Thursday, September 24, 2026
Menu

ಚಾಮುಂಡೇಶ್ವರಿ ದೇವಾಲಯದ ಪಾವಿತ್ರ್ಯತೆಗೆ ಧಕ್ಕೆಯಾದರೆ ‘ಚಾಮುಂಡೇಶ್ವರಿ ಚಲೋ’ :  ಆರ್.ಅಶೋಕ

ಚಾಮುಂಡೇಶ್ವರಿ ದೇವಾಲಯದ ಪಾವಿತ್ರ್ಯತೆಗೆ ಧಕ್ಕೆಯಾದರೆ ‘ಧರ್ಮಸ್ಥಳ ಚಲೋ’ ಮಾದರಿಯಲ್ಲಿ ‘ಚಾಮುಂಡೇಶ್ವರಿ ಚಲೋ’ ಹೋರಾಟ ಮಾಡಲಾಗುವುದು ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಸರ್ಕಾರಕ್ಕೆ ಎಚ್ಚರಿಕೆ ನೀಡಿದರು. ಚಾಮುಂಡಿ ಬೆಟ್ಟದ ದೇವಾಲಯಕ್ಕೆ ಭೇಟಿ ನೀಡಿ, ದೇವರ ದರ್ಶನ ಪಡೆದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು. ಕಾಂಗ್ರೆಸ್ ಸರ್ಕಾರಕ್ಕೆ ಚಾಮುಂಡೇಶ್ವರಿ ತಾಯಿ ಒಳ್ಳೆಯ ಬುದ್ಧಿಯನ್ನು ನೀಡಲಿ. ಹಿಂದೂಗಳ ಶ್ರದ್ಧಾಕೇಂದ್ರವನ್ನು ಟಾರ್ಗೆಟ್ ಮಾಡುವ ಮನಸ್ಥಿತಿಯನ್ನು ನಿವಾರಿಸಲಿ. ಹಿಂದೂಗಳ ಧಾರ್ಮಿಕ ಕೇಂದ್ರ ಯಾವಾಗಲೂ ರಕ್ಷಣೆಯಾಗಬೇಕು, ಪವಿತ್ರವಾಗಿ ಇರಬೇಕು. ಹಿಂದೂಗಳ ಭಾವನೆಗೆ

ದಸರಾ ಧರ್ಮಾತೀತ, ಜಾತ್ಯಾತೀತ ಹಬ್ಬ: ಬಾನು ಮುಷ್ತಾಕ್  ಉದ್ಘಾಟಿಸುವುದು ಸೂಕ್ತವೆಂದ ಸಿಎಂ

ದಸರಾ ನಾಡ ಹಬ್ಬವನ್ನು ಎಲ್ಲರೂ ಆಚರಿಸುತ್ತಾರೆ. ಆದ್ದರಿಂದ ಇದನ್ನು ಸಾಹಿತಿ, ಹೋರಾಟಗಾರ್ತಿ ಬಾನು ಮುಷ್ತಾಕ್ ಉದ್ಘಾಟನೆ ಮಾಡುವುದು ಸೂಕ್ತವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು. ಅವರು  ಮೈಸೂರಿನ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಮೈಸೂರು ದಸರಾ ಉದ್ಘಾಟಕರ ಆಯ್ಕೆಗೆ ಸಂಬಂಧಿಸಿದಂತೆ ಉನ್ನತ ಮಟ್ಟದ

ಸಂದೇಶ್ ನಾಗರಾಜ್ ಯಾವುದೇ ಕ್ಷೇತ್ರದಲ್ಲಿದ್ದರೂ ಯಶಸ್ಸು ಸಾಧಿಸುತ್ತಾರೆ: ಸಿದ್ದರಾಮಯ್ಯ

ಸಂದೇಶ್ ನಾಗರಾಜ್ ಸ್ನೇಹಮಯಿ ವ್ಯಕ್ತಿತ್ವದವರಾಗಿದ್ದು ಯಾವುದೇ ಕ್ಷೇತ್ರದಲ್ಲಿದ್ದರೂ ಯಶಸ್ಸು ಅವರಿಗೆ ಸಿಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ವಸ್ತು ಪ್ರದರ್ಶನ ಮೈದಾನದಲ್ಲಿ ನಡೆದ ಮಾಜಿ ವಿಧಾನ‌ ಪರಿಷತ್ ಸದಸ್ಯರಾದ ಚಿತ್ರ‌ ನಿರ್ಮಾಪಕ ಸಂದೇಶ್ ನಾಗರಾಜ್ ಅವರ 80ನೇ ವರ್ಷದ ಜನ್ಮ ದಿನ

ರಾಯಚೂರಿನಲ್ಲಿ ಗಣೇಶ ಮೆರವಣಿಗೆ: ವಿದ್ಯುತ್‌ ಸ್ಪರ್ಶದಿಂದ ಯುವಕ ಸಾವು

ರಾಯಚೂರು ತಾಲೂಕಿನ ಗಟ್ಟುಬಿಚ್ಚಾಲಿ ಗ್ರಾಮದಲ್ಲಿ ಗಣೇಶನ ಮೆರವಣಿಗೆ ವೇಳೆ ವಿದ್ಯುತ್ ಸ್ಪರ್ಶಿಸಿ ಯುವಕ ಮೃತಪಟ್ಟಿದ್ದಾನೆ. ನರಸಿಂಹ (22) ಮೃತ ಯುವಕ. ಹನುಮಾಪುರ ಬಳಿ ರಾಜೊಳ್ಳಿಬಂಡಾ ಕಾಲುವೆಯಲ್ಲಿ ಗಣೇಶ ವಿಸರ್ಜನೆಗೆ ಹೊರಟಿದ್ದ ವೇಳೆ ಬೊಲೆರೋ ಪಿಕಪ್ ಮೇಲೆ ಗಣೇಶ ಮೂರ್ತಿ ಹಿಡಿದು ಕುಳಿತಿದ್ದ

ಬಾಲಕಿಯೊಂದಿಗೆ ಮದುವೆ: ಹುಕ್ಕೇರಿಯಲ್ಲಿ ಗ್ರಾ.ಪಂ ಅಧ್ಯಕ್ಷನ ವಿರುದ್ಧ ಪೋಕ್ಸೊ

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಬಸ್ಸಾಪುರ ಗ್ರಾಮದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷನೊಬ್ಬ 15 ವರ್ಷದ ಬಾಲಕಿಯನ್ನು ಮದುವೆಯಾಗಿದ್ದು, ಆತನ ವಿರುದ್ಧ ಪೋಕ್ಸೊ ಕೇಸ್ ದಾಖಲಾಗಿದೆ. ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತವರು ಜಿಲ್ಲೆ ಬೆಳಗಾವಿಯ ಸಚಿವ ಸತೀಶ್‌ ಜಾರಕಿಹೊಳಿ‌ ಪ್ರತಿನಿಧಿಸುವ ಯಮಕನಮರಡಿ ಕ್ಷೇತ್ರದ

ಧರ್ಮದ ಮೇಲೆ ಬಿಜೆಪಿ, ಜೆಡಿಎಸ್ ರಾಜಕಾರಣ: ಡಿಸಿಎಂ 

ಬಿಜೆಪಿ ಮತ್ತು ಜೆಡಿಎಸ್‌ನವರು ಜನತೆಯ ಬದುಕಿನ ಬಗ್ಗೆ ನೋಡುವುದಿಲ್ಲ. ಅವರು ಧರ್ಮ ಮತ್ತು ಭಾವನೆಗಳ ಮೇಲೆ ರಾಜಕಾರಣ ಮಾಡುತ್ತಾರೆ” ಎಂದು ಡಿಸಿಎಂ ಡಿಕೆ ಶಿವಕುಮಾರ್  ಹೇಳಿದ್ದಾರೆ. ಉಡುಪಿಯಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್  ಪ್ರತಿಕ್ರಿಯೆ ನೀಡಿದರು. ಧರ್ಮಸ್ಥಳದಲ್ಲಿ ಜೆಡಿಎಸ್ ಮತ್ತು ಬಿಜೆಪಿ ಸಮಾವೇಶ

ಜನ ನನ್ನನ್ನು ಬಂಡೆ ಎಂದು ಕರೆಯುತ್ತಾರೆ, ನನ್ನನ್ನು ಯಾವ ರೀತಿ ಬೇಕಾದರೂ ಬಳಸಿಕೊಳ್ಳಿ:  ಡಿಕೆ ಶಿವಕುಮಾರ್

“ಕೆಲವರು ನನ್ನನ್ನು ಬಂಡೆ ಎಂದು ಕರೆಯುತ್ತಾರೆ. ಬಂಡೆ ಪ್ರಕೃತಿ, ಕಡಿದರೆ ಆಕೃತಿ, ಪೂಜಿಸಿದರೆ ಸಂಸ್ಕೃತಿ. ನೀವು ಬಂಡೆಯಿಂದ ಮೆಟ್ಟಿಲು, ಆಧಾರ ಸ್ತಂಭ, ಜಲ್ಲಿ, ವಿಗ್ರಹ ಮಾಡಬಹುದು. ಅದೇ ರೀತಿ ನೀವು ನನ್ನನ್ನು ಹೇಗೆ ಬೇಕಾದರೂ ಬಳಸಿಕೊಳ್ಳಬಹುದು” ಎಂದು ಡಿಸಿಎಂ ಡಿಕೆ ಶಿವಕುಮಾರ್ 

ಭರ್ತಿಯಾಗುತ್ತಿವೆ ಕಬಿನಿ, ತಾರಕ ಜಲಾಶಯ: ನದಿಪಾತ್ರದ ಜನರಿಗೆ ಸ್ಥಳಾಂತರ ಸೂಚನೆ

ಮೈಸೂರಿನಲ್ಲಿ ಕಬಿನಿ ಹಾಗೂ ತಾರಕ ಜಲಾಶಯಗಳು ಭರ್ತಿಯಾಗಿದ್ದು, ನದಿ ಪಾತ್ರದ ಜನರು ಎಚ್ಚರಿಕೆಯಿಂದ ಇರುವಂತೆ ಸೂಚಿಸಲಾಗಿದೆ. ಕೇರಳದ ವಯನಾಡುವಿನಲ್ಲಿ ಹೆಚ್ಚು ಮಳೆಯಾಗುತ್ತಿರುವುದರಿಂದ, ಹೆಚ್​.ಡಿ.ಕೋಟೆ ತಾಲೂಕಿನಲ್ಲಿರುವ ಕಬಿನಿ ಜಲಾಶಯಕ್ಕೆ ಹೆಚ್ಚಿನ ಪ್ರಮಾಣದಲ್ಲಿ ನೀರು ಹರಿದುಬರುತ್ತಿದ್ದು, ಹೊರ ಹರಿವು ಹೆಚ್ಚಾಗುತ್ತಿದೆ. ಹೀಗಾಗಿ ನದಿ ಪಾತ್ರದ

ಡಾ. ಶ್ರೀ ಮುಮ್ಮಡಿ ನಿರ್ವಾಣ ಮಹಾಸ್ವಾಮಿಗಳ ನೇತೃತ್ವದಲ್ಲಿ ಗುರು ಕೋರಣ್ಯ

ಡಾ. ಶ್ರೀ ಮುಮ್ಮಡಿ ನಿರ್ವಾಣ ಮಹಾಸ್ವಾಮಿಗಳ ನೇತೃತ್ವದಲ್ಲಿ ದೇಗುಲಮಠದಿಂದ ಕನಕಪುರ ನಗರದಲ್ಲಿ ಎರಡು ದಿನ ನಡೆದ ಗುರು ಕೋರಣ್ಯದಲ್ಲಿ ಶ್ರೀ ದೇಗುಲ ಮಠದ ಕಿರಿಯ ಶ್ರೀ ಚನ್ನಬಸವ ಮಹಾಸ್ವಾಮಿಗಳು ಹಾಗೂ ತೋಟಹಳ್ಳಿ ಮಠದ ಶ್ರೀ ಬಸವಪ್ರಭು ಮಹಾಸ್ವಾಮಿಗಳು ಮತ್ತು ಮರಳವಾಡಿ ಮಠದ

Accident deaths- ದಕ್ಷಿಣಕನ್ನಡದಲ್ಲಿ ರಸ್ತೆ ಅಪಘಾತಕ್ಕೆ ಐವರು ಬಲಿ

ದಕ್ಷಿಣ ಕನ್ನಡದ ತಲಪಾಡಿ ಟೋಲ್ ಗೇಟ್ ಬಳಿ ನಡೆದ ರಸ್ತೆ ಅಪಘಾತದಲ್ಲಿ 5 ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇಂದು ಮಧ್ಯಾಹ್ನ ಕೆಸಿ ರೋಡ್‌ನಿಂದ ಬರುತ್ತಿದ್ದ ರಿಕ್ಷಾ ಮತ್ತು ಬಸ್ ಮಧ್ಯೆ ಅಪಘಾತ ನಡೆದಿದ್ದು, ರಿಕ್ಷಾದಲ್ಲಿದ್ದ ಕೆಸಿ ರೋಡ್‌ನ ಐವರು ಪ್ರಾಣ ಕಳೆದುಕೊಂಡಿದ್ದಾರೆ.