ಜಿಲ್ಲಾ ಸುದ್ದಿ
ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಭಾವನ ಕೊಲೆ ಮಾಡಿಸಿದ ನಾದಿನಿ
ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದಾನೆಂದು ಭಾವನನ್ನು ನಾದಿನಿಯೇ ಕೊಲೆ ಮಾಡಿಸಿರುವ ಪ್ರಕರಣವನ್ನು ಚಿತ್ರದುರ್ಗ ಗ್ರಾಮಾಂತರ ಠಾಣೆ ಪೊಲೀಸರು ಬಯಲಿಗೆಳೆದಿದ್ದಾರೆ. ಪ್ರಕರಣದಲ್ಲಿ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದ್ದು, ಒಬ್ಬ ಆರೋಪಿಗಾಗಿ ಪೊಲೀಸರು ಶೋಧ ಕಾರ್ಯ ತೀವ್ರಗೊಳಿಸಿದ್ದಾರೆ. ಚಳ್ಳಕೆರೆ ತಾಲೂಕಿನ ಚೌಳೂರು ಗ್ರಾಮದ ನಿವಾಸಿ ಶಿವಮೂರ್ತಿ (49) ಕೊಲೆಯಾದವರು ಎಂದು ಗುರುತಿಸಲಾಗಿದೆ. ಶಿವಮೂರ್ತಿ ಪಾವಗಡದ ಸರ್ಕಾರಿ ಆರೋಗ್ಯ ಕೇಂದ್ರದಲ್ಲಿ ಲ್ಯಾಬ್ ಟೆಕ್ನಿಷಿಯನ್ ಆಗಿದ್ದರು, ರಜೆ ದಿನಗಳಲ್ಲಿ ಕಾರು ಚಾಲಕರಾಗಿಯೂ ಕೆಲಸ ಮಾಡುತ್ತಿದ್ದರು. ಜೂನ್ 26ರಂದು ಕಾರು
ಹಾಸನ ಚನ್ನಕೇಶವನ ಹುಂಡಿ ಎಣಿಕೆ: ಹಣ ಕದ್ದ ವೀಡಿಯೊಗ್ರಾಫರ್
ಹಾಸನದಲ್ಲಿ ಚನ್ನಕೇಶವ ದೇವಾಲಯದ ಹುಂಡಿ ಎಣಿಕೆ ವೇಳೆ ಹಣ ಕಳವು ಮಾಡಿರುವ ಆರೋಪದಡಿ ಪೊಲೀಸರು ವಿಡಿಯೋಗ್ರಾಫರ್ ನೀಲಕಂಠ ಎಂಬಾತನನ್ನು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸಿದ್ದಾರೆ. ಹುಂಡಿಕ ಎಣಿಕೆ ವೇಳೆ ವಿಡಿಯೋಗ್ರಾಫರ್ ಹಣ ಕದ್ದ ಆರೋಪವಿದ್ದು, ಇದರ ಹಿಂದೆ ಅಧಿಕಾರಿಗಳ ಪಾತ್ರ ಇದೆಯಾ
ಯಲ್ಲಾಪುರದಲ್ಲಿ ಲಾರಿ-ಕ್ರೂಸರ್ ಡಿಕ್ಕಿ: ಆರು ಮಂದಿ ಸಾವು
ಲಾರಿ ಮತ್ತು ಕ್ರೂಸರ್ ಡಿಕ್ಕಿಯಾಗಿ ಆರು ಮಂದಿ ಸ್ಥಳದಲ್ಲೇ ಮೃತಪಟ್ಟ ಘಟನೆ ಉತ್ತರ ಕನ್ನಡದ ಯಲ್ಲಾಪುರ ತಾಲೂಕಿನ ಆರತಿಬೈಲಿನಲ್ಲಿ ನಡೆದಿದೆ. ಕ್ರೂಸರ್ ಧಾರವಾಡದಿಂದ ಅಂಕೋಲಾ ಕಡೆ ತೆರಳುತ್ತಿದ್ದು, ಲಾರಿ ಯಲ್ಲಾಪುರದಿಂದ ಅಂಕೋಲಾ ಕಡೆ ಸಂಚರಿಸುತ್ತಿದ್ದಾಗ ಈ ದುರಂತ ಸಂಭವಿಸಿದೆ. ಕ್ರೂಸರ್‌ನಲ್ಲಿ ಇದ್ದ
ಬೆಳ್ತಂಗಡಿಯಲ್ಲಿ ಬಿಎಲ್ಒಗೆ ಜಾತಿ ನಿಂದನೆ: ಕೇಸ್ ದಾಖಲು
ಎಸ್ಐಆರ್ಗೆ ಮತದಾರರ ಮನೆಗೆ ತೆರಳಿದ್ದ ಬಿಎಲ್ಒಗೆ ಜಾತಿ ನಿಂದನೆ ಮಾಡಿದ ಆರೋಪ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಶಿರ್ಲಾಲು ಗ್ರಾಮದಲ್ಲಿ ಕೇಳಿಬಂದಿದೆ. ಬಿಎಲ್ಒ ದಲಿತ ಎಂಬ ಕಾರಣಕ್ಕೆ ಹೊರಗೆ ನಿಲ್ಲಿಸಿ ಜಾತಿ ನಿಂದನೆ ಮಾಡಲಾಗಿದ್ದು, ಅಟ್ರಾಸಿಟಿ ಕೇಸ್ ದಾಖಲಾಗಿದೆ. ಎಸ್ಐಆರ್
ಅಕ್ರಮ ಆಸ್ತಿ ಗಳಿಕೆ: ರಾಯಚೂರಿನಲ್ಲಿ ಲೋಕಾಯುಕ್ತ ದಾಳಿ
ಅಕ್ರಮ ಆಸ್ತಿ ಸಂಪಾದನೆ ಆರೋಪದಡಿ ಕೃಷ್ಣ ಭಾಗ್ಯ ಜಲ ನಿಗಮದ ಕಾರ್ಯನಿರ್ವಾಹಕ ಎಂಜಿನಿಯರ್ ಬಸನಗೌಡ ಅವರಿಗೆ ಸೇರಿದ ನಾನಾ ಆಸ್ತಿಗಳ ಮೇಲೆ ಕರ್ನಾಟಕ ಲೋಕಾಯುಕ್ತ ಏಕಕಾಲದಲ್ಲಿ ದಾಳಿ ನಡೆಸಿದೆ. ಚಿಕ್ಕಹೊನ್ನಕುಣಿ ಪ್ರದೇಶದಲ್ಲಿರುವ ಅವರ ಕಚೇರಿ, ನಿವಾಸ ಹಾಗೂ ಪತ್ನಿ ಮತ್ತು ಸಂಬಂಧಿಕರಿಗೆ
ಕರಾವಳಿ, ಮಲೆನಾಡುಗಳಲ್ಲಿ ಮುಂದಿನ ಮೂರು ದಿನ ಬಿರುಗಾಳಿ ಮಳೆ, ಭೂಕುಸಿತ ಸಾಧ್ಯತೆ
ರಾಜ್ಯದ ಹಲವು ಜಿಲ್ಲೆಗಳಲ್ಲಿ ನಿರಂತರ ಭಾರಿ ಮಳೆಯಾಗುತ್ತಿದ್ದು, ಕರಾವಳಿ ಮತ್ತು ಮಲೆನಾಡುಗಳಲ್ಲಿ ಇನ್ನು ಮೂರು ದಿನ ೬೦ ಕಿಮೀ ವೇಗದಲ್ಲಿ ಬಿರುಗಾಳಿ ಸಹಿತ ವಿಪರೀತ ಮಳೆ ಸುರಿಯಲಿದೆ. ಮಲೆನಾಡು ಹಾಗೂ ಕರಾವಳಿಯನ್ನು ಸಂಪರ್ಕಿಸುವ ಪ್ರಮುಖ ಘಟ್ಟ ರಸ್ತೆಗಳಲ್ಲಿ ಜುಲೈ 11ರವರೆಗೆ ಭೂಕುಸಿತ
ಕೌಟುಂಬಿಕ ಕಲಹ: ರಾಜಿ ಮಾಡಿಸಲು ಬಂದಿದ್ದ ಮಾವ, ಪತ್ನಿಯ ಕೊಲೆ
ಹೆಂಡತಿಯ ಮೇಲೆ ಅನುಮಾನ ವ್ಯಕ್ತಪಡಿಸಿ ನಿತ್ಯ ಜಗಳವಾಡುತ್ತಿದ್ದ ಪತಿಯೊಬ್ಬ, ರಾಜಿ ಪಂಚಾಯಿತಿ ಮಾಡಲು ಬಂದಿದ್ದ ಮಾವನೊಂದಿಗೆ ತನ್ನ ಪತ್ನಿಯನ್ನು ಕೂಡ ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಬಳ್ಳಾರಿ ನಗರದ ಗುಗ್ಗರಹಟ್ಟಿಯಲ್ಲಿ ನಡೆದಿದೆ. ನಾಗಲಕ್ಷ್ಮೀ (24) ಹಾಗೂ ತಂದೆ ಶ್ರೀನಿವಾಸ
ಚುರುಕುಗೊಂಡ ಮುಂಗಾರು ಮಳೆ: ಕೆಆರ್‌ಎಸ್‌ಗೆ ದಾಖಲೆಯ ಒಳಹರಿವು
ಕಾವೇರಿ ಜಲಾನಯನ ಪ್ರದೇಶ ಹಾಗೂ ಕೊಡಗು ಜಿಲ್ಲೆಯಲ್ಲಿ ಮುಂಗಾರು ಮಳೆ ತೀವ್ರಗೊಂಡ ಹಿನ್ನೆಲೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿರುವ ಕೃಷ್ಣರಾಜಸಾಗರ ಜಲಾಶಯಕ್ಕೆ ಭಾರಿ ಪ್ರಮಾಣದ ಒಳಹರಿವು ದಾಖಲಾಗಿದೆ. ಕಳೆದ ಕೆಲವು ದಿನಗಳಿಂದ ಕಾವೇರಿ ಉಗಮ ಸ್ಥಾನವಾದ ತಲಕಾವೇರಿ, ಭಾಗಮಂಡಲ ಮತ್ತು ಮಲೆನಾಡು ಭಾಗದಲ್ಲಿ
ಬರ ನಿರ್ವಹಣೆಯಲ್ಲಿ ನಿರ್ಲಕ್ಷ್ಯ ತೋರಿದರೆ ಕಠಿಣ ಕ್ರಮ, ನೆಪ ಕೇಳಲು ನಾನು ಸಿದ್ಧನಿಲ್ಲ: ಸಿಎಂ ವಾರ್ನ್
ರಾಜ್ಯವನ್ನು ಕಾಡುತ್ತಿರುವ ಬರಗಾಲ ಪರಿಸ್ಥಿತಿ ನಿರ್ವಹಣೆಯಲ್ಲಿ ನಿರ್ಲಕ್ಷ್ಯ ತೋರುವ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಡಿಕೆ ಶಿವಕುಮಾರ್ ಎಚ್ಚರಿಕೆ ನೀಡಿದ್ದಾರೆ. ಕಲ್ಬುರ್ಗಿ ವಿಭಾಗ ಮಟ್ಟದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಪ್ರಾಸ್ತಾವಿಕ ಭಾಷಣ ಮಾಡಿದ ಸಿಎಂ ಅವರು, ಜನಪರ
ಎಸ್ಟಿ ಸಮುದಾಯದ ತಳವಾರ, ನಾಯ್ಕಡ್ ವಿದ್ಯಾರ್ಥಿಗಳಿಗೆ ಜಾತಿ ಪ್ರಮಾಣ ಪತ್ರ ನೀಡುತ್ತಿಲ್ಲ: ಸಿಎಂಗೆ ಮನವಿ
ಎಸ್‌ಟಿ ಸಮುದಾಯಕ್ಕೆ ಸೇರಿದ ತಳವಾರ, ನಾಯ್ಕಡ್ ವರ್ಗದ ವಿದ್ಯಾರ್ಥಿಗಳಿಗೆ ಕಳೆದ ಎರಡು ವರ್ಷಗಳಿಂದ ಜಾತಿ ಪ್ರಮಾಣ ಪತ್ರ ನೀಡುತ್ತಿಲ್ಲ, ಇದರಿಂದ ಸಮಾಜದ ಯುವಕರಿಗೆ ಉದ್ಯೋಗ, ಶಿಕ್ಷಣಕ್ಕೆ ತೊಂದರೆ ಆಗುತ್ತಿದೆ. ಕೂಡಲೇ ಸಮಸ್ಯೆ ಬಗೆಹರಿಸಬೇಕು ಎಂದು ಕಲಬುರಗಿಯಲ್ಲಿ ನವ ಕರ್ನಾಟಕ ರೈತ ಸಂಘದ




