ಜಿಲ್ಲಾ ಸುದ್ದಿ
ಕಲಬುರಗಿಯಲ್ಲಿ ಎಸ್ಸೆಸ್ಸೆಲ್ಸಿ-ಪಿಯುಸಿ ಫಲಿತಾಂಶ ಸುಧಾರಣೆಗೆ ನೀಲನಕ್ಷೆ : ಸಚಿವ ಪ್ರಿಯಾಂಕ್ ಖರ್ಗೆ
ಈ ಬಾರಿಯ ಎಸ್ ಎಸ್ ಎಲ್ ಸಿ ಹಾಗೂ ಪಿಯುಸಿ ಪರೀಕ್ಷೆಗಳ ಫಲಿತಾಂಶಗಳು ಶೈಕ್ಷಣಿಕವಾಗಿ ಕಲಬುರಗಿ ಜಿಲ್ಲೆ ಬಹಳಷ್ಟು ಸುಧಾರಣೆಗೊಳ್ಳಬೇಕಾಗಿದೆ ಎಂಬು ದನ್ನು ತೋರಿಸುತ್ತಿದೆ, ಶಿಕ್ಷಣ ಸಮಾಜದ ಸ್ಥಿತಿಗತಿಗಳನ್ನು ಅಳೆಯುವ ಮಾನದಂಡವಾಗಿದ್ದು ಸಾಮಾಜಿಕ ಹಾಗೂ ಆರ್ಥಿಕ ಪರಿಸ್ಥಿತಿಗಳೂ ಸಹ ಶೈಕ್ಷಣಿಕ ಗುಣಮಟ್ಟದ ಮೇಲೆ ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ಪರಿಣಾಮ ಬೀರುತ್ತವೆ ಎನ್ನುವುದನ್ನೂ ಸಹ ಒಪ್ಪಿಕೊಳ್ಳಬೇಕಿದೆ ಎಂದು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅಭಿಪ್ರಾಯಪಟ್ಟಿದ್ದಾರೆ. ಶಾಲಾ ಶಿಕ್ಷಣ ಮತ್ತು
ಹಾವೇರಿಯಲ್ಲಿ ಕಾರು ಅಪಘಾತಕ್ಕೆ 6 ಮಂದಿ ಬಲಿ
ಹಾವೇರಿಯ ಮೂಟೆಬೆನ್ನೂರು ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಕಾರು ಅಪಘಾತಗೊಂಡು ಆರು ಜನರು ಸ್ಥಳದಲ್ಲೇ ಅಸು ನೀಗಿದ್ದಾರೆ. ಗಾಯಗೊಂಡ ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ. ಕೋಟೆಗುಡ್ಡದ ಬಳಿಯಲ್ಲಿ ಈ ದುರಂತ ಸಂಭವಿಸಿದ್ದು, ಮುಂದೆ ಹೋಗುತ್ತಿದ್ದ ಲಾರಿಗೆ ಹಿಂದಿನಿಂದ ಕಾರು ಡಿಕ್ಕಿ ಹೊಡೆದಿದೆ. ಹರಿಹರ
ಕೇಂದ್ರದ ಸೂಚನೆಯಂತೆ ಎಲ್ಲಾ ಸುರಕ್ಷತಾ ಕ್ರಮ ಪಾಲನೆ: ಸಿಎಂ
ಉಗ್ರರ ನೆಲೆಗಳ ಮೇಲೆ ದಾಳಿ ಬಳಿಕ ಕೇಂದ್ರ ಸರ್ಕಾರದ ನೀಡಿರುವ ಎಲ್ಲಾ ಸೂಚನೆಗಳನ್ನು ಪಾಲಿಸಲಾಗುತ್ತಿದೆ. ಎಲ್ಲೆಡೆ ಅಣುಕು ಕವಾಯತು ಮಾಡಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಮದ್ದೂರು ಕಾಫಿ ಡೇ ಹತ್ತಿರದ ಗೆಜ್ಜಲಗೆರೆ ಹೆಲಿಪ್ಯಾಡ್ ನಲ್ಲಿ ಬಂದಿಳಿದು ಕಾರ್ಯಕ್ರಮಕ್ಕೆ ತೆರಳುವ ಮುನ್ನ
ರಾಜ್ಯದ ಜಲಾಶಯಗಳ ಮೇಲೆ ಪೊಲೀಸ್ ಕಣ್ಗಾವಲು
ಭಾರತವು ಉಗ್ರರ ವಿರುದ್ಧ ನಡೆಸಿದ ಆಪರೇಷನ್ ಸಿಂಧೂರ ಕಾರ್ಯಾಚರಣೆಯ ಬಳಿಕ ಮುಂಜಾಗ್ರತಾ ಕ್ರಮವಾಗಿ ಹಲವು ರಕ್ಷಣಾ ಕ್ರಮಗಳನ್ನು ಕೈಗೊಳ್ಳ ಲಾಗಿದೆ. ಅದರಂತೆ ರಾಜ್ಯದಲ್ಲೂ ಪ್ರಮುಖ ಸ್ಥಳ , ಸಂಸ್ಥೆಗಳಿಗೆ ಬಿಗಿ ಭದ್ರತೆ ನೀಡಲಾಗಿದೆ. ಜಲಸಂಪನ್ಮೂಲ ಇಲಾಖೆಯ ಆದೇಶದಂತೆ ನಾಡಿನಲ್ಲಿರುವ ಜಲಾಶಯಗಳಿಗೂ ಹೆಚ್ಚಿನ
ಕರ್ನಲ್ ಸೋಫಿಯಾ ಅಂದ್ರೆ ಕನ್ನಡಿಗರಿಗೆ ಪುಳಕ
ಭಾರತೀಯ ವಾಯುಪಡೆಯು ಆಪರೇಶನ್ ಸಿಂಧೂರ ಕಾರ್ಯಾಚರಣೆ ಮೂಲಕ ಉಗ್ರರ ನೆಲೆಗಳನ್ನು ನಾಶಪಡಿಸಿದ ಯಶೋಗಾಥೆಯನ್ನು ಎಳೆ ಎಳೆಯಾಗಿ ಜಗತ್ತಿಗೆ ತೆರೆದಿಟ್ಟ ಲೆಪ್ಟಿನೆಂಟ್ ಕರ್ನಲ್ ಸೋಫಿಯಾ ಖುರೇಶಿ ಬೆಳಗಾವಿಯ ಸೊಸೆ ಎಂಬುದು ಕನ್ನಡಿಗರ ಪುಳಕಕ್ಕೆ ಕಾರಣವಾಗಿದೆ. ಸೋಫಿಯಾ ಖುರೇಷಿ ಬೆಳಗಾವಿಯ ಸೊಸೆ. ಬಹುರಾಷ್ಟ್ರೀಯ ಸೇನಾ
ರಾಜ್ಯದ ಕರಾವಳಿಗಳಲ್ಲಿ ಹೈಅಲರ್ಟ್, ವಿದೇಶಿ ಹಡಗುಗಳ ತೀವ್ರ ತಪಾಸಣೆ , ಆಳ ಮೀನುಗಾರಿಕೆಗೆ ತಡೆ
ಉಗ್ರರ ತಾಣಗಳ ಮೇಲೆ ಭಾರತದ ವಾಯುಪಡೆ ದಾಳಿ ಆಪರೇಷನ್ ಸಿಂಧೂರ ಕಾರ್ಯಾಚರಣೆಯ ಬಳಿಕ ಮುನ್ನೆಚ್ಚರಿಕೆ ಕ್ರಮವಾಗಿ ದೇಶಾದ್ಯಂತ ಪ್ರಮುಖ ನಗರಗಳು, ಬಂದರು, ವಿಮಾನ ನಿಲ್ದಾಣಗಳಿಗೆ ಬಿಗಿ ಭದ್ರತೆ ಕಲ್ಪಿಸಲಾಗಿದೆ. ಅದೇ ರೀತಿ ರಾಜ್ಯದ ಕರಾವಳಿಗಳಲ್ಲಿ ಹೈಅಲರ್ಟ್ ಘೋಷಿಸಲಾಗಿದೆ. ಕಾರವಾರದಲ್ಲಿ ಕದಂಬ ನೌಕಾ
ಸಾಹಿತಿ ಜಿ.ಎಸ್.ಸಿದ್ದಲಿಂಗಯ್ಯ ನಿಧನ
ಸಾಹಿತಿ, ವಿಮರ್ಶಕ ಮತ್ತು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾಗಿ ಕ್ರಿಯಾಶೀಲವಾಗಿ ಸೇವೆ ಸಲ್ಲಿಸಿದ್ದ ಜಿ.ಎಸ್.ಸಿದ್ದಲಿಂಗಯ್ಯ(94) ಬೆಂಗಳೂರಿನ ವಿಜಯನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ತುಮಕೂರು ಜಿಲ್ಲೆ ಬೆಳ್ಳಾವಿಯವರಾದ ಸಿದ್ದಲಿಂಗಯ್ಯ ಅವರು ಶಿಕ್ಷಣ ಇಲಾಖೆಯಲ್ಲಿ ಅಧಿಕಾರಿಯಾಗಿ ಉತ್ತಮ ಕೆಲಸ ಮಾಡಿದ್ದರು. ಕುವೆಂಪು ಅವರ ನೆಚ್ಚಿನ
ರಾಜ್ಯದ ಮೂರು ಜಿಲ್ಲೆಗಳಲ್ಲಿ ಡಿಫೆನ್ಸ್ ಮಾಕ್ ಡ್ರಿಲ್
ಕೇಂದ್ರ ಗೃಹ ಸಚಿವಾಲಯವು ದೇಶಾದ್ಯಂತ ಮಾಕ್ ಡ್ರಿಲ್ ಮಾಡಲು ಆದೇಶಿಸಿದೆ. ಈಗಾಗಲೇ ಬೇರೆ ರಾಜ್ಯಗಳಲ್ಲಿ ಮಾಕ್ ಡ್ರಿಲ್ ಮಾಡಲಾಗುತ್ತಿದೆ. ಕರ್ನಾಟಕದ ಬೆಂಗಳೂರು, ಕಾರವಾರ ಮತ್ತು ರಾಯಚೂರಿನಲ್ಲಿ ನಾಳೆ ಮಾಕ್ ಡ್ರಿಲ್ಗೆ ನಿರ್ಧರಿಸಲಾಗಿದೆ ಎಂದು ಅಗ್ನಿಶಾಮಕ ದಳದ ಡಿಜಿಪಿ ಪ್ರಶಾಂತ್ ಕುಮಾರ್ ಠಾಕೂರ್
ವೀಡಿಯೊ ಪೋಸ್ಟ್ ಮಾಡಿ ಸಿಎಂಗೆ ಅವಹೇಳನಗೈದ ಪೇದೆ ಅಮಾನತು
ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ನಿಂದಿಸಿ ಸಾಮಾಜಿಕ ಜಾಲತಾಣದಲ್ಲಿ ವೀಡಿಯೊ ಪೋಸ್ಟ್ ಮಾಡಿದ್ದ ಕೇಂದ್ರ ಕಾರಾಗೃಹದ ಕಾನ್‌ಸ್ಟೆಬಲ್ ಎಚ್.ಎನ್.ಮಧು ಕುಮಾರ್ ಅವರನ್ನು ಸೇವೆಯಿಂದ ಅಮಾನತುಗೊಳಿಸಿ ಕಾರಾಗೃಹದ ಮುಖ್ಯ ಅಧೀಕ್ಷಕ ಪಿ.ಎಸ್.ರಮೇಶ್ ಆದೇಶಿಸಿದ್ದಾರೆ. ಸಿಎಂ ಅವರು ಬೆಳಗಾವಿಯಲ್ಲಿ ಪೊಲೀಸ್ ಅಧಿಕಾರಿ ವಿರುದ್ಧ ಕೈ ಎತ್ತಿದ
ತುಮಕೂರು ಕ್ರಿಕೆಟ್ ಮೈದಾನಕ್ಕೆ 41 ಎಕರೆ ಸ್ವಾಧೀನ ಪತ್ರ ಹಸ್ತಾಂತರ
ತುಮಕೂರಿನ ವಸಂತನರಸಾಪುರ ಕೈಗಾರಿಕಾ ಪ್ರದೇಶದಲ್ಲಿ ಅಂತಾರಾಷ್ಟ್ರೀಯ ಮಟ್ಟದ ಕ್ರಿಕೆಟ್ ಕ್ರೀಡಾಂಗಣ ನಿರ್ಮಿಸಲು ಕೆಐಎಡಿಬಿ ಮೂಲಕ ಒದಗಿಸುವ 41 ಎಕರೆ ಜಮೀನಿನ ಸ್ವಾಧೀನ ಪತ್ರವನ್ನು ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಗೆ (ಕೆ.ಎಸ್.ಸಿ.ಎ) ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ




