Menu

ಮುಖ್ಯಮಂತ್ರಿ ಹುದ್ದೆಯಿಂದ ಸಿದ್ದರಾಮಯ್ಯ ಕೆಳಗಿಳಿಸುವುದು ಕಷ್ಟ: ಕೋಡಿಮಠದ ಶ್ರೀ ಭವಿಷ್ಯ

ಯಾದಗಿರಿ:ರಾಜ್ಯದ ಮುಖ್ಯಮಂತ್ರಿ ಸ್ಥಾನದಿಂದ ಸಿದ್ದರಾಮಯ್ಯನವರನ್ನು ಕೆಳಗಿಳಿಸುವುದು ಕಷ್ಟ. ಸ್ವತಃ ಅವರೇ ಅಧಿಕಾರ ತ್ಯಜಿಸಬೇಕಾಗುತ್ತದೆ ಎಂದು ಕೋಡಿಮಠದ ಡಾ.ಶಿವಯೋಗಿ ಶಿವಾನಂದ ಸ್ವಾಮೀಜಿ ಅವರು ಭವಿಷ್ಯ ನುಡಿದಿದ್ದಾರೆ. ಮುಂದಿನ ಮುಖ್ಯಮಂತ್ರಿ ಯಾರಾಗಲಿದ್ದಾರೆ ಡಿಕೆ ಶಿವಕುಮಾರ್ ಜೊತೆ ಅಧಿಕಾರ ಹಂಚಿಕೆ ಯಾವಾಗ ಎಂಬ ಚರ್ಚೆಗಳು ನಡೆಯುತ್ತಿರುವ ಬೆನ್ನಲ್ಲೇ ಈ ಭವಿಷ್ಯವಾಣಿ ಹೊರಬಿದ್ದಿದೆ. ಮುಂದಿನ ಮುಖ್ಯವಾಗಿ ಯಾರಾಗಲಿದ್ದಾರೆ, ಡಿಕೆ ಶಿವಕುಮಾರ್ ಜೊತೆ ಅಧಿಕಾರ ಹಂಚಿಕೆ ಯಾವಾಗ ಎಂಬ ಚರ್ಚೆಗಳು ನಡೆಯುತ್ತಿರುವ ಬೆನ್ನಲ್ಲೇ ಶ್ರೀಗಳು ಭವಿಷ್ಯ ನುಡಿದಿದ್ದಾರೆ.

ಉದ್ಯಮಿಯ ಅಪಹರಿಸಿ ಹಣಕ್ಕೆ ಬೇಡಿಕೆ: ಸತೀಶ್‌ ಜಾರಕಿಹೊಳಿ ಆಪ್ತೆಯ ಬಂಧನ

ಐದು ಕೋಟಿ ರೂ. ಹಣಕ್ಕಾಗಿ ರಿಯಲ್ ಎಸ್ಟೇಟ್ ಉದ್ಯಮಿಯನ್ನು ಅಪಹರಣ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಸತೀಶ್ ಜಾರಕಿಹೊಳಿ ಆಪ್ತೆಯನ್ನು ಘಟಪ್ರಭಾ ಪೊಲೀಸರು ಅರೆಸ್ಟ್‌ ಮಾಡಿದ್ದಾರೆ. ಮೂಡಲಗಿ ತಾಲೂಕಿನ ರಾಜಾಪುರ ಗ್ರಾಮದ ಉದ್ಯಮಿ ಬಸವರಾಜ ಅಂಬಿ ಅವರನ್ನು ಫೆ.14ರಂದು ಆರೋಪಿಗಳು ಅಪಹರಿಸಿ

ಬಂಗಾರಪೇಟೆ ಕುಪ್ಪನಹಳ್ಳಿ ಬಳಿ ಕಾರು ಬೈಕ್‌ ಡಿಕ್ಕಿಯಾಗಿ ನಾಲ್ವರ ಸಾವು

ಬಂಗಾರಪೇಟೆ ತಾಲೂಕಿನ ಕುಪ್ಪನಹಳ್ಳಿ ಬಳಿಯ ಚೆನ್ನೈ-ಬೆಂಗಳೂರು ಎಕ್ಸ್‌ಪ್ರೆಸ್‌ ಹೈವೆಯಲ್ಲಿ ಕಾರು ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿ ಸ್ಥಳದಲ್ಲೇ ನಾಲ್ಕು ಮಂದಿ ಅಸು ನೀಗಿದ್ದರೆ, ನಾಲ್ವರಿಗೆ ಗಂಭೀರ ಗಾಯವಾಗಿದೆ. ಗಾಯಾಳುಗಳನ್ನು ಕೋಲಾರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾರಿನಲ್ಲಿದ್ದ ಕೆಜಿಎಫ್ ತಾಲೂಕಿನ ಕಮ್ಮಸಂದ್ರ

2028 ರಲ್ಲಿ ಕಾಂಗ್ರೆಸ್ ರಾಜ್ಯದಲ್ಲಿ ಮತ್ತೆ ಅಧಿಕಾರಕ್ಕೆ: ಡಿಸಿಎಂ 

“ಕಾಂಗ್ರೆಸ್ ಪಕ್ಷದಲ್ಲಿ ನಾಯಕ ಪಟ್ಟವಿಲ್ಲ. ಪಕ್ಷಕ್ಕೆ ದುಡಿಯುವವರೆಲ್ಲರೂ ಕಾರ್ಯಕರ್ತರೇ. 2028 ರಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದೇ ಬರುತ್ತದೆ. ಎಲ್ಲಾ ಮುಖಂಡರು, ಕಾರ್ಯಕರ್ತರು ಒಗ್ಗಟ್ಟಾಗಿ ದುಡಿಯಬೇಕು” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್  ಹೇಳಿದರು. ಕಾರ್ಕಳದಲ್ಲಿ ನಡೆದ ಕಾಂಗ್ರೆಸ್ ಕುಟುಂಬೋತ್ಸವ ಸಮಾವೇಶದಲ್ಲಿ ಮಾತನಾಡಿದರು. “ಬೂತ್ ಮಟ್ಟದಲ್ಲಿ

ಜಾತಿ ಆಧಾರಿತ ರಾಜಕಾರಣ ಬೇಡ, ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳಿ: ಡಿ.ಕೆ. ಶಿವಕುಮಾರ್

“ಜಾತಿ ಆಧಾರಿತ ರಾಜಕಾರಣ ಬಿಡಿ, ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಿ. ಮುಂದಿನ ಚುನಾವಣೆಯಲ್ಲಿ ಉಡುಪಿ, ಮಂಗಳೂರು ಜಿಲ್ಲೆಗಳಿಂದ 8-9 ಶಾಸಕರು ಆಯ್ಕೆಯಾಗಬೇಕು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಉಡುಪಿ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿ,

ಅನ್ಯಾಯಕ್ಕೆ ಒಳಗಾಗಿರುವವರಿಗೆ ನ್ಯಾಯ ಕೊಡಿಸುವುದು ನಮ್ಮ ಕರ್ತವ್ಯ: ಡಿ.ಕೆ. ಶಿವಕುಮಾರ್

“ಅನ್ಯಾಯಕ್ಕೆ ಒಳಗಾಗಿರುವವರಿಗೆ ನ್ಯಾಯ ಕೊಡಿಸುವುದು ನಮ್ಮ ಕರ್ತವ್ಯ. ನಿಮ್ಮ ಧ್ವನಿಗೆ ಸರ್ಕಾರ ಮನ್ನಣೆ ನೀಡಿ, ನ್ಯಾಯ ಕೊಡಿಸುವ ಕೆಲಸ ಮಾಡುತ್ತೇವೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ ನೀಡಿದ್ದಾರೆ. ತಮ್ಮ ಬೇಡಿಕೆಗಳ ಈಡೇರಿಕೆಗೆ ಅಗ್ರಹಿಸಿ ರಾಷ್ಟ್ರೀಯ ಹೆದ್ದಾರಿ 66 ರ ಸಮೀಪ

ದಕ್ಷಿಣ ರಾಜ್ಯಗಳ ಲೋಕಸಭಾ ಕ್ಷೇತ್ರ  ಕುಗ್ಗಿಸಲು ಕೇಂದ್ರ ಕ್ರಮ : ಡಿಸಿಎಂ ಶಿವಕುಮಾರ್

“ಸಂಸತ್ತಿನಲ್ಲಿ ದಕ್ಷಿಣ ರಾಜ್ಯಗಳ ಸಂಖ್ಯಾಬಲವನ್ನು ಕಡಿಮೆ ಮಾಡಲು ಬಿಜೆಪಿ ಸರ್ಕಾರ ಮುಂದಾಗಿದ್ದು, ಕಾಂಗ್ರೆಸ್ ಇದರ ವಿರುದ್ಧ ಹೋರಾಟ ಮಾಡಲಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್  ಹೇಳಿದ್ದಾರೆ. ಮಂಗಳೂರು ವಿಮಾನ ನಿಲ್ದಾಣದ ಬಳಿ ಶಿವಕುಮಾರ್ ಅವರು ಮಾಧ್ಯಮಗಳ ಪ್ರಶ್ನೆಗಳಿಗೆ  ಪ್ರತಿಕ್ರಿಯಿಸಿದ ಅವರು, ಕೇಂದ್ರ ಸರ್ಕಾರ

ಚಾಮರಾಜನಗರದಲ್ಲಿ ಭೀಕರ ಅಪಘಾತ: ಮಾದಪ್ಪನ 5 ಭಕ್ತರ ದುರ್ಮರಣ

ಟಿಪ್ಪರ್ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಐವರು ಮಾದಪ್ಪ ಭಕ್ತರು ಸ್ಥಳದಲ್ಲೇ ದುರ್ಮರಣಕ್ಕೀಡಾಗಿರುವ ದಾರುಣ ಘಟನೆ ಚಾಮರಾಜನಗರದಲ್ಲಿ ಸಂಭವಿಸಿದೆ. ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ ಚಿಕ್ಕಿಂದುವಾಡಿ ಸಮೀಪ ಶನಿವಾರ ಬೆಳಿಗ್ಗೆ ಈ ಘಟನೆ ನಡೆದಿದೆ. ಡಿಕ್ಕಿ ರಭಸಕ್ಕೆ

ಕುಟುಂಬದ ಜೊತೆ ಕಟೀಲು ದುರ್ಗೆಯ ದರ್ಶನ ಪಡೆದ ನಟಿ ಶಿಲ್ಪಾ ಶೆಟ್ಟಿ

ನಟಿ ಶಿಲ್ಪಾ ಶೆಟ್ಟಿ ಮಂಗಳೂರಿನ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ. ಶಿಲ್ಪಾ ಶೆಟ್ಟಿ ಮಗ, ಮಗಳು, ತಾಯಿ, ತಂಗಿ ನಟಿ ಶಮಿತಾ ಶೆಟ್ಟಿ ಜೊತೆ ಬಂದು ಕಟೀಲು ದೇವಿಯ ದರ್ಶನ ಪಡೆದು ಮಲ್ಲಿಗೆ

ಮೈಸೂರು ಒಡೆಯರ್‌ ಕುಟುಂಬಕ್ಕೆ 3,400 ಕೋಟಿ ರೂ.ನೀಡಿ: ರಾಜ್ಯಕ್ಕೆ ಸುಪ್ರೀಂ ನಿರ್ದೇಶನ

ಬಳ್ಳಾರಿ ಮತ್ತು ಜಯಮಹಲ್‌ ರಸ್ತೆಗಳ ವಿಸ್ತರಣೆಗೆಂದು ಸ್ವಾಧೀನಪಡಿಸಿಕೊಂಡಿರುವ ಬೆಂಗಳೂರಿನ ಅರಮನೆ ಮೈದಾನದ 15.7 ಎಕರೆ ಜಾಗಕ್ಕೆ ಒಂದು ವಾರ ದೊಳಗೆ 3,400 ಕೋಟಿ ರೂ. ಮೊತ್ತದ ಟಿಡಿಆರ್ (ಅಭಿವೃದ್ಧಿ ಹಕ್ಕು ವರ್ಗಾವಣೆ) ಪ್ರಮಾಣಪತ್ರವನ್ನು ಸಲ್ಲಿಸುವಂತೆ ಸುಪ್ರೀಂಕೋರ್ಟ್‌ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ.