Menu

ವಿವಿಗಳ ನಕಲಿ ಅಂಕಪಟ್ಟಿ ಜಾಲ ಬೇಧಿಸಿ ಪ್ರಮುಖ ಆರೋಪಿಯ ಬಂಧಿಸಿದ ಕಲಬುರಗಿ ಪೊಲೀಸ್‌

ಕಲಬುರಗಿ ನಗರ ಪೊಲೀಸರು ದೇಶದ ವಿವಿಧ ವಿಶ್ವವಿದ್ಯಾಲಯಗಳ ಹೆಸರಿನಲ್ಲಿ ನಕಲಿ ಅಂಕಪಟ್ಟಿ ತಯಾರಿಸಿ ಮಾರಾಟ ಮಾಡುತ್ತಿದ್ದ ಜಾಲವನ್ನು ಬೇಧಿಸಿದ್ದಾರೆ. ಸಿಇಎನ್ ಪೊಲೀಸ್ ಠಾಣೆಯ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ 28 ವಿಶ್ವವಿದ್ಯಾಲಯಗಳ ನಕಲಿ ಅಂಕಪಟ್ಟಿ ತಯಾರಿಸುತ್ತಿದ್ದ ದೆಹಲಿ ಮೂಲದ ರಾಜೀವ್ ಸಿಂಗ್ ಅರೋರಾ ಎಂಬ ಆರೋಪಿಯನ್ನು ಬಂಧಿಸಿ, ರಾಜ್ಯಕ್ಕೆ ಸರಬರಾಜು ಆಗುತ್ತಿದ್ದ ನಕಲಿ ಅಂಕಪಟ್ಟಿಗಳನ್ನು ವಶಕ್ಕೆ ಪಡೆದಿದ್ದಾರೆ. 28 ವಿಶ್ವವಿದ್ಯಾಲಯಗಳ 522 ನಕಲಿ ಮಾರ್ಕ್ಸ್ ಕಾರ್ಡ್, 1,626 ಖಾಲಿ ಮಾರ್ಕ್ಸ್ ಕಾರ್ಡ್,

ಮುತ್ತಿನ ಹನಿಗಳು ಉದರಿತು ತೂಗುವ ತೊಟ್ಟಿಲು ಕೈತಪ್ಪಿತು: ಶ್ರೀ ರಾಮಲಿಂಗೇಶ್ವರ ಸ್ವಾಮೀಜಿ ಭವಿಷ್ಯ

ಕಾರ್ಮೋಡ ಕವಿದಿತ್ತು ಮುತ್ತಿನ ಹನಿಗಳು ಉದರಿತು ತೂಗುವ ತೊಟ್ಟಿಲು ಕೈತಪ್ಪಿತು ನಾನ್ ಇದ್ದೇನಲೇ ಪರಾಕ್ ಎಂದು ಚಿತ್ರದುರ್ಗ ಚಿಲ್ಲೆಯ ಚನ್ನಗಿರಿ ತಾಲೂಕಿನ ಶ್ರೀ ರಾಮಲಿಂಗೇಶ್ವರ ಮಠದ ಶ್ರೀ ರಾಮಲಿಂಗೇಶ್ವರ ಮಹಾಸ್ವಾಮಿಗಳು ಭವಿಷ್ಯ ನುಡಿದಿದ್ದಾರೆ. ಮಹಾಶಿವರಾತ್ರಿ ದಿನ ನಡೆದ ಚನ್ನಗಿರಿ ತಾಲೂಕಿನ ಕೆಂಗಾಪುರ

ಮಡಿಕೇರಿಯಲ್ಲೂ ಕಾಡ್ಗಿಚ್ಚಿಗೆ 20 ಎಕರೆ ಅರಣ್ಯ ಆಹುತಿ

ಮಡಿಕೇರಿಯ ಮಲ್ಮ, ಕಕ್ಕಬ್ಬೆ ವ್ಯಾಪ್ತಿಯ ಇಗ್ಗುತಪ್ಪ ಹಾಗೂ ನಾಲಾಡಿ ಬೆಟ್ಟದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಬುಧವಾರ ಸಂಜೆ ಕಾಣಿಸಿಕೊಂಡ ಕಾಡ್ಗಿಚ್ಚು 20 ಎಕರೆ ಪ್ರದೇಶಕ್ಕೆ ವ್ಯಾಪಿಸಿದೆ. ಮಡಿಕೇರಿ ಭಾಗಮಂಡಲ ವಲಯ ಅರಣ್ಯ ಅಧಿಕಾರಿ, ಸಿಬ್ಬಂದಿ ಹಾಗೂ ಸ್ಥಳೀಯರು ಬೆಂಕಿ ನಂದಿಸಿದ್ದಾರೆ. ಮುಳ್ಳಯ್ಯನಗಿರಿ ತಪ್ಪಲಿನಲ್ಲಿ

ಮಾನ್ವಿಯಲ್ಲಿ ಹಕ್ಕಿಗಳ ನಿಗೂಢ ಸಾವು: ಹಕ್ಕಿ ಜ್ವರದ ಶಂಕೆ

ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನಲ್ಲಿ ಪಕ್ಷಿಗಳು ನಿಗೂಢವಾಗಿ ಮೃತಪಟ್ಟಿದ್ದು, ತೆಲಂಗಾಣದಲ್ಲಿವ್ಯಾಪಿಸಿರುವ ಹಕ್ಕಿ ಜ್ವರ ಹರಡಿರುವ ಶಂಕೆ ವ್ಯಕ್ತವಾಗಿದೆ. ಹೀಗಾಗಿ ಜಿಲ್ಲೆಯಲ್ಲಿ ಬರ್ಡ್ ಫ್ಲೂ ಹರಡುತ್ತಿರುವ ಆತಂಕ ಉಂಟಾಗಿದೆ. ಮಾನ್ವಿಯಲ್ಲಿ ಪ್ರತಿದಿನ ಪಾರಿವಾಳ, ಕೊಕ್ಕರೆ, ಕಾಗೆ, ಕಿಂಗ್ ಫಿಶರ್, ಸುವರ್ಣಪಕ್ಷಿ ಸೇರಿ ನಾನಾ

ಮದ್ದೂರಿನಲ್ಲಿ ಬಸ್‌ ಚಕ್ರಕ್ಕೆ ತಲೆಕೊಟ್ಟು ಯುವಕ ಆತ್ಮಹತ್ಯೆ

ಮಂಡ್ಯದ ಮದ್ದೂರಿನ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಬಳಿ ಬಸ್ ಚಕ್ರಕ್ಕೆ ತಲೆಕೊಟ್ಟು ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ತೂಬಿನಕೆರೆ ಗ್ರಾಮದ ಅರುಣ್ (23) ಆತ್ಮಹತ್ಯೆ ಮಾಡಿಕೊಂಡ ಯುವಕ. ಬಸ್ ಬೆಂಗಳೂರು -ಮೈಸೂರು ಹೆದ್ದಾರಿಗೆ ಟರ್ನ್ ತೆಗೆದುಕೊಳ್ಳುತ್ತಿದ್ದ ವೇಳೆ ಅರುಣ್ ಏಕಾಏಕಿ ಬಸ್ಸಿನ ಹಿಂಬದಿ

ಕಲಬುರಗಿ ಇಎಸ್ಐಸಿ ಆಸ್ಪತ್ರೆಯಲ್ಲಿ ಬಾಣಂತಿ ಸಾವು

ಕಲಬುರಗಿ ನಗರದ ಸೇಡಂ ರಸ್ತೆಯಲ್ಲಿರುವ ಇಎಸ್ಐಸಿ ಆಸ್ಪತ್ರೆಯಲ್ಲಿ ಲೋ ಬಿಪಿಯಿಂದ ಬಾಣಂತಿಯೊಬ್ಬರು ಮೃತಪಟ್ಟಿದ್ದಾರೆ. ಚಿತ್ತಾಪುರ ತಾಲೂಕಿನ ತೊನಸನಹಳ್ಳಿ ಗ್ರಾಮದ ನಿವಾಸಿ ಶಿಲ್ಪಾ (32) ಮೃತಪಟ್ಟವರು. ಹೆರಿಗೆಗಾಗಿ ಇಎಸ್ಐಸಿ ಆಸ್ಪತ್ರೆಗೆ ದಾಖಲಾಗಿದ್ದ ಶಿಲ್ಪಾ, ಅಂದೇ ಗಂಡು ಮಗುವಿಗೆ ಜನ್ಮ ನೀಡಿದರು. ನಿರಂತರ ರಕ್ತ

ಯಾರಲ್ಲಿ ಕೇಳಿ ಟಿಕೆಟ್‌ ದರ ಹೆಚ್ಚಿಸಿದ್ದೀರೆಂದು ಕಂಡಕ್ಟರ್‌ಗೆ ಕುಡುಕನಿಂದ ಹಲ್ಲೆ

ಕೊಪ್ಪಳ ಜಿಲ್ಲೆಯಲ್ಲಿ ಕುಡಿದ ಮತ್ತಿನಲ್ಲಿದ್ದ ಪ್ರಯಾಣಿಕನೊಬ್ಬ ಯಾರನ್ನು ಕೇಳಿ ಬಸ್ ಟಿಕೆಟ್‌ ದರ ಹೆಚ್ಚಿಸಿದ್ದೀರಿ ಎಂದು ನಿರ್ವಾಹಕನ ಮೇಲೆ ಕಲ್ಲಿನಿಂದ ಹಲ್ಲೆ ಮಾಡಿರುವ ಘಟನೆ ನಡೆದಿದೆ. ಗಂಗಾವತಿ ಡಿಪೋಕ್ಕೆ ಸೇರಿರುವ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ನಿರ್ವಾಹಕ ಹನುಮಪ್ಪ ಎಂಬವರ

ನಮ್ಮ ಪ್ರಯಾಣಿಕರ ಸುರಕ್ಷತೆಗೆ ನಮ್ಮ ಬಸ್‌ಗಳಲ್ಲಿ ಭದ್ರತಾ ಸಿಬ್ಬಂದಿ: ಮಹಾರಾಷ್ಟ್ರ ಸಚಿವ ಪ್ರತಾಪ್ ಸರ್ನಾಯಕ್

ಪ್ರಯಾಣಿಕರ ಸುರಕ್ಷತೆ ದೃಷ್ಟಿಯಿಂದ ಕರ್ನಾಟಕಕ್ಕೆ ಸಂಚರಿಸುವ ರಾಜ್ಯ ಸಾರಿಗೆ ನಿಗಮದ ಬಸ್ಸುಗಳಲ್ಲಿ ಭದ್ರತಾ ಸಿಬ್ಬಂದಿಯನ್ನು ನಿಯೋಜಿಸುವ ಬಗ್ಗೆ ಚಿಂತನೆ ನಡೆಸಲಾಗಿದೆ ಎಂದು ಮಹಾರಾಷ್ಟ್ರ ಸಾರಿಗೆ ಸಚಿವ ಪ್ರತಾಪ್ ಸರ್ನಾಯಕ್ ತಿಳಿಸಿದ್ದಾರೆ. ರಾಜ್ಯ ಸಾರಿಗೆ ಬಸ್ಸುಗಳ ಸಿಬ್ಬಂದಿ ಮೇಲೆ ಕರ್ನಾಟಕ ಗಡಿಯಲ್ಲಿ ನಡೆದ

ಮಂಗಳೂರು ಬ್ಯಾಂಕ್ ದರೋಡೆ ಕಿಂಗ್ ಪಿನ್ ಸೇರಿ ಮತ್ತಿಬ್ಬರು ಸೆರೆ

ಮಂಗಳೂರು ನಗರ ಹೊರವಲಯದ ಕೆ.ಸಿ.ರೋಡ್‌ನಲ್ಲಿರುವ ಕೋಟೆಕಾರ್ ವ್ಯವಸಾಯ ಸೇವಾ ಸಹಕಾರಿ ಸಂಘದಲ್ಲಿ ನಡೆದ ದರೋಡೆ ಪ್ರಕರಣದ ಪ್ರಮುಖ ಆರೋಪಿ ಸೇರಿ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಬಂಟ್ವಾಳ ತಾಲೂಕು ಕನ್ಯಾನದ ಭಾಸ್ಕರ್ ಬೆಳ್ಚಪಾಡ ಯಾನೆ ಶಶಿ ತೇವರ್ (69) ಮತ್ತು ಕೆ.ಸಿ.ರೋಡ್‌ನ  ಮೊಹಮ್ಮದ್

ಬೆಳಗಾವಿ ಕಂಡಕ್ಟರ್ ವಿರುದ್ಧ ಪೋಕ್ಸೋ ಕೇಸ್ ವಾಪಸ್‌

ಬೆಳಗಾವಿಯಲ್ಲಿ ಕೆಎಸ್ಸಾರ್ಟಿಸಿ ಕಂಡಕ್ಟರ್ ಕನ್ನಡದಲ್ಲಿ ಹೇಳಿ ಎಂದ ಕಾರಣ ಮುಂದಿಟ್ಟುಕೊಂಡು ಹಲ್ಲೆ ನಡೆಸಿ ಬಳಿಕ ಪೋಕ್ಸೋ ಕೇಸ್ ದಾಖಲಿಸಿದ್ದ ದೂರುದಾರೆ ಕೇಸ್‌ ವಾಪಸ್‌ ಪಡೆದಿದ್ದಾರೆ. ಪೋಕ್ಸೋ ಕೇಸ್ ದಾಖಲು ಮಾಡಿದ್ದ ಸಂತ್ರಸ್ತೆಯ ತಾಯಿ ಈ ಕುರಿತು ವೀಡಿಯೊ ಹೇಳಿಕೆ ಬಿಡುಗಡೆ ಮಾಡಿದ್ದಾರೆ.