ಜಿಲ್ಲಾ ಸುದ್ದಿ
ಅಪ್ರಾಪ್ತ ವಯಸ್ಕ ಬಾಲಕಿಯೊಂದಿಗೆ ಪರಾರಿಯಾಗಿದ್ದ ವಿವಾಹಿತ ಶಿಕ್ಷಕ ಸೆರೆ
ಅಪ್ರಾಪ್ತ ವಯಸ್ಕ ವಿದ್ಯಾರ್ಥಿನಿಯೊಂದಿಗೆ ಪರಾರಿಯಾಗಿದ್ದ ಟ್ಯೂಷನ್ ಶಿಕ್ಷಕನನ್ನು ಮಂಡ್ಯದಲ್ಲಿ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ವಿದ್ಯಾರ್ಥಿನಿಯ ಪೋಷಕರು ನೀಡಿದ ದೂರಿನ ಆಧಾರದ ಮೇಲೆ ಮಂಡ್ಯದಲ್ಲಿ ಟ್ಯೂಷನ್ ಶಿಕ್ಷಕ ಅಭಿಷೇಕ್ ಗೌಡ ವಿರುದ್ಧ ಅಪಹರಣ ಪ್ರಕರಣ ದಾಖಲಾಗಿತ್ತು. ಆರೋಪಿಯು ವಿವಾಹಿತನಾಗಿದ್ದು, ಎರಡು ವರ್ಷದ ಮಗುವಿದೆ ಎಂದು ಪೊಲೀಸ ರು ಬಹಿರಂಗಪಡಿಸಿದ್ದಾರೆ. ನವೆಂಬರ್ 23 ರಂದು ಬಾಲಕಿಯನ್ನು ಅಪಹರಿಸಲಾಗಿತ್ತು. ಜೆಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿ ತ್ತು. ಮಂಡ್ಯ ಜಿಲ್ಲೆಯ ಮಳವಳ್ಳಿ
ಹೂಮಳೆ ಸುರಿಸದಿದ್ದರೆ ವಿದ್ಯಾರ್ಥಿನಿಯರಿಗೆ ಕಿರುಕುಳ ಕೊಡ್ತಿದ್ದನಂತೆ ಈ ಬಿಸಿಎಂ ಅಧಿಕಾರಿ
ಲೋಕಾಯುಕ್ತ ಪೊಲೀಸರು ಇಂದು ರಾಜ್ಯದ ನಾನಾ ಕಡೆ ಸರ್ಕಾರಿ ಅಧಿಕಾರಿಗಳ ಮನೆ ಮೇಲೆ ದಾಳಿ ನಡೆಸಿದ್ದು, ಅದರಲ್ಲಿ ಬಳ್ಳಾರಿ ತಾಲೂಕು ಬಿಸಿಎಂ ಅಧಿಕಾರಿ ಲೋಕೇಶ್ ಮನೆಯೂ ಸೇರಿದೆ. ಲೋಕಾಯುಕ್ತ ಪೊಲೀಸರು ಬಳ್ಳಾರಿಯ ರಾಮಾಂಜನೇಯ ನಗರದಲ್ಲಿರುವ ಈ ಅಧಿಕಾರಿಯ ಮನೆ ಮೇಲೂ ದಾಳಿ
4 ಮಕ್ಕಳಿಗೆ ಜನ್ಮ ನೀಡಿದ ಮಹಾತಾಯಿ!
ತೆಲಂಗಾಣ ಮೂಲದ ಮಹಿಳೆಯೊಬ್ಬರು ಮಂಗಳೂರಿನ ಆಸ್ಪತ್ರೆಯಲ್ಲಿ ಒಂದೇ ಬಾರಿಗೆ 4 ಮಕ್ಕಳಿಗೆ ಜನ್ಮ ನೀಡಿದ್ದಾರೆ. ಮಂಗಳೂರಿನ ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ತೆಲಂಗಾಣ ಮೂಲದ ಬಾನುತ್ ದುರ್ಗಾ 4 ಮಕ್ಕಳಿಗೆ ಜನ್ಮ ನೀಡಿದ್ದಾರೆ. 2 ಹೆಣ್ಣು ಮತ್ತು 2 ಗಂಡು ಮಗು ಸೇರಿ
ಶಾಲೆಗೆ ಹೋಗಬೇಕೆಂಬ ಧಾವಂತದಲ್ಲಿ ಮನೆಗೆ ಹೊರಟಿದ್ದ ತಾಯಿ ಮಕ್ಕಳು ಅಪಘಾತಕ್ಕೆ ಬಲಿ
ತುಮಕೂರು ತಾಲೂಕಿನ ಓಬಳಾಪುರ ಗ್ರಾಮದ ಬಳಿ ಸಂಭವಿಸಿದ ಅಪಘಾತದಲ್ಲಿ ತಾಯಿ ಮತ್ತು ಇಬ್ಬರು ಮಕ್ಕಳು ಮೃತಪಟ್ಟಿದ್ದಾರೆ. ಮಹಮ್ಮದ್ ಆಸೀಫ್ (12), ಮಮ್ತಾಜ್ (38), ಶಾಖಿರ್ ಹುಸೇನ್ (18) ಮೃತ ದುರ್ದೈವಿಗಳು. ಮೃತರು ಮಧುಗಿರಿ ತಾಲೂಕಿನ ಗುಡ್ಡೆನಹಳ್ಳಿ ಗ್ರಾಮದ ನಿವಾಸಿಗಳು ಎಂದು ತಿಳಿದುಬಂದಿದೆ.
ರಾಜ್ಯದಲ್ಲಿ ಗಾಳಿಗೆ ತೆರಿಗೆ ಹಾಕುವ ದಿನ ದೂರ ಇಲ್ಲ: ಬಸವರಾಜ ಬೊಮ್ಮಾಯಿ
ಹುಬ್ಬಳ್ಳಿ: ರಾಜ್ಯ ಸರ್ಕಾರದ 60% ಕಮಿಷನ್ ಆರೋಪಕ್ಕೆ ದಾಖಲೆ ಕೊಡಿ ಎನ್ನುವ ಸಿಎಂ ಸಿದ್ಧರಾಮಯ್ಯ ಅವರು ನಮ್ಮ ಆಡಳಿತದಲ್ಲಿ 40 % ಸರಕಾರ ಎಂದರಲ್ಲ ಆವಾಗ ಏನು ದಾಖಲೆ ಕೊಟ್ಟಿದ್ದರು. ಇದುವರೆಗೂ ದಾಖಲೆ ಕೊಟ್ಟಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ
ನಿಯಂತ್ರಣ ತಪ್ಪಿದ ಲಾರಿಗೆ ಇಬ್ಬರು ಬಲಿ
ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಗೇರುಸೊಪ್ಪ ಸಾಗರ ರಸ್ತೆಯ ಸುಳಿಮುರ್ಖಿ ತಿರುವು ಬಳಿಚಾಲಕನ ನಿಯಂತ್ರಣ ತಪ್ಪಿ ಲಾರಿಯೊಂದು ಪಲ್ಟಿಯಾಗಿ ಇಬ್ಬರು ಮೃತಪಟ್ಟಿದ್ದಾರೆ. ಘಟನೆಯಲ್ಲಿ ನಾಲ್ವರು ಗಾಯಗೊಂಡಿದ್ದಾರೆ. ಸೋಮವಾರ ಮುಂಜಾನೆ ಘಟನೆ ನಡೆದಿದೆ. ಲಾರಿ ಕಬ್ಬಿಣದ ಸಾಮಾನುಗಳನ್ನು ತುಂಬಿಕೊಂಡು ಸಾಗರದಿಂದ ಹೊನ್ನಾವರ
ವೈದ್ಯರ ಮೇಲಿನ ಸಿಟ್ಟಿಗೆ ಎಂಎಲ್‌ಸಿ ಹೆಸರಲ್ಲಿ ವಿಷ ಸ್ವೀಟ್ ಬಾಕ್ಸ್ ಕಳಿಸಿದ್ದ ಮಾನಸಿಕ ರೋಗಿ
ಶಿವಮೊಗ್ಗ ನಗರದ ಮೂವರು ಗಣ್ಯ ವ್ಯಕ್ತಿಗಳಿಗೆ ವಿಧಾನಪರಿಷತ್ ಸದಸ್ಯ ಡಾ. ಧನಂಜಯ ಸರ್ಜಿ ಹೆಸರಿನಲ್ಲಿ ವಿಷಪೂರಿತ ಸ್ವೀಟ್ ಬಾಕ್ಸ್ಗಳನ್ನು ಕೊರಿಯರ್ ಮಾಡಿದ್ದ ಆರೋಪಿಯನ್ನು ಕೋಟೆ ಠಾಣೆ ಪೊಲೀಸರು ಬಂಧಿಸಿದ್ದಾರೆ. ಮಾನಸಿಕ ರೋಗಿ ಸೌಹಾರ್ದ ಪಟೇಲ್ ಬಂಧಿತ ಆರೋಪಿ. ಭದ್ರಾವತಿ ನಿವಾಸಿಯಾಗಿರುವ ಆರೋಪಿ
ಅಕ್ರಮ ಕಸ ಡಂಪಿಂಗ್ ಹೊಗೆಯಿಂದ ವ್ಯಕ್ತಿ ಸಾವು
ಹೊಸಕೋಟೆ ತಾಲೂಕಿನ ಭುವನಹಳ್ಳಿಯಲ್ಲಿ ಅಕ್ರಮ ಕಸದ ಡಂಪಿಂಗ್‌ನಿಂದ ಹೊರಹೊಮ್ಮುವ ಹೊಗೆಯಿಂದ ವ್ಯಕ್ತಿಯೊಬ್ಬರು ಉಸಿರುಗಟ್ಟಿ ಮೃತಪಟ್ಟಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಐವತ್ತು ವರ್ಷದ ಮುನೇಗೌಡ ಮೃತಪಟ್ಟವರು. ಕಸದ ರಾಶಿಯಿಂದ ಬಂದ ಹೊಗೆಯ ಕಾರಣ ಮುನೇಗೌಡ ಅವರಿಗೆ ಏಕಾಏಕಿ ಉಸಿರುಗಟ್ಟಿದೆ. ಅವರನ್ನು ಆಸ್ಪತ್ರೆಗೆ
ಸಿಂದಗಿಯಲ್ಲಿ ಚಿರತೆ ಓಡಾಟ, ಜನರಲ್ಲಿ ಆತಂಕ
ವಿಜಯಪುರ ನಗರದ ಸಿಂದಗಿ ಬೈಪಾಸ್ ಸುತ್ತಮುತ್ತ ಚಿರತೆ ಓಡಾಟ ನಡೆಸುತ್ತಿರುವುದುಉ ಪತ್ತೆಯಾಗಿದ್ದು, ಜನರಲ್ಲಿ ಆತಂಕ ಸೃಷ್ಟಿಯಾಗಿದೆ. ಇಲ್ಲಿನ ಮುನೇಶ್ವರಬಾಗ್ ಪ್ರದೇಶದಲ್ಲಿ ಚಿರತೆ ಓಡಾಡಿರುವ ದೃಶ್ಯಗಳು ಸಿಸಿ ಕ್ಯಾಮೆರಾದಲ್ಲಿ ದಾಖಲಾಗಿದೆ. ಸ್ಥಳಕ್ಕೆ ಅರಣ್ಯಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸ್ಥಳೀಯರು ಸುರಕ್ಷಿತ ಕ್ರಮ
ನಮ್ಮ ಮಣ್ಣಿನ ಮಕ್ಕಳನ್ನು ಗುರುತಿಸುವಲ್ಲಿ ವಿಫಲರಾಗಿದ್ದೇವೆ: ಬೊಮ್ಮಾಯಿ
ನಮ್ಮ ಮಣ್ಣಿನ ಮಕ್ಕಳನ್ನು ಗುರುತಿಸಲು ನಾವು ವಿಫಲರಾಗಿದ್ದೇವೆ. ಧಾರವಾಡದ ಅಂತಸತ್ವ ಆತ್ಮೀಯತೆ, ಪ್ರೀತಿ, ವಿಶ್ವಾಸ. ಅಂತಕರಣ ಎಲ್ಲವನ್ನೂ ಮುಂದಿನ ಪೀಳಿಗೆಗೆ ಬಿಟ್ಟು ಹೋಗುವುದು ನಮ್ಮೆಲ್ಲರ ಜವಾಬ್ದಾರಿ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಅಭಿಪ್ರಾಯ ಪಟ್ಟರು. ಧಾರವಾಡದ ಕರ್ನಾಟಕ