ಜಿಲ್ಲಾ ಸುದ್ದಿ
ಮಂಡ್ಯ ಜಿಲ್ಲೆ ಅಭಿವೃದ್ಧಿಗೆ 1970 ಕೋಟಿ ರೂ. ಐತಿಹಾಸಿಕ ಅನುದಾನ: ಡಿಕೆ ಶಿವಕುಮಾರ್
“ಮಂಡ್ಯ ಜಿಲ್ಲೆಗೆ ನೀರಾವರಿ ಇಲಾಖೆಯಿಂದ ₹1970 ಕೋಟಿ ಮೊತ್ತದ ಕಾಮಗಾರಿಗಳನ್ನು ಮಂಜೂರು ಮಾಡಲಾಗಿದೆ. ಕರ್ನಾಟಕದ ಇತಿಹಾಸದಲ್ಲಿಯೇ ಮಂಡ್ಯ ಜಿಲ್ಲೆಗೆ ಇಷ್ಟು ದೊಡ್ಡ ಮೊತ್ತದ ಅನುದಾನ ನೀಡಿದ ಉದಾಹರಣೆಯೇ ಇಲ್ಲ” ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು. ಮಳವಳ್ಳಿಯಲ್ಲಿ ಭಾನುವಾರ ನಡೆದ ಗಗನಚುಕ್ಕಿ ಜಲಪಾತೋತ್ಸವದ ಸಮಾರೋಪ ಸಮಾರಂಭದಲ್ಲಿ ಜಲಸಂಪನ್ಮೂಲ ಸಚಿವರೂ ಆದ ಶಿವಕುಮಾರ್ ಮಾತನಾಡಿ, “ಅನುದಾನದ ವಿಚಾರದಲ್ಲಿ ಡಿ.ಕೆ. ಶಿವಕುಮಾರ್ ಸುಳ್ಳು ಹೇಳಿದ್ದರೇ ವಿರೋಧ ಪಕ್ಷದವರು ಚರ್ಚೆ ಮಾಡಬಹುದು. ಜಿಲ್ಲೆಯ ಅಭಿವೃದ್ಧಿಗೆ ನಾನು
ಅಕ್ರಮ ಸಂಬಂಧ ಬಯಲು: ಅತ್ತೆ ಮೇಲೆ ಹಲ್ಲೆಗೈದ ಸೊಸೆ ಮತ್ತು ಪ್ರಿಯಕರ ಅರೆಸ್ಟ್
ಕೋಲಾರ ಜಿಲ್ಲೆಯ ಶ್ರೀನಿವಾಸಪುರದ ಗುಮ್ಮಲಪಲ್ಲಿ ಗ್ರಾಮದಲ್ಲಿ ಸೊಸೆ ಹಾಗೂ ಆಕೆಯ ಪ್ರಿಯಕರ ಸೇರಿ ಅತ್ತೆಯ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ನಡೆದಿದೆ. ಸೊಸೆ ಹಾಗೂ ಪ್ರಿಯಕರ ಶಶಿಕುಮಾರ್‌ನನ್ನು ಪೊಲೀಸರು ಬಂಧಿಸಿದ್ದಾರೆ. ಹಲ್ಲೆಗೊಳಗಾದ ಅತ್ತೆ ರಮಣಮ್ಮರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ತುಮ್ಮಲಪಲ್ಲಿ ಗ್ರಾಮದ
ಮಾಜಿ ಸಂಸದ ಪ್ರತಾಪ್ ಸಿಂಹ ಶಾಂತಿಭಂಗ ಕೆಲಸ ಮಾಡಿದರೆ ಪೊಲೀಸ್ ಕ್ರಮ: ಸಿಎಂ ಸಿದ್ದರಾಮಯ್ಯ
ದಸರಾ ಉದ್ಘಾಟಕರ ವಿಚಾರದಲ್ಲಿ ಉದ್ಘಾಟನೆಗೆ ಅವಕಾಶ ಕೊಡಬಾರದು ಎಂದು ನ್ಯಾಯಾಲಯಕ್ಕೆ ಅರ್ಜಿ ಹಾಕಿರುವ ಬಗ್ಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ನ್ಯಾಯಾಲಯದಲ್ಲಿ ವಿಷಯ ಇತ್ಯರ್ಥವಾಗಲಿ. ದಸರಾ ಒಂದು ಧರ್ಮಕ್ಕೆ ಸೇರಿದ ಕಾರ್ಯಕ್ರಮವಲ್ಲ. ಸಾಂಸ್ಕೃತಿಕವಾಗಿ ಎಲ್ಲ ಧರ್ಮದ ಜನರು ಇದರಲ್ಲಿ ಭಾಗವಹಿಸುತ್ತಾರೆ. ದಸರಾ
ಮದ್ದೂರು: ಗಂಡ ಬರಬೇಕೆಂದು ಆಗ್ರಹಿಸಿ ಮನೆ ಮುಂದೆ ಪತ್ನಿಯ ಶವವಿಟ್ಟು ಪ್ರತಿಭಟನೆ
ಮದ್ದೂರಿನ ಹೆಮ್ಮನಹಳ್ಳಿಯ ಮನೆಯಲ್ಲಿ ಹರ್ಷಿತಾ ಎಂಬ ಮಹಿಳೆ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿದ್ದು, ಮರಣೋತ್ತರ ಪರೀಕ್ಷೆ ಬಳಿಕ ಪತಿಯ ಮನೆ ಮುಂದೆ ಶವ ಇಟ್ಟು ಪೋಷಕರು ಧರಣಿ ನಡೆಸುತ್ತಿದ್ದಾರೆ. ಹರ್ಷಿತಾ ಶವವಾಗಿ ಪತ್ತೆಯಾದ ಬಳಿಕ ಆಕೆಯ ಪತಿ ಮತ್ತು ಕುಟುಂಬದವರು
ಶಿಕ್ಷಣದಿಂದ ಮಾತ್ರ ಸ್ವತಂತ್ರ, ಸ್ವಾಭಿಮಾನಿ ಹಾಗೂ ಜವಾಬ್ದಾರಿಯುತ ವ್ಯಕ್ತಿಯಾಗಲು ಸಾಧ್ಯ
ಶಿಕ್ಷಣದಿಂದ ಮಾತ್ರ ನಮ್ಮ ಜ್ಞಾನದ ವಿಕಾಸವಾಗುತ್ತದೆ. ಅದರಿಂದ ನಾವು ಸ್ವತಂತ್ರ, ಸ್ವಾಭಿಮಾನಿ ಹಾಗೂ ಜವಾಬ್ದಾರಿಯುತ ವ್ಯಕ್ತಿಯಾಗಲು ಸಾಧ್ಯ. ಅದಕ್ಕಾಗಿ ಪ್ರತಿಯೊಬ್ಬರೂ ಶಿಕ್ಷಣವನ್ನು ಪಡೆದುಕೊಳ್ಳಲೇಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿಪ್ರಾಯಪಟ್ಟರು. ಅವರು ಜೆಎಸ್‌ಎಸ್ ಪ್ರಸಾದ ನಿಲಯಗಳ ಹಿರಿಯ ವಿದ್ಯಾರ್ಥಿಗಳ ಗೃಹ ನಿರ್ಮಾಣ ಸಹಕಾರ
ಹಾಸನ ಗಣೇಶೋತ್ಸವ ದುರಂತ: ಸಂತ್ರಸ್ತರ ಕುಟುಂಬಕ್ಕೆ 25 ಲಕ್ಷ ರೂ. ಪರಿಹಾರಕ್ಕೆ ಆರ್.ಅಶೋಕ ಆಗ್ರಹ
ಹಾಸನ ಗಣೇಶ ವಿಸರ್ಜನೆಯ ಮೆರವಣಿಗೆ ದುರಂತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ರಾಜ್ಯ ಸರ್ಕಾರ 25 ಲಕ್ಷ ರೂ. ಪರಿಹಾರ ನೀಡಬೇಕು ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಆಗ್ರಹಿಸಿದ್ದಾರೆ. ಮೃತದ ಕುಟುಂಬಗಳಿಗೆ ಭೇಟಿ ನೀಡಿ ಹಾಗೂ ಗಾಯಾಳುಗಳನ್ನು ಭೇಟಿ ಮಾಡಿದ ಬಳಿಕ ಅವರು ಸುದ್ದಿಗಾರರೊಂದಿಗೆ
ಯಾಂತ್ರೀಕೃತ ಭತ್ತ ನಾಟಿ ಪ್ರಾತ್ಯಕ್ಷಿಕೆ ನೀಡಿದ ಮಂಡ್ಯ ಜಿಪಂ ಸಿಇಒ ನಂದಿನಿ
ಮಹಿಳೆಯರೂ ಯಾಂತ್ರೀಕೃತವಾಗಿ ಭತ್ತ ನಾಟಿ ಮಾಡಲು ಸಾಧ್ಯ ಎಂಬುದನ್ನು ತೋರಿಸಿಕೊಡುವುದಕ್ಕಾಗಿ ಮಂಡ್ಯ ಜಿಲ್ಲಾ ಪಂಚಾಯತ್ ಸಿಇಒ ನಂದಿನಿ ಕೆ.ಆರ್. ಸ್ವತಃ ಯಾಂತ್ರೀಕೃತ ವಿಧಾನದ ಮೂಲಕ ಭತ್ತ ನಾಟಿ ಮಾಡಿದರು. ಹೊಳಲು ಗ್ರಾಮದ ದಕ್ಷ ಯಂತ್ರ ನಾಟಿ ಸಸಿಮಡಿ ತಯಾರಿಕಾ ಘಟಕದಲ್ಲಿ ಯಾಂತ್ರೀಕೃತ
ಸಾಲ ಪಡೆದು ಸ್ವಾಭಿಮಾನದ ಬದುಕು ಕಟ್ಟಿಕೊಳ್ಳಿ, ಭವಿಷ್ಯದಲ್ಲಿ ಯಾರೇ ಅಧಿಕಾರಕ್ಕೆ ಬಂದರೂ ಸಾಲ ಮನ್ನಾ ಇಲ್ಲ: ಡಿಕೆ ಸುರೇಶ್
“ಬೆಳೆಸಾಲ, ಹಸು ಸಾಲ ಪಡೆದು ಆರ್ಥಿಕವಾಗಿ ಸಬಲರಾಗಿ. ಬೆಂಗಳೂರಿಗೆ ವಲಸೆ ಹೋಗಿ ಸೆಕ್ಯುರಿಟಿ ಗಾರ್ಡ್ ಗಳಾಗಿ, ಹೋಟೆಲ್ ಕೆಲಸ ಮಾಡಿಕೊಂಡು ಕಷ್ಟದಲ್ಲಿ ಜೀವನ ತಳ್ಳಬೇಡಿ. ಸ್ವಂತ ಊರಿನಲ್ಲಿ ಸ್ವಾಭಿಮಾನದ ಬದುಕು ಕಟ್ಟಿಕೊಳ್ಳಿ” ಎಂದು ಬಮುಲ್ ಅಧ್ಯಕ್ಷರಾದ ಡಿ.ಕೆ.ಸುರೇಶ್ ಹೇಳಿದ್ದಾರೆ. ಬೆಂಗಳೂರು ಜಿಲ್ಲಾ
ಬಿಜೆಪಿ ಸಂಸದರು ರಾಜ್ಯದ ನೀರಾವರಿ ಯೋಜನೆಗಳು, ಅನುದಾನಗಳ ಬಗ್ಗೆ ಬಾಯಿ ಬಿಡಲಿ: ಡಿಸಿಎಂ
“ಮೇಕೆದಾಟು, ಕಳಸಾ ಬಂಡೂರಿ, ಭದ್ರಾ ಮೇಲ್ದಂಡೆ ಅನುದಾನ, ಆಲಮಟ್ಟಿ ಎತ್ತರ ಹೆಚ್ಚಳಕ್ಕೆ ಅನುಮತಿ ಸೇರಿದಂತೆ ಕರ್ನಾಟಕದ ಪರವಾಗಿ ಬಿಜೆಪಿ ಸಂಸದರು ಬಾಯಿ ಬಿಡಬೇಕು. ಇಲ್ಲದಿದ್ದರೆ ರಾಜಿನಾಮೆ ನೀಡಿ ಮರು ಚುನಾವಣೆ ಎದುರಿಸಬೇಕು” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಸವಾಲೆಸೆದರು. ಲಕ್ಕವಳ್ಳಿಯ ಭದ್ರಾ
ಹೇಮಾವತಿ ಲಿಂಕ್ ಕೆನಾಲ್ ಯೋಜನೆಯಲ್ಲಿ ಯಾರಿಗೂ ಅನ್ಯಾಯವಾಗದಂತೆ ನೋಡಿಕೊಳ್ಳುತ್ತೇವೆ: ಡಿಸಿಎಂ
“ಹೇಮಾವತಿ ಲಿಂಕ್ ಕೆನಾಲ್ ಯೋಜನೆ ಕಾಮಗಾರಿ ಸ್ಥಳ ಪರಿಶೀಲನೆ ಮಾಡಿದ್ದು, ಅಧಿಕಾರಿಗಳ ಜೊತೆ ಚರ್ಚೆ ಮಾಡಿ ಯಾರಿಗೂ ಅನ್ಯಾಯವಾಗದಂತೆ ನೋಡಿಕೊಳ್ಳುತ್ತೇವೆ” ಎಂದು ಡಿಸಿಎಂ ಡಿಕೆ ಶಿವಕುಮಾರ್ ಭರವಸೆ ನೀಡಿದರು. ತುಮಕೂರಿನ ಸುಂಕಾಪುರ ಬಳಿ ನಡೆಯುತ್ತಿರುವ ಹೇಮಾವತಿ ಲಿಂಕ್ ಕೆನಾಲ್ ಕಾಮಗಾರಿ ಪರಿವೀಕ್ಷಣೆ




