Friday, September 25, 2026
Menu

ಮೈಸೂರಿನಲ್ಲಿ ಚಿಕ್ಕಪ್ಪನಿಂದ ಅತ್ಯಾಚಾರ: ಬಾಲಕಿ ಗರ್ಭಿಣಿ

ಮೈಸೂರು ಜಿಲ್ಲೆಯ ನಂಜನಗೂಡು ಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪ್ರಾಪ್ತ ವಯಸ್ಕ ಬಾಲಕಿಯ ಮೇಲೆ ಆಕೆಯ ಚಿಕ್ಕಪ್ಪನೇ ಅತ್ಯಾಚಾರವೆಸಗಿದ್ದು, ಬಾಲಕಿ ಗರ್ಭಿಣಿಯಾಗಿರುವ ಪ್ರಕರಣ ಬಹಿರಂಗಗೊಂಡಿದೆ. ಈ ಸಂಬಂಧ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ನಂಜುಂಡಸ್ವಾಮಿ ಅತ್ಯಾಚಾರವೆಸಗಿದ ಆರೋಪಿ. ಶಾಲೆಗೆ ತೆರಳಿದ್ದ ವಿದ್ಯಾರ್ಥಿನಿಯನ್ನು ಮನೆಗೆ ಕರೆದುಕೊಂಡು ಬಂದು ಅತ್ಯಾಚಾರ ಮಾಡಿದ್ದಾನೆ. 10ನೇ ತರಗತಿ ಓದುತ್ತಿದ್ದ ಬಾಲಕಿಗೆ ಎರಡು ತಿಂಗಳಿಂದ ಮುಟ್ಟು ಆಗಿಲ್ಲವೆಂಬ ಕಾರಣಕ್ಕೆ ವೈದ್ಯರು ಪರಿಶೀಲನೆ ನಡೆಸಿದಾಗ ವಿಷಯ ಹೊರ ಬಂದಿದೆ. ಆರೋಪಿ

ಚಾಮರಾಜನಗರ ಆಕ್ಸಿಜನ್ ದುರಂತ; ನೋಟಿಸ್ ಗೆ ಉತ್ತರಿಸದ 29 ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ

ಕೋವಿಡ್ ಸಮಯದಲ್ಲಿ ನಡೆದಿದ್ದ ಚಾಮರಾಜನಗರ ಆಕ್ಸಿಜನ್ ದುರಂತದ ಬಗ್ಗೆ ಹೈಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಬಿ.ಎ. ಪಾಟೀಲ್‌ ಏಕಸದಸ್ಯ ನ್ಯಾಯಾಂಗ ಆಯೋಗ ನೀಡಿದ್ದ ವರದಿಯನ್ನು ತಿರಸ್ಕರಿಸಿ ನ್ಯಾ.ಕುನ್ಹಾ ಅವರಿಗೆ ಮರು ತನಿಖೆಯ ಜವಾಬ್ದಾರಿ ನೀಡಲಾಗಿದೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್  ಹೇಳಿದ್ದಾರೆ. ಸಚಿವ ಸಂಪುಟ

ಶಾಸಕ ಯತ್ನಾಳ್‌ ಉಚ್ಚಾಟನೆ: ಬಿಜೆಪಿ ಘಟಕಗಳ ಪದಾಧಿಕಾರಿಗಳ ಸರಣಿ ರಾಜೀನಾಮೆ

ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಬಿಜೆಪಿಯಿಂದ ಉಚ್ಚಾಟಿಸಿದ ಬಳಿಕ ವಿಜಯಪುರದಲ್ಲಿ ಬಿಜೆಪಿಯ ನಾನಾ ಘಟಕಗಳ ಪದಾಧಿಕಾರಿಗಳ ರಾಜೀನಾಮೆ ಪರ್ವ ಆರಂಭಗೊಂಡಿದೆ. ಬಿಜೆಪಿ ನಗರ ಮಂಡಲ ಎಸ್‌ಟಿ ಮೋರ್ಚಾ ಅಧ್ಯಕ್ಷ ಸ್ಥಾನಕ್ಕೆ ಪ್ರವೀಣ ನಾಟೀಕಾರ ರಾಜೀನಾಮೆ ನೀಡಿದ್ದು, ನಗರ

ತುಮಕೂರಿನಲ್ಲಿ ಪತಿಯ ತೊರೆದು ಪರಾರಿಯಾಗಿದ್ದ ಗರ್ಭಿಣಿ: ಮಗುವಿನ ಕೊಲೆಗೈದ ಪ್ರಿಯಕರನ ಬಂಧನ

ತುಮಕೂರು ಜಿಲ್ಲೆ ಸಿದ್ಧಲಿಂಗಯ್ಯನಪಾಳ್ಯದಲ್ಲಿ 4 ವರ್ಷದ ಮಗುವನ್ನು ಹತ್ಯೆ ಮಾಡಿರುವ ಆರೋಪದಲ್ಲಿ ಚಂದ್ರಶೇಖರ್ ಎಂಬ ವ್ಯಕ್ತಿಯನ್ನು ಮಹಿಳಾ ಪೊಲೀಸರು ಬಂಧಿಸಿದ್ದಾರೆ. ಮಗು ಹಾವು ಕಚ್ಚಿ ಮೃತಪಟ್ಟಿದೆ ಎಂದು ಆರೋಪಿ ಬಿಂಬಿಸಿದ್ದ. ಅಂತ್ಯಕ್ರಿಯೆಗೂ ಮುನ್ನ ಗ್ರಾಮಸ್ಥರೊಬ್ಬರು ತೆಗೆದಿದ್ದ ಫೋಟೊದಿಂದ ಅನುಮಾನ ವ್ಯಕ್ತವಾಗಿ ಪೊಲೀಸರಿಗೆ

ತುಮಕೂರಿನಲ್ಲಿ ಆಟವಾಡುತ್ತಿದ್ದ ಮಗುವನ್ನು ಬಲಿ ಪಡೆದ ಟ್ರ್ಯಾಕ್ಟರ್‌

ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ತಿಮ್ಮನಹಳ್ಳಿ ಗ್ರಾಮದಲ್ಲಿ ಮಣ್ಣು ತುಂಬಿದ ಟ್ರ್ಯಾಕ್ಟರ್‌ ಹರಿದು ಐದು ವರ್ಷದ ಮಗು ಮೃತಪಟ್ಟಿದೆ. ಮನೆಯ ಮುಂದೆ ಮಗು ವರುಣ್ ಆಟವಾಡುತ್ತಿದ್ದಾಗ ಮಣ್ಣು ತುಂಬಿದ್ದ ಟ್ರ್ಯಾಕ್ಟರ್‌ ಬಂದು ಮಗುವಿನ ಮೇಲೆ ಹಾದು ಹೋಗಿ ಮಗು ಸ್ಥಳದಲ್ಲೇ ಮೃತಪಟ್ಟಿದೆ.

ಬೆಳಗಾವಿ ಪೊಲೀಸರನ್ನು ನಾಯಿಗೆ ಹೋಲಿಸಿ ಎಂಇಎಸ್ ಪೋಸ್ಟ್‌

ಬೆಳಗಾವಿ ಪೊಲೀಸರನ್ನು ನಾಯಿಗೆ ಹೋಲಿಸಿ ಎಂಇಎಸ್ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡುವ ಮೂಲಕ ಉದ್ಧಟತನ ತೋರಿದೆ. ಮಹಾರಾಷ್ಟ್ರದಲ್ಲಿ ಎಂಇಎಸ್ ಮುಖಂಡ ಶುಭಂ ಶಳಕೆ ಬಂಧನ ಪ್ರಕರಣಕ್ಕೆ ಸಂಬಂಧಿಸಿದಂತೆ ಎಂಇಎಸ್‌ ಹೀಗೆ ಪ್ರತಿಕ್ರಿಯಿಸಿದೆ. ಕನ್ನಡ ಪರ ಹೋರಾಟಗಾರರು ಹಾಗೂ ಕರ್ನಾಟಕ ಅಪಹಾಸ್ಯ ಮಾಡಿದ್ದ

ಜೈಲಿನಲ್ಲಿ ಜಾಮರ್‌: ವೈದ್ಯರ ಸಂಪರ್ಕ ಸಿಗದೆ ಸಾವು ಬದುಕಿನ ಹೋರಾಟ ನಡೆಸಿದ ಚಿಕ್ಕಮಗಳೂರು ರೋಗಿ

ಮಂಗಳೂರಿನ ಜೈಲಿನಲ್ಲಿ ನೆಟ್ವರ್ಕ್ ಜಾಮರ್ ಅಳವಡಿಸಿರುವುದರಿಂದ ವೈದ್ಯರ ಸಂಪರ್ಕ ಸಾಧ್ಯವಾಗದೆ ಚಿಕ್ಕಮಗಳೂರಿನ ರೋಗಿ ಸಾವು ಬದುಕಿನ ನಡುವೆ ಹೋರಾಡಬೇಕಾಯಿತು. ಜೈಲಿನಲ್ಲಿ ಜಾಮರ್ ಅಳವಡಿಕೆಯಿಂದ ಮಂಗಳೂರಿನ ಹೃದಯ ಭಾಗ ಕೊಡಿಯಾಲಬೈಲ್‌ ಸುತ್ತಮುತ್ತಲಿನ 500 ಮೀಟರ್ ವ್ಯಾಪ್ತಿಯಲ್ಲಿ ನೆಟ್ವರ್ಕ್ ಸಮಸ್ಯೆ ಎದುರಾಗಿದೆ. ಚಿಕ್ಕಮಗಳೂರು ಜಿಲ್ಲೆಯ

ದಾವಣಗೆರೆಯಲ್ಲಿ ಕಾರು ಚಲಾಯಿಸುತ್ತಿದ್ದಾಗಲೇ ಮೃತಪಟ್ಟ ಗುತ್ತಿಗೆದಾರ

ದಾವಣಗೆರೆ ನಗರದ ಬಿಐಇಟಿ ರಸ್ತೆಯ ಈಶ್ವರ ಧ್ಯಾನ ಮಂದಿರದ ಬಳಿ ಕಾರು ಚಾಲನೆ ಮಾಡುವಾಗ ಚಾಲಕ ಹೃದಯಸ್ತಂಭನಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಏಕಾಏಕಿ ಹೃದಯಸ್ತಂಭನಗೊಂಡ ಕಾರಣ ಕಾರು ಚಾಲಕನ ನಿಯಂತ್ರಣ ತಪ್ಪಿ ಗೋಡೆಗೆ ಡಿಕ್ಕಿ ಹೊಡೆದಿದೆ. ಈ ದುರಂತದಲ್ಲಿ ಪ್ರಥಮ ದರ್ಜೆ ಗುತ್ತಿಗೆದಾರ

ಪಿಯುಸಿ, ಎಸ್ಸೆಸ್ಸೆಲ್ಸಿ ನಕಲಿ ಅಂಕಪಟ್ಟಿ ದಂಧೆ: ಮೂವರ ಬಂಧನ

ಕರ್ನಾಟಕ ಮಾಧ್ಯಮಿಕ ಮತ್ತು ಉನ್ನತ ಶಿಕ್ಷಣ ಮಂಡಳಿ ಎಂಬ ಸಂಸ್ಥೆಯ ಮೂಲಕ ಪಿಯುಸಿ ಮತ್ತು ಎಸ್​ಎಸ್​ಎಲ್​​ಸಿ ತತ್ಸಮಾನ ಎಂದು ನಕಲಿ ಅಂಕಪಟ್ಟಿ ನೀಡುತ್ತಿದ್ದ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಸ್ಟಡಿ ಸೆಂಟರ್​ಗಳನ್ನು ತೆರೆದು ನಕಲಿ ಅಂಕಪಟ್ಟಿ ನೀಡುತ್ತಿದ್ದರು.

ಮಸ್ಕಿ ಪುರಸಭೆಯಲ್ಲಿ ಅವ್ಯವಹಾರ: ಮುಖ್ಯಾಧಿಕಾರಿ ಅಮಾನತು

ರಾಯಚೂರಿನ ಮಸ್ಕಿ ಪುರಸಭೆಯಲ್ಲಿ ಪೀಠೋಪಕರಣ ಖರೀದಿಯಲ್ಲಿ ಅವ್ಯವಹಾರ ಪ್ರಕರಣ ಸಂಬಂಧ ತಪ್ಪಿತಸ್ಥ ಪುರಸಭೆ ಮುಖ್ಯಾಧಿಕಾರಿ ವಿರುದ್ಧ ರಾಯಚೂರು ಜಿಲ್ಲಾಧಿಕಾರಿ ನಿತೀಶ್ ಕ್ರಮ ಕೈಗೊಂಡು ಕರ್ತವ್ಯಲೋಪ, ಹಣ ದುರ್ಬಳಕೆ ಆರೋಪದಡಿ ಅಮಾನತುಗೊಳಿಸಿದ್ದಾರೆ. ರೆಡ್ಡಿರಾಯನಗೌಡ ಅಮಾನತುಗೊಂಡ ಹಿಂದಿನ ಮಸ್ಕಿ ಪುರಸಭೆ ಮುಖ್ಯ ಅಧಿಕಾರಿ. ಪ್ರಸ್ತುತ