ಜಿಲ್ಲಾ ಸುದ್ದಿ
ಶಿಗ್ಗಾಂವಿಯಲ್ಲಿ ಈಜಲೆಂದು ಕೆರೆಗಿಳಿದ ಬಾಲಕರು ನೀರುಪಾಲು
ಹಾವೇರಿ ಜಿಲ್ಲೆಯ ಶಿಗ್ಗಾಂವಿ ತಾಲೂಕಿನ ಅತ್ತಿಗೇರಿ ಗ್ರಾಮದಲ್ಲಿ ಕೆರೆಗೆ ಈಜಲು ತೆರಳಿದ್ದ ಇಬ್ಬರು ಬಾಲಕರು ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಪ್ರಜ್ವಲ್ ದೇವರಮನಿ (15) ಮತ್ತು ಸನತ್ ಭೂಸರೆಡ್ಡಿ (14) ಮೃತ ಬಾಲಕರು. ಸೈಕಲ್ ತೆಗೆದುಕೊಂಡು ಕೆರೆಗೆ ಈಜಲು ಹೋಗಿದ್ದ ಬಾಲಕರು ಸೈಕಲ್ ಅನ್ನು ಕೆರೆಯ ದಡದಲ್ಲಿ ಬಿಟ್ಟು ಈಜಲು ನೀರಿಗಿಳಿದು ಈಜಲು ಬಾರದೆ ಮುಳುಗಿ ಮೃತಪಟ್ಟಿದ್ದಾರೆ. ಕೆರೆಯ ದಡದಲ್ಲಿ ಸೈಕಲ್ ಹಾಗೂ ಬಟ್ಟೆಗಳು ಇರುವುದನ್ನು ಗಮನಿಸಿದ ಸ್ಥಳೀಯರು ಕೆರೆಯಲ್ಲಿ ಬಾಲಕರು
ತಾವರೆಕೆರೆಯ ಶಿಲಾಮಠಕ್ಕೆ ರೋಬೋಟಿಕ್ ಆನೆ ನೀಡಿದ ನಟ ಸುನಿಲ್ ಶೆಟ್ಟಿ
ದಾವಣಗೆರೆಯ ಚನ್ನಗಿರಿ ತಾಲೂಕಿನ ತಾವರೆಕೆರೆಯ ಶಿಲಾಮಠಕ್ಕೆ ಬಾಲಿವುಡ್ ನಟ ಸುನೀಲ್ ಶೆಟ್ಟಿ ರೋಬೋಟಿಕ್ ಆನೆಯೊಂದನ್ನು ಕಳಿಸಿಕೊಟ್ಟಿದ್ದಾರೆ. ಭಾನುವಾರ ಶ್ರೀಮಠಕ್ಕೆ ಆಗಮಿಸಿದ ಆನೆಯನ್ನು ಸ್ವಾಮೀಜಿ ಸೇರಿದಂತೆ ಭಕ್ತರು ಅದ್ಧೂರಿಯಾಗಿ ಸ್ವಾಗತಿಸಿದರು. ಈ ಆನೆಗೆ ಉಮಾಮಹೇಶ್ವರ ಎಂದು ನಾಮಕರಣ ಮಾಡಲಾಯಿತು. ಗ್ರಾಮಸ್ಥರೆಲ್ಲರೂ ಸೇರಿ ಆನೆಯ
ಕುಂಭಮೇಳಕ್ಕೆ ತೆರಳುತ್ತಿದ್ದ ಗೋಕಾಕ್‌ನ ಏಳು ಮಂದಿ ಅಪಘಾತಕ್ಕೆ ಬಲಿ
ಕುಂಭಮೇಳದಲ್ಲಿ ಪಾಲ್ಗೊಳ್ಳಲು ಪ್ರಯಾಗ್‌ರಾಜ್‌ಗೆ ತೆರಳುತ್ತಿದ್ದ ಗೋಕಾಕ್‌ನ ಏಳು ಮಂದಿ ಮಧ್ಯಪ್ರದೇಶದಲ್ಲಿ ರಸ್ತೆ ಅಪಘಾತಕ್ಕೆ ಬಲಿಯಾಗಿದ್ದಾರೆ. ಮಧ್ಯಪ್ರದೇಶದ ಜಬಲಪೂರ ಪೆಹರಾ ಟೋಲ್ ನಾಕಾ ಬಳಿ ಈ ದುರಂತ ಸಂಭವಿಸಿದ್ದು, ಮೂವರ ಸ್ಥಿತಿ ಗಂಭೀರವಾಗಿದೆ. ಗೋಕಾಕ್ ತಾಲೂಕಿನ ಲಕ್ಷ್ಮಿ ಬಡಾವಣೆ ನಿವಾಸಿಗಳಾದ ಬಾಲಚಂದ್ರ ಗೌಡರ,
ಕನ್ನಡಿಗರ ವಿರುದ್ಧ ಅವಹೇಳನ: ಎಂಇಎಸ್ ಮುಖಂಡನ ವಿರುದ್ಧ ಕೇಸ್
ಕೆಎಸ್ಆರ್ಟಿಸಿ ಬಸ್ ನಿರ್ವಾಹಕನ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕನ್ನಡಿಗರ ವಿರುದ್ಧ ಹೀನಾಯವಾಗಿ ಮಾತನಾಡಿರುವ ಎಂಇಎಸ್ ಮುಖಂಡನ ಶುಭಂ ಶಳಕೆ ವಿರುದ್ಧ ಮಾಳಮಾರುತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ಇಂದು (ಸೋಮವಾರ) ಬೆಳಗಾವಿಯ ಕೆಎಸ್ಸಾರ್ಟಿಸಿ ಘಟಕಕ್ಕೆ
ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಇಂದು ಮಳೆ ಸಾಧ್ಯತೆ
ರಾಜ್ಯದ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ ಹಾಗೂ ಉಡುಪಿಯಲ್ಲಿ ಇಂದು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಂಗಾಳ ಕೊಲ್ಲಿಯಲ್ಲಿ ಚಂಡಮಾರುತ ಉಂಟಾಗಿದ್ದು, ಕರ್ನಾಟಕದ ಕೆಲವು ಭಾಗಗಳ ಮೇಲೆ ಪರಿಣಾಮ ಬೀರಿ ಮಳೆ ಸುರಿಯಬಹುದು ಎಂದು ಹೇಳಲಾಗಿದೆ. ಉತ್ತರ ಕನ್ನಡದಲ್ಲಿ
ಮಹಾರಾಷ್ಟ್ರ, ಕರ್ನಾಟಕ ನಡುವೆ ಸಾರಿಗೆ ಬಸ್ ಸ್ಥಗಿತ
ಕನ್ನಡ ಮಾತನಾಡಿ ಎಂದು ಹೇಳಿದ್ದಕ್ಕೆ ಮರಾಠಿಗರು ಕಂಡಕ್ಟರ್ ಮೇಲೆ ಹಲ್ಲೆ ನಡೆಸಿರುವ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿದೆ. ಕಂಡಕ್ಟರ್ ಮೇಲೆ ಮರಾಠಿಗರು ಬೇರೆ ಆರೋಪಗಳನ್ನು ಮಾಡಿದ ಹಿನ್ನೆಲೆ ಕಂಡಕ್ಟರ್ ವಿರುದ್ಧ ಫೋಕ್ಸೊ ಪ್ರಕರಣ ದಾಖಲಾಗಿದೆ. ಇದರಿಂದ ಬೆಳಗಾವಿಯಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದ್ದು,
ಕಂಬದಹಳ್ಳಿ ಆಂಜನೇಯಬೆಟ್ಟದಲ್ಲಿ ಬಾಂಬ್ ಸ್ಫೋಟಕ್ಕೆ ವಿದ್ಯಾರ್ಥಿಯ ಅಂಗೈ ಛಿದ್ರ
ನಾಗಮಂಗಲ ತಾಲೂಕಿನ ಕಂಬದಹಳ್ಳಿಯ ಆಂಜನೇಯಬೆಟ್ಟದಲ್ಲಿ ನಾಡಬಾಂಬ್ ಸ್ಫೋಟದಿಂದಾಗಿ ಇಬ್ಬರು ವಿದ್ಯಾರ್ಥಿಗಳು ಗಾಯಗೊಂಡಿದ್ದು, ಓರ್ವನ ಅಂಗೈ ಛಿದ್ರವಾಗಿದೆ. ಗಾಯಾಳು ವಿದ್ಯಾರ್ಥಿಗಳನ್ನು ಹರಿಯಂತ್ ಪಾಟೀಲ್ ಹಾಗೂ ಪಾರ್ಥ ಎಂದು ಗುರುತಿಸಲಾಗಿದೆ. ಇವರು ಜೈನ ಬಸದಿ ಶಾಲೆಯಲ್ಲಿ ವ್ಯಾಸಾಂಗ ಮಾಡುತ್ತಿದ್ದರು. ಆಂಜನೇಯ ಬೆಟ್ಟದ ದೇವಸ್ಥಾನದ ಸುತ್ತ
ರಾಜ್ಯ ಜೈವಿಕ ಇಂಧನ ಅಭಿವೃದ್ಧಿ ಮಂಡಳಿ ಕಾರ್ಯ ವ್ಯಾಪ್ತಿ ಜಾಗತಿಕ ವಿಸ್ತರಣೆಗೆ ಚಿಂತನೆ
ಕರ್ನಾಟಕ ರಾಜ್ಯ ಜೈವಿಕ ಇಂಧನ ಅಭಿವೃದ್ಧಿ ಮಂಡಳಿ ಕಾರ್ಯ ವ್ಯಾಪ್ತಿ ಜಾಗತಿಕವಾಗಿ ವಿಸ್ತರಣೆಯಾಗಲಿದೆ ಎಂಬ ವಿಶ್ವಾಸ ಹೊಂದಿರುವುದಾಗಿ ಕೆ ಎಸ್ ಬಿ ಡಿ ಬಿ ಅಧ್ಯಕ್ಷ ಎಸ್ ಈ. ಸುಧೀಂದ್ರ ಹೇಳಿದ್ದಾರೆ. ಮೈಸೂರಿನಲ್ಲಿ ಜರುಗಿದ” ಸುಸ್ಥಿರ ತಾಂತ್ರಿಕತೆ” ಅಂತರಾಷ್ಟ್ರೀಯ ಸಮಾವೇಶದಲ್ಲಿ ಮಂಡಳಿಯ
ಚಾಮುಂಡಿ ಬೆಟ್ಟದಲ್ಲಿ 35 ಎಕರೆ ಅರಣ್ಯನಾಶ!
ಅರಣ್ಯ ಇಲಾಖೆ ಸಿಬ್ಬಂದಿ ಸತತ 8 ಗಂಟೆಗಳ ಕಾಲ ಕಾರ್ಯಾಚರಣೆ ನಡೆಸಿ ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಕಾಣಿಸಿಕೊಂಡಿದ್ದ ಅಗ್ನಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಸುಮಾರು 2 ದಿನಗಳ ಕಾಲ ಹಬ್ಬಿದ ಬೆಂಕಿಗೆ 35 ಎಕರೆ ಅರಣ್ಯ ನಾಶವಾಗಿದೆ. ಮೈಸೂರಿನಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ
ವಿಜಯಪುರ ಮಿನಿ ತಾರಾಲಯಕ್ಕೆ 12.88 ಕೋಟಿ, ವಸತಿ ಶಾಲೆಗಳಿಗೆ 44 ಕೋಟಿ ರೂ. ವೆಚ್ಚ: ಸಚಿವ ಎಂಬಿ ಪಾಟೀಲ
ವಿಜಯಪುರ :. ವಿಜಯಪುರದಲ್ಲಿ ಉಪಪ್ರಾದೇಶಿಕ ವಿಜ್ಞಾನ ಕೇಂದ್ರ ಮತ್ತು ಕಿರು ತಾರಾಲಯ (ಮಿನಿ ಪ್ಲಾನೆಟೇರಿಯಂ) ಹಾಗೂ ಬಬಲೇಶ್ವರ ಮತ್ತು ವಿಜಯಪುರದಲ್ಲಿ ಎರಡು ಹಾಸ್ಟೆಲ್ ಗಳ ನಿರ್ಮಾಣಕ್ಕೆ ಒಟ್ಟು 56.88 ಕೋಟಿ ವ್ಯಯಿಸಲು ಸಂಪುಟ ಸಭೆಯಲ್ಲಿ ಆಡಳಿತಾತ್ಮಕ ಅನುಮೋದನೆ ಸಿಕ್ಕಿದೆ ಎಂದು ಜಿಲ್ಲಾ