಮಹಿಳೆ, ಆಕೆಯ ಪತಿ ಲಿಂಗರಾಜ್ ಕೊಲೆಗಾರ. ನಾಲ್ಕು ವರ್ಷಗಳ ಹಿಂದೆ ಲಿಂಗರಾಜ್ ಹಾಗೂ ಸುನೀತಾ
ಯಾವ ಜಾತಿಯನ್ನೂ ತುಳಿಯುವ ಪ್ರಶ್ನೆಯಿಲ್ಲ, ಸಮಸಮಾಜ ಬಯಸದವರಿಂದ ಸಮೀಕ್ಷೆಗೆ ವಿರೋಧ: ಸಿಎಂ
ಜನರ ಆರ್ಥಿಕ, ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯಲ್ಲಿ ಯಾವ ಜಾತಿಯವರನ್ನು ತುಳಿಯುವ ಪ್ರಶ್ನೆಯಿಲ್ಲ. ಸಮಸಮಾಜವನ್ನು ಬಯಸದವರು ಸಮೀಕ್ಷೆಯನ್ನು ವಿರೋಧಿಸುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಅವರು ಕೊಪ್ಪಳದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಮೇಲ್ಜಾತಿಗಳನ್ನು ತುಳಿಯಲು ಸಮೀಕ್ಷೆ ನಡೆಸಲಾಗುತ್ತಿದೆ ಎಂಬ ಕೇಂದ್ರ ಸಚಿವ ಸೋಮಣ್ಣ ಆರೋಪಿಸಿರುವ
ಮತ್ತೆ ಪತಿಯೊಂದಿಗೆ ಜೀವಿಸಬೇಕೆಂದು ವಿಚ್ಛೇದಿತೆ ಮನವಿ: ನಿರಾಕರಿಸಿದ ಹೈಕೋರ್ಟ್
ಮದುವೆಯಾದ ಮಹಿಳೆ ಪತಿಯೊಂದಿಗೆ ದೈಹಿಕ ಸಂಪರ್ಕಕ್ಕೆ ಒಪ್ಪದೆ ಆತನ ವಿರುದ್ಧ ವರದಕ್ಷಿಣೆ ಕಿರುಕುಳ ಪ್ರಕರಣ ದಾಖಲಿಸಿ ಮತ್ತೆ ಆತನೊಂದಿಗೆ ಜೀವನ ನಡೆಸಲು ಬಯಸಿದ್ದು, ಆತ ಒಪ್ಪದಿದ್ದಾಗ ಹೈಕೋರ್ಟ್‌ಗೆ ಮೊರೆ ಹೋಗಿದ್ದಾರೆ. ಆದರೆ ಕೋರ್ಟ್ ಆಕೆಯ ಮನವಿಯನ್ನು ನಿರಾಕರಿಸಿದೆ. ಇದು ಪತಿಗೆ ಪತ್ನಿಯಿಂದ
ಚಿಕ್ಕಮಗಳೂರಿನಲ್ಲಿ ಹಸು ಬಾಲಕ್ಕೆ ಬೆಂಕಿ ಹಚ್ಚಿದ ಬಾಲಕನ ವಿರುದ್ಧ ಪ್ರಕರಣ ದಾಖಲು
ಚಿಕ್ಕಮಗಳೂರು ನಗರದ ವಿಜಯಪುರ ಬಡಾವಣೆಯಲ್ಲಿ ಬಾಲಕನೊಬ್ಬ ಹಸುವಿನ ಬಾಲಕ್ಕೆ ಸೆಂಟ್ ಸ್ಪ್ರೇ ಮಾಡಿ ಲೈಟರ್‌ನಿಂದ ಬೆಂಕಿ ಹಚ್ಚಿರುವ ಘಟನೆ ನಡೆದಿದೆ. ಬಾಲಕ ನಡೆಸಿರುವ ಈ ದುಷ್ಕೃತ್ಯವು ಸಾರ್ವಜನಿಕರಲ್ಲಿ ಆಕ್ರೋಶವುಂಟು ಮಾಡಿದೆ. ಸಂಜೆ ರಸ್ತೆಯಲ್ಲಿ ನಿಂತಿದ್ದ ಹಸುವಿನ ಬಾಲಕ್ಕೆ ಬಾಲಕ ಕೈಯಲ್ಲಿದ್ದ ಸೆಂಟ್
ಕಾರ್ಮಿಕ ಮುಖಂಡ ಗೋಪಾಲಸ್ವಾಮಿಯವರದ್ದು ಹೋರಾಟದ ರಾಜಕಾರಣ
ಕಾರ್ಮಿಕ ಮುಖಂಡರಾಗಿ ರಾಜಕಾರಣಕ್ಕೆ ಬಂದು ಎಲ್ಲರ ಹೃದಯಗಳನ್ನೂ ಗೆಲ್ಲುವ ಶಕ್ತಿ ಇರುವ ಗೋಪಾಲಸ್ವಾಮಿ ಹಾಸನ ಜಿಲ್ಲಾ ರಾಜಕಾರಣದ ಘನತೆಯನ್ನು ಮರುಸ್ಥಾಪಿಸುವ ಕೆಲಸವನ್ನೂ ಮಾಡಲಿ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆವಿ ಪ್ರಭಾಕರ್ ಹೇಳಿದರು. ಮಾಜಿ ವಿಧಾನ ಪರಿಷತ್ ಸದಸ್ಯರಾದ ಎಂ.ಎ.ಗೋಪಾಲಸ್ವಾಮಿ ಅವರ
ನಾಗಮಂಗಲದಲ್ಲಿ ಆತಂಕ ಸೃಷ್ಟಿಸಿದ್ದ ಪ್ರೇತಾತ್ಮ ವೀಡಿಯೊ: ಲೈಕ್ಸ್, ವೀವ್ಸ್‌ಗಾಗಿ ಮಾಡಿದ್ದೆಂದು ತಪ್ಪೊಪ್ಪಿಗೆ
“ದೇವಲಾಪುರ ಹ್ಯಾಂಡ್‌ಪೋಸ್ಟ್ ಬಳಿ ಪ್ರೇತಾತ್ಮ” ಎಂದು ಸಾಮಾಜಿಕ ಜಾಲತಾಣದಲ್ಲಿ ವೀಡಿಯೊ ಪ್ರಸಾರ ಮಾಡಿ ಸಾರ್ವಜನಿಕರಲ್ಲಿ ಆತಂಕ ಸೃಷ್ಟಿಸಿದ್ದ ನಾಗಮಂಗಲದ ಗೋಪಿ ಎಂಬಾತನನ್ನು ಪೊಲೀಸರು ವಿಚಾರಣೆ ನಡೆಸಿ ಎಚ್ಚರಿಕೆ ನೀಡಿದ್ದಾರೆ. ಸೋಷಿಯಲ್ ಮೀಡಿಯಾದಲ್ಲಿ ಲೈಕ್ಸ್, ವೀವ್ಸ್‌ಗಾಗಿ ದೆವ್ವದ ಫೇಕ್ ವೀಡಿಯೊ ಶೇರ್ ಮಾಡಿರುವುದಾಗಿ
ಸಾಹಿತಿ ಮೊಗಳ್ಳಿ ಗಣೇಶ್ ಇನ್ನಿಲ್ಲ
ಅನಾರೋಗ್ಯದಿಂದ ಬಳಲುತ್ತಿದ್ದ ಕನ್ನಡದ ಹಿರಿಯ ಸಾಹಿತಿ, ವೈಚಾರಿಕ ವಿಮರ್ಶಕ,ಕಥೆಗಾರ, ಕಾದಂಬರಿಕಾರ, ಪ್ರಬಂಧಕಾರ ಡಾ. ಮೊಗಳ್ಳಿ ಗಣೇಶ್ (೬೨) ನಿಧನರಾಗಿದ್ದಾರೆ. ಅವರು ಅನಾರೋಗ್ಯದಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಭಾನುವಾರ ಮುಂಜಾನೆ ಮೃತಪಟ್ಟಿದ್ದಾರೆ. ಅಂತ್ಯಕ್ರಿಯೆಯು ಇಂದು (ಭಾನುವಾರ) ಸಂಜೆ ಹುಟ್ಟೂರು ಮೊಗಳ್ಳಿ




