ಜಿಲ್ಲಾ ಸುದ್ದಿ
ನಾರಾಯಣಪುರ ಡ್ಯಾಂನಿಂದ ಕೃಷ್ಣೆಗೆ 1.40 ಲಕ್ಷ ಕ್ಯೂಸೆಕ್ ನೀರು
ನಾರಾಯಣಪುರ ಜಲಾಶಯದಿಂದ 1.40 ಲಕ್ಷ ಕ್ಯೂಸೆಕ್ ನೀರನ್ನು ನದಿಗೆ ಬಿಡಲಾಗಿದೆ. ಇದರಿಂದ ಕೃಷಾ ನದಿ ತುಂಬಿ ಹರಿಯುತ್ತಿದೆ. ದೇವದುರ್ಗದ ಹೂವಿನಹಡಗಲಿ ಗಡ್ಡೆಗೂಳಿ ಬಸವೇಶ್ವರ ದೇವಾಲಯ ಮುಳುಗಡೆಯಾಗಿದೆ. ಮಹಾರಾಷ್ಟ್ರದಲ್ಲಿ ಸುರಿಯುತ್ತಿರುವ ಭಾರಿ ಮಳೆಗೆ ಕೊಯ್ನಾ ಜಲಾಶಯಕ್ಕೆ ಅಪಾರ ಪ್ರಮಾಣದಲ್ಲಿ ಒಳಹರಿವು ಇದ್ದು, ನೀರನ್ನು ನಾರಾಯಣಪುರ ಜಲಾಶಯಕ್ಕೆ ಬಿಡಲಾಗಿದೆ. ಅಲ್ಲಿಂದ ಕೃಷ್ಣಾ ನದಿಗೆ ಹರಿಸಲಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಜಲಾಶಯದಿಂದ 1.40 ಲಕ್ಷ ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗಿದೆ. ಡ್ಯಾಮ್‌ನಿಂದ ನೀರು ಬಿಡುಗಡೆ ಮಾಡಿರುವುದರಿಂದ
ಹಾಸನದಲ್ಲಿ ಪತ್ನಿಯ ಹತ್ಯೆಗೈದು ಪತಿ ಆತ್ಮಹತ್ಯೆ
ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಕೆಸಗೋಡು ಗ್ರಾಮದಲ್ಲಿ ಅನೈತಿಕ ಸಂಬಂಧ ಅನುಮಾನದಿಂದ ವ್ಯಕ್ತಿಯು ಪತ್ನಿಯನ್ನು ಹತ್ಯೆ ಮಾಡಿ ಸಂಬಂಧಿಕರಿಗೆ ವೀಡಿಯೊ ಕಾಲ್ ಮಾಡಿ ತಿಳಿಸಿದ ಬಳಿಕ ತಾನೂ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತನಿಖೆ ಆರಂಭಿಸಿದ್ದು, ಮಹಿಳೆಯ
ಭರ್ತಿಯಾಗುತ್ತಿದೆ ಕಬಿನಿ ಜಲಾಶಯ: ನದಿಗೆ ನೀರು ಬಿಡಲು ಸಿದ್ಧತೆ
ರಾಜ್ಯ ಬರದಿಂದ ತತ್ತರಿಸುತ್ತಿರುವ ಮಧ್ಯೆಯೇ ಹಾರಂಗಿ ಜಲಾಶಯ ಭರ್ತಿಯಾದ ಬಳಿಕ ಆಲಮಟ್ಟಿ, ನಾರಾಯಣಪುರ ಡ್ಯಾಂಗಳ ಜೊತೆ ಕಬಿನಿ ಜಲಾಶಯ ತುಂಬಿದ್ದು ಕಬಿನಿಯ ಎಂಟರಿಂದ 10 ಸಾವಿರ ಕ್ಯೂಸೆಕ್ ನೀರು ನದಿಗೆ ಹರಿಸಲು ಸಿದ್ಧತೆ ನಡೆದಿದೆ. ಕೇರಳದ ವಯನಾಡ್ ಭಾಗದಲ್ಲಿ ಮಳೆ ಸುರಿದ
ಯೋಗೇಶ್ ಗೌಡ ಕೊಲೆ ಪ್ರಕರಣ: ವಿನಯ್ ಕುಲಕರ್ಣಿಗೆ ಹೈಕೋರ್ಟ್ ಜಾಮೀನು
ಯೋಗೇಶ್ ಗೌಡ ಕೊಲೆ ಪ್ರಕರಣದ ಪ್ರಮುಖ ಆರೋಪಿಯಾಗಿರುವ ಮಾಜಿ ಸಚಿವ ವಿನಯ್ ಕುಲಕರ್ಣಿಗೆ ಕರ್ನಾಟಕ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. ಬೆಂಗಳೂರಿನ ವಿಶೇಷ ನ್ಯಾಯಾಲಯ ವಿನಯ್ ಕುಲಕರ್ಣಿಗೆ ವಿಧಿಸಿದ್ದ ಶಿಕ್ಷೆಯನ್ನು ಅಮಾನತಿನಲ್ಲಿಟ್ಟು ಜಾಮೀನು ನೀಡಲಾಗಿದೆ. ಐದು ಲಕ್ಷ ರೂ. ಬಾಂಡ್ ಹಾಗೂ
ಬಳ್ಳಾರಿಯಲ್ಲಿ ಪತ್ನಿ, ಏಳು ತಿಂಗಳ ಮಗು ಕೊಂದು ವ್ಯಕ್ತಿ ಪರಾರಿ
ಬಳ್ಳಾರಿ ನಗರದ ಅಂದ್ರಾಳ್ ಪ್ರದೇಶದಲ್ಲಿ ಸುತ್ತಿಗೆಯಿಂದ ಹೊಡೆದು ಪತ್ನಿ ಮತ್ತು ಏಳು ತಿಂಗಳ ಮಗುವನ್ನು ವ್ಯಕ್ತಿ ಕೊಲೆ ಮಾಡಿರುವ ಘಟನೆ ನಡೆದಿದೆ. ಹೊನ್ನೂರಸ್ವಾಮಿ ಎಂಬಾತ ಪತ್ನಿ ರಾಜೇಶ್ವರಿ ಹಾಗೂ ಮಗಳು ಅಶ್ವಿನಿಯನ್ನು ಕೊಲೆ ಮಾಡಿ ಪರಾರಿಯಾಗಿದ್ದಾನೆ. ಘಟನೆಗೆ ನಿಖರ ಕಾರಣ ತಿಳಿದು
ತಮಿಳುನಾಡಿಗೆ ನೀರು: ರೈತರು ಮತ್ತು ಸಂಘಟನೆಗಳಿಂದ ಕಾವೇರಿದ ಪ್ರತಿಭಟನೆ
ತಮಿಳುನಾಡಿಗೆ ನೀರು ಬಿಡುವಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಮತ್ತು ಕಾವೇರಿ ನೀರು ನಿಯಂತ್ರಣ ಮಂಡಳಿ ನೀಡಿರುವ ಆದೇಶವನ್ನು ಖಂಡಿಸಿ ರಾಜ್ಯದ ರೈತರು ಮತ್ತು ಜನತೆಯ ಹಿತಾಸಕ್ತಿಗೆ ಆಗ್ರಹಿಸಿ ಶ್ರೀರಂಗಪಟ್ಟಣದಲ್ಲಿ ಕಾವೇರಿ ನದಿಗಿಳಿದು ರೈತರು ಆಕ್ರೋಶ ಹೊರ ಹಾಕಿದ್ದಾರೆ. ರಾಜ್ಯ ಸರ್ಕಾರ
ಕುಂದಾಪುರದಲ್ಲಿ ಗುಂಡಿಕ್ಕಿ ವ್ಯಕ್ತಿಯ ಹತ್ಯೆ
ಕುಂದಾಪುರದ ಚರ್ಚ್ ರಸ್ತೆಯಲ್ಲಿ ಶುಕ್ರವಾರ ಮುಂಜಾನೆ ದುಷ್ಕರ್ಮಿಗಳು ವ್ಯಕ್ತಿಯೊಬ್ಬರಿಗೆ ಗುಂಡಿಕ್ಕಿ ಕೊಲೆ ಮಾಡಿದ್ದಾರೆ. ಬಾರ್ಕೂರು-ಕಚ್ಚೂರು ಮೂಲದ ಐವನ್ ರಿಚರ್ಡ್ ಮಸ್ಕರೇನಸ್ (45) ಕೊಲೆಯಾದವರು. ಐವನ್ ರಿಚರ್ಡ್ ಕೆಲವು ವ್ಯವಹಾರ ನಡೆಸುತ್ತಿದ್ದರು. ಮೊದಲ ಪತ್ನಿಯನ್ನು ತೊರೆದು, ಬಾರ್ಕೂರು ಮೂಲದ ಮಹಿಳೆಯೊಂದಿಗೆ ವಾಸಿಸುತ್ತಿದ್ದರು ಎಂದು
ಬರ ಘೋಷಿಸದಿದ್ದರೆ “ಹೊಲ ಗದ್ದೆ ಚಲೋ” ಆರಂಭ: ಆರ್ ಅಶೋಕ ಎಚ್ಚರಿಕೆ
ರಾಜ್ಯ ಸರ್ಕಾರ ಕೂಡಲೇ ಬರಗಾಲ ಘೋಷಣೆ ಮಾಡದಿದ್ದರೆ ಆಗಸ್ಟ್ 3 ರಿಂದ ʼಚಲೋ ಹೊಲ ಗದ್ದೆʼ ಪ್ರತಿಭಟನೆ ಮಾಡುತ್ತೇವೆ ಎಂದು ಪ್ರತಿಪಕ್ಷ ನಾಯಕ ಆರ್‌ಅಶೋಕ ಎಚ್ಚರಿಸಿದರು. ಬಳ್ಳಾರಿಯ ಕರೆಕಲ್ ಗ್ರಾಮಕ್ಕೆ ಭೇಟಿ ನೀಡಿ ಬೆಳೆ ಹಾನಿ ಪರಿಶೀಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು. ಎಲ್ಲ
ಭಾಲ್ಕಿಯ ಮಹಿಳೆಗೆ ಕೋವಿಡ್ ಸೋಂಕು: ಜಿಲ್ಲಾ ಆರೋಗ್ಯ ಇಲಾಖೆ ಹೈ ಅಲರ್ಟ್
ಬೀದರ್ ಜಿಲ್ಲೆಯ ಭಾಲ್ಕಿಯ ಮಹಿಳೆಯೊಬ್ಬರಿಗೆ ಕೋವಿಡ್ ಸೋಂಕು ದೃಢಪಟ್ಟಿದ್ದು, ರಾಜ್ಯದಲ್ಲೂ ಆತಂಕ ಎದುರಾಗಿದೆ. ಸ್ಯಾಂಪಲ್ ಪರೀಕ್ಷೆಯ ವೇಳೆ ಸೋಂಕು ದೃಢಪಟ್ಟ ಬಳಿಕ ಮಹಿಳೆಯನ್ನು ಬೀದರ್ ಬ್ರಿಮ್ಸ್ ಆಸ್ಪತ್ರೆಯ ವಿಶೇಷ ವಾರ್ಡ್‌ಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಜಿಲ್ಲಾ ಆರೋಗ್ಯ ಇಲಾಖೆ ಹೈ ಅಲರ್ಟ್
ನಾರಾಯಣಪುರ ಜಲಾಶಯದಿಂದ ಕೃಷ್ಣಾ ನದಿಗೆ ಭಾರಿ ಪ್ರಮಾಣದ ನೀರು
ಮಹಾರಾಷ್ಟ್ರ ಸೇರಿದಂತೆ ಕೃಷ್ಣಾ ನದಿ ಮೇಲ್ಭಾಗ ಉತ್ತಮ ಮಳೆ ಸುರಿಯುತ್ತಿರುವುದರಿಂದ ರಾಯಚೂರಿನಲ್ಲಿ ನಾರಾಯಣಪುರ ಜಲಾಶಯ ಭರ್ತಿಯಾಗಿದ್ದು, ಕೃಷ್ಣಾ ನದಿಗೆ ಭಾರಿ ಪ್ರಮಾಣದಲ್ಲಿ ನೀರು ಹರಿಸಲಾಗುತ್ತಿದೆ. ರಾಯಚೂರಿನಲ್ಲಿ ಕೃಷ್ಣಾನದಿ ತುಂಬಿ ಹರಿಯುತ್ತಿದ್ದು, ನದಿ ಪಾತ್ರದ ಗ್ರಾಮಗಳಲ್ಲಿ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ. ನದಿ




