ಜಿಲ್ಲಾ ಸುದ್ದಿ
ಮಂಗಳೂರಿನಲ್ಲಿ ಮಳೆಗೆ ಮನೆ ಕುಸಿದು ಮೂವರ ಸಾವು
ದಕ್ಷಿಣ ಕನ್ನಡದಲ್ಲಿ ವ್ಯಾಪಕ ಮಳೆ ಸುರಿಯುತ್ತಿದ್ದು, ಮಂಗಳೂರಿನ ಕಂಕನಾಡಿಯಲ್ಲಿ ಹಳೆಯ ಹಂಚಿನ ಮನೆಯೊಂದರ ಚಾವಣಿ ಹಾಗೂ ಗೋಡೆ ಕುಸಿದು ಬಿದ್ದು, ನಿದ್ದೆಯಲ್ಲಿದ್ದ ಮೂವರು ಸ್ಥಳದಲ್ಲೇ ಅಸು ನೀಗಿದ್ದಾರೆ. ಒಬ್ಬ ಮಹಿಳೆ ಹಾಗೂ ಇಬ್ಬರು ಬಾಲಕಿಯರು ಮೃತಪಟ್ಟವರು. ಸ್ಥಳೀಯರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಜಂಟಿಯಾಗಿ ರಕ್ಷಣಾ ಕಾರ್ಯಾಚರಣೆ ನಡೆಸಿ ಅವಶೇಷಗಳ ಅಡಿ ಸಿಲುಕಿ ಒದ್ದಾಡುತ್ತಿದ್ದ ಒಬ್ಬ ಪುರುಷ ಹಾಗೂ ಇಬ್ಬರು ಬಾಲಕಿಯರನ್ನು ಪ್ರಾಣಾಪಾಯದಿಂದ ರಕ್ಷಿಸಿದ್ದಾರೆ. ಮಂಗಳವಾರ ರಾತ್ರಿಯಿಂದ ಸುರಿದ ಭಾರಿ
ಅಡ್ಡ ಮತದಾನ: ಧರ್ಮಸ್ಥಳದಲ್ಲಿ ಆಣೆ ಪ್ರಮಾಣ ಮಾಡಿದ ಶಾಸಕ ಸುರೇಶ್
ರಾಜ್ಯ ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಪಾಳಯದಲ್ಲಿ ಅಡ್ಡ ಮತದಾನಕ್ಕೆ ಸಂಬಂಧಿಸಿದಂತೆ ನಡೆದಿರುವ ಆರೋಪದ ಸುತ್ತ ರಾಜಕೀಯ ಚರ್ಚೆ ತೀವ್ರಗೊಂಡಿರುವ ನಡುವೆಯೇ, ಹಾಸನ ಜಿಲ್ಲೆಯ ಬೇಲೂರು ಕ್ಷೇತ್ರದ ಬಿಜೆಪಿ ಶಾಸಕ ಹುಲ್ಲಹಳ್ಳಿ ಕೆ. ಸುರೇಶ್ ಧರ್ಮಸ್ಥಳದಲ್ಲಿ ಮಂಜುನಾಥ ಸ್ವಾಮಿಯ ಸನ್ನಿಧಿಯಲ್ಲಿ ಆಣೆ
ಶಿವಮೊಗ್ಗ ಕೋರ್ಟ್‌ಗೆ ಮತ್ತೆ ಬಾಂಬ್ ಬೆದರಿಕೆ
ಶಿವಮೊಗ್ಗ ಜಿಲ್ಲಾ ನ್ಯಾಯಾಲಯ ಸಂಕೀರ್ಣಕ್ಕೆ ಈ ಮೇಲ್ ಮೂಲಕ ಮತ್ತೆ ಬಾಂಬ್ ಬೆದರಿಕೆ ಕರೆ ಬಂದಿದ್ದು, ಜಿಲ್ಲಾ ಪೊಲೀಸ್ ಇಲಾಖೆಗೆ ತಲೆನೋವಾಗಿ ಪರಿಣಮಿಸಿದೆ. ಕಳೆದ ಗುರುವಾರ ಜಿಲ್ಲಾ ಮುಖ್ಯ ನ್ಯಾಯಾಧೀಶರಿಗೆ ತಮಿಳುನಾಡು ಮೂಲದ ವ್ಯಕ್ತಿಯಿಂದ ಶಿವಮೊಗ್ಗ ನ್ಯಾಯಾಲಯದಲ್ಲಿ ಬಾಂಬ್ ಇರಿಸಲಾಗಿದೆ ಎಂಬ
ಅಂತಾರಾಷ್ಟ್ರೀಯ ಖ್ಯಾತಿಯ ಚಿತ್ರಕಲಾವಿದ ಕೆ.ಟಿ. ಶಿವಪ್ರಸಾದ್ ನಿಧನ
ಅಂತಾರಾಷ್ಟ್ರೀಯ ಖ್ಯಾತಿಯ ಹಿರಿಯ ಚಿತ್ರಕಲಾವಿದ ಕೆ.ಟಿ. ಶಿವಪ್ರಸಾದ್ (79) ನಿಧನರಾಗಿದ್ದಾರೆ. ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದ ಅವರು ಬೆಂಗಳೂರಿನ ನಾರಾಯಣ ಹೃದಯಾಲಯದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಹಾಸನ ಜಿಲ್ಲೆಯ ಕಾರ್ಲೆ ಎಂಬ ಊರಿನವರಾದ ಶಿವಪ್ರಸಾದ್, ಉದ್ಯಮಿ ಎಲ್. ಟಿ. ಕಾರ್ಲೆ
6.62 ಕೋಟಿ ರೂ. ಗೋಲ್ಮಾಲ್: ಡೆತ್‌ನೋಟ್ ಬರೆದಿಟ್ಟು ಬ್ಯಾಂಕ್ ಅಧ್ಯಕ್ಷ ಸುಸೈಡ್
ಯಾದಗಿರಿಯ ಹೇಮರೆಡ್ಡಿ ಮಲ್ಲಮ್ಮ ಸಹಕಾರ ಬ್ಯಾಂಕ್‌ನ ಅಧ್ಯಕ್ಷ ಬಸನಗೌಡ ಪಾಟೀಲ ಮೂರು ಪುಟಗಳ ಡೆತ್‌ನೋಟ್ ಬರೆದು, ವೀಡಿಯೊ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಸಹಕಾರ ಬ್ಯಾಂಕ್‌ನಲ್ಲಿ 6.62 ಕೋಟಿ ರೂ. ಗೋಲ್ಮಾಲ್ ಆರೋಪ ಎದುರಿಸುತ್ತಿದ್ದ ಅಧ್ಯಕ್ಷ ಬಸವನಗೌಡ ಶಹಪುರ ನಿವಾಸದಲ್ಲಿ ನೇಣು ಬಿಗಿದುಕೊಂಡು
ಆಸ್ಪತ್ರೆಯಲ್ಲಿ ಆಕ್ಸಿಜನ್ ಸಿಲಿಂಡರ್ ಸ್ಫೋಟ: ತಪ್ಪಿದ ಪ್ರಾಣಹಾನಿ
ದಾವಣಗೆರೆಯ ಚಿಗಟೇರಿ ಜಿಲ್ಲಾ ಸರ್ಕಾರಿ ಆಸ್ಪತ್ರೆಯ ಶಸ್ತ್ರಚಿಕಿತ್ಸಾ ಕೊಠಡಿಯಲ್ಲಿ ಆಕ್ಸಿಜನ್ ಸಿಲಿಂಡರ್ ಸ್ಪೋಟಗೊಂಡಿದ್ದು, ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಘಟನೆ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿರುವ ಜಿಲ್ಲಾಧಿಕಾರಿ ಡಾ. ಗಂಗಾಧರ ಸ್ವಾಮಿ ,”ಮುಂಜಾನೆ ಆಕ್ಸಿಜನ್ ಸಿಲಿಂಡರ್ ಸ್ಪೋಟಗೊಂಡಿದೆ. ಆ ಸಮಯದಲ್ಲಿ
ಅನೈತಿಕ ಸಂಬಂಧ ಪ್ರಶ್ನಿಸಿದ ಪತ್ನಿಯ ಕೊಲೆಗೈದ ಪತಿ
ಅನೈತಿಕ ಸಂಬಂಧ ಪ್ರಶ್ನಿಸಿದ್ದಕ್ಕೆ ವ್ಯಕ್ತಿಯು ಪತ್ನಿಯನ್ನು ಕೊಲೆಗೈದ ಘಟನೆ ಭಾಲ್ಕಿ ತಾಲೂಕಿನ ಗಾಯಮುಖ ದೇವಸ್ಥಾನದ ಬಳಿಯ ಅರಣ್ಯ ಪ್ರದೇಶದಲ್ಲಿ ನಡೆದಿದೆ. ಪಕ್ಕದ ಮನೆಯ ಹುಡುಗಿಯೊಂದಿಗೆ ಪತಿ ಅನೈತಿಕ ಸಂಬಂಧ ಇಟ್ಟುಕೊಂಡಿರುವುದನ್ನು ಪ್ರಶ್ನಿಸಿದ ಪತ್ನಿಗೆ ಕಬ್ಬಿಣದ ರಾಡ್‌ನಿಂದ ಹಲ್ಲೆ ನಡೆಸಿ ಕೊಲೆ ಮಾಡಲಾಗಿದೆ.
ಮೈಸೂರಿನಲ್ಲಿ ಗಂಡನ ಕತ್ತು ಹಿಸುಕಿ ಸಾಯಿಸಿದ ಶಿಕ್ಷಕಿ
ಮೈಸೂರಿನ ಕುವೆಂಪುನಗರ ಪ್ರದೇಶದಲ್ಲಿ ಭಾನುವಾರ ರಾತ್ರಿ ವ್ಯಕ್ತಿಯೊಬ್ಬರು ಅನುಮಾನಾಸ್ಪದವಾಗಿ ವ್ಯಕ್ತಿ ಮೃತಪಟ್ಟಿರುವ ಪ್ರಕರಣದ ತನಿಖೆಯಲ್ಲಿ ಶಿಕ್ಷಕಿಯಾಗಿರುವ ಪತ್ನಿಯೇ ಕತ್ತು ಹಿಸುಕಿ ಕೊಲೆ ಮಾಡಿರುವ ವಿಚಾರ ಬಯಲಾಗಿದೆ. 50 ವರ್ಷದ ನಿತ್ಯಾನಂದ ಕೊಲೆಯಾದ ವ್ಯಕ್ತಿ. ಶಿಕ್ಷಕಿ ಸುಶೀಲಾ ಕೊಲೆಗೈದ ಪತ್ನಿ. ನಿತ್ಯಾನಂದ ಕಾರು
ವಿವಾಹಿತೆಯೊಂದಿಗೆ ಪರಾರಿಯಾದ ಯುವಕನ ಮನೆಗೆ ದಾಳಿ, ಲೂಟಿ
ಬೆಳಗಾವಿ ತಾಲೂಕಿನ ಭರಮ್ಯಾನಟ್ಟಿ ಗ್ರಾಮದಲ್ಲಿ ವಿವಾಹಿತ ಮಹಿಳೆಯೊಂದಿಗೆ ಯುವಕನೊಬ್ಬ ಪರಾರಿಯಾಗಿದ್ದು, ಆಕ್ರೋಶಗೊಂಡ ಮಹಿಳೆಯ ಸಂಬಂಧಿಕರು ಯುವಕನ ಮನೆಯ ಮೇಲೆ ದಾಳಿ ನಡೆಸಿ ಧ್ವಂಸಗೊಳಿಸಿದ್ದಲ್ಲದೆ ಮನೆಯಲ್ಲಿದ್ದ ಚಿನ್ನಾಭರಣ, ನಗದು, ಕುರಿಗಳನ್ನು ಹೊತ್ತೊಯ್ದಿದ್ದಾರೆ. ಗ್ರಾಮದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣಗೊಂಡಿದ್ದು, ಯುವಕನ ಕುಟುಂಬವು ಬೆಳಗಾವಿ ನಗರ
ನನಗೆ ಸಚಿವ ಸ್ಥಾನ: ಹೈಕಮಾಂಡ್‌ಗೆ ಬಿಟ್ಟ ವಿಷಯವೆಂದ ಮಧುಬಂಗಾರಪ್ಪ
ನಾನು ಯಾವತ್ತೂ ಅಧಿಕಾರಕ್ಕೆ ಅಂಟಿಕೊಂಡವನಲ್ಲ, ನನಗೆ ಸಚಿವಸ್ಥಾನ ನೀಡುವುದು, ಬಿಡುವುದು ಕಾಂಗ್ರೆಸ್ ಹೈಕಮಾಂಡ್‌ಗೆ ಬಿಟ್ಟ ವಿಷಯ ಎಂದು ಮಾಜಿ ಸಚಿವ ಮಧು ಬಂಗಾರಪ್ಪ ಹೇಳಿದರು. ಶಿವಮೊಗ್ಗದಲ್ಲಿ ಅವರು ಮಾಧ್ಯಮದವರೊಂದಿಗೆ ಮಾತನಾಡಿ, ನಾನು ಕೆಲಸ ಮಾಡಿದ ಶಿಕ್ಷಣ ಇಲಾಖೆಗೆ ಕೇಂದ್ರ ಸರ್ಕಾರದಿಂದ ಯಾವ




