ಜಿಲ್ಲಾ ಸುದ್ದಿ
ಪ್ರಿಯಕರನೊಂದಿಗಿದ್ದ ಗರ್ಭಿಣಿ ಅನುಮಾನಾಸ್ಪದ ಸಾವು
ಚಿಕ್ಕಬಳ್ಳಾಪುರ ತಾಲೂಕಿನ ಗುಂತಪನಹಳ್ಳಿ ಗ್ರಾಮದಲ್ಲಿ ಪ್ರಿಯಕರನ ಜೊತೆ ವಾಸವಿದ್ದ 8 ತಿಂಗಳ ಗರ್ಭಿಣಿ ಅನುಮಾನಾಸ್ಪದವಾಗಿ ಮೃತಪಟ್ಟಿದ್ದಾರೆ. ಅಂಬೇಡ್ಕರ್ ನಗರದ ನಿವಾಸಿ ಅನುಷಾ (28) ಮೃತ ಗರ್ಭಿಣಿ. ಹೊಸಕೋಟೆ ಮೂಲದ ವ್ಯಕ್ತಿಯೊಂದಿಗೆ ಹಿಂದೆ ಮದುವೆ ಮಾಡಿಕೊಡಲಾಗಿತ್ತು. ಒಂದು ಹೆಣ್ಣು ಮಗು ಇತ್ತು. ಗಂಡನ ಅನಾರೋಗ್ಯದ ಕಾರಣ ಆತನನ್ನು ತೊರದು ತವರು ಮನೆಯಲ್ಲಿ ವಾಸವಾಗಿದ್ದಳು. ಕೂಲಿ ಮಾಡುತ್ತಿದ್ದ ಅನುಷಾಳಿಗೆ ಗುಂತಪನಹಳ್ಳಿ ಗ್ರಾಮದ ಪವನ್ ಪರಿಚಯವಾಗಿ ಇಬ್ಬರ ನಡುವೆ ದೈಹಿಕ ಸಂಪರ್ಕ ಬೆಳೆದು ಗರ್ಭಿಣಿ
ಅಂಗನವಾಡಿ ಚಾವಣಿ ಕುಸಿದು ಮಕ್ಕಳಿಗೆ ಗಾಯ, ಕಾರ್ಯಕರ್ತೆಗೆ ಅಮಾನತು ಶಿಕ್ಷೆ
ಕೋಲಾರದ ಡಿಕೆಹಳ್ಳಿ ಗ್ರಾಪಂ ವ್ಯಾಪ್ತಿಯ ದಾಸರಹೊಸಹಳ್ಳಿ ಗ್ರಾಮದಲ್ಲಿ ಅಂಗನವಾಡಿ ಕಟ್ಟಡದ ಚಾವಣಿಯ ಸಿಮೆಂಟ್ ಕುಸಿದ ಪರಿಣಾಮ ನಾಲ್ವರು ಮಕ್ಕಳು ಗಾಯಗೊಂಡಿದ್ದಾರೆ. ಘಟನೆಯಲ್ಲಿ ನಾಲ್ಕು ಮಕ್ಕಳ ತಲೆ ಹಾಗೂ ಕಾಲುಗಳಿಗೆ ಗಾಯಗಳಾಗಿವೆ. ಇಬ್ಬರು ಮಕ್ಕಳು ಗಂಭೀರವಾಗಿ ಗಾಯಗೊಂಡಿದ್ದಾರೆ. ಈ ಅಂಗನವಾಡಿ ಕೇಂದ್ರದಲ್ಲಿ ಒಟ್ಟು
ಗುತ್ತಿಗೆದಾರರ ಹಣ ಕಾಂಗ್ರೆಸ್ ಡೈವರ್ಟ್: ಸಂಘದ ಅಧ್ಯಕ್ಷ ಸುಭಾಷ ಪಾಟೀಲ್ ಆಕ್ರೋಶ
ಧಾರವಾಡ: ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದ ಅವಧಿಯಲ್ಲಿ ಬಿಜೆಪಿ ಶೇ . 40 ಕಮಿಷನ್ ಪಡೆಯುತ್ತಿದೆ ಎಂಬ ಆರೋಪ ಮಾಡಿದ್ದ ಗುತ್ತಿಗೆದಾರರು ಇದೀಗ ತಮ್ಮ ಬಾಕಿ ಬಿಲ್ ಪಡೆದುಕೊಳ್ಳಲು ಪರದಾಡುತ್ತಿದ್ದಾರೆ . ಈ ಕುರಿತು ಉತ್ತರ ಕರ್ನಾಟಕ ಸಿವಿಲ್ ಗುತ್ತಿಗೆದಾರರ ಸಂಘದ
ಬಾಣಂತಿಯರ ಸರಣಿ ಸಾವು ಖಂಡಿಸಿ ಬಿಜೆಪಿ ಪ್ರತಿಭಟನೆ
ಶಿವಮೊಗ್ಗ: ರಾಜ್ಯದೆಲ್ಲೆಡೆ ಬಾಣಂತಿಯರ ಸರಣಿ ಸಾವು ಸಂಭವಿಸಿದರೂ ಯಾವುದೇ ಕ್ರಮ ಕೈಗೊಳ್ಳದೆ ನಿರ್ಲಕ್ಷ್ಯ ತೋರುತ್ತಿರುವ ರಾಜ್ಯದ ಜನವಿರೋಧಿ ಕಾಂಗ್ರೆಸ್ ಸರ್ಕಾರದ ಧೋರಣೆಯನ್ನು ಖಂಡಿಸಿ ಶಿವಮೊಗ್ಗದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು. ರಾಜ್ಯಾದ್ಯಂತ ನಿರಂತರವಾಗಿ ಬಡಕುಟುಂಬಗಳ ತಾಯಂದಿರು ಹಾಗೂ ಹಸುಗೂಸುಗಳ ಸಾವು ನೋವುಗಳಿಗುತ್ತಿದ್ದರೂ, ಜನಸಾಮಾನ್ಯರು
ಪ್ರೊ.ಮುಜಾಫರ್ ಅಸ್ಸಾದಿ, ಜಿ.ಸಿ.ಬಯ್ಯಾರೆಡ್ಡಿಗೆ ಸಿಎಂ ಸಂತಾಪ
ಚಿಂತಕ, ಲೇಖಕ ಪ್ರೊ.ಮುಜಾಫರ್ ಅಸ್ಸಾದಿ (63) ಮತ್ತು ಸಿಪಿಐ(ಎಂ) ನಾಯಕ ಮತ್ತು ಕರ್ನಾಟಕ ಪ್ರಾಂತ ರೈತ ಸಂಘದ ರಾಜ್ಯಾಧ್ಯಕ್ಷ ಜಿ.ಸಿ.ಬಯ್ಯಾರೆಡ್ಡಿ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಈ ಇಬ್ಬರು ಸಮಾಜಮುಖಿ ಗಣ್ಯರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂತಾಪ ವ್ಯಕ್ತಪಡಿಸಿದ್ದಾರೆ. ಮುಜಾಫರ್ ಅಸ್ಸಾದಿ
ಇಡಿ ಅಧಿಕಾರಿಗಳೆಂದು ನಂಬಿಸಿ 30 ಲಕ್ಷ ರೂ. ದೋಚಿದ ಖದೀಮರು
ದಕ್ಷಿಣ ಕನ್ನಡದ ಬಂಟ್ವಾಳ ತಾಲೂಕಿನ ಬೋಳಂತೂರು ಸಮೀಪದ ನಾರ್ಶ ಎಂಬಲ್ಲಿ ಜಾರಿ ನಿರ್ದೇಶನಾಲಯದ ಹೆಸರಿನಲ್ಲಿ ಉದ್ಯಮಿ ಮನೆ ಮೇಲೆ ದಾಳಿ ಮಾಡಿ 30 ಲಕ್ಷ ರೂ. ಕದ್ದು ಕಳ್ಳರು ಪರಾರಿಯಾಗಿದ್ದಾರೆ. ಸುಲೈಮಾನ್ ಹಾಜಿ ಎಂಬುವರು ಸಿಂಗಾರಿ ಬೀಡಿ ಉದ್ಯಮ ನಡೆಸುತ್ತಿದ್ದಾರೆ. ತಡರಾತ್ರಿ
ಲಾಂಗ್‌ನಿಂದ ಕೊಚ್ಚಿ ಜೆಡಿಎಸ್ ಮುಖಂಡನ ಕೊಲೆ
ಚಿಕ್ಕಬಳ್ಳಾಪುರದಲ್ಲಿರುವ ತಮ್ಮನಾಯಕನಹಳ್ಳಿ ಗೇಟ್ ಬಳಿ ಜೆಡಿಎಸ್ ಮುಖಂಡನನ್ನು ಲಾಂಗ್‌ನಿಂದ ಕೊಚ್ಚಿ ಕೊಲೆ ಮಾಡಲಾಗಿದೆ. ತಮ್ಮನಾಯಕನಹಳ್ಳಿ ಗ್ರಾಮದ ವೆಂಕಟೇಶ್ ಕೊಲೆಯಾದ ವ್ಯಕ್ತಿ. ವೆಂಕಟೇಶ್ ಶುಕ್ರವಾರಟಿವಿಎಸ್ ಎಲೆಕ್ಟ್ರಿಕ್ ಬೈಕ್‌ನಲ್ಲಿ ತಮ್ಮನಾಯಕನಹಳ್ಳಿ ಗೇಟ್ನಿಂದ ಮನೆಗೆ ತೆರಳುತ್ತಿದ್ದಾಗ ಈ ಘಟನೆ ನಡೆದಿದೆ. ದುಷ್ಕರ್ಮಿಗಳು ಬೈಕ್ ಅಡ್ಡಗಟ್ಟಿ ಲಾಂಗ್‌ನಿಂದ
ದರ್ಗಾ ಜಾಗದಲ್ಲಿ ಕಾಮಗಾರಿಯಿಂದ ಕಾವೇರಿದೆ ಚಿಕ್ಕಮಗಳೂರು
ಚಿಕ್ಕಮಗಳೂರು ನಗರದ ಕೋಟೆ ಬಡಾವಣೆಯಲ್ಲಿರುವ ದರ್ಗಾದಲ್ಲಿ ಅಕ್ರಮವಾಗಿ ವಿದ್ಯುತ್ ಸಂಪರ್ಕ ಕಲ್ಪಿಸಲಾಗಿದೆ ಮತ್ತು ಖಾಲಿ ಜಾಗದಲ್ಲಿ ನೂತನ ಕಾಮಗಾರಿ ನಡೆಸಲಾಗುತ್ತಿದೆ ಎಂದು ಆರೋಪಿಸಿ ಕಾಮಗಾರಿಯನ್ನು ತಡೆದು ಸ್ಥಳೀಯರು ಪ್ರತಿಭಟನೆ ನಡೆಸಿದ್ದಾರೆ. ದರ್ಗಾಕ್ಕೆ ದಾನ ನೀಡಿರುವ ಜಾಗದಲ್ಲಿ ನೂತನ ಕಾಮಗಾರಿ ನಡೆಸಬಾರದು ಎಂದು
ಕಾರು ಚಲಾಯಿಸಿ ಅಪಘಾತಕ್ಕೆ ಬಲಿಯಾದ ಹೈಸ್ಕೂಲ್ ವಿದ್ಯಾರ್ಥಿಗಳು
ಗದಗ ತಾಲೂಕಿನ ಹುಲಕೋಟಿ ರೂರಲ್ ಇಂಜಿನಿಯರಿಂಗ್ ಕಾಲೇಜ್ ಬಳಿ ಹೈಸ್ಕೂಲ್ ವಿದ್ಯಾರ್ಥಿಗಳು ಚಲಾಯಿಸುತ್ತಿದ್ದ ಕಾರು ಅಪಘಾತವಾಗಿ ಇಬ್ಬರು ವಿದ್ಯಾರ್ಥಿಗಳು ಮೃತಪಟ್ಟಿದ್ದಾರೆ. ಘಟನೆಯಲ್ಲಿ ಇಬ್ಬರು ಗಾಯಗೊಂಡಿದ್ದಾರೆ. ವೇಗವಾಗಿ ಬಂದ ಕಾರು, ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಮಹಮ್ಮದ್ ಮುಜಾವರ್ (16),
ದೂರುದಾರೆ ಜೊತೆ ಅಸಭ್ಯವಾಗಿ ವರ್ತಿಸಿದ ಡಿವೈಎಸ್ಪಿ ಅರೆಸ್ಟ್
ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ದೂರು ನೀಡಲು ಬಂದ ಮಹಿಳೆ ಜೊತೆ ಅಸಭ್ಯವಾಗಿ ವರ್ತಿಸಿ ಲೈಂಗಿಕ ಕಿರುಕುಳ ನೀಡಿರುವ ಆರೋಪಿ, ತುಮಕೂರಿನ ಮಧುಗಿರಿ ಡಿವೈಎಸ್‌ಪಿ ರಾಮಚಂದ್ರ ಅವರನ್ನು ಕರ್ತವ್ಯದಿಂದ ಅಮಾನತುಗೊಳಿಸಿದ ಬಳಿಕ ಬಂಧಿಸಲಾಗಿದೆ. ಪ್ರಕರಣದ ವೀಡಿಯೊ ವೈರಲ್ ಆಗುತ್ತಿದ್ದಂತೆ ಆರೋಪಿ ರಾಮಚಂದ್ರ ತಲೆ