Menu

ಅಭಿವೃದ್ಧಿಯೇ ನಮ್ಮ ತಂದೆ ತಾಯಿ, ಗ್ಯಾರಂಟಿಗಳೇ ಬಂಧು ಬಳಗ: ಡಿ.ಕೆ.ಶಿವಕುಮಾರ್

“ಕಾಯಕದಲ್ಲಿಯೇ ದೇವರನ್ನು ಕಾಣಬೇಕು. ನಮಗೆ ಅಭಿವೃದ್ಧಿಯೇ ತಾಯಿ ತಂದೆ, ಗ್ಯಾರಂಟಿಗಳೇ ಬಂಧು ಬಳಗ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್  ಹೇಳಿದರು. ಕನಕಪುರ ಭೂಹಳ್ಳಿ ಹೊಸಕೆರೆ ಬಳಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿ,  “ನನ್ನ ಕ್ಷೇತ್ರಕ್ಕೆ ಸುಮಾರು ರೂ.400 ಕೋಟಿಗಳಷ್ಟು ಅನುದಾನ ತಂದಿದ್ದೇನೆ. ಒಂದೇ ಸಲ ಅನುದಾನ ತಂದರೆ ಬೇರೆ ಕ್ಷೇತ್ರದವರು ಪ್ರಶ್ನೆ ಮಾಡುತ್ತಾರೆ. ಹಂತ,‌ ಹಂತವಾಗಿ ಅನುದಾನ ತಂದು ಅಭಿವೃದ್ಧಿ ಕೆಲಸದ ಮೂಲಕ ಜನರ ಋಣ ತೀರಿಸಲಾಗುವುದು. ರೂ.250

ರಾಜಕೀಯದವರನ್ನು ಒಳಗೆ ಬಿಟ್ಟುಕೊಳ್ಳದಿದ್ದರೆ ಶಿಕ್ಷಣ ಸಂಸ್ಥೆಗಳು ಬೆಳೆಯುತ್ತವೆ: ಡಿಸಿಎಂ

“ಶಿಕ್ಷಣ ಸಂಸ್ಥೆಯ ಒಳಗೆ ರಾಜಕೀಯದವರನ್ನು ಸೇರಿಸಬೇಡಿ. ಆಗ ಮಾತ್ರ ಆ ಶಿಕ್ಷಣ ಸಂಸ್ಥೆಗಳು ಉನ್ನತ ಮಟ್ಟಕ್ಕೆ ಬೆಳೆಯುತ್ತವೆ. ಇಲ್ಲದಿದ್ದರೇ ಶಿಕ್ಷಣದ ಗುಣಮಟ್ಟ ಹಾಳಾಗುತ್ತದೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಮಳವಳ್ಳಿಯಲ್ಲಿ ಬಿಎಂ ಎಜುಕೇಶನ್ ಟ್ರಸ್ಟ್ ವತಿಯಿಂದ ನಿರ್ಮಾಣವಾಗಿರುವ ಬಿಎಂ ಪಬ್ಲಿಕ್ ಶಾಲಾ

ಮೈಸೂರು ರೈಲು ನಿಲ್ದಾಣಕ್ಕೆ ಹುಸಿ ಬಾಂಬ್ ಕರೆ!

ಮೈಸೂರು: ಇಲ್ಲಿನ ಕೇಂದ್ರ ರೈಲು ನಿಲ್ದಾಣಕ್ಕೆ ಭಾನುವಾರ ಬಾಂಬ್ ಇಟ್ಟಿರುವುದಾಗಿ ಅನಾಮಧೇಯ ಕರೆ ಬಂತು ಆತಂಕ ಸೃಷ್ಟಿಸಿತ್ತು. ಆರ್‌ಪಿಎಫ್ ಹಾಗೂ ಬಾಂಬ್ ನಿಷ್ಕಿçಯ ದಳದ ಅಧಿಕಾರಿಗಳು ಮತ್ತು ಸಿಬ್ಬಂದಿ ರೈಲ್ವೆ ನಿಲ್ದಾಣದಲ್ಲಿ ತೀವ್ರ ತಪಾಸಣೆ ನಡೆಸಿದ ಬಳಿಕ ಹುಸಿ ಬಾಂಬ್ ಕರೆ

ಹಾಸನದಲ್ಲಿ ಕಟ್ಟಡ ಕುಸಿದು ಬೀದಿ ಬದಿ ವ್ಯಾಪಾರಿ ಮಹಿಳೆಯರು ಸಾವು

ರಾಜ್ಯದ ನಾನಾ ಕಡೆ ಅವಘಡಗಳಿಂದ ಭಾನುವಾರ ಹಲವರು ಪ್ರಾಣ ಕಳೆದುಕೊಂಡಿರುವ ಮಧ್ಯೆ ಹಾಸನದಲ್ಲಿ ಕಟ್ಟಡವೊಂದು ಕುಸಿದು ಮೂವರು ಮಹಿಳೆಯರು ಸ್ಥಳದಲ್ಲೇ ಅಸು ನೀಗಿದ್ದಾರೆ. ಹಾಸನ ಜಿಲ್ಲೆಯ ಬೇಲೂರು ಪಟ್ಟಣದಲ್ಲಿ ಪಾಳು ಬಿದ್ದಿದ್ದ ಕಟ್ಟಡ ಕುಸಿದುಬಿದ್ದು ಈ ದುರಂತ ಸಂಭವಿಸಿದೆ. ಬೀದಿ ಬದಿ

ಮೈಸೂರು ರೈಲು ನಿಲ್ದಾಣಕ್ಕೆ ಬಾಂಬ್‌ ಬೆದರಿಕೆ ಕರೆ

ಅನಾಮಿಕ ವ್ಯಕ್ತಿಯೊಬ್ಬ ಮೈಸೂರು ರೈಲು ನಿಲ್ದಾಣಕ್ಕೆ ಹುಸಿ ಬಾಂಬ್ ಬೆದರಿಕೆ ಕರೆ ಮಾಡಿದ್ದಾನೆ. ಬೆದರಿಕೆ ಕರೆಯು ಆಂಧ್ರ ಪ್ರದೇಶದಿಂದ ಬಂದಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು, ಪ್ರಧಾನಿ ನರೇಂದ್ರ ಮೋದಿ ಬಾಂಬ್ ಇಡುವಂತೆ ತಿಳಿಸಿದ್ದಾರೆ ಎಂದು ಕರೆ ಮಾಡಿದ

ಚಿತ್ರದುರ್ಗದಲ್ಲಿ ಕಾರು ಲಾರಿ ಡಿಕ್ಕಿಯಾಗಿ ಐವರ ಸಾವು

ಚಿತ್ರದುರ್ಗ ತಾಲೂಕಿನ ಸಿಬಾರಾ ಗ್ರಾಮದ ಬಳಿ ಲಾರಿ-ಇನ್ನೋವಾ ಕಾರು ಡಿಕ್ಕಿಯಾಗಿ ಸ್ಥಳದಲ್ಲೇ ಐವರು ಅಸು ನೀಗಿದ್ದಾರೆ.  ಮೃತರ ಗುರುತು ಇನ್ನೂ ಪತ್ತೆಯಾಗಿಲ್ಲ. ಸಿಬಾರ ಗ್ರಾಮದ ಹೋಟೆಲ್‌ವೊಂದರ ಬಳಿ  ಬೆಂಗಳೂರು ಮೂಲದ ಲಾರಿ ಹಾಗೂ ಕಾರು ಡಿಕ್ಕಿಯಾಗಿ ದುರಂತ ಸಂಭವಿಸಿದೆ.  ಗಾಯಗೊಂಡ ಓರ್ವನ

ನಮಗೆ ಶಕ್ತಿ ತುಂಬಿದ ಕಲ್ಯಾಣ ಕರ್ನಾಟಕದ ಜನರ ಋಣ ತೀರಿಸುತ್ತೇವೆ: ಡಿಸಿಎಂ 

“ಕಲ್ಯಾಣ ಕರ್ನಾಟಕ ಭಾಗದ ಜನ ವಿಧಾನಸಭೆ ಹಾಗೂ ಲೋಕಸಭೆ ಚುನಾವಣೆಯಲ್ಲಿ ನಮಗೆ ಶಕ್ತಿ ತುಂಬಿದ್ದು, ಈ ಭಾಗದ ಅಭಿವೃದ್ಧಿಗೆ ಆದ್ಯತೆ ನೀಡುವ ಮೂಲಕ ನಿಮ್ಮೆಲ್ಲರ ಋಣ ತೀರಿಸಲಿದ್ದೇವೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್  ಹೇಳಿದ್ದಾರೆ. ಜೇವರ್ಗಿಯಲ್ಲಿ ನಡೆದ ಕಲ್ಯಾಣ ಕರ್ನಾಟಕದ 38

ಚಿಂತಾಮಣಿಯಲ್ಲಿ ಕಾರಿಗೆ ಬಸ್‌ ಡಿಕ್ಕಿ: ತಾಯಿ ಮಗ ಸಜೀವ ದಹನ

ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಗೋಪಲ್ಲಿ ಗೇಟ್ ಬಳಿ ಕಾರಿಗೆ ಖಾಸಗಿ ಬಸ್‌ವೊಂದು ಡಿಕ್ಕಿಯಾಗಿ ಕಾರು ಹೊತ್ತಿ ಉರಿದು ಇಬ್ಬರು ಸಜೀವ ದಹನವಾಗಿದ್ದಾರೆ. ಕಾರು ಚಾಲಕ ಧನಂಜಯ್ (34) ಹಾಗೂ ತಾಯಿ ಕಲಾವತಿ (54) ಮೃತರು. ಕಾರಿನಲ್ಲಿ 5 ಮಂದಿ ಪ್ರಯಾಣ

ಯಡ್ರಾಮಿಯಲ್ಲಿ ಶಾಲಾ ಸಮವಸ್ತ್ರ ಧರಿಸಿಕೊಂಡೇ ಬಾಲ ಪ್ರೇಮಿಗಳ ಸುಸೈಡ್‌

ಯಡ್ರಾಮಿ ತಾಲೂಕಿನ ಮಳ್ಳಿ ಗ್ರಾಮದ ಸರಕಾರಿ ಪ್ರೌಢ ಶಾಲೆಯ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಾಗಿದ್ದ  ಪ್ರೇಮಿಗಳಿಬ್ಬರು ಶಾಲೆಯ ಸಮವಸ್ತ್ರ ಧರಿಸಿಯೇ  ನೇಣು ಬಿಗಿದುಕೊಂಡು  ಆತ್ಮಹತ್ಯೆಮಾಡಿಕೊಂಡಿದ್ದಾರೆ. ಮಳ್ಳಿ ಗ್ರಾಮದ ಸರ್ಕಾರಿ ಪ್ರೌಢ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದ 10ನೇ ತರಗತಿ ವಿದ್ಯಾರ್ಥಿ ಕೆಂಚಪ್ಪ  (16) ಹಾಗೂ ಅದೇ

ಮಹಿಳಾ ಮೀಸಲು ಜಾರಿಯಾಗಲಿದೆ, ವಿಧಾನಸಭೆ, ಲೋಕಸಭೆ ಚುನಾವಣೆ ಸ್ಪರ್ಧೆಗೆ ಸಜ್ಜಾಗಿ: ಡಿ.ಕೆ.ಶಿವಕುಮಾರ್

“2028 ರ ಹೊತ್ತಿಗೆ ಮಹಿಳಾ ಮೀಸಲಾತಿ ಅಸ್ತಿತ್ವಕ್ಕೆ ಬರಬಹುದು, ಆದ ಕಾರಣ ಮಹಿಳೆಯರು ಚುನಾವಣೆಗೆ ಸ್ಪರ್ಧಿಸಲು ತಯಾರಾಗಿ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಿಮ್ಮನ್ನು ಯಾರೂ ತಡೆಯುವುದಿಲ್ಲ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಕಲಬುರ್ಗಿಯಲ್ಲಿ ನಡೆದ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆಉದ್ಘಾಟಿಸಿ ಮಾತನಾಡಿ, ಈಗ ಪಂಚಾಯಿತಿಯಿಂದ