Thursday, September 24, 2026
Menu

ಯಾದಗಿರಿಯಲ್ಲಿ ಅಣ್ಣ ತಮ್ಮ ಹೃದಯಾಘಾತಕ್ಕೆ ಬಲಿ

ಯಾದಗಿರಿಯ ಸುರಪುರ ತಾಲೂಕಿನ ಕೆಂಭಾವಿಯ ಮನೆಯೊಂದರಲ್ಲಿ ಅಣ್ಣ ಮತ್ತು ತಮ್ಮ ಹೃದಯಾಘಾತಕ್ಕೆ ಬಲಿಯಾಗಿರುವ ದಾರುಣ ಘಟನೆ ನಡೆದಿದೆ. ಶಂಶೋದ್ದೀನ್ (42) ಮತ್ತು ಇರ್ಫಾನ್ (38) ಮೃತಪಟ್ಟ ಸೋದರರು. ತಮ್ಮ ಇರ್ಫಾನ್‌ಗೆ ಎದೆನೋವು ಕಾಣಿಸಿಕೊಂಡು ಹೃದಯಾಘಾತವಾದ ಸುದ್ದಿ ತಿಳಿದ ಕೂಡಲೇ ಅಣ್ಣ ಶಂಶೋದ್ದೀನ್‌ಗೂ ತೀವ್ರ ಎದೆನೋವು ಕಾಣಿಸಿಕೊಂಡಿತ್ತು. ಇಬ್ಬರನ್ನೂ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಇಬ್ಬರೂ ಅಸು ನೀಗಿದ್ದಾರೆ. ಇರ್ಫಾನ್ ಸಣ್ಣಪುಟ್ಟ ವ್ಯಾಪಾರ ಮಾಡಿಕೊಂಡು ಜೀವನ ಸಾಗಿಸುತ್ತಿದ್ದರು, ಆದರೆ ಶಂಶೋದ್ದೀನ್ ಕೃಷಿಯಲ್ಲಿ ಜೀವನ ಮಾಡುತ್ತಿದ್ದರು.

ಅಮೆರಿಕದಲ್ಲಿ ರಸ್ತೆ ಅಪಘಾತಕ್ಕೆ ಕೋಲಾರದ ಬಾಡಿಬಿಲ್ಡರ್‌ ಬಲಿ

ಅಮೆರಿಕದ ಟೆಕ್ಸಾಸ್‍ನಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಕೋಲಾರದ ಗಾಂಧಿನಗರ ಬಡಾವಣೆಯ ಬಾಡಿ ಬಿಲ್ಡರ್ ಮೃತಪಟ್ಟಿದ್ದಾರೆ. ಸುರೇಶ್ ಕುಮಾರ್ (42) ಮೃತಪಟ್ಟವರು. ಗಾಂಧಿನಗರದ ಚಲಪತಿ ಹಾಗೂ ಮುನಿಯಮ್ಮ ದಂಪತಿಯ ಪುತ್ರ ಸುರೇಶ್ ಮೂರು ದಿನಗಳ ಹಿಂದೆ ಫ್ಲೋರಿಡಾ – ಟೆಕ್ಸಾಸ್‍ನಲ್ಲಿ ನಡೆದಿದ್ದ ರಸ್ತೆ

ಬಿಜೆಪಿ ಮಾಡ್ತಿರೋದು ಧರ್ಮಯಾತ್ರೆಯಲ್ಲ, ರಾಜಕೀಯ ಯಾತ್ರೆ: ಸಿಎಂ ಸಿದ್ದರಾಮಯ್ಯ

ಧರ್ಮಸ್ಥಳಕ್ಕೆ ಬಿಜೆಪಿ ಕೈಗೊಂಡಿರುವುದು ಧರ್ಮ ಯಾತ್ರೆಯಲ್ಲ ರಾಜಕೀಯ ಯಾತ್ರೆಯೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿಪ್ರಾಯ ಪಟ್ಟರು.  ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ತನಿಖೆ ನಡೆಯುತ್ತಿದೆ. ಬಿಜೆಪಿ ಈಗ ಎನ್ ಐ ಎ ತನಿಖೆಗೆ ಒತ್ತಾಯಿಸುತ್ತಿದ್ದಾರೆ. ಹಾಗಾದರೆ ನಮ್ಮ ಪೊಲೀಸರ

ಮಗು ಹೊಟ್ಟೆಯಲ್ಲಿರುವಾಗಲೇ ವಾಕ್ ಶ್ರವಣ ಸಮಸ್ಯೆ ಪತ್ತೆ  ನಿಜಕ್ಕೂ ದೊಡ್ಡ ಸಾಧನೆ: ಸಿಎಂ

ಮಗು ಹೊಟ್ಟೆಯಲ್ಲಿರುವಾಗಲೇ ಮಗುವಿನ ವಾಕ್ ಮತ್ತು ಶ್ರವಣ ಸಮಸ್ಯೆ ಪತ್ತೆ ಹಚ್ಚಲು ಸಾಧ್ಯವಾಗಿರುವುದು ನಿಜಕ್ಕೂ ದೊಡ್ಡ ಸಾಧನೆ. ಇದಕ್ಕಾಗಿ ಮೈಸೂರಿನ ವಾಕ್ ಮತ್ತು ಶ್ರವಣ ಸಂಸ್ಥೆ ಅಭಿನಂದನೀಯವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಅಖಿಲ ಭಾರತ ವಾಕ್-ಶ್ರವಣ ಸಂಸ್ಥೆ (ಆಯಿಷ್) ಮೈಸೂರು 

ತುಮಕೂರು ದಸರಾ ಮೆರವಣಿಗೆಗೆ 5 ಆನೆ : ಪೂರ್ವಸಿದ್ಧತಾ ಸಭೆಯಲ್ಲಿ ಸಚಿವ ಪರಮೇಶ್ವರ್‌

ಕಳೆದ ವರ್ಷ ತುಮಕೂರು ದಸರಾ ಉತ್ಸವ ಎಲ್ಲ ವರ್ಗ, ಧರ್ಮ, ಜಾತಿಯವರನ್ನೊಳಗೊಂಡು ಆಚರಿಸಿದ್ದರಿಂದ ಯಶಸ್ವಿಯಾಯಿತು, ಈ ಬಾರಿಯ ದಸರಾ ಮೆರವಣಿಗೆಗೆ 5 ಆನೆಗಳನ್ನು ಬಳಸಲಾಗುತ್ತದೆ. ಎಂದು ಗೃಹ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಜಿ.ಪರಮೇಶ್ವರ ಹೇಳಿದ್ದಾರೆ. “ತುಮಕೂರು ದಸರಾ

ಧರ್ಮಸ್ಥಳ ಪ್ರಕರಣ ಬಿಜೆಪಿಯದ್ದೇ ಷಡ್ಯಂತ್ರ:  ಡಿಕೆ ಶಿವಕುಮಾರ್

ಪ್ರಸ್ತುತ ಎಸ್ ಐಟಿ ಮಾಡಿರುವ ತನಿಖೆ ಬಗ್ಗೆ ಅವರಿಗೆ (ಬಿಜೆಪಿ) ಸಮಾಧಾನ ಇಲ್ಲವೇ? ಬಿಜೆಪಿಯಲ್ಲಿ ಆಂತರಿಕವಾಗಿ ಎರಡು ಬಣಗಳು ಕಚ್ಚಾಡುತ್ತಿವೆ. ಇದೆಲ್ಲವೂ ಅವರದ್ದೇ ಷಡ್ಯಂತ್ರ. ಎಸ್ಐಟಿ ರಚನೆಯನ್ನು ಸ್ವಾಗತ ಮಾಡಿದವರೂ ಅವರೇ. ಈಗ ನಾಟಕ ಮಾಡುತ್ತಿರುವವರು ಅವರೇ  ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ 

ಅನ್ನದ ಅಗಳು ಗಂಟಲಿನಲ್ಲಿ ಸಿಲುಕಿ ಕಾರವಾರದ ಯುವಕ ಸಾವು

ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಬಿಣಗಾ ಗ್ರಾಮದಲ್ಲಿ ಊಟ ಮಾಡುತ್ತಿರಬೇಕಾದರೆ ಅನ್ನದ ಅಗಳು ಗಂಟಲಿನಲ್ಲಿ ಸಿಲುಕಿ ಮೃತಪಟ್ಟಿರುವ ಘಟನೆ ನಡೆದಿದೆ. ಅಮಿತ್ ಮಾಳಸೇರ (38) ಮೃತಪಟ್ಟಿರುವ ಯುವಕ. ಅಮಿತ್ ಮನೆಯಲ್ಲಿ ಊಟ ಮಾಡುತ್ತಿದ್ದಾಗ ಅನ್ನದ ಒಂದು ತುತ್ತು ಗಂಟಲಿನಲ್ಲಿ ಸಿಲುಕಿಕೊಂಡಿದೆ.

ನನ್ನ ಊರಿನ ಋಣ ನನ್ನ ಮೇಲೆ ಸದಾ ಇರುತ್ತದೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ಊರಿನ ಋಣ ಯಾವಾಗಲೂ ನನ್ನ ಮೇಲೆ ಇದ್ದೇ ಇರುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.  ವರುಣಾ ವಿಧಾನಸಭಾ ಕ್ಷೇತ್ರದ ಸಿದ್ದರಾಮನಹುಂಡಿಯಲ್ಲಿ ಪಿಎಂಶ್ರೀ ಕರ್ನಾಟಕ ಪಬ್ಲಿಕ್ ಶಾಲೆಯ ನೂತನ ಕಟ್ಟಡವನ್ನು ಉದ್ಘಾಟಿಸಿ ಮಾಧ್ಯಮದವರ ಜೊತೆ ಅವರು  ಮಾತನಾಡಿದರು.‌ ನನ್ನ ಊರಿನ ಶಾಲೆಯಲ್ಲಿ ನಾನು

ಎಲ್ಲಾ ಜಾತಿಯವರ ಅಭಿವೃದ್ಧಿಯಷ್ಟೆ ನಮ್ಮ ಸರ್ಕಾರದ ಗುರಿ: ಸಿಎಂ ಸಿದ್ದರಾಮಯ್ಯ

ಶೂದ್ರ ಶ್ರಮಿಕ ವರ್ಗಗಳಿಗೆ ಆರ್ಥಿಕ‌ ಚೈತನ್ಯ ಕೊಡಲು ಅಂದು ಭಾಗ್ಯಗಳು-ಇಂದು ಗ್ಯಾರಂಟಿಗಳು ವರದನವಾಗಿವೆ. ನಮ್ಮ ಸರ್ಕಾರ ಜಾತಿ ನೋಡಲ್ಲ. ಎಲ್ಲಾ ಜಾತಿಯವರ ಅಭಿವೃದ್ಧಿಯಷ್ಟೆ ನಮ್ಮ ಗುರಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಮೈಸೂರು ಜಿಲ್ಲಾಡಳಿತ ಆಯೋಜಿಸಿದ್ದ ಭಗೀರಥ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ,

ಚಾಮುಂಡೇಶ್ವರಿ ದೇವಾಲಯದ ಪಾವಿತ್ರ್ಯತೆಗೆ ಧಕ್ಕೆಯಾದರೆ ‘ಚಾಮುಂಡೇಶ್ವರಿ ಚಲೋ’ :  ಆರ್.ಅಶೋಕ

ಚಾಮುಂಡೇಶ್ವರಿ ದೇವಾಲಯದ ಪಾವಿತ್ರ್ಯತೆಗೆ ಧಕ್ಕೆಯಾದರೆ ‘ಧರ್ಮಸ್ಥಳ ಚಲೋ’ ಮಾದರಿಯಲ್ಲಿ ‘ಚಾಮುಂಡೇಶ್ವರಿ ಚಲೋ’ ಹೋರಾಟ ಮಾಡಲಾಗುವುದು ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಸರ್ಕಾರಕ್ಕೆ ಎಚ್ಚರಿಕೆ ನೀಡಿದರು. ಚಾಮುಂಡಿ ಬೆಟ್ಟದ ದೇವಾಲಯಕ್ಕೆ ಭೇಟಿ ನೀಡಿ, ದೇವರ ದರ್ಶನ ಪಡೆದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು. ಕಾಂಗ್ರೆಸ್ ಸರ್ಕಾರಕ್ಕೆ