Menu

ಮೂರು ಮಕ್ಕಳ ಜೊತೆ ನದಿಗೆ ಹಾರಿ ತಾಯಿ ಆತ್ಮಹತ್ಯೆ

ಮೂರು ಮಕ್ಕಳ ಜೊತೆ ನದಿಗೆ ಹಾರಿ ತಾಯಿ ಆತ್ಮಹತ್ಯೆ ಮಾಡಿಕೊಂಡ ಆಘಾತಕಾರಿ ಘಟನೆ ಬೆಳಗಾವಿ ಜಿಲ್ಲೆಯಲ್ಲಿ ನಡೆದಿದೆ. ಬೆಳಗಾವಿ ಜಿಲ್ಲೆಯ ರಾಯಭಾಗ ತಾಲೂಕಿನ ಚಿಂಚಲಿ ಗ್ರಾಮದಲ್ಲಿ ತಾಯಿ ಶಾರದಾ, ಮಕ್ಕಳಾದ ಅಮೃತಾ, ಆದರ್ಶ ಮತ್ತು ಅನುಷ್ಕಾ ಮೃತಪಟ್ಟಿದ್ದಾರೆ. ಮೂರು ಮಕ್ಕಳೊಂದಿಗೆ ತಾಯಿ ಕೃಷ್ಣ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತರ ಶವಗಳಿಗೆ ಶೋಧ ಕಾರ್ಯ ನಡೆದಿದ್ದು, ಆತ್ಮಹತ್ಯೆಗೆ ಕಾರಣ ತಿಳಿದು

ಮಠ ಜಾಗ ತೆರವುಗೊಳಿಸಿದ ಮಸೀದಿ ಸದಸ್ಯರು, ಬಿಗುವಿನ ವಾತಾವರಣ, ಪೊಲೀಸ್‌ ಬಂದೋಬಸ್ತ್‌

ಚಿಕ್ಕಮಗಳೂರು ನಗರದ ಹನುಮಂತಪ್ಪ ವೃತ್ತದ ಬಳಿ ಕೋರ್ಟ್ ಆದೇಶವಿದೆ ಎಂದು ಹೇಳಿಕೊಂಡು ಸ್ಥಳೀಯ ಆಡಳಿತದ ಗಮನಕ್ಕೆ ತರದೆ ಮಠದ ಜಾಗವನ್ನು ಮಸೀದಿ ಸದಸ್ಯರು ತೆರವು ಮಾಡಿದ ಘಟನೆ ನಡೆದಿದ್ದು, ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣಗೊಂಡಿದೆ. ಬಡಾಮಕಾನ್ ಜಾಮೀಯ ಮಸೀದಿ ಕಮಿಟಿಯ ಸದಸ್ಯರು

ಪ್ರೇಯಸಿಯ ಕತ್ತು ಸೀಳಿ ಕೊಲೆಗೈದು ಪ್ರೇಮಿ ಆತ್ಮಹತ್ಯೆ

ಮದುವೆಗೆ ನಿರಾಕರಿಸಿದ್ದ ಪ್ರೇಯಸಿಯ ಕತ್ತು ಸೀಳಿ ಪಾಗಲ್ ಪ್ರೇಮಿ ಕೊಲೆಗೈದು ಆತ್ಮಹತ್ಯೆ ಮಾಡಿಕೊಂಡ ಭೀಕರ ಘಟನೆ ಬೆಳಗಾವಿ ಜಿಲ್ಲೆಯ ಶಹಾಪುರದ ನವಿ ಗಲ್ಲಿಯಲ್ಲಿ ನಡೆದಿದೆ. ಯಳ್ಳೂರು ಗ್ರಾಮದ ಪ್ರಶಾಂತ ಯಲ್ಲಪ್ಪ ಕುಂಡೇಕರ (29) ಪ್ರೇಯಸಿ ಕೊಂದು ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಪೇಂಟಿಂಗ್

ಚಿತ್ರದುರ್ಗ ರಸ್ತೆ ಅಪಘಾತದಲ್ಲಿ ಮೂವರ ಸಾವು

ಚಿತ್ರದುರ್ಗ ತಾಲೂಕಿನ ಸಿಬಾರ ಗ್ರಾಮದ ಬಳಿ ಬುಧವಾರ ಬೆಳಗ್ಗೆ ನಡೆದ ರಸ್ತೆ ಅಪಘಾತದಲ್ಲಿ ಮೂವರು ಮೃತಪಟ್ಟಿ ದ್ದಾರೆ. ಹೆದ್ದಾರಿ ಬದಿ ನಿಂತಿದ್ದ ಲಾರಿಗೆ ಟ್ರಕ್​ ಡಿಕ್ಕಿಯಾಗಿ ಈ ದುರಂತ ಸಂಭವಿಸಿದೆ. ಲಾರಿ ಚಾಲಕ ಹಾಗೂ ಕಲ್ಲಂಗಡಿ ಸಾಗಿಸುತ್ತಿದ್ದ ಟ್ರಕ್‌ನಲ್ಲಿದ್ದ ಇಬ್ಬರು ಪ್ರಾಣ

ಕನಕಪುರದಲ್ಲಿ ಪೊಲೀಸರ ಮೇಲೆ ಹಲ್ಲೆಗೈದ ಪುಂಡರ ಬಂಧನ

ಕನಕಪುರ ತಾಲೂಕಿನ ಕುರುಬಳ್ಳಿದೊಡ್ಡಿ ಗ್ರಾಮದ ಬಳಿ ರಾಮನಗರ ಅರಣ್ಯ ಪ್ರದೇಶದಲ್ಲಿ ಪಾರ್ಟಿ ಮಾಡುತ್ತಿರುವುದನ್ನು ಪ್ರಶ್ನಿಸಿದ್ದಕ್ಕೆ ಅರಣ್ಯ ಇಲಾಖೆ ಸಿಬ್ಬಂದಿ ಹಾಗೂ ಪೊಲೀಸರ ಮೇಲೆ ರೌಡಿಶೀಟರ್ ಸೇರಿ ಪುಂಡರ ಗುಂಪೊಂದು ಹಲ್ಲೆ ನಡೆಸಿದೆ. ಆರೋಪಿಗಳಾದ ರೌಡಿಶೀಟರ್ ಕಿರಣ್, ಗುರುಪ್ರಸಾದ್, ಸುಂದರ್ ಎಂಬವರನ್ನು ಸಾತನೂರು

ಅಮ್ಯೂಸ್ ಮೆಂಟ್ ಪಾರ್ಕ್‌ಗೆ ಶಿವಸಮುದ್ರ ಸೂಕ್ತ ಸ್ಥಳ

ಮಂಡ್ಯ ಜಿಲ್ಲೆಯ  ವಿಶ್ವ ಪ್ರಸಿದ್ಧ ಕೃಷ್ಣರಾಜಸಾಗರ ಜಲಾಶಯ (ಕೆಆರ್‌ಎಸ್) ಹತ್ತಿರ ಡಿಸ್ನಿಲ್ಯಾಂಡ್ ಮಾದರಿಯಲ್ಲಿ ಅಮ್ಯೂಸ್ ಮೆಂಟ್ ಪಾರ್ಕ್ ನಿರ್ಮಿಸಲು ಸರ್ಕಾರ ಮುಂದಾಗಿದೆ. ಆದರೆ, ಮಂಡ್ಯ ರೈತ ಸಂಘ ಸರ್ಕಾರದ ಈ ನಿರ್ಧಾರ ವಿರೋಧ ಮಾಡುತ್ತಿದೆ. ರೈತರ ‘ಕನ್ನಂಬಾಡಿ ಕಟ್ಟೆ’ ಬಗ್ಗೆಯ ಕಾಳಜಿ

ಹುಣಸೂರು ತೋಟದ ಮನೆಯಲ್ಲಿ ವೃದ್ಧ ದಂಪತಿಯ ಹತ್ಯೆ

ಹುಣಸೂರು ತಾಲೂಕಿನ ನಾಡಪ್ಪನಹಳ್ಳಿಯ ತೋಟದ ಮನೆಯಲ್ಲಿ ಹಾಡಹಗಲೇ ಕಲ್ಲಿನಿಂದ ಜಜ್ಜಿ ವೃದ್ಧ ದಂಪತಿಯನ್ನು ಕೊಲೆ ಮಾಡಿರುವುದು ಪತ್ತೆಯಾಗಿದೆ. ನಾಡಪ್ಪನಹಳ್ಳಿ ಗ್ರಾಮದ ರಂಗಸ್ವಾಮಿಗೌಡ(65) ಹಾಗೂ ಪತ್ನಿ ಶಾಂತಮ್ಮ (52) ಕೊಲೆಯಾದವರು. ದಂಪತಿಗೆ ಇಬ್ಬರು ಗಂಡು ಮಕ್ಕಳು ಮತ್ತು ಒಬ್ಬ ಮಗಳಿದ್ದಾರೆ. ಮಗ ದೇವರಾಜ್

ಮುಖ್ಯಮಂತ್ರಿ ಹುದ್ದೆಯಿಂದ ಸಿದ್ದರಾಮಯ್ಯ ಕೆಳಗಿಳಿಸುವುದು ಕಷ್ಟ: ಕೋಡಿಮಠದ ಶ್ರೀ ಭವಿಷ್ಯ

ಯಾದಗಿರಿ:ರಾಜ್ಯದ ಮುಖ್ಯಮಂತ್ರಿ ಸ್ಥಾನದಿಂದ ಸಿದ್ದರಾಮಯ್ಯನವರನ್ನು ಕೆಳಗಿಳಿಸುವುದು ಕಷ್ಟ. ಸ್ವತಃ ಅವರೇ ಅಧಿಕಾರ ತ್ಯಜಿಸಬೇಕಾಗುತ್ತದೆ ಎಂದು ಕೋಡಿಮಠದ ಡಾ.ಶಿವಯೋಗಿ ಶಿವಾನಂದ ಸ್ವಾಮೀಜಿ ಅವರು ಭವಿಷ್ಯ ನುಡಿದಿದ್ದಾರೆ. ಮುಂದಿನ ಮುಖ್ಯಮಂತ್ರಿ ಯಾರಾಗಲಿದ್ದಾರೆ ಡಿಕೆ ಶಿವಕುಮಾರ್ ಜೊತೆ ಅಧಿಕಾರ ಹಂಚಿಕೆ ಯಾವಾಗ ಎಂಬ ಚರ್ಚೆಗಳು ನಡೆಯುತ್ತಿರುವ

ಉದ್ಯಮಿಯ ಅಪಹರಿಸಿ ಹಣಕ್ಕೆ ಬೇಡಿಕೆ: ಸತೀಶ್‌ ಜಾರಕಿಹೊಳಿ ಆಪ್ತೆಯ ಬಂಧನ

ಐದು ಕೋಟಿ ರೂ. ಹಣಕ್ಕಾಗಿ ರಿಯಲ್ ಎಸ್ಟೇಟ್ ಉದ್ಯಮಿಯನ್ನು ಅಪಹರಣ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಸತೀಶ್ ಜಾರಕಿಹೊಳಿ ಆಪ್ತೆಯನ್ನು ಘಟಪ್ರಭಾ ಪೊಲೀಸರು ಅರೆಸ್ಟ್‌ ಮಾಡಿದ್ದಾರೆ. ಮೂಡಲಗಿ ತಾಲೂಕಿನ ರಾಜಾಪುರ ಗ್ರಾಮದ ಉದ್ಯಮಿ ಬಸವರಾಜ ಅಂಬಿ ಅವರನ್ನು ಫೆ.14ರಂದು ಆರೋಪಿಗಳು ಅಪಹರಿಸಿ

ಬಂಗಾರಪೇಟೆ ಕುಪ್ಪನಹಳ್ಳಿ ಬಳಿ ಕಾರು ಬೈಕ್‌ ಡಿಕ್ಕಿಯಾಗಿ ನಾಲ್ವರ ಸಾವು

ಬಂಗಾರಪೇಟೆ ತಾಲೂಕಿನ ಕುಪ್ಪನಹಳ್ಳಿ ಬಳಿಯ ಚೆನ್ನೈ-ಬೆಂಗಳೂರು ಎಕ್ಸ್‌ಪ್ರೆಸ್‌ ಹೈವೆಯಲ್ಲಿ ಕಾರು ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿ ಸ್ಥಳದಲ್ಲೇ ನಾಲ್ಕು ಮಂದಿ ಅಸು ನೀಗಿದ್ದರೆ, ನಾಲ್ವರಿಗೆ ಗಂಭೀರ ಗಾಯವಾಗಿದೆ. ಗಾಯಾಳುಗಳನ್ನು ಕೋಲಾರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾರಿನಲ್ಲಿದ್ದ ಕೆಜಿಎಫ್ ತಾಲೂಕಿನ ಕಮ್ಮಸಂದ್ರ