ಜಿಲ್ಲಾ ಸುದ್ದಿ
97 ಲಕ್ಷ ರೂ. ಸಮೇತ ಚಾಲಕ ಪರಾರಿ: ಕೆಲವೇ ಗಂಟೆಗಳಲ್ಲಿ ಬಂಧಿಸಿದ ಚಳ್ಳಕೆರೆ ಪೊಲೀಸ್
ಬಾಡಿಗೆ ಕಾರು ಚಾಲಕನೊಬ್ಬ ಸಿಬಿಐ ನಿವೃತ್ತ ಎಸ್ಪಿಯನ್ನು ಯಾಮಾರಿಸಿ 97 ಲಕ್ಷ ರೂ. ಸಮೇತ ಪರಾರಿಯಾಗಿದ್ದು, ಕೆಲವೇ ಗಂಟೆಯಲ್ಲಿ ಚಳ್ಳಕೆರೆ ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನವರರಾದ ಸಿಬಿಐನ ನಿವೃತ್ತ ಎಸ್ಪಿ ಗುರುಪ್ರಸಾದ್ ಪತ್ನಿ ಲಲಿತಾ ಜತೆ ಬಾಡಿಗೆ ಕಾರಿನಲ್ಲಿ ಬಳ್ಳಾರಿಗೆ ಹೋಗಿ ಜಮೀನು ಮಾರಾಟ ಮಾಡಿ 97ಲಕ್ಷ ರೂ. ಪಡೆದಿದ್ದರು. ಅದೇ ಕಾರಲ್ಲಿ ವಾಪಸ್ ಬೆಂಗಳೂರಿಗೆ ಹೊರಟಿದ್ದಾಗ ಮಧ್ಯಾಹ್ನ ಚಳ್ಳಕೆರೆ ಪಟ್ಟಣದ ಹೋಟೆಲ್ ಬಳಿ ಊಟ ಮಾಡಿದ್ದರು. ಬೇಗನೆ ಊಟ ಮುಗಿಸಿದ
Suicide death- ಬೀದರ್ ಸಾರಿಗೆ ಸಂಸ್ಥೆ ಬಸ್‌ನಲ್ಲೇ ಚಾಲಕ ಆತ್ಮಹತ್ಯೆ: ಮ್ಯಾನೇಜರ್ ಕಿರುಕುಳ ಕಾರಣವೆಂದ ಕುಟುಂಬ
ರಾಜ್ಯ ಸಾರಿಗೆ ಸಂಸ್ಥೆಯ ಬೀದರ್ ಡಿಪೋ ನಂ.1ರಲ್ಲಿ ಕಾರ್ಯನಿರ್ವಹಿಸುತ್ತಿದ್ದ ಬಸ್ ಚಾಲಕರೊಬ್ಬರು ಮ್ಯಾನೇಜರ್ ಕಿರುಕುಳಕ್ಕೆ ನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆಣದೂರು ಗ್ರಾಮದ ನಿವಾಸಿ ರಾಜಪ್ಪ (59) ಬಳ್ಳಾರಿ–ಬೀದರ್ ಮಾರ್ಗದ ಸ್ಲಿಪರ್ ಕೋಚ್ ಬಸ್‌ನಲ್ಲಿ ಚಾಲಕರಾಗಿ ಸೇವೆ ಸಲ್ಲಿಸುತ್ತಿದ್ದರು. ಅವರು ಕರ್ತವ್ಯ ನಿರ್ವಹಿಸುತ್ತಿದ್ದ
ಶಹಾಪುರ ವಸತಿ ಶಾಲೆ ಶೌಚಾಲಯದಲ್ಲೇ ವಿದ್ಯಾರ್ಥಿನಿ ಹೆರಿಗೆ
ಯಾದಗಿರಿ ಜಿಲ್ಲೆಯ ಶಹಾಪುರ ನಗರದ ಸರ್ಕಾರಿ ವಸತಿ ಶಾಲೆಯ ಶೌಚಾಲಯದಲ್ಲೇ ವಿದ್ಯಾರ್ಥಿನಿಯೊಬ್ಬಳು ಮಗುವಿಗೆ ಜನ್ಮ ನೀಡಿದ್ದು, ವ್ಯವಸ್ಥೆಗೆ ಸಂಬಂಧಿಸಿದಂತೆ ವ್ಯಾಪಕ ಆತಂಕಕ್ಕೆ ಕಾರಣವಾಗಿದೆ. ವಿಷಯ ತಿಳಿದು ಆತಂಕಗೊಂಡ ಮಕ್ಕಳ ಪೋಷಕರು ವಸತಿ ಶಾಲೆಯ ಬಳಿ ಸೇರಿದ್ದಾರೆ. ವಿದ್ಯಾರ್ಥಿನಿ ಗರ್ಭಿಣಿ ಎನ್ನುವ ವಿಚಾರವನ್ನು
ನೆಲಮಂಗಲದಲ್ಲಿ ರೈಲು ಡಿಕ್ಕಿಯಾಗಿ ಬಾಲಕ ಸಾವು
ನೆಲಮಂಗಲ ತಾಲೂಕಿನ ಅಲ್ಪಯ್ಯನಪಾಳ್ಯದಲ್ಲಿ ಹಳಿ ದಾಟುವ ವೇಳೆ ತಂದೆ-ಮಗನಿಗೆ ರೈಲು ಡಿಕ್ಕಿಯಾಗಿದ್ದು, ಬಿಹಾರ ಮೂಲದ ಸೌರವ್(8) ಮೃತಪಟ್ಟಿದ್ದಾನೆ. ಆತನ ತಂದೆ ನಿತಿನ್(40) ಗಂಭೀರ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ದಾಬಸ್ ಪೇಟೆಯಿಂದ ಅಲ್ಪಯ್ಯನಪಾಳ್ಯಕ್ಕೆ ತೆರಳುವಾಗ ಈ ದುರಂತ ನಡೆದಿದೆ. ಯಶವಂತಪುರ ರೈಲ್ವೆ
Accident Deaths: ಹಿರೇಬಾಗೇವಾಡಿಯಲ್ಲಿ ರಸ್ತೆ ಅಪಘಾತಕ್ಕೆ ಇಬ್ಬರು ಬಲಿ
ಬೆಳಗಾವಿ ಹಿರೇಬಾಗೇವಾಡಿ ಬಳಿಯ ಬಡೇಕೊಳ್ಳ ಮಠದ ಘಾಟ್‌ನಲ್ಲಿ ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ನಾಲ್ಕರಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಇಬ್ಬರು ಮೃತಪಟ್ಟಿದ್ದಾರೆ. ಹುಬ್ಬಳ್ಳಿಯಿಂದ ಪುಣೆಗೆ ಸಂಚರಿಸುತ್ತಿದ್ದ ಬಸ್ ಚಾಲಕನ ಅಜಾಗರೂಕತೆಯಿಂದಾಗಿ ಈ ದುರಂತ ನಡೆದಿದೆ ಎನ್ನಲಾಗಿದೆ. ಬಸ್‌ನಲ್ಲಿ 12 ಪ್ರಯಾಣಿಕರಿದ್ದರು. ದುರ್ಘಟನೆಯಲ್ಲಿ ಮಹಿಳೆ
ದಾವಣಗೆರೆ ಶಿಕ್ಷಕಿಯಿಂದ 22.40 ಲಕ್ಷ ರೂ. ಸುಲಿಗೆ : ಸೈಬರ್ ವಂಚಕ ಅರೆಸ್ಟ್
ದಾವಣಗೆರೆಯ ಶಾಲಾ ಶಿಕ್ಷಕಿಯೊಬ್ಬರನ್ನು ಡಿಜಿಟಲ್ ಅರೆಸ್ಟ್ ಎಂದು ಬೆದರಿಸಿ 22.40 ಲಕ್ಷ ರೂ. ಸುಲಿಗೆ ಮಾಡಿದ್ದ ಆರೋಪದಲ್ಲಿ ಪೊಲೀಸರು ಒಬ್ಬ ಆರೋಪಿಯನ್ನು ಬಂಧಿಸಿದ್ದಾರೆ. ಹಾಸನದ ಬೇಲೂರು ತಾಲೂಕಿನ ಕೋರಟಿಕೆರೆ ಗ್ರಾಮದ ಅರುಣ್ ಕುಮಾರ್(35) ಬಂಧಿತ. ಬಂಧಿತನ ಬ್ಯಾಂಕ್ ಖಾತೆಯನ್ನು ಫ್ರೀಝ್ ಮಾಡಲಾಗಿದೆ.
ಚನ್ನರಾಯಪಟ್ಟಣದಲ್ಲಿ 15ಕೋಟಿ ರೂ. ಮೌಲ್ಯದ 27 ಎಕರೆ ಅರಣ್ಯ ಒತ್ತುವರಿ ತೆರವು
ಅರಣ್ಯಾಧಿಕಾರಿಗಳು ಹಾಸನದ ಚನ್ನರಾಯಪಟ್ಟಣ ತಾಲೂಕು ಬಾಗೂರು ಹೋಬಳಿಯ ಮಡಬ ಗ್ರಾಮದಲ್ಲಿ 27 ಎಕರೆ ಅರಣ್ಯ ಒತ್ತುವರಿ ತೆರವು ಮಾಡಿಸಿದ್ದಾರೆ. ಅರಣ್ಯ ಸಚಿವ ಈಶ್ವರ ಖಂಡ್ರೆ ಸೂಚನೆ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಂಡಿದ್ದಾರೆ. ಮಡಬ ಗ್ರಾಮದ ಸರ್ವೆ ನಂ. 27ರಲ್ಲಿ ಸುಮಾರು 10-15
ಕಲಬುರಗಿಯಲ್ಲಿ ಶಾಲಾ ಪುಸ್ತಕ ದಾಸ್ತಾನಿಗೆ ಬೆಂಕಿ
ಕಲಬುರಗಿ ಜಿಲ್ಲೆಯ ಆಳಂದ ಪಟ್ಟಣದಲ್ಲಿ ಶಾಲೆಗಳಿಗೆ ಸರಬರಾಜು ಮಾಡಲು ಇಡಲಾಗಿದ್ದ ಪುಸ್ತಕ ದಾಸ್ತಾನಿಗೆ ಬೆಂಕಿ ಬಿದ್ದು ಸುಟ್ಟು ಹೋಗಿದೆ. ಲಕ್ಷಾಂತರ ರೂ. ಮೌಲ್ಯದ ಪುಸ್ತಕಗಳು ಹಾಗೂ ಹಳೆಯ ಶಾಲಾ ಸಮವಸ್ತ್ರಗಳು ಬೆಂಕಿಗಾಹುತಿಯಾಗಿವೆ. 4ನೇ ತರಗತಿಯಿಂದ 8ನೇ ತರಗತಿ ಕನ್ನಡ ಮಾಧ್ಯಮದ ಪುಸ್ತಕಗಳು
ಮೈಸೂರು ವಿವಿಗೆ 10 ಲಕ್ಷ, ರಾಮಕೃಷ್ಣ ಆಶ್ರಮಕ್ಕೆ 5 ಲಕ್ಷ ರೂ. ಎಸ್.ಎಂ.ಕೃಷ್ಣ ದತ್ತಿನಿಧಿ ಡಿಡಿ ಹಸ್ತಾಂತರ
ಮೈಸೂರು: ಮಾಜಿ ಮುಖ್ಯಮಂತ್ರಿಗಳು ಹಾಗೂ ಹಿರಿಯ ಮುತ್ಸದ್ದಿ ಎಸ್.ಎಂ.ಕೃಷ್ಣರವರ ಹೆಸರಿನಲ್ಲಿ ಸ್ಥಾಪಿಸಿರುವ ದಿವ್ಯ ಚೇತನ ಎಸ್.ಎಂ.ಕೃಷ್ಣ ದತ್ತಿನಿಧಿ ಡಿಡಿಯನ್ನು ಶಾಸಕರುಗಳಾದ ಕೆ.ಎಂ.ಉದಯ್ ಹಾಗೂ ದಿನೇಶ್ ಗೂಳಿಗೌಡ ರಾಮಕೃಷ್ಣ ಆಶ್ರಮದಲ್ಲಿ ಹಸ್ತಾಂತರಿಸಿದರು. ಮೈಸೂರು ವಿಶ್ವ ವಿದ್ಯಾನಿಲಯದಲ್ಲಿ ಪ್ರಥಮ ಸ್ಥಾನ ಪಡೆದ ಇಬ್ಬರು ವಿದ್ಯಾರ್ಥಿಗಳಿಗೆ
ನಾಲ್ಕು ತಿಂಗಳಲ್ಲಿ ಗ್ರೇಟರ್ ಬೆಂಗಳೂರು ಚುನಾವಣೆಗೆ ಸಿದ್ಧತೆ: ಡಿ.ಕೆ.ಶಿವಕುಮಾರ್
ಮುಂದಿನ ನಾಲ್ಕು ತಿಂಗಳಲ್ಲಿ ಗ್ರೇಟರ್ ಬೆಂಗಳೂರು ಚುನಾವಣೆಗೆ ಸಿದ್ಧತೆ ನಡೆಸಲಾಗುವುದು. ಮೊದಲು ಮೀಸಲಾತಿ ಹಾಗೂ ವಲಯವಾರು ವಿಭಾಗಗಳನ್ನು ರಚಿಸಲಾಗುವುದು. ಚುನಾವಣೆ ವಿಳಂಬ ಮಾಡುವುದರಲ್ಲಿ ಯಾವುದೇ ಅರ್ಥ ವಿಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಮೈಸೂರಿನ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯೆ




