Thursday, September 24, 2026
Menu

ದಕ್ಷಿಣ ಕನ್ನಡ, ಉಡುಪಿಯಲ್ಲಿ ಮಾತ್ರ  ಬ್ಯಾಂಕ್, ಸಹಕಾರ ಸಂಘಗಳ ಸಾಲ ಶಿಸ್ತಿನಿಂದ ಮರುಪಾವತಿ: ಡಿಸಿಎಂ ಡಿಕೆ ಶಿವಕುಮಾರ್

ಮಂಗಳೂರು: ಕರಾವಳಿ ಭಾಗದ ಜನ ಪ್ರತಿಭಾವಂತರು, ಬುದ್ಧಿವಂತರು. ಇವರು ಇಲ್ಲೇ ಉದ್ಯೋಗ ಮಾಡುವ ವಾತಾವರಣ ನಿರ್ಮಿಸಬೇಕು. ಇಲ್ಲಿ ಮತ್ತೆ ಶಾಂತಿ ನೆಲೆಸಬೇಕು. ಜನರಲ್ಲಿ ಸಹೋದರತ್ವ ಭಾವನೆ ಮೂಡಿಸಬೇಕು. ಅಭಿವೃದ್ಧಿ ಕೆಲಸಗಳ ಮೂಲಕ ಕರಾವಳಿ ಪ್ರದೇಶದಲ್ಲಿ ಮತ್ತೆ ಇತಿಹಾಸ ಸೃಷ್ಟಿಸೋಣ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಮಂಗಳೂರಿನ ಬಂಗ್ರ ಕೂಳೂರುನಲ್ಲಿ ಶನಿವಾರ ನಡೆದ ನವೋದಯ ಸ್ವಸಹಾಯ ಗುಂಪುಗಳ ರಜತ ಸಂಭ್ರಮ 2025 ಕಾರ್ಯಕ್ರಮದಲ್ಲಿ ಡಿಸಿಎಂ ಡಿ ಕೆ ಶಿವಕುಮಾರ್ ಅವರು

ಕಲ್ಯಾಣಪಥ, ಪ್ರಗತಿಪಥ ರಸ್ತೆ ಗುಣಮಟ್ಟ ಕಾಪಾಡಲು ಸಚಿವ ಪ್ರಿಯಾಂಕ್‌ ಖರ್ಗೆ ನಿರ್ದೇಶನ

ಬೆಂಗಳೂರು: ಶಾಲೆಗಳು, ಆಸ್ಪತ್ರೆಗಳು, ವಾಣಿಜ್ಯ ಸಂಸ್ಥೆಗಳು. ಕೈಗಾರಿಕೆಗಳಿಗೆ ಗ್ರಾಮಗಳಿಂದ ಸಂಪರ್ಕ ಕಲ್ಪಿಸುವ ಕಲ್ಯಾಣಪಥ ಹಾಗೂ ಪ್ರಗತಿಪಥ ಸರ್ಕಾರದ ಮಹತ್ತರ ಯೋಜನೆಗಳಾಗಿದ್ದು, ಗ್ರಾಮೀಣ ಬದುಕಿನ ಶೈಕ್ಷಣಿಕ ಹಾಗೂ ಆರ್ಥಿಕ ಅಭಿವೃದ್ಧಿಗೆ ಪೂರಕವಾಗಬಲ್ಲ ಈ ರಸ್ತೆಗಳನ್ನು ಗುಣಮಟ್ಟದಿಂದ ನಿರ್ಮಾಣ ಮಾಡಬೇಕೆಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌

ಸುಹಾಸ್‌ ಶೆಟ್ಟಿ ಕೊಲೆ ಪ್ರಕರಣ ಎನ್‌ಐಎಗೆ ವಹಿಸಲು ರಾಜ್ಯಪಾಲರಿಗೆ ಬಿಜೆಪಿ ಮನವಿ

ಸುಹಾಸ್‌ ಶೆಟ್ಟಿ ಕೊಲೆ ಪ್ರಕರಣದ ತನಿಖೆ ಮಾಡುತ್ತಿರುವ ಕಾಂಗ್ರೆಸ್‌ ಸರ್ಕಾರದ ಮೇಲೆ ನಮಗೆ ವಿಶ್ವಾಸವಿಲ್ಲ. ಆದ್ದರಿಂದ ಇದನ್ನು ಎನ್‌ಐಎ ಗೆ ವಹಿಸಲು ರಾಜ್ಯಪಾಲರಿಗೆ ಕೋರಲಾಗಿದೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ  ಹೇಳಿದ್ದಾರೆ. ಬಿಜೆಪಿಯ ಪ್ರಮುಖರೊಂದಿಗೆ ರಾಜ್ಯಪಾಲರಾದ ಥಾವರ್‌ ಚಂದ್‌‌ ಗೆಹ್ಲೋಟ್‌ ಅವರನ್ನು

ಕಲಬುರಗಿಯಲ್ಲಿ ಎಸ್ಸೆಸ್ಸೆಲ್ಸಿ-ಪಿಯುಸಿ ಫಲಿತಾಂಶ ಸುಧಾರಣೆಗೆ ನೀಲನಕ್ಷೆ : ಸಚಿವ ಪ್ರಿಯಾಂಕ್ ಖರ್ಗೆ

ಈ ಬಾರಿಯ ಎಸ್ ಎಸ್ ಎಲ್ ಸಿ ಹಾಗೂ ಪಿಯುಸಿ ಪರೀಕ್ಷೆಗಳ ಫಲಿತಾಂಶಗಳು ಶೈಕ್ಷಣಿಕವಾಗಿ ಕಲಬುರಗಿ ಜಿಲ್ಲೆ ಬಹಳಷ್ಟು ಸುಧಾರಣೆಗೊಳ್ಳಬೇಕಾಗಿದೆ ಎಂಬು ದನ್ನು ತೋರಿಸುತ್ತಿದೆ, ಶಿಕ್ಷಣ ಸಮಾಜದ ಸ್ಥಿತಿಗತಿಗಳನ್ನು ಅಳೆಯುವ ಮಾನದಂಡವಾಗಿದ್ದು ಸಾಮಾಜಿಕ ಹಾಗೂ ಆರ್ಥಿಕ ಪರಿಸ್ಥಿತಿಗಳೂ ಸಹ ಶೈಕ್ಷಣಿಕ ಗುಣಮಟ್ಟದ

ಹಾವೇರಿಯಲ್ಲಿ ಕಾರು ಅಪಘಾತಕ್ಕೆ 6 ಮಂದಿ ಬಲಿ

ಹಾವೇರಿಯ ಮೂಟೆಬೆನ್ನೂರು ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಕಾರು ಅಪಘಾತಗೊಂಡು ಆರು ಜನರು ಸ್ಥಳದಲ್ಲೇ ಅಸು ನೀಗಿದ್ದಾರೆ. ಗಾಯಗೊಂಡ ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ. ಕೋಟೆಗುಡ್ಡದ ಬಳಿಯಲ್ಲಿ ಈ ದುರಂತ ಸಂಭವಿಸಿದ್ದು, ಮುಂದೆ ಹೋಗುತ್ತಿದ್ದ ಲಾರಿಗೆ ಹಿಂದಿನಿಂದ ಕಾರು ಡಿಕ್ಕಿ ಹೊಡೆದಿದೆ. ಹರಿಹರ

ಕೇಂದ್ರದ ಸೂಚನೆಯಂತೆ ಎಲ್ಲಾ ಸುರಕ್ಷತಾ ಕ್ರಮ ಪಾಲನೆ: ಸಿಎಂ

ಉಗ್ರರ ನೆಲೆಗಳ ಮೇಲೆ ದಾಳಿ  ಬಳಿಕ ಕೇಂದ್ರ ಸರ್ಕಾರದ  ನೀಡಿರುವ ಎಲ್ಲಾ ಸೂಚನೆಗಳನ್ನು ಪಾಲಿಸಲಾಗುತ್ತಿದೆ. ಎಲ್ಲೆಡೆ ಅಣುಕು ಕವಾಯತು ಮಾಡಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ  ಹೇಳಿದ್ದಾರೆ. ಮದ್ದೂರು ಕಾಫಿ ಡೇ ಹತ್ತಿರದ ಗೆಜ್ಜಲಗೆರೆ ಹೆಲಿಪ್ಯಾಡ್ ನಲ್ಲಿ ಬಂದಿಳಿದು ಕಾರ್ಯಕ್ರಮಕ್ಕೆ ತೆರಳುವ ಮುನ್ನ

ರಾಜ್ಯದ ಜಲಾಶಯಗಳ ಮೇಲೆ ಪೊಲೀಸ್ ಕಣ್ಗಾವಲು

ಭಾರತವು ಉಗ್ರರ ವಿರುದ್ಧ ನಡೆಸಿದ ಆಪರೇಷನ್‌ ಸಿಂಧೂರ ಕಾರ್ಯಾಚರಣೆಯ ಬಳಿಕ ಮುಂಜಾಗ್ರತಾ ಕ್ರಮವಾಗಿ ಹಲವು ರಕ್ಷಣಾ ಕ್ರಮಗಳನ್ನು ಕೈಗೊಳ್ಳ ಲಾಗಿದೆ. ಅದರಂತೆ ರಾಜ್ಯದಲ್ಲೂ ಪ್ರಮುಖ ಸ್ಥಳ , ಸಂಸ್ಥೆಗಳಿಗೆ ಬಿಗಿ ಭದ್ರತೆ ನೀಡಲಾಗಿದೆ. ಜಲಸಂಪನ್ಮೂಲ ಇಲಾಖೆಯ ಆದೇಶದಂತೆ ನಾಡಿನಲ್ಲಿರುವ ಜಲಾಶಯಗಳಿಗೂ ಹೆಚ್ಚಿನ

ಕರ್ನಲ್‌ ಸೋಫಿಯಾ ಅಂದ್ರೆ ಕನ್ನಡಿಗರಿಗೆ ಪುಳಕ

ಭಾರತೀಯ ವಾಯುಪಡೆಯು ಆಪರೇಶನ್ ಸಿಂಧೂರ ಕಾರ್ಯಾಚರಣೆ ಮೂಲಕ ಉಗ್ರರ ನೆಲೆಗಳನ್ನು ನಾಶಪಡಿಸಿದ ಯಶೋಗಾಥೆಯನ್ನು ಎಳೆ ಎಳೆಯಾಗಿ ಜಗತ್ತಿಗೆ ತೆರೆದಿಟ್ಟ ಲೆಪ್ಟಿನೆಂಟ್ ಕರ್ನಲ್ ಸೋಫಿಯಾ ಖುರೇಶಿ ಬೆಳಗಾವಿಯ ಸೊಸೆ ಎಂಬುದು ಕನ್ನಡಿಗರ ಪುಳಕಕ್ಕೆ ಕಾರಣವಾಗಿದೆ. ಸೋಫಿಯಾ ಖುರೇಷಿ ಬೆಳಗಾವಿಯ ಸೊಸೆ. ಬಹುರಾಷ್ಟ್ರೀಯ ಸೇನಾ

ರಾಜ್ಯದ ಕರಾವಳಿಗಳಲ್ಲಿ ಹೈಅಲರ್ಟ್, ವಿದೇಶಿ ಹಡಗುಗಳ ತೀವ್ರ ತಪಾಸಣೆ , ಆಳ ಮೀನುಗಾರಿಕೆಗೆ ತಡೆ

ಉಗ್ರರ ತಾಣಗಳ ಮೇಲೆ ಭಾರತದ ವಾಯುಪಡೆ ದಾಳಿ ಆಪರೇಷನ್‌ ಸಿಂಧೂರ ಕಾರ್ಯಾಚರಣೆಯ ಬಳಿಕ ಮುನ್ನೆಚ್ಚರಿಕೆ ಕ್ರಮವಾಗಿ ದೇಶಾದ್ಯಂತ ಪ್ರಮುಖ ನಗರಗಳು, ಬಂದರು, ವಿಮಾನ ನಿಲ್ದಾಣಗಳಿಗೆ ಬಿಗಿ ಭದ್ರತೆ ಕಲ್ಪಿಸಲಾಗಿದೆ. ಅದೇ ರೀತಿ ರಾಜ್ಯದ ಕರಾವಳಿಗಳಲ್ಲಿ ಹೈಅಲರ್ಟ್ ಘೋಷಿಸಲಾಗಿದೆ. ಕಾರವಾರದಲ್ಲಿ ಕದಂಬ ನೌಕಾ

ಸಾಹಿತಿ ಜಿ.ಎಸ್.ಸಿದ್ದಲಿಂಗಯ್ಯ ನಿಧನ

ಸಾಹಿತಿ, ವಿಮರ್ಶಕ ಮತ್ತು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾಗಿ ಕ್ರಿಯಾಶೀಲವಾಗಿ ಸೇವೆ ಸಲ್ಲಿಸಿದ್ದ ಜಿ.ಎಸ್.ಸಿದ್ದಲಿಂಗಯ್ಯ(94) ಬೆಂಗಳೂರಿನ  ವಿಜಯನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ತುಮಕೂರು ಜಿಲ್ಲೆ ಬೆಳ್ಳಾವಿಯವರಾದ ಸಿದ್ದಲಿಂಗಯ್ಯ ಅವರು ಶಿಕ್ಷಣ ಇಲಾಖೆಯಲ್ಲಿ ಅಧಿಕಾರಿಯಾಗಿ ಉತ್ತಮ ಕೆಲಸ ಮಾಡಿದ್ದರು. ಕುವೆಂಪು ಅವರ ನೆಚ್ಚಿನ