Wednesday, September 16, 2026
Menu

ನ್ಯಾಯಾಲಯಕ್ಕೆ ನಕಲಿ ಆಧಾರ್‌ ಕಾರ್ಡ್‌ ಸಲ್ಲಿಸಿದ್ದ ಯುವಕರಿಬ್ಬರ ಬಂಧನ

ಪ್ರಕರಣವೊಂದರ ಆರೋಪಿಗೆ ಜಾಮೀನು ಪಡೆದುಕೊಳ್ಳಲು ನ್ಯಾಯಾಲಯಕ್ಕೆ ನಕಲಿ ಆಧಾರ್‌ ಕಾರ್ಡ್‌ ಸಲ್ಲಿಸಿರುವ ಆರೋಪದಡಿ ಉಡುಪಿ ಪೊಲೀಸರು ಯುವಕರಿಬ್ಬರನ್ನು ಬಂಧಿಸಿದ್ದಾರೆ. ಬಂಟ್ವಾಳದ ಉಮರ್ ಫಾರೂಕ್ (32) ಹಾಗೂ ಮಂಗಳೂರಿನ ನಿಶಾಂತ್ ಕುಮಾರ್ (24) ಬಂಧಿತ ಆರೋಪಿಗಳು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಉಡುಪಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿದ್ದ ಪ್ರಕರಣವೊಂದಕ್ಕೆ ಸಂಬಂಧಿಸಿ ಆರೋಪಿ ನೋಮಾನ್ ಎಂಬಾತನಿಗೆ ನ್ಯಾಯಾಲಯದಲ್ಲಿ ಜಾಮೀನು ನೀಡುವ ವೇಳೆ ಫಾರೂಕ್, ಪ್ರಶಾಂತ್ ಎಂಬವರ ಆಧಾ‌ರ್ ಕಾರ್ಡ್‌ಗೆ

ಗಣೇಶ ಮೂರ್ತಿ ಒಯ್ಯುವಾಗ ವಿದ್ಯುತ್‌ ತಂತಿ ತಗುಲಿ ಯುವಕ ಸಾವು

ರಾಯಚೂರಿನ ಸಿರವಾರ ತಾಲೂಕಿನಲ್ಲಿರುವ ಅತ್ತನೂರು ಗ್ರಾಮದಲ್ಲಿ ವಿದ್ಯುತ್‌ ತಂತಿ ತಗುಲಿ ಪ್ರತಿಷ್ಠಾಪನೆಗಾಗಿ ತರುತ್ತಿದ್ದ ಗಣೇಶ ಮೂರ್ತಿ ಉರುಳಿ ಬಿದ್ದು, ಯುವಕ ಮೃತಪಟ್ಟಿದ್ದಾನೆ. ೨೭ ವರ್ಷದ ಪ್ರೇಮ್‌ ಕುಮಾರ್‌ ಮೃತಪಟ್ಟ ಯುವಕ. ಪ್ರತಿಷ್ಠಪನೆಗಾಗಿ ಗಣೇಶ ಮೂರ್ತಿ ಕೊಂಡೊಯ್ಯುತ್ತಿದ್ದಾಗ ವಿದ್ಯುತ್ ತಂತಿ ತಾಗಿ ಮೂರ್ತಿ

ಚಿತ್ರದುರ್ಗ ಆಸ್ಪತ್ರೆಯಲ್ಲಿ ಅಹವಾಲು ಸ್ವೀಕರಿಸದೆ ನಡೆದ ಡಿಸಿ: ತಡೆದ ರೋಗಿಗಳ ಸಂಬಂಧಿಕರು

ಚಿತ್ರದುರ್ಗ ನಗರದ ಸರ್ಕಾರಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿನ ಅವ್ಯವಸ್ಥೆ ಹಾಗೂ ಮೂಲಭೂತ ಸೌಲಭ್ಯಗಳ ಕೊರತೆ ಕುರಿತು ರೋಗಿಗಳ ಸಂಬಂಧಿಗಳಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದ್ದು, ಆಸ್ಪತ್ರೆ ಪರಿಶೀಲನೆಗೆ ಆಗಮಿಸಿದ್ದ ಚಿತ್ರದುರ್ಗದ ನೂತನ ಜಿಲ್ಲಾಧಿಕಾರಿ ಎಸ್. ರಮ್ಯ ರೋಗಿಗಳ ಅಹವಾಲುಗಳನ್ನು ಕೇಳದೆ ಕಾರಿನ

ಡಿಸೆಂಬರೊಳಗೆ ಮಹಾನಗರ ಪಾಲಿಕೆ, ನಗರಸಭೆ, ಸ್ಥಳೀಯ ಚುನಾವಣೆ: ಸಚಿವ ಡಾ. ಯತೀಂದ್ರ

ಮಹಾನಗರ ಪಾಲಿಕೆ, ನಗರಸಭೆ ಹಾಗೂ ಸ್ಥಳೀಯ ಚುನಾವಣೆಗಳನ್ನು ನಡೆಸಲಾಗುವುದು‌, ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಈಗಾಗಲೇ  ಸೂಚನೆ ನೀಡಿದ್ದಾರೆ ಎಂದು   ನಗರಾಭಿವೃದ್ಧಿ ಇಲಾಖೆ ಖಾತೆ ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ. ರಾಯಚೂರು ನಗರದ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಜಿಲ್ಲಾಡಳಿತ, ಮಹಾನಗರ ಪಾಲಿಕೆಯಿಂದ ಆಯೋಜಿಸಿದ್ದ

ತಿರುಪತಿ ದೇಗುಲದಿಂದ ವಾಪಸಾಗುತ್ತಿದ್ದ ನಾಲ್ವರು ಕೋಲಾರದಲ್ಲಿ ಅಪಘಾತಕ್ಕೆ ಬಲಿ

ಕೋಲಾರ ತಾಲೂಕಿನ ದೊಡ್ಡಕಾರಿ ಬಳಿ ಚೆನ್ನೈ- ಬೆಂಗಳೂರು ಎಕ್ಸ್‌ಪ್ರೆಸ್‌ ವೇ ಕಾರಿಡಾರ್‌ನಲ್ಲಿ ಸಂಭವಿಸಿದ ಕಾರು ಅಪಘಾತದಲ್ಲಿ ನಾಲ್ವರು ಮೃತಪಟ್ಟಿದ್ದು, ನಾಲ್ವರು ಗಾಯಗೊಂಡಿದ್ದಾರೆ. ಬೆಂಗಳೂರಿನ ವಿದ್ಯಾರಣ್ಯಪುರದ ಶಾರದಮ್ಮ(70), ದೀಕ್ಷಿತಾ (25), ದೇವೇಂದ್ರ ಕುಮಾರ್ (41), ಜಿಷ್ಣು (13) ಮೃತಪಟ್ಟವರು. ಚಾಲಕ ವಿಕಾಸ್, ನೀತು,

ಪ್ರಚಾರಕ್ಕಾಗಿ ಬಿಜೆಪಿ ಆಯೋಜಿಸಿದ್ದ ಬಳ್ಳಾರಿ ಚಲೋ ವಿಫಲ: ಯತೀಂದ್ರ ಸಿದ್ದರಾಮಯ್ಯ

ಬಿಜೆಪಿ ಹಮ್ಮಿಕೊಂಡಿರುವ ‘ಬಳ್ಳಾರಿ ಚಲೋ’ ಪಾದಯಾತ್ರೆ ಕೇವಲ ಪ್ರಚಾರ ಗಿಟ್ಟಿಸಿಕೊಳ್ಳುವ ಉದ್ದೇಶದಿಂದ ನಡೆಸಲಾಗುತ್ತಿದ್ದು, ಜನಬೆಂಬಲವಿಲ್ಲದೆ ವಿಫಲವಾಗಿದೆ ಎಂದು ನಗರಾಭಿವೃದ್ಧಿ ಸಚಿವ ಯತೀಂದ್ರ ಸಿದ್ದರಾಮಯ್ಯ ಟೀಕಿಸಿದರು. ರಾಯಚೂರು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿ.ನಾಗೇಂದ್ರ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂಬ ಉದ್ದೇಶದಿಂದ

ಗದಗ ಮೀಟರ್‌ ಬಡ್ಡಿ ದಂಧೆ: 12 ಲಕ್ಷ ರೂ. ಸಾಲಕ್ಕೆ 1.5 ಕೋಟಿಯ ಆಸ್ತಿ ಜಪ್ತಿ, ಕುಟುಂಬ ಬೀದಿಗೆ

ಗದಗ ಜಿಲ್ಲೆಯಲ್ಲಿ ಮೀಟರ್‌ ಬಡ್ಡಿ ದಂಧೆ ಮಿತಿ ಮೀರಿದ್ದು, ಸಾಲ ಪಡೆದವರ ಕೋಟ್ಯಾಂತರ ರೂ. ಮೌಲ್ಯದ ಆಸ್ತಿಗಳನ್ನು ಸಾಲ ನೀಡಿದವರು ದರೋಡೆ ಮಾಡುತ್ತಿದ್ದಾರೆ. ಬಡ್ಡಿ ರಾಕ್ಷಸರು 12 ಲಕ್ಷ ರೂ. ಸಾಲಕ್ಕೆ 1.5 ಕೋಟಿಯ ಆಸ್ತಿ ಜಪ್ತಿ ಮಾಡಿದ್ದು, ಕಟುಂಬ ಮನೆ

ಕೂಡ್ಲಿಗಿಯಲ್ಲಿ ಪ್ರಜಾಸೇವಾ ಆಂದೋಲನ: ಕೌಂಟರ್‌ಗಳಿಗೆ ತೆರಳಿ ಖುದ್ದು ಅಹವಾಲು ಸ್ವೀಕರಿಸಿದ ಮುಖ್ಯಮಂತ್ರಿ

ರಾಜ್ಯ ಮಟ್ಟದ ಪ್ರಜಾಸೇವಾ ಅಭಿಯಾನ ಕಾರ್ಯಕ್ರಮದ ಅಂಗವಾಗಿ ಕೂಡ್ಲಿಗಿಯಲ್ಲಿ ವಿಜಯನಗರ ಜಿಲ್ಲಾಡಳಿತದ ವತಿಯಿಂದ ಸಾರ್ವಜನಿಕರ ಅಹವಾಲುಗಳನ್ನು ಆಲಿಸುವುದರ ಜೊತೆಗೆ ವಿವಿಧ ಇಲಾಖೆಗಳ ಯೋಜನೆಗಳು, ಕಾರ್ಯಕ್ರಮಗಳು ಹಾಗೂ ಸಾಧನೆಗಳನ್ನು ಪರಿಚಯಿಸುವ ಉದ್ದೇಶದಿಂದ ವಿಶೇಷ ವ್ಯವಸ್ಥೆ ಕಲ್ಪಿಸಲಾಗಿದ್ದು, ಸಾರ್ವಜನಿಕರಿಂದ ಉತ್ತಮ ಸ್ಪಂದನೆ ವ್ಯಕ್ತವಾಯಿತು. ಸಾರ್ವಜನಿಕರು

ಕೆಪಿಎಸ್ಸಿ ಅಕ್ರಮ: ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲವೆಂದ ಪ್ರಿಯಾಂಕ್ ಖರ್ಗೆ

ಕೆಪಿಎಸ್ಸಿ ಪರೀಕ್ಷಾ ಅಕ್ರಮದಲ್ಲಿ ಯಾರೇ ಭಾಗಿಯಾಗಿದ್ದರೂ  ರಕ್ಷಿಸುವ ಪ್ರಶ್ನೆಯೇ ಇಲ್ಲ. ವಿದ್ಯಾರ್ಥಿಗಳ ಭವಿಷ್ಯದೊಂದಿಗೆ ಚೆಲ್ಲಾಟವನ್ನು ನಮ್ಮ ಸರ್ಕಾರ ಸಹಿಸುವುದಿಲ್ಲ ಎಂದು ರಾಜ್ಯದ ಗೃಹ, ಐ.ಟಿ-ಬಿ.ಟಿ, ಇ-ಆಡಳಿತ ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು. ಕಲಬುಗಿ ನಗರದ ಐವಾನ್-ಎ-ಶಾಹಿ

ಸಿಎಂ ಡಿಕೆ ಶಿವಕುಮಾರ್‌ ಆಗಮನಕ್ಕೂ ಮುನ್ನವೇ ಕೂಡ್ಲಿಗಿಯಲ್ಲಿ ಜನಸಾಗರ

ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಆಗಮನಕ್ಕೂ ಮುನ್ನವೇ ಕೂಡ್ಲಿಗಿ ಪಟ್ಟಣದಲ್ಲಿ ಆಯೋಜಿಸಿರುವ ‘ಪ್ರಜಾಸೇವಾ’ ಆಂದೋಲನ ಕಾರ್ಯಕ್ರಮಕ್ಕೆ ಜನರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿದ್ದು, ಕಾರ್ಯಕ್ರಮದ ವೇದಿಕೆಯ ಮುಂಭಾಗದಲ್ಲಿ ಜನಸಾಗರವೇ ಕಂಡುಬಂತು. ತಾಲೂಕಿನ ವಿವಿಧ ಗ್ರಾಮಗಳಿಂದ ಬೆಳಗ್ಗಿನಿಂದಲೇ ಸಾರ್ವಜನಿಕರು, ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಅಭಿಮಾನಿಗಳು