Thursday, September 17, 2026
Menu

ಕೊಡಗಿನಲ್ಲಿ ಮತ್ತೆ ಮಳೆ ಬಿರುಸು: ಹಾರಂಗಿಯಿಂದ 5,365 ಕ್ಯೂಸೆಕ್‌ ನದಿಗೆ

ಕೊಡಗಿನಲ್ಲಿ ಮಳೆ ಮತ್ತೆ ಬಿರುಸು ಪಡೆದುಕೊಂಡಿದ್ದು, ಹಾರಂಗಿ ಜಲಾಶಯದಿಂದ 5,365 ಕ್ಯೂಸೆಕ್‌ ನೀರನ್ನು ಕಾವೇರಿ ನದಿಗೆ ಬಿಡಲಾಗಿದೆ. ಬುಧವಾರದಿಂದ ಜಿಲ್ಲೆಯಾದ್ಯಂತ ತೀವ್ರ ಗಾಳಿ- ಮಳೆ ಸುರಿಯುತ್ತಿದ್ದು, ಕಾವೇರಿ ನದಿಯ ನೀರಿನ ಮಟ್ಟವೂ ಏರಿಕೆಯಾಗಿದೆ. ಹಾರಂಗಿ ಜಲಾಶಯಕ್ಕೆ ಒಳಹರಿವು ಹೆಚ್ಚಿದೆ. ಕಾವೇರಿ ನದಿಯ ತಗ್ಗು ಪ್ರದೇಶಗಳಲ್ಲಿ ಮುನ್ನೆಚ್ಚರಿಕೆ ವಹಿಸಲಾಗಿದೆ. ಹಾರಂಗಿ ಜಲಾನಯನ ಪ್ರದೇಶದಲ್ಲೂ ಉತ್ತಮ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜಲಾಶಯಕ್ಕೆ 4,613 ಕ್ಯೂಸೆಕ್ಸ್ ನೀರು ಹರಿದು ಬರುತ್ತಿದೆ. ಒಳಹರಿವು ಹೆಚ್ಚಿದ ಕಾರಣ 5,365

ಚಿತ್ರದುರ್ಗ ಬರ ಪೀಡಿತ ಜಿಲ್ಲೆ ಎಂದು ಘೋಷಣೆ ಮಾಡಿ: ಆ‌ರ್‌ ಅಶೋಕ 

ಚಿತ್ರದುರ್ಗ ಜಿಲ್ಲೆಯಲ್ಲಿ ರೈತರ ಹೊಲಗಳಿಗೆ ಭೇಟಿ ನೀಡಿ ಬರ ಪರಿಸ್ಥಿತಿಯನ್ನು ಪರಿಶೀಲಿಸಿದ ಪ್ರತಿಪಕ್ಷ ನಾಯಕ ಆರ್.ಅಶೋಕ, ಚಿತ್ರದುರ್ಗ ಜಿಲ್ಲೆಯನ್ನು ಬರಗಾಲ ಪೀಡಿತ ಜಿಲ್ಲೆ ಎಂದು ಘೋಷಣೆ ಮಾಡಿ ರೈತರಿಗೆ ಪರಿಹಾರ ವಿತರಣೆ ಮಾಡಬೇಕು ಎಂದು ಆಗ್ರಹಿಸಿದ್ದಾರೆ. ಹಿರಿಯೂರು ತಾಲೂಕಿನ ಸೂರಗೊಂಡನಹಳ್ಳಿಯಲ್ಲಿ ಸೂರ್ಯಕಾಂತಿ

ರಾಹುಲ್ ಗಾಂಧಿ ವಂಶ ಧ್ವಂಸ ಬೆದರಿಕೆ: ಶಾಸಕ ಯಶ್ ಪಾಲ್ ಸುವರ್ಣ ವಿರುದ್ಧ ಪ್ರಕರಣ

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ದ್ವೇಷ ಭಾಷಣ ಮಾಡಿರುವ ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ವಿರುದ್ಧ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಕಾಕ್ರೋಚ್‌ ಜನತಾ ಪಾರ್ಟಿ (ಸಿಜೆಪಿ) ಹಾಗೂ ಕಾಂಗ್ರೆಸ್‌ ವಿರುದ್ಧ

ಮಂಡ್ಯ-ಮೈಸೂರಲ್ಲಿ ಕಾವೇರಿ ಕಿಚ್ಚು: ಪ್ರತಿಭಟನೆ, ರಸ್ತೆ ತಡೆ

ತಮಿಳುನಾಡಿಗೆ ನೀರು ಬಿಡುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ ಆದೇಶದ ಹಿನ್ನೆಲೆಯಲ್ಲಿ ಕಾವೇರಿ ಕೊಳ್ಳದ ರೈತರು ರಸ್ತೆ ತಡೆ, ಅರೆ ಬೆತ್ತಲೆ ಪ್ರತಿಭಟನೆ ನಡೆಸಿ ಆಕ್ರೋಶ ಹೊರ ಹಾಕಿದರು. ಮೈಸೂರು ಜಿಲ್ಲಾ ರೈತ ಸಂಘದ ಬುಧವಾರ ಮೈಸೂರಿನ ಹಳೆ ಕೋರ್ಟ್ ಮುಂಭಾಗದಲ್ಲಿರುವ

ಚಿಕ್ಕಬಳ್ಳಾಪುರ ಎಸ್‌ಎಂಎಸ್‌ಐಎಂಎಸ್‌ಆರ್‌ನಲ್ಲಿ ನಾಲ್ಕು ಸೂಪರ್ ಸ್ಪೆಷಾಲಿಟಿ ವಿಭಾಗ ಉದ್ಘಾಟಿಸಿದ ಸದ್ಗುರು ಶ್ರೀ ಮಧುಸೂದನ ಸಾಯಿ

ತಮ್ಮ 47ನೇ ಜನ್ಮದಿನದ ಅಂಗವಾಗಿ ಸದ್ಗುರು ಶ್ರೀ ಮಧುಸೂದನ ಸಾಯಿ ಅವರು  ಚಿಕ್ಕಬಳ್ಳಾಪುರದ ಮುದ್ದೇನಹಳ್ಳಿಯ ಸತ್ಯ ಸಾಯಿ ಗ್ರಾಮದಲ್ಲಿರುವ   ‘ಶ್ರೀ ಮಧುಸೂದನ ಸಾಯಿ ವೈದ್ಯಕೀಯ ವಿಜ್ಞಾನ ಮತ್ತು ಸಂಶೋಧನಾ ಕೇಂದ್ರ’ದಲ್ಲಿ (ಎಸ್‌ಎಂಎಸ್‌ಐಎಂಎಸ್‌ಆರ್) ನಾಲ್ಕು ನೂತನ ಸೂಪರ್ ಸ್ಪೆಷಾಲಿಟಿ ವೈದ್ಯಕೀಯ ವಿಭಾಗಗಳನ್ನು ಉದ್ಘಾಟಿಸಿದರು.

ಬೆದರಿಸಿ ಹಣ ಸುಲಿಗೆ ಮಾಡುತ್ತಿದ್ದ ನಾಲ್ವರು ಯುಟ್ಯೂಬರ್ಸ್‌ ಅರೆಸ್ಟ್‌

ಬೆಳಗಾವಿಯ ಹುಕ್ಕೇರಿ ತಾಲೂಕಿನ ಕೊಟಬಾಗಿ ಗ್ರಾಮದಲ್ಲಿ ವ್ಯಕ್ತಿಯೊಬ್ಬರಿಗೆ ಗಾಂಜಾ ಪ್ರಕರಣ ದಾಖಲಿಸುವುದಾಗಿ ಬೆದರಿಸಿ ಹಣ ಸುಲಿಗೆ ಮಾಡಿದ ಆರೋಪದಡಿ ನಾಲ್ವರು ಯೂಟ್ಯೂಬರ್‌ಗಳನ್ನು ಪೊಲೀಸರು ಬಂಧಿಸಿದ್ದಾರೆ. ಈ ವೇಳೆ ಪೊಲೀಸರು ಆರೋಪಿಗಳ ಕಾರು, ಮೊಬೈಲ್ ಫೋನ್‌ಗಳು ಹಾಗೂ ನಗದು ವಶಕ್ಕೆ ಪಡೆದುಕೊಂಡಿದ್ದಾರೆ. ಕಲ್ಲಪ್ಪ

ದಾವಣಗೆರೆ ದುರ್ಗಾಂಬಿಕಾ ದೇಗುಲದ ಚಿನ್ನ ಕದ್ದ ಅರ್ಚಕ

ದಾವಣಗೆರೆ ನಗರದ ಗ್ರಾಮ ದೇವತೆ ಶ್ರೀ ದುರ್ಗಾಂಬಿಕಾ ದೇವಸ್ಥಾನದಲ್ಲಿ ದೇವಿಯ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣಗಳನ್ನು ದೇವಸ್ಥಾನದ ಪೂಜಾರಿ ಕದ್ದು ಮಾರಾಟ ಮಾಡಿರುವ ಘಟನೆ ಬೆಳಕಿಗೆ ಬಂದಿದೆ. ದೇವಸ್ಥಾನದ ಅರ್ಚಕರಲ್ಲಿ ಒಬ್ಬನಾದ ಆಕಾಶ್ ದೇವಿಯ ಮೈಮೇಲಿದ್ದ ಹಾಗೂ ಭಕ್ತರು ನೀಡಿದ್ದ ಲಕ್ಷಾಂತರ

ಹಂದಿಗಾಗಿ ಹಾಕಿದ್ದ ವಿದ್ಯುತ್‌ಬಲೆಗೆ ಸಿಲುಕಿ ವ್ಯಕ್ತಿ ಸಾವು: ಶವ ಗುಟ್ಟಾಗಿ ಹೂಳಿದ ಆರೋಪಿಗಳು

ಚಿಕ್ಕಮಗಳೂರಿನ ಕಡೂರು ತಾಲೂಕಿನಲ್ಲಿ ಕಾಡುಹಂದಿ ಬೇಟೆಗಾಗಿ ಅಕ್ರಮವಾಗಿ ಅಳವಡಿಸಿದ್ದ ವಿದ್ಯುತ್ ತಂತಿ ತಗುಲಿ ವ್ಯಕ್ತಿಯೊಬ್ಬರು ಮೃತಪಟ್ಟಿದ್ದು, ಬೇಟೆಗಾರರು ಶವವನ್ನು ಗುಟ್ಟಾಗಿ ಹೂತುಹಾಕಿರುವ ಘಟನೆ ಬೆಳಕಿಗೆ ಬಂದಿದೆ. ಯಗಟಿ ಸಮೀಪದ ದೊಣ್ಣೆಕೋರನಹಳ್ಳಿ ಗ್ರಾಮದ ಕರಿಯಪ್ಪ (52) ವಿದ್ಯುತ್ ತಂತಿ ತಗುಲಿ ಮೃತಪಟ್ಟವರು.  ಜಮೀನಿನಲ್ಲಿ

ಹಿರಿಯೂರಿನ 14 ಕೆರೆಗಳಿಗೆ ನೀರು ತುಂಬಿಸಲು 244 ಕೋಟಿ ರೂ. ಯೋಜನೆ: ಸಿಎಂ ಡಿಕೆ ಶಿವಕುಮಾರ್‌

ಹಿರಿಯೂರಿನ  14 ಕೆರೆಗಳಿಗೆ ನೀರು ತುಂಬಿಸಬೇಕು ಎನ್ನುವುದು  ಮಾಜಿ ಸಚಿವ ದಿವಂಗತ ಡಿ. ಸುಧಾಕರ ಅವರ  ಕನಸಾಗಿತ್ತು. ಈ ಯೋಜನೆ ಮಾಡಲು ನನ್ನ ಬಳಿ ಅವರು ಕೊನೆಯದಾಗಿ ಮಾತು ತೆಗೆದುಕೊಂಡಿದ್ದರು. ಆ ಮಾತನ್ನು ಉಳಿಸಿಕೊಳ್ಳಲು  ಸಚಿವ ಸಂಪುಟದಲ್ಲಿ 244 ಕೋಟಿ ರೂ.

ರಾಜ್ಯದಲ್ಲಿ ಬರ, ರಾಷ್ಟ್ರೀಯ ವಿಪತ್ತು ಘೋಷಿಸುವಂತೆ ಕೇಂದ್ರಕ್ಕೆ ಮನವಿ: ಡಿಸಿಎಂ ಪರಮೇಶ್ವರ್‌

ಬರದಿಂದ ರಾಜ್ಯದಲ್ಲಿ ಗಂಭೀರ ಪರಿಸ್ಥಿತಿ ಇದೆ. ರಾಷ್ತ್ರೀಯ ವಿಪತ್ತು ಎಂದು ಘೋಷಿಸಲು ಕೇಂದ್ರ ಸರ್ಕಾರವನ್ನು ಕೋರಲಾಗಿದೆ ಎಂದು ಉಪ ಮುಖ್ಯಮಂತ್ರಿ ಡಾ. ಜಿ ಪರಮೇಶ್ವರ್ ಹೇಳಿದರು. ಚಿತ್ರದುರ್ಗ  ನಗರದ ಹೊರ ವಲಯದ ಮುರುಘಾ ಮಠದ ಸಭಾಂಗಣದಲ್ಲಿ ವಿಭಾಗ ಮಟ್ಟದ ಸಭೆಯಲ್ಲಿ ಮಾತನಾಡಿದರು.