ಜಿಲ್ಲಾ ಸುದ್ದಿ
ದೇಗುಲದ ಕಳಸಾರೋಹಣದಲ್ಲಿ ಕ್ರೇನ್ ಬಕೆಟ್ ಮುರಿದು ಒಬ್ಬನ ಸಾವು
ದೇವಾಲಯದ ಕಳಸಾರೋಹಣ ನಡೆಯುವಾಗ ದಿಢೀರ್ ಕ್ರೇನ್ ಬಕೆಟ್ ಕಟ್ ಆಗಿ ಬಿದ್ದು ಓರ್ವ ಸ್ಥಳದಲ್ಲೇ ಮೃತಪಟ್ಟಿರುವ ದಾರುಣ ಘಟನೆ ಹಾನಗಲ್ ತಾಲೂಕಿನ ಶೇಷಗಿರಿ ಗ್ರಾಮದಲ್ಲಿ ಸಂಭವಿಸಿದೆ. ಕ್ರೇನ್ ಬಕೆಟ್ ಮೇಲಿನಿಂದ ಬಿದ್ದು ಸ್ಥಳದಲ್ಲೇ ಮಂಜು ಪಾಟೀಲ(42) ಮೃತಪಟ್ಟವರು. ಘಟನೆಯಲ್ಲಿ ಮಂಜು ಬಡಿಗೇರ್ ಗಂಭೀರ ಗಾಯಗೊಂಡಿದ್ದು, ಅವರನ್ನು ಹಾನಗಲ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಶೇಷಗಿರಿ ಗ್ರಾಮದಲ್ಲಿ ನಡೆಯುತ್ತಿದ್ದ ಗಂಗಾ ಪರಮೇಶ್ವರಿ ದೇವಸ್ಥಾನದ ಕಳಸಾರೋಹಣ ಕಾರ್ಯಕ್ರಮದಲ್ಲಿ ಈ ಘಟನೆ ಜರುಗಿದೆ. ಕಳಸ ಹಿಡಿದು ಕ್ರೇನ್
ಭಟ್ಕಳ: ಮೀನುಗಾರಿಕಾ ಬೋಟ್ ಮುಳುಗಡೆ: 6 ಮೀನುಗಾರರು ಬಚಾವ್
ಭಟ್ಕಳ: ಮೀನುಗಾರಿಕೆ ಮುಗಿಸಿ ವಾಪಾಸ್ ಆಗುತ್ತಿದ್ದ ವೇಳೆ ಬೋಟ್ ಮುಳುಗಡೆಗೊಂಡು ಮೀನುಗಾರರು ಪ್ರಾಣಾಪಾಯದಿಂದ ಪಾರಾದ ಘಟನೆ ಭಟ್ಕಳ ಬಂದರಿನಲ್ಲಿ ನಡೆದಿದೆ. ಬಲೆ ಹಾಗೂ ಸ್ವತ್ತುಗಳು ಸೇರಿದಂತೆ ಬೋಟ್ ಸಹಿತ ಮುಳುಗಡೆಯಾಗಿ ಸುಮಾರು 60 ಲಕ್ಷ ನಷ್ಟ ಸಂಭವಿಸಿದೆ. ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ
ಮುಡಾ ಹಗರಣ ಸಿಬಿಐಗಿಲ್ಲ: ಸಿದ್ದರಾಮಯ್ಯಗೆ ರಿಲೀಫ್ ನೀಡಿದ ಹೈಕೋರ್ಟ್
ಮುಡಾದಲ್ಲಿ ನಡೆದಿದೆ ಎನ್ನಲಾಗಿರುವ ಹಗರಣಕ್ಕೆ ಸಂಬಂಧಿಸಿದಂತೆ, ಕರ್ನಾಟಕ ಹೈಕೋರ್ಟ್ನ ಧಾರವಾಡ ಪೀಠ ತೀರ್ಪು ಪ್ರಕಟಿಸಿದ್ದು, ದೂರುದಾರ ಸ್ನೇಹಮಯಿ ಕೃಷ್ಣ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ವಜಾ ಗೊಳಿಸಿದೆ. ಲೋಕಾಯುಕ್ತ ಪೊಲೀಸರ ತನಿಖೆ ಅಸಮರ್ಪಕ ಎನ್ನುವುದಕ್ಕೆ ಕಾರಣಗಳಿಲ್ಲ, ಲೋಕಾಯುಕ್ತ ತನಿಖೆ ಪಕ್ಷಪಾತದಿಂದ ಕೂಡಿದೆ ಎಂಬುದಕ್ಕೆ
ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಆತ್ಮಹತ್ಯೆ ಮಾಡಿಕೊಂಡವರ ಕುಟುಂಬಕ್ಕೆ ಆರ್. ಅಶೋಕ್ ಸಾಂತ್ವನ
ಮೈಕ್ರೋ ಫೈನಾನ್ಸ್ ಹಾವಳಿಯಿಂದ ಕೊನ್ನಾಪುರದಲ್ಲಿ ತಾಯಿ-ಮಗ ಆತ್ಮಹತ್ಯೆ ಮಾಡಿಕೊಂಡ ಪ್ರಕರಣದ ಹಿನ್ನೆಲೆಯಲ್ಲಿ ಪ್ರತಿಪಕ್ಷ ನಾಯಕ ಆರ್. ಅಶೋಕ್ ಸ್ಥಳಕ್ಕೆ ಭೇಟಿ ನೀಡಿ ಕುಟುಂಬದವರಿಗೆ ಸಾಂತ್ವನ ಹೇಳಿದ್ದಾರೆ. 2018ರಲ್ಲಿ ಉಜ್ಜೀವನ್ ಬ್ಯಾಂಕ್ ನಲ್ಲಿ ಪ್ರೇಮಾ ಎಂಬವರು 6 ಲಕ್ಷ ರೂ. ಸಾಲ ಪಡೆದಿದ್ದು,
ಕ್ರೀಡಾಂಗಣಗಳು-ಗರಡಿ ಮನೆಗಳು ಹೆಚ್ಚಾಗಿರುವುದು ಆರೋಗ್ಯಕರ ಊರಿನ ಲಕ್ಷಣ: ಕೆವಿಪಿ
ಯಾವುದೇ ಊರಲ್ಲಿ ಆಸ್ಪತ್ರೆ-ಮೆಡಿಕಲ್ ಶಾಪ್ ಗಳಿಗಿಂತ ಕ್ರೀಡಾಂಗಣಗಳು-ಗರಡಿ ಮನೆಗಳು ಹೆಚ್ಚಾಗಿದ್ದರೆ ಅದು ಆರೋಗ್ಯಕರ ಊರಿನ ಲಕ್ಷಣ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್ ಹೇಳಿದ್ದಾರೆ. ಹಾಸನದ ಅರಕಲಗೂಡಿನಲ್ಲಿ ಶ್ರೀ ರಾಘವೇಂದ್ರ ಯೂತ್ ಆಂಡ್ ಸ್ಪೋರ್ಟ್ಸ್ ಕ್ಲಬ್ ಆಯೋಜಿಸಿದ್ದ “ಸಿದ್ದರಾಮಯ್ಯ ಕಪ್” ಸೀಸನ್
ಯಾದಗಿರಿಯಲ್ಲಿ ಭೀಕರ ಅಪಘಾತ: ಮೂವರು ಮಕ್ಕಳು ಸೇರಿ ಒಂದೇ ಕುಟುಂಬದ 5 ಮಂದಿ ಸಾವು
ಬೈಕ್ ಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಮೂವರು ಮಕ್ಕಳು ಸೇರಿದಂತೆ ಒಂದೇ ಕುಟುಂಬದ 5 ಮಂದಿ ಮೃತಪಟ್ಟ ದಾರುಣ ಘಟನೆ ಯಾದಗಿರಿ ಜಿಲ್ಲೆಯಲ್ಲಿ ಸಂಭವಿಸಿದೆ. ಯಾದಗಿರಿ ಜಿಲ್ಲೆಯ ಸುರಪುರ ತಿಂಥಣಿ ಬಳಿ ಬುಧವಾರ ಮಧ್ಯಾಹ್ನ ಈ ದುರ್ಘಟನೆ ಸಂಭವಿಸಿದ್ದು, ಆಂಜನೇಯ
ಮನೆಯವರನ್ನು ಹೊರಗಟ್ಟಿ ಬೀಗ ಜಡಿದ ಮೈಕ್ರೋ ಫೈನಾನ್ಸ್ ಸಿಬ್ಬಂದಿ
ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳದಿಂದ ಆತ್ಮಹತ್ಯೆ, ಮನೆ ತೊರೆಯುವುದರ ಜೊತೆಗೆ ಮೈಕ್ರೋ ಫೈನಾನ್ಸ್ ಸಿಬ್ಬಂದಿಯೇ ಸಾಲಗಾರರನ್ನು ಮನೆಯಿಂದ ಹೊರಗಟ್ಟಿ ಬೀಗ ಜಡಿಯುತ್ತಿದೆ. ಧಾರವಾಡ ಜಿಲ್ಲೆ ಕುಂದಗೋಳ ತಾಲೂಕಿನ ಹಿರೇನರ್ತಿ ಗ್ರಾಮದ ಮೌಲಾಸಾಬ ಬೂಕಟಗಾರ ಕುಟುಂಬ ಮತ್ತು ಗದಗ ಜಿಲ್ಲೆ ರೋಣದ ಶ್ಯಾನಭೋಗರ
ಮೈಸೂರಿನ ಹಲವೆಡೆ ಐಟಿ ಅಧಿಕಾರಿಗಳಿಂದ ರೇಡ್
ಸರ್ಕಾರದ ಕಾಮಗಾರಿಗಳ ಗುತ್ತಿಗೆ ವಹಿಸಿಕೊಂಡಿರುವ ಕಾಂಟ್ರಾಕ್ಟರ್ ರಾಮಕೃಷ್ಣೇಗೌಡ ಮನೆ, ಎಂ ಪ್ರೋ ಪ್ಯಾಲೇಸ್, ಹೋಟೆಲ್, ಕಲ್ಯಾಣ ಮಂಟಪ ಸೇರಿದಂತೆ ಮೈಸೂರಿನ ಹಲವೆಡೆ ಬುಧವಾರ ಬೆಳಗ್ಗೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. 10ಕ್ಕೂ ಹೆಚ್ಚು ಐಟಿ ಅಧಿಕಾರಿಗಳ ತಂಡ ದಾಳಿ
ನಟ ಡಾಲಿಗಾಗಿ ಮುಗಿ ಬಿದ್ದ ಅಭಿಮಾನಿಗಳಿಗೆ ಲಾಠಿ ರುಚಿ
ಚಿತ್ರದುರ್ಗ ತಾಲೂಕಿನ ಭರಮಸಾಗರದಲ್ಲಿ ನಡೆಯುತ್ತಿರುವ ತರಳಬಾಳು ಹುಣ್ಣಿಮೆ ಮಹೋತ್ಸವದಲ್ಲಿ ಭಾಗವಹಿಸಲು ನಟ ಡಾಲಿ ಧನಂಜಯ ಆಗಮಿಸಿದ್ದರು. ಈ ವೇಳೆ ಧನಂಜಯ ಅವರನ್ನು ನೋಡಲು ಅಭಿಮಾನಿಗಳು ಜಮಾಯಿಸಿದ್ದಾರೆ. ಡಾಲಿ ಜೊತೆ ಸೆಲ್ಫಿ ಬೇಕು ಎಂದು ಫ್ಯಾನ್ಸ್ ಮುಗಿ ಬಿದ್ದಿದ್ದಾರೆ, ಅಭಿಮಾನಿಗಳನ್ನು ನಿಯಂತ್ರಿಸಲು ಪೊಲೀಸರು
ಪ್ರಿಯಕರನೊಂದಿಗೆ ಸೇರಿ ಗಂಡನ ಕೊಲೆಗೈದು ನಾಪತ್ತೆ ಪ್ರಕರಣ ದಾಖಲಿಸಿದಾಕೆ ಪೊಲೀಸ್ ಬಲೆಗೆ
ಚಾಮರಾಜನಗರ ತಾಲೂಕಿನ ಜನ್ನೂರು ಗ್ರಾಮದಲ್ಲಿ ಪ್ರಿಯಕರನೊಂದಿಗೆ ಸೇರಿ ಪತಿಯ ಕೊಲೆ ಮಾಡಿ ಶವವನ್ನು ಬಿಸಾಡಿ ಪತಿ ನಾಪತ್ತೆ ಎಂದು ನಾಟಕವಾಡಿರುವ ಪ್ರಕರಣವೊಂದು ಬಯಲಾಗಿದೆ. ಜನ್ನೂರು ಗ್ರಾಮದ ರಮೇಶ್ (45) ಕೊಲೆಯಾದವರು, ಪತ್ನಿ ಗೀತಾ ಹಾಗೂ ಪ್ರಿಯಕರ ಗುರುಪಾದಸ್ವಾಮಿ ಬಂಧಿತ ಆರೋಪಿಗಳು. ದಂಪತಿಗೆ




