ಜಿಲ್ಲಾ ಸುದ್ದಿ
ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಇಂದು ಮಳೆ ಸಾಧ್ಯತೆ
ರಾಜ್ಯದ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ ಹಾಗೂ ಉಡುಪಿಯಲ್ಲಿ ಇಂದು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಂಗಾಳ ಕೊಲ್ಲಿಯಲ್ಲಿ ಚಂಡಮಾರುತ ಉಂಟಾಗಿದ್ದು, ಕರ್ನಾಟಕದ ಕೆಲವು ಭಾಗಗಳ ಮೇಲೆ ಪರಿಣಾಮ ಬೀರಿ ಮಳೆ ಸುರಿಯಬಹುದು ಎಂದು ಹೇಳಲಾಗಿದೆ. ಉತ್ತರ ಕನ್ನಡದಲ್ಲಿ ಒಣಹವೆ ಮುಂದುವರಿಯಲಿದೆ. ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ,
ಮಹಾರಾಷ್ಟ್ರ, ಕರ್ನಾಟಕ ನಡುವೆ ಸಾರಿಗೆ ಬಸ್ ಸ್ಥಗಿತ
ಕನ್ನಡ ಮಾತನಾಡಿ ಎಂದು ಹೇಳಿದ್ದಕ್ಕೆ ಮರಾಠಿಗರು ಕಂಡಕ್ಟರ್ ಮೇಲೆ ಹಲ್ಲೆ ನಡೆಸಿರುವ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿದೆ. ಕಂಡಕ್ಟರ್ ಮೇಲೆ ಮರಾಠಿಗರು ಬೇರೆ ಆರೋಪಗಳನ್ನು ಮಾಡಿದ ಹಿನ್ನೆಲೆ ಕಂಡಕ್ಟರ್ ವಿರುದ್ಧ ಫೋಕ್ಸೊ ಪ್ರಕರಣ ದಾಖಲಾಗಿದೆ. ಇದರಿಂದ ಬೆಳಗಾವಿಯಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದ್ದು,
ಕಂಬದಹಳ್ಳಿ ಆಂಜನೇಯಬೆಟ್ಟದಲ್ಲಿ ಬಾಂಬ್ ಸ್ಫೋಟಕ್ಕೆ ವಿದ್ಯಾರ್ಥಿಯ ಅಂಗೈ ಛಿದ್ರ
ನಾಗಮಂಗಲ ತಾಲೂಕಿನ ಕಂಬದಹಳ್ಳಿಯ ಆಂಜನೇಯಬೆಟ್ಟದಲ್ಲಿ ನಾಡಬಾಂಬ್ ಸ್ಫೋಟದಿಂದಾಗಿ ಇಬ್ಬರು ವಿದ್ಯಾರ್ಥಿಗಳು ಗಾಯಗೊಂಡಿದ್ದು, ಓರ್ವನ ಅಂಗೈ ಛಿದ್ರವಾಗಿದೆ. ಗಾಯಾಳು ವಿದ್ಯಾರ್ಥಿಗಳನ್ನು ಹರಿಯಂತ್ ಪಾಟೀಲ್ ಹಾಗೂ ಪಾರ್ಥ ಎಂದು ಗುರುತಿಸಲಾಗಿದೆ. ಇವರು ಜೈನ ಬಸದಿ ಶಾಲೆಯಲ್ಲಿ ವ್ಯಾಸಾಂಗ ಮಾಡುತ್ತಿದ್ದರು. ಆಂಜನೇಯ ಬೆಟ್ಟದ ದೇವಸ್ಥಾನದ ಸುತ್ತ
ರಾಜ್ಯ ಜೈವಿಕ ಇಂಧನ ಅಭಿವೃದ್ಧಿ ಮಂಡಳಿ ಕಾರ್ಯ ವ್ಯಾಪ್ತಿ ಜಾಗತಿಕ ವಿಸ್ತರಣೆಗೆ ಚಿಂತನೆ
ಕರ್ನಾಟಕ ರಾಜ್ಯ ಜೈವಿಕ ಇಂಧನ ಅಭಿವೃದ್ಧಿ ಮಂಡಳಿ ಕಾರ್ಯ ವ್ಯಾಪ್ತಿ ಜಾಗತಿಕವಾಗಿ ವಿಸ್ತರಣೆಯಾಗಲಿದೆ ಎಂಬ ವಿಶ್ವಾಸ ಹೊಂದಿರುವುದಾಗಿ ಕೆ ಎಸ್ ಬಿ ಡಿ ಬಿ ಅಧ್ಯಕ್ಷ ಎಸ್ ಈ. ಸುಧೀಂದ್ರ ಹೇಳಿದ್ದಾರೆ. ಮೈಸೂರಿನಲ್ಲಿ ಜರುಗಿದ” ಸುಸ್ಥಿರ ತಾಂತ್ರಿಕತೆ” ಅಂತರಾಷ್ಟ್ರೀಯ ಸಮಾವೇಶದಲ್ಲಿ ಮಂಡಳಿಯ
ಚಾಮುಂಡಿ ಬೆಟ್ಟದಲ್ಲಿ 35 ಎಕರೆ ಅರಣ್ಯನಾಶ!
ಅರಣ್ಯ ಇಲಾಖೆ ಸಿಬ್ಬಂದಿ ಸತತ 8 ಗಂಟೆಗಳ ಕಾಲ ಕಾರ್ಯಾಚರಣೆ ನಡೆಸಿ ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಕಾಣಿಸಿಕೊಂಡಿದ್ದ ಅಗ್ನಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಸುಮಾರು 2 ದಿನಗಳ ಕಾಲ ಹಬ್ಬಿದ ಬೆಂಕಿಗೆ 35 ಎಕರೆ ಅರಣ್ಯ ನಾಶವಾಗಿದೆ. ಮೈಸೂರಿನಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ
ವಿಜಯಪುರ ಮಿನಿ ತಾರಾಲಯಕ್ಕೆ 12.88 ಕೋಟಿ, ವಸತಿ ಶಾಲೆಗಳಿಗೆ 44 ಕೋಟಿ ರೂ. ವೆಚ್ಚ: ಸಚಿವ ಎಂಬಿ ಪಾಟೀಲ
ವಿಜಯಪುರ :. ವಿಜಯಪುರದಲ್ಲಿ ಉಪಪ್ರಾದೇಶಿಕ ವಿಜ್ಞಾನ ಕೇಂದ್ರ ಮತ್ತು ಕಿರು ತಾರಾಲಯ (ಮಿನಿ ಪ್ಲಾನೆಟೇರಿಯಂ) ಹಾಗೂ ಬಬಲೇಶ್ವರ ಮತ್ತು ವಿಜಯಪುರದಲ್ಲಿ ಎರಡು ಹಾಸ್ಟೆಲ್ ಗಳ ನಿರ್ಮಾಣಕ್ಕೆ ಒಟ್ಟು 56.88 ಕೋಟಿ ವ್ಯಯಿಸಲು ಸಂಪುಟ ಸಭೆಯಲ್ಲಿ ಆಡಳಿತಾತ್ಮಕ ಅನುಮೋದನೆ ಸಿಕ್ಕಿದೆ ಎಂದು ಜಿಲ್ಲಾ
ಕುಂಭಮೇಳಕ್ಕೆ ಹೊರಟ್ಟಿದ್ದ 6 ಮಂದಿ ಸಾವು: 5 ಲಕ್ಷ ರೂ. ಪರಿಹಾರ ಘೋಷಿಸಿದ ಈಶ್ವರ್ ಖಂಡ್ರೆ
ಕುಂಭಮೇಳಕ್ಕೆ ತೆರಳಿದ್ದ ಬೀದರ್ ನ 6 ಮಂದಿ ಅಪಘಾತದಲ್ಲಿ ಮೃತಪಟ್ಟ ಕುಟುಂಬಗಳಿಗೆ ಅರಣ್ಯ ಸಚಿವ ಈಶ್ವರ್ ಖಂಡ್ರೆ 5 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ. ಉತ್ತರ ಪ್ರದೇಶದ ಪ್ರಯಾಗ್ರಾಜ್ ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳಕ್ಕೆ ತೆರಳಿದ್ದ ಬೀದರ್ ನ 12 ಮಂದಿ
ಪುರುಷರ ನೋವಿಗೆ ಮಿಡಿದ ಕೆಎಸ್‌ಆರ್‌ಟಿಸಿ ಮೈಸೂರು ಘಟಕ
ಕೆಎಸ್‌ಆರ್‌ಟಿಸಿ ಮೈಸೂರು ಘಟಕವು ಪುರುಷರಿಗೆ ಮೀಸಲಿರುವ ಸೀಟ್‌ನಲ್ಲಿ ಪುರುಷರೇ ಕುಳಿತುಕೊಳ್ಳುವಂತೆ ನೋಡಿಕೊಳ್ಳಿ ಎಂದು ತನ್ನ ಸಿಬ್ಬಂದಿಗೆ ಸೂಚನೆ ನೀಡಿದೆ. ಶಕ್ತಿ ಯೋಜನೆ ಜಾರಿಯಾದ ಬಳಿಕ ರಾಜ್ಯದ ಸರ್ಕಾರಿ ಬಸ್ಸುಗಳಲ್ಲಿ ಮಹಿಳಾ ಪ್ರಯಾಣಿಕರ ಸಂಖ್ಯೆ ಹೆಚ್ಚಾಗುತ್ತಿದೆ. ಇದರಿಂದ ನಮಗೆ ಸೀಟು ಸಿಗುತ್ತಿಲ್ಲ ಎಂದು
ಅಕ್ರಮ ಸಂಬಂಧ ಪ್ರಶ್ನಿಸಿದ ತಾಯಿಗೆ ಜೀವ ಬೆದರಿಕೆಯೊಡ್ಡಿದ ಪಿಎಸ್‌ಐ
ಮಗನ ಅಕ್ರಮ ಸಂಬಂಧ ಪ್ರಶ್ನಿಸಿದ್ದಕ್ಕೆ ಕಪಾಳ ಮೋಕ್ಷ ಮಾಡಿ ಜೀವ ಬೆದರಿಕೆ ಹಾಕಿರುವುದಾಗಿ ದೊಡ್ಡಬಳ್ಳಾಪುರ ತಾಲೂಕು ಹಣಬೆ ಗ್ರಾಮದ ಮಂಗಳಮ್ಮ ಪೊಲೀಸ್ ಸಬ್ ಇನ್‌ಸ್ಪೆಕ್ಟರ್ ವಿರುದ್ಧಕೆ.ಆರ್.ಪುರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಮಂಗಳಮ್ಮ ನೀಡಿದ ದೂರಿನ ಅನ್ವಯ ಪುತ್ರ ಪಿಎಸ್‌ಐ ಮಂಜುನಾಥ,
ರೀಲ್ಸ್ ವ್ಯಸನದಿಂದ ಗಂಗಾವತಿಯಲ್ಲಿ ನದಿ ಪಾಲಾಗಿದ್ದ ವೈದ್ಯೆಯ ಶವ ಪತ್ತೆ
ಗಂಗಾವತಿ ತಾಲೂಕಿನ ಸಣಾಪೂರ ಗ್ರಾಮದಲ್ಲಿರುವ ತುಂಗಾಭದ್ರಾ ನದಿಯಲ್ಲಿ ಬುಧವಾರ ಮುಂಜಾನೆ ಕಲ್ಲುಬಂಡೆಗಳ ಮೇಲಿಂದ ನದಿಗೆ ಜಿಗಿದ ಯುವ ವೈದ್ಯೆಯ ಶವ ಪತ್ತೆಯಾಗಿದೆ. ಮೃತ ವೈದ್ಯೆಯನ್ನು ಹೈದರಾಬಾದ್‌ನ ನಾಂಪಲ್ಲಿ ಪ್ರದೇಶದ ನಿವಾಸಿ, ಎಂಬಿಬಿಎಸ್ ಪದವೀಧರೆ ಅನನ್ಯ ಮೋಹನ್ (26) ಎಂದು ಗುರುತಿಸಲಾಗಿದೆ. ಆಕೆ




