Menu

ವಿಜಯಪುರದಿಂದ ಕುಂಭಮೇಳಕ್ಕೆ ಹೊರಟಿದ್ದ ಇಬ್ಬರು ಅಪಘಾತಕ್ಕೆ ಬಲಿ

ಕುಂಭಮೇಳದಲ್ಲಿ ಭಾಗವಹಿಸಲು ಪ್ರಯಾಗ್‌ರಾಜ್ ಗೆ ಪ್ರಯಾಣಿಸುತ್ತಿದ್ದಾಗ ಗುಜರಾತ್‌ನ ಪೋರ್‌ಬಂದರ್ ಬಳಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ವಿಜಯಪುರದ ಇಬ್ಬರು ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾರೆ. ವಿಜಯಪುರ ಜಿಲ್ಲೆಯ ಚಡಚಣ ಪಟ್ಟಣದ ವಿಶ್ವನಾಥ ಅವಜಿ (55) ಹಾಗೂ ಮಲ್ಲಿಕಾರ್ಜುನ ಸದ್ದಲಗಿ (40) ಮೃತಪಟ್ಟವರು. ಚಡಚಣ ಪಟ್ಟಣದಿಂದ ಚಾಲಕ ಸೇರಿ 17 ಮಂದಿ ಮ್ಯಾಕ್ಸಿ ಕ್ಯಾಬ್‌ನಲ್ಲಿ ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳಕ್ಕೆ ತೆರಳಿದ್ದರು. ಈ ವೇಳೆ ಮ್ಯಾಕ್ಸಿ ಕ್ಯಾಬ್ ಗುಜರಾತ್‌ನ ಪೋರ್‌ ಬಂದರ್ ಸಮೀಪ ನಿಂತಿದ್ದ

 ಕನ್ನಡ ಧ್ವಜ ಹಿಡಿದು ಜೈ ಕರ್ನಾಟಕವೆಂದ ಮಹಾರಾಷ್ಟ್ರ ಚಾಲಕ

ಮಹಾರಾಷ್ಟ್ರದಲ್ಲಿ ಕನ್ನಡ, ಕನ್ನಡಿಗರ ಮೇಲೆ ಮರಾಠಿಗರು ನಡೆಸುತ್ತಿರುವ ಅನ್ಯಾಯವನ್ನು ಪ್ರತಿಭಟಿಸಿ ಬಾಗಲಕೋಟೆಯಲ್ಲಿ ಕನ್ನಡಿಗರು ಕನ್ನಡಿಗರು ಆಕ್ರೋಶ ಹೊರಹಾಕಿದ್ದಾರೆ. ಚಿತ್ರದುರ್ಗ ಹಾಗೂ ಸೋಲಾಪುರ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ಕನ್ನಡಪರ ಹೋರಾಟಗಾರರು ಮಹಾರಾಷ್ಟ್ರ ಬಸ್‌ಗೆ ‘ಜೈ ಕರ್ನಾಟಕ’ ಎಂದು ಬರೆದು ಕನ್ನಡಾಭಿಮಾನ ಮೆರೆದಿದ್ದಾರೆ. ಇಳಕಲ್

ಕೇಣಿ ಗ್ರೀನ್‌ ಫೀಲ್ಡ್‌ ಬಂದರು ವಿರೋಧಿಸಿ ನಾಗರಿಕರ ಪ್ರತಿಭಟನೆ ತೀವ್ರ, ನಿಷೇಧಾಜ್ಞೆ ಜಾರಿ

ಕೇಣಿ ಗ್ರೀನ್‌ ಫೀಲ್ಡ್‌ ಬಂದರು ನಿರ್ಮಾಣಕ್ಕೆ ಸಂಬಂಧಿಸಿದಂತೆ ಸ್ಥಳೀಯರ ವಿರೋಧ ತೀವ್ರಗೊಂಡಿದ್ದು, ಕೇಣಿ ಗ್ರಾಮದಲ್ಲಿ ಪೊಲೀಸ್‌ ಬ್ಯಾರಿಕೇಡ್‌ಗಳನ್ನು ಹಾಕಲಾಗಿದೆ. ನಾಗರಿಕರ ವಿರೋಧದ ನಡುವೆಯೂ ಯೋಜನೆ ಜಾರಿಗೆ ರಾಜ್ಯ ಸರಕಾರ ಮುಂದಾಗಿ ಪ್ರದೇಶದ ಭೌಗೋಳಿಕ ತಾಂತ್ರಿಕ ಅಧ್ಯಯನ ಕಾಮಗಾರಿಗಾಗಿ ಗುತ್ತಿಗೆ ಕಂಪನಿ ಮುಂದಾಗಿದೆ.

ಬಂಗಾರಪೇಟೆಯಲ್ಲಿ ಕಾಡಾನೆ ದಾಳಿಗೆ ಬಲಿಯಾದ ಮಹಿಳೆ

ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲೂಕಿನ ಸಾಕರಸನಹಳ್ಳಿ ಬಳಿ ಒಂಟಿ ಕಾಡಾನೆಯ ದಾಳಿಗೆ ಒಳಗಾಗಿ ರೈತ ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ. ಮಂಜುಳ (44) ಆನೆ ದಾಳಿಯಿಂದ ಮೃತಪಟ್ಟ ಮಹಿಳೆಯಾಗಿದ್ದು, ಸಾಕರಸನಹಳ್ಳಿ ಗ್ರಾಮದ ಹೊರ ವಲಯದ ತೋಟದ ಮನೆ ಬಳಿಈ ದುರಂತ ನಡೆದಿದೆ. ಘಟನೆಯಿಂದ ಸಾಕರಸನಹಳ್ಳಿ

ದಲಿತ ವಿದ್ಯಾರ್ಥಿಗಳ ಊಟದ ತಟ್ಟೆ ತೊಳೆಯಲ್ಲವೆಂದ ಸಹಾಯಕಿ ಮನೆಗೆ

ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಕರಕಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ದಲಿತ ಮಕ್ಕಳು ಬಿಸಿಯೂಟ ಮಾಡಿದ್ದ ತಟ್ಟೆಗಳನ್ನು ತೊಳೆಯಲು ನಿರಾಕರಿಸಿದ್ದ ಅಡುಗೆ ಸಹಾಯಕಿಯನ್ನು ಜಿಲ್ಲಾಡಳಿತ ಮನೆಗೆ ಕಳಿಸಿ ಪರ್ಯಾಯ ವ್ಯವಸ್ಥೆ ಮಾಡಿದೆ. ಅಡುಗೆ ಸಹಾಯಕಿಯ ಈ ಕಾರ್ಯವೈಖರಿಯಿಂದ ಮಧ್ಯಾಹ್ನದ

ಎಂಎಸ್ಪಿಎಲ್ ಫ್ಯಾಕ್ಟರಿ ವಿಸ್ತರಣೆ ವಿರೋಧಿಸಿ ಕೊಪ್ಪಳ ಬಂದ್ ಗೆ ಅಭೂತಪೂರ್ವ ಜನ ಬೆಂಬಲ

ಕೊಪ್ಪಳ: ಸರಕಾರದಲ್ಲಿ ಅತ್ಯಂತ ಪ್ರಭಾವಿಗಳಾದ ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರ ಬಸವರಾಜ ರಾಯರಡ್ಡಿ, ಶಾಸಕ ರಾಘವೇಂದ್ರ ಹಿಟ್ನಾಳ ಹಾಗೂ ಸಂಸದ ರಾಜಶೇಖರ ಹಿಟ್ನಾಳ ನೀವ ಏನ್ ಮಾಡ್ತಿರೊ ಗೊತ್ತಿಲ್ಲ, ಆದೇಶ ತಗೊಂಡ ಕೊಪ್ಪಳಕ್ಕ ಬರ್ರಿ” ಎಂದು ಕೊಪ್ಪಳದ ಸಂಸ್ಥಾನ ಶ್ರೀ ಗವಿಮಠದ ಶ್ರೀ

ಕಂಡಕ್ಟರ್ ಮೇಲೆ ಹಲ್ಲೆ ಅತ್ಯಂತ ಖಂಡನೀಯ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸೂಚನೆ

ಬೆಳಗಾವಿ: ಬೆಳಗಾವಿಯಲ್ಲಿ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ನಿರ್ವಾಹಕನ ಮೇಲೆ ಹಲ್ಲೆ ಮಾಡಿರುವುದು ಖಂಡನೀಯ. ಸರ್ಕಾರಿ ನೌಕರನ ಮೇಲೆ ಹಲ್ಲೆ ಮಾಡಿದ ತಪ್ಪಿತಸ್ಥರಿಗೆ ಶಿಕ್ಷೆಯಾಗಲೇ ಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.

ಮಂಡ್ಯ: ವಿಸಿ ನಾಲೆಗೆ ಹಾರಿ ಒಂದೇ ಕುಟುಂಬದ ಮೂವರು ಆತ್ಮಹತ್ಯೆ

ಸಾಲಬಾಧೆ ತಾಳಲಾರದೇ ಒಂದೇ ಕುಟುಂಬದ ಮೂವರು ಮಂಡ್ಯ ಜಿಲ್ಲೆಯ ವಿಸಿ ನಾಲೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಶ್ರೀರಂಗಪಟ್ಟಣದ ಗಂಜಾಂ ನಿವಾಸಿ ಆಗಿರುವ ಮಾಸ್ತಪ್ಪ (65), ಪತ್ನಿ ರತ್ನಮ್ಮ (45) ಮತ್ತು ಮಗಳು ಲಕ್ಷ್ಮೀ (18) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿಗಳು. ಆಟೋ ಓಡಿಸಿಕೊಂಡು

ಕೆಎಸ್ಸಾರ್ಟಿಸಿ ಕಂಡಕ್ಟರ್‌ ಮೇಲೆ ಹಲ್ಲೆಕೋರರ ವಿರುದ್ಧ ಗೂಂಡಾ ಕಾಯ್ದೆ: ಸಚಿವ ರಾಮಲಿಂಗಾ ರೆಡ್ಡಿ ತಾಕೀತು

ಬೆಳಗಾವಿಯಲ್ಲಿ ಕರ್ನಾಟಕದ ಬಸ್ ನಿರ್ವಾಹಕರ ಮೇಲೆ ಹಲ್ಲೆ ಮಾಡಿದವರ ವಿರುದ್ಧ ಗೂಂಡಾ ಕಾಯ್ದೆ ಹಾಕ್ಬೇಕು ಎಂದು ಸಚಿವ ರಾಮಲಿಂಗಾ ರೆಡ್ಡಿ ಅಧಿಕಾರಿಗಳಿಗೆ ತಾಕೀತು ಮಾಡಿದ್ದಾರೆ. ಕನ್ನಡದಲ್ಲಿ ಮಾತನಾಡಿ ಎಂದ ವಿಚಾರಕ್ಕೆ ದುಷ್ಕರ್ಮಿಗಳು ಕಂಡಕ್ಟರ್ ಮೇಲೆ ಹಲ್ಲೆ ಮಾಡಿದ್ದ ಹಿನ್ನೆಲೆಯಲ್ಲಿ ಬೆಳಗಾವಿಗೆ ಭೇಟಿ

ಶಿಗ್ಗಾಂವಿಯಲ್ಲಿ ಈಜಲೆಂದು ಕೆರೆಗಿಳಿದ ಬಾಲಕರು ನೀರುಪಾಲು

ಹಾವೇರಿ ಜಿಲ್ಲೆಯ ಶಿಗ್ಗಾಂವಿ ತಾಲೂಕಿನ ಅತ್ತಿಗೇರಿ ಗ್ರಾಮದಲ್ಲಿ ಕೆರೆಗೆ ಈಜಲು ತೆರಳಿದ್ದ ಇಬ್ಬರು ಬಾಲಕರು ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಪ್ರಜ್ವಲ್ ದೇವರಮನಿ (15) ಮತ್ತು ಸನತ್ ಭೂಸರೆಡ್ಡಿ (14) ಮೃತ ಬಾಲಕರು. ಸೈಕಲ್ ತೆಗೆದುಕೊಂಡು ಕೆರೆಗೆ ಈಜಲು ಹೋಗಿದ್ದ ಬಾಲಕರು ಸೈಕಲ್