Friday, September 18, 2026
Menu

ಬಳ್ಳಾರಿ ಪಿಜಿಯಲ್ಲಿ ಇಂಜಿನಿಯರಿಂಗ್‌ ವಿದ್ಯಾರ್ಥಿ ಸಾವು: ಕೊಲೆಯೆಂದು ಪೋಷಕರ ಆರೋಪ

ಬಳ್ಳಾರಿಯ ಅಶೋಕ್ ನಗರದ ಚೌದ್ರಿ ರೆಸಿಡೆನ್ಸ್ ಪಿಜಿ ಕೊಠಡಿಯಲ್ಲಿ ಎಂಜಿನಿಯರಿಂಗ್‌ ವಿದ್ಯಾರ್ಥಿಯ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ವಿಶ್ವಾಸ್ (24) ಮೃತಪಟ್ಟ ವಿದ್ಯಾರ್ಥಿ ಎಂದು ಗುರುತಿಸಲಾಗಿದೆ. ಮೃತನ ತಲೆಗೆ ಹಾಗೂ ಎದೆ ಭಾಗಕ್ಕೆ ಗಂಭೀರ ಗಾಯಗಳಾಗಿದ್ದು, ಅನುಮಾನಕ್ಕೆ ಕಾರಣವಾಗಿದೆ. ಹೀಗಾಗಿ ವಿದ್ಯಾರ್ಥಿ ವಿಶ್ವಾಸ್‌ನನ್ನು ಕೊಲೆ ಮಾಡಲಾಗಿದೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಸಿರುಗುಪ್ಪ ತಾಲೂಕಿನ ಟಿ. ರಾಂಪುರ ಗ್ರಾಮದ ನಿವಾಸಿ ವಿಶ್ವಾಸ್ ಬಳ್ಳಾರಿಯ RYMEC ಕಾಲೇಜಿನಲ್ಲಿ ಇಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿದ್ದ.

ಮಂಡ್ಯದಲ್ಲಿ ತಂದೆ, ತಾಯಿ, ಮಗನ ಸಾವು

ಮಂಡ್ಯದ ನೆಹರು ನಗರದಲ್ಲಿ ಒಂದೇ ಕುಟುಂಬದ ಮೂವರು ನಿಗೂಢವಾಗಿ ಮೃತಪಟ್ಟಿದ್ದು, ತಂದೆ ನೇಣಿ ಬಿಗಿದುಕೊಂಡಿದ್ದರೆ, ತಾಯಿ ಮತ್ತು ಮಗ ಶವವಾಗಿ ಪತ್ತೆಯಾಗಿದ್ದಾರೆ. ಮೃತರನ್ನು ಪ್ರಭಾಕರ್ (ತಂದೆ), ಜ್ಯೋತಿ (ತಾಯಿ) ಮತ್ತು ಸಂತೋಷ್ (ಪುತ್ರ) ಎಂದು ಗುರುತಿಸಲಾಗಿದೆ. ಜ್ಯೋತಿ ಮತ್ತು ಅವರ ಪುತ್ರ

ಬೈಕ್‌ನಲ್ಲಿ ತೆರಳುತ್ತಿದ್ದಾಗ ಮರ ಬಿದ್ದು ಯುವಕ ಸಾವು

ಬೈಕ್‌ನಲ್ಲಿ ತೆರಳುತ್ತಿದ್ದ ಯುವಕನ ಮೇಲೆ ಮರ ಬಿದ್ದು ಸ್ಥಳದಲ್ಲೇ ಆತ ಮೃತಪಟ್ಟ ಘಟನೆ ರಾಮನಗರದ ಹುಣಸನಹಳ್ಳಿ ಗ್ರಾಮದ ಬಳಿ ನಡೆದಿದೆ. ಪ್ರಶಾಂತ್ (19) ಮೃತಪಟಟ್ಟ ಯುವಕ. ನಾಗೋಹಳ್ಳಿ ಗ್ರಾಮದ ಪ್ರಶಾಂತ್ ಕೆಲಸಕ್ಕೆಂದು ಮುಂಜಾನೆ ಮನೆಯಿಂದ ರಾಮನಗರಕ್ಕೆ ಬೈಕ್‌ನಲ್ಲಿ ತೆರಳುತ್ತಿದ್ದ. ರಾತ್ರಿ ಸುರಿದ

ಲಂಚ ಪಡೆಯುತ್ತಿದ್ದಾಗಲೇ ಲೋಕಾಯುಕ್ತ ಪೊಲೀಸ್‌ಗೆ ಸಿಕ್ಕಿ ಬಿದ್ದ ಅಧಿಕಾರಿಗಳು

ವಿಜಯಪುರ ಜಿಲ್ಲೆಯ ಸಾಲೋಟಗಿಯಲ್ಲಿ ಲಂಚ ಪಡೆಯುತ್ತಿದ್ದಾಗಲೇ ಇಬ್ಬರು ಅಧಿಕಾರಿಗಳನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ. ಆರೋಪಿ ಅಧಿಕಾರಿಗಳು ಕೆಬಿಜೆಎನ್‌ಎಲ್ ಕೆನಾಲ್‌ನ 3,71,419 ರೂ. ಬಿಲ್ ಪಾವತಿಗಾಗಿ 18 ಸಾವಿರ ರೂ. ಲಂಚಕ್ಕೆ ಬೇಡಿಕೆಯಿಟ್ಟಿದ್ದರು ಎನ್ನಲಾಗಿದೆ. ಕೆಬಿಜೆಎನ್‌ಎಲ್ ಉಪವಿಭಾಗ ನಂಬರ್ ಒಂದರ ಸಹಾಯಕ ಕಾರ್ಯನಿರ್ವಾಹಕ

ಸರ್ಕಾರಿ ವಸತಿ ನಿಲಯದಲ್ಲಿ ಊಟ, ನೀರಿಲ್ಲ: ವಿದ್ಯಾರ್ಥಿಗಳ ಪ್ರತಿಭಟನೆ

ರಾಯಚೂರು ಜಿಲ್ಲೆಯ ಡಾ. ಬಿ.ಆರ್. ಅಂಬೇಡ್ಕರ್ ಮೆಟ್ರಿಕ್ ನಂತರದ ವಸತಿ ನಿಲಯದಲ್ಲಿ ಕಳೆದ ಮೂರು ದಿನಗಳಿಂದ ಊಟ ಮತ್ತು ಕುಡಿಯುವ ನೀರಿಲ್ಲದೆ ವಿದ್ಯಾರ್ಥಿಗಳು ಪರದಾಡುತ್ತಿದ್ದು, ಪ್ರತಿಭಟನೆ ಆರಂಭಿಸಿದ್ದಾರೆ. ಹಸಿವಿನಿಂದ ಕಂಗೆಟ್ಟ ನೂರಾರು ವಿದ್ಯಾರ್ಥಿಗಳು ಸಮಾಜ ಕಲ್ಯಾಣ ಇಲಾಖೆಯ ಜಿಲ್ಲಾ ಕಚೇರಿ ಎದುರು

5% ಬಡ್ಡಿಯ ಆಮಿಷ, ಕೋಟ್ಯಂತರ ರೂ.ವಂಚನೆ: ಆದಿತ್ಯರಾಜ್‌ ಕ್ಯಾಪಿಟಲ್ ಮೇಲೆ ಪೊಲೀಸ್‌ ದಾಳಿ

ಹೆಚ್ಚಿನ ಬಡ್ಡಿಯ ಆಮಿಷ ತೋರಿಸಿ ಸಾರ್ವಜನಿಕರಿಂದ ಕೋಟ್ಯಂತರ ರೂಪಾಯಿ ಠೇವಣಿ ಸಂಗ್ರಹಿಸಿ ವಂಚಿಸುತ್ತಿದ್ದ ಆರೋಪದ ಹಿನ್ನೆಲೆಯಲ್ಲಿ,  ಬೆಳಗಾವಿಯ ಭಾಗ್ಯನಗರದಲ್ಲಿರುವ ‘ಆದಿತ್ಯರಾಜ್‌ ಕ್ಯಾಪಿಟಲ್ ಸಂಸ್ಥೆಯ ಕಚೇರಿಯ ಮೇಲೆ ಜಿಲ್ಲಾಡಳಿತ ಮತ್ತು ಪೊಲೀಸ್ ಅಧಿಕಾರಿಗಳ ಜಂಟಿ ತಂಡ  ದಾಳಿ ನಡೆಸಿದೆ. ಬೆಳಗಾವಿ ಉಪವಿಭಾಗಾಧಿಕಾರಿ ಶ್ರವಣ

ಉಗ್ರನೊಂದಿಗೆ ಸಂಪರ್ಕ ಶಂಕೆ: ತುಮಕೂರಿನಲ್ಲಿ ಯುವಕ ಅರೆಸ್ಟ್‌

ವಿದೇಶಿ ಭಯೋತ್ಪಾದಕನ ಜೊತೆ ನಿರಂತರ ಸಂಪರ್ಕ ಹಾಗೂ ದೇಶದ ಭದ್ರತೆಗೆ ಧಕ್ಕೆ ತರುವಂಥ ಚಟುವಟಿಕೆಗಳನ್ನು ನಡೆಸುತ್ತಿದ್ದ ಶಂಕೆಯಿಂದ ತುಮಕೂರಿನ ಯುವಕನೊಬ್ಬನನ್ನು ಕ್ಯಾತಸಂದ್ರದಲ್ಲಿ ಪೊಲೀಸರು ಬಂಧಿಸಿದ್ದಾರೆ. ಕೇಂದ್ರ ತನಿಖಾ ಸಂಸ್ಥೆಗಳು ನೀಡಿದ ನಿಖರ ಮಾಹಿತಿ ಆಧರಿಸಿ ಕಾರ್ಯಾಚರಣೆ ಕೈಗೊಂಡು ತುಮಕೂರು ನಗರ ಪೊಲೀಸರು

ಸಿರಗುಪ್ಪದಲ್ಲಿ ಬೈಕ್‌ ರಸ್ತೆ ಗುಂಡಿಗೆ ಬಿದ್ದು ನರ್ಸ್‌ ಬಲಿ

ಬಳ್ಳಾರಿ ಜಿಲ್ಲೆಯ ಸಿರುಗುಪ್ಪ ತಾಲೂಕಿನ ಚಾಣಕನೂರು ಕ್ರಾಸ್ ಬಳಿ ಅವೈಜ್ಞಾನಿಕ ರಸ್ತೆ ಕಾಮಗಾರಿಗೆ ನರ್ಸ್‌ ಬಲಿಯಾಗಿದ್ದು, ಆಕೆಯ ಪತಿ ತೀವ್ರವಾಗಿ ಗಾಯಗೊಂಡು ಆಸ್ಪತ್ರೆ ಸೇರಿದ್ದಾರೆ. ರಾತ್ರಿ ಡ್ಯೂಟಿ ಮುಗಿಸಿ ಮನೆಗೆ ಮರಳುತ್ತಿದ್ದ ದಂಪತಿ ಬೈಕ್ ಸಮೇತ ರಸ್ತೆ ಗುಂಡಿಗೆ ಬಿದ್ದಿದ್ದು, ಪತ್ನಿ

ಚಿಕ್ಕನಾಯಕನಹಳ್ಳಿಯಲ್ಲಿ ಕಾರುಗಳು ಡಿಕ್ಕಿ: ಒಂದೇ ಕುಟುಂಬದ ಮೂವರ ಸಾವು

ಎರಡು ಕಾರುಗಳು ಡಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಮೃತಪಟಟ್ಟಿರುವ ದಾರುಣ ಘಟನೆ ತುಮಕೂರಿನ ಚಿಕ್ಕನಾಯಕನಹಳ್ಳಿ ತಾಲೂಕಿನ ಹುಳಿಯಾರು ಗ್ರಾಮದ ಬಳಿ ನಡೆದಿದೆ. ಮೃತಪಟ್ಟವರು ಆಂಧ್ರಪ್ರದೇಶ ಮೂಲದವರು ಎನ್ನಲಾಗುತ್ತಿದೆ. ಈ ಅಪಘಾತದಲ್ಲಿ ಮೂವರಿಗೆ ಗಂಭೀರ ಗಾಯಗಳಾಗಿದ್ದು, ತುಮಕೂರು ಜಿಲ್ಲಾಸ್ಪತ್ರೆಗೆ

ಮಳೆಗೆ ಬಿದ್ದಿದ್ದ ವಿದ್ಯುತ್‌ ತಂತಿ ತಗುಲಿ ವಿದ್ಯಾರ್ಥಿ ಸಾವು

ಧಾರಾಕಾರ ಮಳೆಗೆ ನೆಲಕ್ಕೆ ಬಿದ್ದಿದ್ದ ವಿದ್ಯುತ್ ತಂತಿ ತಗುಲಿ ಎಂಟು ವರ್ಷದ ಬಾಲಕ ಮೃತಪಟ್ಟಿರುವ ಘಟನೆ ಬೀದರ್‌ನ ಹುಲಸೂರು ಪಟ್ಟಣದಲ್ಲಿ ನಡೆದಿದೆ. ಎಂಟು ವರ್ಷದ ಅಲಿ ಮೊಮಿನ್ ಮೃತಪಟ್ಟ ಬಾಲಕ. ಜಿಲ್ಲೆಯಲ್ಲಿ ಬಿರುಗಾಳಿ ಸಹಿತ ಮಳೆಯ ಕಾರಣ ವಿದ್ಯುತ್‌ ಕಂಬದಿಂದ ಮನೆಗೆ