ಜಿಲ್ಲಾ ಸುದ್ದಿ
ಚಿಕ್ಕಮಗಳೂರಿನಲ್ಲಿ ಹೆಚ್ಚುತ್ತಿದೆ ಮಂಗನಕಾಯಿಲೆ
ಚಿಕ್ಕಮಗಳೂರು ಜಿಲ್ಲೆಯಲ್ಲಿ 7 ಜನರಲ್ಲಿ ಮಂಗನ ಕಾಯಿಲೆ ಕಾಣಸಿಕೊಂಡಿದ್ದು ಆತಂಕ ಸೃಷ್ಟಿಯಾಗಿದೆ. ಖಾಂಡ್ಯ ಹೋಬಳಿಯ ಮತ್ತಿಖಂಡ ಗ್ರಾಮದ 25 ವರ್ಷದ ಯುವಕನಲ್ಲಿ ಮೊದಲು ಈ ಕಾಯಿಲೆ ಕಾಣಿಸಿಕೊಂಡಿತ್ತು. ಈಗ ಎನ್ಆರ್ ಪುರ ಗ್ರಾಮದ ಮೇಲ್ಪಾಲ್ ಗ್ರಾಮದಲ್ಲಿ ಮೂರು ಜನರಲ್ಲಿ ಕೆಎಫ್ಡಿ ಕಾಣಿಸಿಕೊಂಡಿದ್ದು, ಕೊಪ್ಪ ಸರ್ಕಾರಿ ಆಸ್ಪತ್ರೆಯಲ್ಲಿ ಕೆಎಫ್ಡಿ ವಾರ್ಡ್ ತೆರೆಯಲಾಗಿದೆ. ಕಳೆದ ವರ್ಷ ಜಿಲ್ಲೆಯಲ್ಲಿ 132 ಜನರಲ್ಲಿ ಕೆಎಫ್ಡಿ ಕಾಣಿಸಿಕೊಂಡು ನಾಲ್ವರು ಮೃತಪಟ್ಟಿದ್ದರು. ಚಿಕ್ಕಮಗಳೂರು, ಕೊಪ್ಪ, ಎನ್.ಆರ್.ಪುರ, ಶೃಂಗೇರಿ ತಾಲೂಕುಗಳಲ್ಲಿ
ಕಾವೇರಿ ನೀರಿಗಾಗಿ ಬೆಂಗಳೂರಿನಲ್ಲಿ 58 ಸಾವಿರ ಜನ ಅರ್ಜಿ ಸಲ್ಲಿಕೆ!
ಬೆಂಗಳೂರಿನ 110 ಹಳ್ಳಿಗಳಿಗೆ ಕಾವೇರಿ 5ನೇ ಹಂತದ ಕುಡಿಯುವ ನೀರು ಸರಬರಾಜಿಗೆ ಚಾಲನೆ ಸಿಕ್ಕ ಬಳಿಕ ನಮಗೂ ಕಾವೇರಿ ಕುಡಿಯುವ ನೀರಿನ ಸಂಪರ್ಕ ಮಾಡಿಕೊಡಿ ಎಂದು 58 ಸಾವಿರ ಜನರು ಬೆಂಗಳೂರು ಜಲಮಂಡಳಿಗೆ ಅರ್ಜಿ ಸಲ್ಲಿಸಿದ್ದಾರೆ. ಕಳೆದ ವರ್ಷ ಬರಗಾಲ ಆವರಿಸಿ
ಶಾಲಾ ಆವರಣದಲ್ಲೇ ಬಾಲಕಿಯ ಗ್ಯಾಂಗ್ ರೇಪ್: ಸರ್ಕಾರದ ವಿರುದ್ಧ ಅಶೋಕ್ ಕಿಡಿ
ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ದಿನದಿಂದಲೂ ಮಹಿಳೆಯರಿಗೆ ರಕ್ಷಣೆಯೇ ಇಲ್ಲದಂತಾಗಿದ್ದು ದಿನಕ್ಕೊಂದು ಮಾನಭಂಗ, ಅತ್ಯಾಚಾರ ಪ್ರಕರಣಗಳು ರಾಜ್ಯದ ಜನತೆಯನ್ನು ಬೆಚ್ಚಿ ಬೀಳಿಸುತ್ತಲೇ ಇದೆ. ಮಂಡ್ಯದಲ್ಲಿ 8 ವರ್ಷದ ಬಾಲಕಿಯನ್ನು ಬೆದರಿಸಿ ಸರ್ಕಾರಿ ಶಾಲಾ ಅವರಣದಲ್ಲೇ ದುಷ್ಕರ್ಮಿಗಳು ಸಾಮೂಹಿಕ ಅತ್ಯಾಚಾರ ಮಾಡಿರುವ ಘಟನೆ ರಾಜ್ಯದಲ್ಲಿ
ಮೈಕ್ರೋ ಫೈನಾನ್ಸ್ ನವರು ಕಿರುಕುಳ ಕೊಟ್ರೆ ನನಗೆ ಕರೆ ಮಾಡಿ ಎಂದ ಹೆಚ್‌ಡಿಕೆ
ಮಂಡ್ಯ ಜಿಲ್ಲೆಯಲ್ಲಿ ಮೈಕ್ರೋ ಫೈನಾನ್ಸ್ ನವರ ಉಪಟಳ ಜಾಸ್ತಿಯಾಗಿದ್ದು, ಅವರಲ್ಲಿ ಯಾರೇ ಆಗಲಿ ನಿಮ್ಮ ಮನೆ ಬಳಿಗೆ ಬಂದು ಕಿರುಕುಳ ನೀಡಿದರೆ ತಕ್ಷಣವೇ ನನಗೆ ದೂರವಾಣಿ ಕರೆ ಮಾಡಿ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ಶ್ರೀರಂಗಪಟ್ಟಣ ವಿಧಾನಸಭೆ ಕ್ಷೇತ್ರದ ಸಂತೆಕಸಲಗೆರೆ
ನಕ್ಸಲ್ ತೊಂಬಟ್ಟು ಲಕ್ಷ್ಮೀ ಉಡುಪಿ ಡಿಸಿ ಕಚೇರಿಯಲ್ಲಿ ಶರಣಾಗತಿ
ಉಡುಪಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಕ್ಸಲ್ ಚಳುವಳಿಯಲ್ಲಿ ಸಕ್ರಿಯವಾಗಿದ್ದ ತೊಂಬಟ್ಟು ಲಕ್ಷ್ಮೀ ಶರಣಾಗಿದ್ದಾರೆ. ಶರಣಾಗತಿಗೆ ಸಂಬಂಧಿಸಿದಂತೆ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಗೆ ಆಗಮಿಸಿ ತೊಂಬಟ್ಟು ಲಕ್ಷ್ಮೀ ಕಾನೂನು ಪ್ರಕ್ರಿಯೆ ಪೂರ್ಣಗೊಳಿಸಿದ್ದಾರೆ. ಶರಣಾಗತಿ ಮತ್ತು ಪುನರ್ವಸತಿ ಸಮಿತಿಯ ಸದಸ್ಯ ಶ್ರೀಪಾಲ್ ಜೊತೆಗಿದ್ದು, ಶರಣಾಗತಿ
ಯಾವುದೇ ಕಾರಣಕ್ಕೂ ಪಂಚ ಗ್ಯಾರಂಟಿ ಯೋಜನೆಗಳು ನಿಲ್ಲುವುದಿಲ್ಲ : ಎಚ್.ಎಂ.ರೇವಣ್ಣ
ಯಾವುದೇ ಕಾರಣಕ್ಕೂ ಪಂಚ ಗ್ಯಾರಂಟಿ ಯೋಜನೆಗಳು ನಿಲ್ಲುವುದಿಲ್ಲ, ಗ್ಯಾರಂಜಿ ಅನುಷ್ಠಾನ ಚುನಾವಣೆ ಗಿಮಿಕ್ ಅಲ್ಲ. ಜನರ ಅಭಿವೃದ್ಧಿ ದೂರದೃಷ್ಟಿಯನ್ನು ಗಮನದಲ್ಲಿರಿಸಿ ಜಾರಿ ಮಾಡಲಾಗಿದೆ ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ರಾಜ್ಯ ಅಧ್ಯಕ್ಷ ಎಚ್.ಎಂ.ರೇವಣ್ಣ ಹೇಳಿದ್ದಾರೆ. ಚಿತ್ರದುರ್ಗದಲ್ಲಿ ಜಿಲ್ಲಾ ಸಮಿತಿಯ ನೂತನ
ಕುಡಿದ ಮತ್ತಿನಲ್ಲಿ ಕೋಲಾರ ರೈಲು ನಿಲ್ದಾಣಕ್ಕೆ ಕಾರು ನುಗ್ಗಿಸಿದ ಭೂಪ
ಕುಡಿದ ಮತ್ತಿನಲ್ಲಿ ವ್ಯಕ್ತಿಯೊಬ್ಬ ಕೋಲಾರ ರೈಲು ನಿಲ್ದಾಣದೊಳಗೆ ಕಾರು ನುಗ್ಗಿಸಿದ್ದಾನೆ. ಟೇಕಲ್ ರೈಲ್ವೆ ನಿಲ್ದಾಣದಲ್ಲಿ ಶನಿವಾರ ತಡರಾತ್ರಿ ಈ ಘಟನೆ ಸಂಭವಿಸಿದೆ. ಕಾರು ರೈಲು ಪ್ಲಾಟ್‌ಫಾರ್ಮ್ ಮೇಲಿಂದ ಹಳಿಗಳ ಮೇಲೆ ಅಪ್ಪಳಿಸಿ ಕಾರು ಮತ್ತು ರೈಲ್ವೆ ಹಳಿ ಜಖಂಗೊಂಡಿದೆ. ರಾಕೇಶ್ ಎಂಬಾತ
ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಬಾಣಂತಿ ಸಾವು
ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಮತ್ತೋರ್ವ ಬಾಣಂತಿ ಮೃತಪಟ್ಟಿದ್ದಾರೆ. ಕುರುಗೋಡು ತಾಲೂಕಿನ ಕೋಳೂರು ಗ್ರಾಮದ ನಿವಾಸಿ ಮಹಾದೇವಿ (21) ಮೃತ ಬಾಣಂತಿ. ಮಹಾದೇವಿ ಅವರಿಗೆ ಜನವರಿ 25ರಂದು ಸಿಸೇರಿಯನ್ ಮೂಲಕ ಹೆರಿಗೆ ಮಾಡಲಾಗಿತ್ತು. ಸಿಸೇರಿಯನ್ ಬಳಿಕ ಬಾಣಂತಿ ಮಹಾದೇವಿ ಆರೋಗ್ಯವಾಗಿದ್ದರು. ಐದು ದಿನಗಳ ಬಳಿಕ
ಕೊಡಗು ಅಭಿವೃದ್ಧಿಗೆ ಅನುದಾನ: ಸಿಎಂ ಭರವಸೆ
ಬಹಳ ಜನ ಬಹುತ್ವದ ಭಾರತವನ್ನು ಒಂದು ಧರ್ಮದ ರಾಷ್ಟ ಎನ್ನುತ್ತಾರೆ. ಭಾರತ ಜಾತ್ಯತೀತ, ಪ್ರಜಾಪ್ರಭುತ್ವವಾದಿ ಬಹುತ್ವದ ರಾಷ್ಟ್ರ. ಇದನ್ನು ಒಂದು ಧರ್ಮಕ್ಕೆ ಸೇರಿದ ಸಾರ್ವಭೌಮ ರಾಷ್ಟವನ್ನಾಗಿ ಮಾಡಲು ಆಗುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದ್ದಾರೆ. ಜಲಸಂಪನ್ಮೂಲ ಇಲಾಖೆ ಮತ್ತು ಕಾವೇರಿ ನೀರಾವರಿ
ಕಾಂಗ್ರೆಸ್ಸಿಂದ ಹೋದವರನ್ನು ಬಿಜೆಪಿ ಯೂಸ್ ಅಂಡ್ ಥ್ರೋ ಮಾಡಿದೆ: ಡಿಕೆ ಶಿವಕುಮಾರ್
ಶಿವಮೊಗ್ಗ: ಕಾಂಗ್ರೆಸ್‌ನಿಂದ ಹೋದವರನ್ನು ಬಿಜೆಪಿಯವರು ಯೂಸ್ ಅಂಡ್ ಥ್ರೋ ರೀತಿ ನೋಡಿಕೊಳ್ಳುತ್ತಿದ್ದಾರೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷವು ಬೇರೆ ಪಕ್ಷಗಳಲ್ಲಿ ನಡೆಯುತ್ತಿರುವ ವಿದ್ಯಮಾನಗಳ ಮೇಲೆ ಅವಲಂಬಿತವಾಗಿ ಸರ್ಕಾರ ನಡೆಸುತ್ತಿಲ್ಲ. ತಮ್ಮ ಪಕ್ಷದ




