Friday, September 25, 2026
Menu

ಬೆಳಗಾವಿಯಲ್ಲಿ ಬಸ್‌ ಕಳ್ಳಿಯರ ಗ್ಯಾಂಗ್‌ ಸೆರೆ, ಚಿನ್ನಾಭರಣ ವಶ

ರಾಜ್ಯ ಸರ್ಕಾರ ಶಕ್ತಿ ಯೋಜನೆಯನ್ನು ಜಾರಿಗೊಳಿಸಿದ ಬಳಿಕ  ಸರ್ಕಾರಿ ಬಸ್ಸುಗಳು  ಮಹಿಳೆಯರಿಂದ ತುಂಬಿ ತುಳುಕುತ್ತಿರುವುದನ್ನೇ  ದಾಳ ಮಾಡಿಕೊಂಡು ಬಸ್‌ ಗಳಲ್ಲಿ   ಕಳ್ಳತನ ಮಾಡುತ್ತಿದ್ದ ಕಳ್ಳಿಯರ ಗ್ಯಾಂಗ್ ಅನ್ನು ಪೊಲೀಸರು ಬಂಧಿಸಿದ್ದಾರೆ. ಬೆಳಗಾವಿ ನಗರದ ವಡ್ಡರವಾಡಿಯ ಅನಿತಾ ಚೌಗಲೆ, ನಿಶಾ ಲೊಂಡೆ, ಗಿಡ್ಡಿ ಲೊಂಡೆ ಬಂಧಿತರು. ಬೆಳಗಾವಿಯ ಕೇಂದ್ರ ಬಸ್ ನಿಲ್ದಾಣದಲ್ಲಿ ಸಕ್ರಿಯವಾಗಿದ್ದ ಕಳ್ಳಿಯರ ಗ್ಯಾಂಗ್ ಸದಸ್ಯರನ್ನು ಬೆಳಗಾವಿಯ ಮಾರ್ಕೆಟ್‌ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಬಸ್ ಹತ್ತುವಾಗ ಮತ್ತು ಇಳಿಯುವಾಗ ಮಹಿಳೆಯರ

ಹಾಸನದಲ್ಲಿ ಹಾವನ್ನು ಕೊಂದು ಮಾಲೀಕನ ಜೀವವುಳಿಸಿ ಪ್ರಾಣ ತೆತ್ತ ನಾಯಿ

ಹಾಸನ ತಾಲೂಕಿನ ಕಟ್ಟಾಯ ಗ್ರಾಮದಲ್ಲಿ ಸಾಕು ನಾಯಿಯೊಂದು ಮನೆ ಮಾಲೀಕರು ಹಾಗೂ ಕೆಲಸಗಾರರ ಜೀವ ಉಳಿಸಲು ಪ್ರಾಣವನ್ನೇ ಪಣಕಿಟ್ಟು ಅಸು ನೀಗಿದೆ. ಸರ್ಪದ ಜತೆ ಕಾದಾಡಿದ ಪಿಟ್‌ಬುಲ್ ನಾಯಿಯ ಮುಖಕ್ಕೆ ಸರ್ಪ ಕಚ್ಚಿದ್ದರಿಂದ ಪ್ರಾಣ ಕಳೆದುಕೊಂಡಿದೆ. ಶಮಂತ್ ಎಂಬವರು ತೋಟದಲ್ಲಿ ಪಿಟ್‌ಬುಲ್

ಠಾಣೆಯಲ್ಲೇ ಜೂಜಾಡಿದ ಕಲಬುರಗಿಯ ಐವರು ಪೊಲೀಸರ ಅಮಾನತು

ಕಲಬುರಗಿ ಜಿಲ್ಲೆಯ ವಾಡಿ ಪೊಲೀಸ್ ಠಾಣೆಯಲ್ಲಿ ಜೂಜಾಟ ಆಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಪೊಲೀಸರನ್ನು ಅಮಾನತುಗೊಳಿಸಿ ಎಸ್‌ಪಿ ಅಡ್ಡೂರು ಶ್ರೀನಿವಾಸಲು ಆದೇಶ ಹೊರಡಿಸಿದ್ದಾರೆ. ಪೊಲೀಸ್‌ ಠಾಣೆಯೊಳಗೆ ಜೂಜಾಟದಲ್ಲಿ ತೊಡಗಿದ್ದ ಎಎಸ್‌ಐ ಮಹಿಮೂದ್ ಮಿಯಾ, ಹೆಡ್‌ ಕಾನ್ಸ್‌ಟೇಬಲ್‌ಗಳಾದ ನಾಗರಾಜ್, ಸಾಯಿಬಣ್ಣಾ, ಇಮಾಮ್, ಕಾನ್ಸ್‌ಟೇಬಲ್

ಕೋಲಾರ ಹಾಲು ಉತ್ಪಾದಕರಿಗೆ 2 ರೂ. ಹೆಚ್ಚಳ: ಸಚಿವ ಬೈರತಿ ಸುರೇಶ

ಬೆಂಗಳೂರು: ಕೋಲಾರ ಜಿಲ್ಲಾ ಸಹಕಾರ ಹಾಲು ಒಕ್ಕೂಟದ ವತಿಯಿಂದ ಜಿಲ್ಲೆಯ ಹಾಲು ಉತ್ಪಾದಕರಿಗೆ 2 ರೂಪಾಯಿಗಳ ಪ್ರೋತ್ಸಾಹ ಧನವನ್ನು ಹೆಚ್ಚಿಗೆ ನೀಡಲಾಗುವುದು ಎಂದು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಹಾಗೂ ಕೋಲಾರ ಜಿಲ್ಲಾ ಉಸ್ತುವಾರಿ ಸಚಿವ ಬಿ ಎಸ್ ಸುರೇಶ (ಬೈರತಿ)

ಮನೆ ಬಿಟ್ಟು ಬಂದ ಬಾಲಕಿಯನ್ನು ಮೆಜೆಸ್ಟಿಕ್‌ನಿಂದ ತಿರುಪತಿಗೆ ಕರೆದೊಯ್ದು ಅತ್ಯಾಚಾರ

ತಾಯಿ ಜತೆ ಜಗಳ ಮಾಡಿಕೊಂಡು ಮನೆ ಬಿಟ್ಟು ಬಂದಿದ್ದ ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಹಣ್ಣು ವ್ಯಾಪಾರಿಯೊಬ್ಬ ತಿರುಪತಿಗೆ ಕರೆದೊಯ್ದು ಅತ್ಯಾಚಾರ ಎಸಗಿದ್ದು, ಆತನ ವಿರುದ್ಧ ರಾಜಾಜಿನಗರ ಪೊಲೀಸ್‌ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಸಂತ್ರಸ್ತೆಯ ತಾಯಿ ನೀಡಿದ ದೂರು ಆಧರಿಸಿ

ಕೋಲಾರ ಕಾಂಗ್ರೆಸ್ ಮುಖಂಡ ಶ್ರೀನಿವಾಸ್ ಕೊಲೆ ಕೇಸ್‌ ಸಿಬಿಐಗೆ ನೀಡಿದ ಹೈಕೋರ್ಟ್

ಕೋಲಾರದ ಕಾಂಗ್ರೆಸ್ ಮುಖಂಡ, ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಎಂ.ಶ್ರೀನಿವಾಸ್ ಕೊಲೆ ಪ್ರಕರಣದ ತನಿಖೆಯನ್ನು ಸಿಬಿಐಗೆ ನೀಡಿ  ಹೈಕೋರ್ಟ್​ ಮಹತ್ವದ ತೀರ್ಪು ನೀಡಿದೆ. ಗೃಹ ಸಚಿವ ಜಿ ಪರಮೇಶ್ವರ್ ಹಾಗೂ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಅವರ ಆಪ್ತ ಎಂ ಶ್ರೀನಿವಾಸ್

ವಿಜಯಪುರದಲ್ಲಿ ಮರಕ್ಕೆ ಕಾರು ಡಿಕ್ಕಿಯಾಗಿ ಮೂವರ ಸಾವು

ವಿಜಯಪುರದ ಹೆಗಡಿಹಾಳ ಕ್ರಾಸ್ ಬಳಿ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಕಾರು ಡಿಕ್ಕಿ ಹೊಡೆದ ಪರಿಣಾಮ ಮೂವರು ಮೃತಪಟ್ಟಿದ್ದಾರೆ. ಉತ್ನಾಳದ ಬೀರಪ್ಪ ಗೋಡೆಕರ್(30), ಹಣಮಂತ ಕಡ್ಲಿಮಟ್ಟಿ(25) ಮತ್ತು ಜುಮನಾಳ ಗ್ರಾಮದ ಯಮನಪ್ಪ ನಾಟೀಕಾರ್(19) ಮೃತಪಟ್ಟವರು. ಉಕ್ಕಲಿ ಗ್ರಾಮದಿಂದ ವಿಜಯಪುರಕ್ಕೆ ಕಾರು ತೆರಳುತ್ತಿದ್ದಾಗ

ದಾವಣಗೆರೆ: ಬಟ್ಟೆ ತೊಳೆಯಲು ಹೋಗಿದ್ದ ಮೂವರು ಮಹಿಳೆಯರು ಕೆರೆ ಪಾಲು

ದಾವಣಗೆರೆ: ಬಟ್ಟೆ ತೊಳೆಯಲು ಹೋಗಿದ್ದ ಮೂವರು ಮಹಿಳೆಯರು ಕಾಲು ಜಾರಿ ಕೆರೆಗೆ ಬಿದ್ದು ಸಾವನ್ನಪ್ಪಿರುವ ದಾರುಣ ಘಟನೆ ಚನ್ನಗಿರಿ ತಾಲ್ಲೂಕಿನ ಲಕ್ಷ್ಮೀಸಾಗರ, ದುಗ್ಗೇನಹಳ್ಳಿ ಗ್ರಾಮಗಳ ಬಳಿ ನಡೆದಿದೆ. ದುಗ್ಗೇನಹಳ್ಳಿಯ ದೀಪಾ (28), ದಿವ್ಯಾ (೨6) ಹಾಗೂ ಚಂದನಾ (19) ಮೃತ ಮಹಿಳೆಯರು.

ಚಿಕ್ಕಮಗಳೂರಿನಲ್ಲಿ ಮಂಗನ ಕಾಯಿಲೆಗೆ ಮಹಿಳೆ ಬಲಿ

ಚಿಕ್ಕಮಗಳೂರಿನಲ್ಲಿ ಮಂಗನಕಾಯಿಲೆ ಬಾಧಿತ ಮಹಿಳೆಯೊಬ್ಬರು ಮೃತಪಟ್ಟಿರುವುದು ವರದಿಯಾಗಿದೆ. ಎನ್​.ಆರ್.ಪುರ ತಾಲೂಕಿನ ಕಟ್ಟಿನಮನೆ ಗ್ರಾಮದ ನಿವಾಸಿ ಕಮಲಾ (65) ಮೃತ ಮಹಿಳೆ. ಆಕೆ ಮೇಲ್ಪಾಲ್ ಗ್ರಾಮದ ಕಾಫಿ ತೋಟದಲ್ಲಿ ಕೆಲಸ ಮಾಡುತ್ತಿದ್ದರು. ಮಂಗನ ಕಾಯಿಲೆಯಿಂದ ಬಳಲುತ್ತಿದ್ದ ಅವರು ಕೊಪ್ಪ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದರು.

ಲೈಂಗಿಕ ದೌರ್ಜನ್ಯ, ಜಾತಿನಿಂದನೆ: ಸಿರಿಗೆರೆ ಗ್ರಾ.ಪಂ ಸದಸ್ಯ ಅರೆಸ್ಟ್‌

ಚಿತ್ರದುರ್ಗ ತಾಲೂಕಿನ ಸಿರಿಗೆರೆ ಗ್ರಾಮ ಪಂಚಾಯತಿ ಸದಸ್ಯನನ್ನು ಲೈಂಗಿಕ ದೌರ್ಜನ್ಯ ಹಾಗೂ ಜಾತಿನಿಂದನೆ ದೂರಿನ ಅಡಿ ಪೊಲೀಸರು ಬಂಧಿಸಿದ್ದಾರೆ. ಸಿರಿಗೆರೆ ಗ್ರಾಮ ಪಂಚಾಯತಿ ಸದಸ್ಯ ದೇವರಾಜ್ ಬಂಧಿತ ಆರೋಪಿ. ಆರೋಪಿ ಜಾತಿನಿಂದನೆ ಮಾಡುವುದಲ್ಲದೆ ಗ್ರಾ.ಪಂ ಅಧ್ಯಕ್ಷೆ ಹಾಗೂ ಪಿಡಿಒಗೆ ಲೈಂಗಿಕ ಕಿರುಕುಳ