Friday, September 25, 2026
Menu

ಸಾಲ ಪಡೆದ ಜನರು ತಪ್ಪು ನಿರ್ಧಾರ ಕೈಗೊಳ್ಳಬೇಡಿ: ಸಿಎಂ ಸಿದ್ದರಾಮಯ್ಯ ಮನವಿ

ಮೈಸೂರು: ಆರ್ ಬಿಐ ನಿಯಮಾವಳಿ ಉಲ್ಲಂಘಿಸುವ ,ಹೆಚ್ಚಿನ ಬಡ್ಡಿದರ ವಸೂಲು ಮಾಡುವ ಹಾಗೂ ಕಾನೂನು ಬಾಹಿರವಾಗಿ ಕಾರ್ಯನಿರ್ವಹಿಸುತ್ತಿರುವ ಮೈಕ್ರೋ ಫೈನಾನ್ಸ್ ಸಂಸ್ಥೆಗಳ ಮೇಲೆ ಸರ್ಕಾರ ಕಾನೂನು ಕ್ರಮ ಕೈಗೊಳ್ಳಲಿದ್ದು, ಜನರು ಆತಂಕಕ್ಕೊಳಗಾಗಿ ಆತ್ಮಹತ್ಯೆಯಂತಹ ತಪ್ಪು ನಿರ್ಧಾರಗಳನ್ನು ಕೈಗೊಳ್ಳಬಾರದು ಎಂದು ರಾಜ್ಯದ ಜನರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿನಂತಿಸಿದರು. ಅವರು ಇಂದು ಮೈಸೂರು ಹೆಲಿಪ್ಯಾಡ್ ನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಮೈಕ್ರೋ ಫೈನಾನ್ಸ್ ನಿಂದ ಜನರಿಗಾಗುತ್ತಿರುವ ತೊಂದರೆ ಹಾಗೂ ಬಿಜೆಪಿಯವರು ರಾಜ್ಯದಲ್ಲಿ ಗೂಂಡಾ ರಾಜ್ಯವಿದೆ

ಬಸವಣ್ಣನವರ ಆಶಯಗಳೆಲ್ಲಾ ನಮ್ಮ ಸಂವಿಧಾನದಲ್ಲಿ ಅಡಕ: ಸಿಎಂ ಸಿದ್ದರಾಮಯ್ಯ

ಮೈಸೂರು: ಬಸವಣ್ಣನವರ ಆಶಯಗಳೆಲ್ಲಾ ನಮ್ಮ ಸಂವಿಧಾನದಲ್ಲಿ ಅಡಕವಾಗಿವೆ. ಇದನ್ನು ಇಡೀ ಸಮಾಜ ಅರಿತುಕೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು. ಮೈಸೂರು ಸುತ್ತೂರಿನ ಶಿವರಾತ್ರೀಶ್ವರ ಶಿವಯೋಗಿಗಳ ಜಾತ್ರಾ ಮಹೋತ್ಸವದಲ್ಲಿ ಪಾಲ್ಗೊಂಡು ಮಹದೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿ ಗದ್ದುಗೆ

ಪೊಲೀಸರ ಮೇಲೆ ಕಲ್ಲೆಸೆದ ರೌಡಿ ಕಾಲಿಗೆ ಗುಂಡೇಟು

ಹಾಸನದಲ್ಲಿ ಬೆಂಗಳೂರಿನಿಂದ ಮಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್ ತಡೆದು ಹಲ್ಲೆ ಮಾಡಿದ್ದ ರೌಡಿಯ ಕಾಲಿಗೆ ಪೊಲೀಸರು ಗುಂಡು ಹಾರಿಸಿದ್ದಾರೆ. ಒಂದು ಕೊಲೆ, ಮೂರು ಕೊಲೆ ಯತ್ನ ಪ್ರಕರಣಗಳ ಆರೋಪಿ ಮನುವನ್ನು ಬೆಂಗಳೂರಿನಲ್ಲಿ ಬಂಧಿಸಿ ನಗರ ಠಾಣೆ ಪೊಲೀಸರು ಹಾಸನಕ್ಕೆ ಕರೆ ತರುತ್ತಿದ್ದಾಗ

ನೆಲಮಂಗಲದಲ್ಲಿ ಉದ್ಯಮಿಯ ಅಪಹರಿಸಿ ಹಣ ದರೋಡೆ, ಚಿತ್ರಹಿಂಸೆ

ನೆಲಮಂಗಲ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಉದ್ಯಮಿಯೊಬ್ಬರನ್ನು ದುಷ್ಕರ್ಮಿಗಳು ಅಪಹರಿಸಿ ಚಿತ್ರಹಿಂಸೆ ನೀಡಿ 28 ಲಕ್ಷ ರೂ. ದೋಚಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಕೊಲ್ವೆ ಗ್ರಾಮದ ಬಂಕ್ ಹಾಗೂ ಟ್ರಾನ್ಸ್ ಪೋರ್ಟ್ ಉದ್ಯಮಿ ಇಕ್ಬಾಲ್ ಅಪಹರಣಕ್ಕೆ ಒಳಗಾದವರು. ಜ.24ರಂದು

ನಿಡಗುಂದಿಯಲ್ಲಿ ಪೊಲೀಸ್‌ ವಿಚಾರಣೆಗೆ ಹೆದರಿ ಯುವಕ ಆತ್ಮಹತ್ಯೆ

ನಿಡಗುಂದಿ ತಾಲೂಕಿನ ಹೆಬ್ಬಾಳ ಗ್ರಾಮದಲ್ಲಿ ಪೊಲೀಸ್ ವಿಚಾರಣೆಗೆ ಹೆದರಿ ಯುವಕ ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ. ಮೌನೇಶ್ ಅಬ್ಬಿಹಾಳ (30) ಆತ್ಮಹತ್ಯೆ ಮಾಡಿಕೊಂಡ ಯುವಕ ಎಂದು ಗುರುತಿಸಲಾಗಿದೆ. ಕಳೆದ ಕೆಲವು ದಿನಗಳ ಹಿಂದೆ ಮೃತನ ಸೋದರ ಮಾವ ಬಸವರಾಜ್ ಕಾಣೆಯಾಗಿದ್ದರು. ಈ

ತಿರುವನಂತಪುರ ಶ್ರೀ ಅನಂತ ಪದ್ಮನಾಭ ಸ್ವಾಮಿ ಪ್ರಧಾನ ಅರ್ಚಕರಾಗಿ ಶ್ರೀಸತ್ಯನಾರಾಯಣ ತೋಡ್ತಿಲ್ಲಾಯ

ಕೇರಳದ ತಿರುವನಂತಪುರ ಶ್ರೀ ಅನಂತ ಪದ್ಮನಾಭ ಸ್ವಾಮಿ ದೇಗುಲ ಭಾರತದ ಅತ್ಯಂತ ಶ್ರೀಮಂತ ದೇವಸ್ಥಾನವೆಂಬ ಹೆಗ್ಗಳಿಕೆ ಹೊಂದಿದ್ದು, ಅಲ್ಲಿನ ಪೆರಿಯ ನಂಬಿ ಪಟ್ಟ ದಕ್ಷಿಣ ಕನ್ನಡ ಜಿಲ್ಲೆಯ ಅರ್ಚಕ ಬಡೆಕ್ಕರ ಶ್ರೀಸತ್ಯನಾರಾಯಣ ತೋಡ್ತಿಲ್ಲಾಯ ಯಾನೆ ನಾಗೇಶ ತೋಡ್ತಿಲ್ಲಾಯರಿಗೆ ಲಭಿಸಿದೆ. ಪೆರಿಯ ನಂಬಿ

ಕೊಪ್ಪಳ ಗವಿಸಿದ್ದೇಶ್ವರ ಜಾತ್ರೆ ಮಹಾಸಂಪನ್ನ: 25 ಲಕ್ಷಕ್ಕೂ ಹೆಚ್ಚು ಭಕ್ತರಿಗೆ ದಾಸೋಹ

ಲಕ್ಷ ಲಕ್ಷ ಸಂಖ್ಯೆಯಲ್ಲಿ ಭಕ್ತರು ಭಾಗವಹಿಸಿದ ಕೊಪ್ಪಳದ ಗವಿಮಠದ ಜಾತ್ರೆಗೆ ವಿದ್ಯುಕ್ತವಾಗಿ ಮಹಾ ಸಂಪನ್ನಗೊಂಡಿದೆ. 25 ಲಕ್ಷಕ್ಕೂ ಹೆಚ್ಚು ಭಕ್ತಾದಿಗಳು ದಾಸೋಹದಲ್ಲಿ ಊಟ ಮಾಡಿದ್ದಾರೆ. ಜನವರಿ 15 ರಂದು ಗವಿಸಿದ್ದೇಶ್ವರರ ರಥೋತ್ಸವ ವೈಭವದಿಂದ ನಡೆದಿತ್ತು. ಅಂದು ಐದು ಲಕ್ಷ ಜನ ಭಾಗವಹಿಸಿದ್ದರು.

ಬೆಂಗಳೂರಿನಿಂದ ಮಂಗಳೂರಿಗೆ ತೆರಳುತ್ತಿದ್ದ ಬಸ್‌ ತಡೆದು ರೌಡಿಯ ಹುಚ್ಚಾಟ

ಹಾಸನ ಹೊರವಲಯದ ಬೈಪಾಸ್‌ ರಸ್ತೆಯಲ್ಲಿ ಬೆಂಗಳೂರಿನಿಂದ ಮಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್ ತಡೆದ ರೌಡಿ ಲಾಂಗ್‌ನಿಂದ ಹಲ್ಲೆಗೆ ಯತ್ನಿಸಿದ ಘಟನೆ ನಡೆದಿದೆ. ನಸುಕಿನ ಜಾವ ಬೈಪಾಸ್‌ ರಸ್ತೆಯ ದೇವರಾಯಪಟ್ಟಣದ ಬಳಿ ಬೆಂಗಳೂರಿನಿಂದ ಮಂಗಳೂರಿಗೆ ಖಾಸಗಿ ಬಸ್‌ ಸಂಚರಿಸುತ್ತಿತ್ತು. ಈ ಸಂದರ್ಭದಲ್ಲಿ ರೌಡಿ

ಹೊಳೆನರಸೀಪುರದಲ್ಲಿ ರೈಲಿಂದ ನದಿಗೆ ಬಿದ್ದ ವಿದ್ಯಾರ್ಥಿ

ಹಾಸನದ ಹೊಳೆನರಸೀಪುರ ಪಟ್ಟಣದಲ್ಲಿ ಚಲಿಸುತ್ತಿದ್ದ ರೈಲಿನಿಂದ ಆಯತಪ್ಪಿ ವಿದ್ಯಾರ್ಥಿಯೊಬ್ಬ ನದಿಗೆ ಬಿದ್ದಿದ್ದಾನೆ. ಪ್ರಥಮ ಪಿಯುಸಿ ವ್ಯಾಸಂಗ ಮಾಡುತ್ತಿದ್ದ ಮುಜಾಮಿಲ್ ನದಿಗೆ ಬಿದ್ದ ವಿದ್ಯಾರ್ಥಿ. ವಿದ್ಯಾಥಿ ಕೆ.ಆರ್ ನಗರದಿಂದ ಹಾಸನಕ್ಕೆ ಎಕ್ಸ್ಪ್ರೆಸ್ ರೈಲಿನಲ್ಲಿ ತೆರಳುತ್ತಿದ್ದ. ಚಲಿಸುತ್ತಿದ್ದ ರೈಲಿನ ಬೋಗಿಯ ಮೆಟ್ಟಿಲ ಮೇಲೆ ಮುಜಾಮಿಲ್

ಮುಡಾ ಮಾಜಿ ಅಧ್ಯಕ್ಷ ನಟೇಶ್ ವಿರುದ್ಧ ಇಡಿ ಶೋಧ ರದ್ದುಗೊಳಿಸಿದ ಹೈಕೋರ್ಟ್‌

ಮುಡಾ ಹಗರಣಕ್ಕೆ ಸಂಬಂಧಿಸಿದಂತೆ  ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಆಯುಕ್ತ ಡಿಬಿ ನಟೇಶ್ ವಿರುದ್ಧ ಜಾರಿ ನಿರ್ದೇಶನಾಲಯ (ಇಡಿ) ಹೊರಡಿಸಿರುವ ಸಮನ್ಸ್ ರದ್ದು ವಿಚಾರವಾಗಿ ಮಹತ್ವದ ಸೂಚನೆ ನೀಡಿರುವ ಕರ್ನಾಟಕ ಹೈಕೋರ್ಟ್‌, ನಟೇಶ್ ವಿರುದ್ಧ ಪಿಎಂಎಲ್‌ಎ ಕಾಯ್ದೆಯಡಿ ಇಡಿ ಶೋಧನೆಯನ್ನು ರದ್ದುಪಡಿಸಿದೆ.