Friday, September 18, 2026
Menu

ರಾಯಬಾಗದಲ್ಲಿ ಆಟೊ-ಬೈಕ್‌ ಡಿಕ್ಕಿ: ಒಂದೇ ಕುಟುಂಬದ ಮೂವರು ಬಲಿ

ಬೆಳಗಾವಿಯ ರಾಯಬಾಗ ರೈಲು ನಿಲ್ದಾಣದ ಬಳಿ ರಿಕ್ಷಾ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ಮೂವರು ಮೃತಪಟ್ಟಿದ್ದಾರೆ. ಮೃತರನ್ನು ರಾಯಬಾಗ ತಾಲೂಕಿನ ಬೊಮ್ಮನಾಳ ಗ್ರಾಮದ ನಿವಾಸಿಗಳಾದ ಬೈಕ್ ಸವಾರ ಮಹಾಂತೇಶ್ ಮಾನೆ, ಪತ್ನಿ ಸಾಕ್ಷಿ ಮಾನೆ ಹಾಗೂ 6 ತಿಂಗಳ ಮಗು ಎಂದು ಗುರುತಿಸಲಾಗಿದೆ. ಪತಿ, ಪತ್ನಿ ಹಾಗೂ ಮಗು ಬೈಕ್‌ನಲ್ಲಿ ತೆರಳುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ

ಕಪ್ಪೆಚಿಪ್ಪು ಹೆಕ್ಕುತ್ತಿದ್ದಾಗ ಸಮುದ್ರ ಪಾಲಾದವರ ಸಂಖ್ಯೆ 11ಕ್ಕೆ ಏರಿಕೆ

ಭಟ್ಕಳ ಬಳಿ ಅಳ್ವೆಕೋಡಿ ಕಡಲತೀರದಲ್ಲಿ ಕಪ್ಪೆಚಿಪ್ಪು ಸಂಗ್ರಹಿಸಲು ಹೋಗಿ ಮೃತಪಟ್ಟವರ ಸಂಖ್ಯೆ 11ಕ್ಕೆ ಏರಿಕೆಯಾಗಿದೆ. ಭಾನುವಾರ 10 ಮಂದಿಯ ಮೃತದೇಹಗಳು ಪತ್ತೆಯಾಗಿದ್ದವು. ನಾಪತ್ತೆಯಾಗಿದ್ದ ಮಾದೇವ್ ನಾಯ್ಕ್ ಮೃತದೇಹ ಸೋಮವಾರ ಪತ್ತೆಯಾಗಿದೆ. ಎನ್‌ಡಿಆರ್‌ಎಫ್‌, ಈಶ್ವರ ಮಲ್ಪೆ ತಂಡ ನಡೆಸಿದ ಶೋಧ ಕಾರ್ಯಾಚರಣೆಯಲ್ಲಿ ಮೃತದೇಹವನ್ನು

ಚಿತ್ತಾಪುರದಲ್ಲಿ ರಸ್ತೆ ಅಪಘಾತಕ್ಕೆ ಒಂದೇ ಕುಟುಂಬದ ಐವರು ಬಲಿ

ಚಿತ್ತಾಪುರ ತಾಲೂಕಿನ ಲಾಡ್ಲಾಪುರ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಶುಕ್ರವಾರ ರಾತ್ರಿ ನಡೆದಿರುವ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ಐವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತಪಟ್ಟವರು ಚಿತ್ತಾಪುರ ತಾಲೂಕಿನ ಇಂಗಳಗಿ ಗ್ರಾಮದ ತೋಲುಸಾಬ್ ಕ್ಯಾಶ್ವಾರ್ (27), ಹುಸೇನ್ ಷಾ (48), ಮೈಬೂಬ್ ಅಲಿ (45),

ಗಂಡನ ಕಿರುಕುಳಕ್ಕೆ ಬೇಸತ್ತ ಗರ್ಭಿಣಿ ಆತ್ಮಹತ್ಯೆ, ಕ್ಯಾನ್ಸರ್‌ಗೆ ಹೆದರಿ ಡಾಕ್ಟರ್‌ ಸುಸೈಡ್‌

ಕಲಬುರಗಿ ತಾಲೂಕಿನ ಔರಾದ್ (ಬಿ) ಗ್ರಾಮದಲ್ಲಿ ಗಂಡನ ಕಿರುಕುಳ ಮತ್ತು ಹಿಂಸೆಗೆ ಬೇಸತ್ತು 22 ವರ್ಷದ 4 ತಿಂಗಳ ಗರ್ಭಿಣಿ ಶೃತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಶೃತಿ ಮತ್ತು ಗೋಪಾಲ್ ಎರಡು ವರ್ಷಗಳ ಹಿಂದೆ ಪ್ರೀತಿಸಿ ಮದುವೆಯಾಗಿದ್ದರು. ಮದುವೆಯ ನಂತರ

ಪೋಕ್ಸೊ ಆರೋಪಿ ವಚನಾನಂದ ಶ್ರೀ ಜಾಮೀನು ರದ್ದುಗೊಳಿಸಲು ಕೋರ್ಟ್‌ಗೆ ಪೊಲೀಸ್‌ ಮನವಿ

ಪೋಕ್ಸೊ ಪ್ರಕರಣದ ಆರೋಪಿ, ಹರಿಹರ ಪಂಚಮಸಾಲಿ ಗುರುಪೀಠದ ವಚನಾನಂದ ಸ್ವಾಮೀಜಿ ಪ್ರಕರಣ ದಾಖಲಾಗುವ ಮೊದಲೇ ಪಡೆದಿರುವ ನಿರೀಕ್ಷಣಾ ಜಾಮೀನು ರದ್ದುಗೊಳಿಸುವಂತೆ ತನಿಖಾಧಿಕಾರಿಗಳು ನ್ಯಾಯಾಲಯಕ್ಕೆ  ಮನವಿ ಸಲ್ಲಿಸಿದ್ದಾರೆ. ಮುಚ್ಚಿದ ಲಕೋಟೆಯಲ್ಲಿ ಕೋರ್ಟ್‌ಗೆ ವರದಿ ಜೊತೆ ಮನವಿ ಸಲ್ಲಿಕೆ ಮಾಡಿದ ತನಿಖಾಧಿಕಾರಿ, ಜಾಮೀನು ರದ್ದು

ದೇವರು, ದೇವಸ್ಥಾನ ಎಲ್ಲರ ಆಸ್ತಿ, ದೇವರಿಗೆ ಜಾತಿ, ಧರ್ಮ ಇಲ್ಲ: ಡಿಸಿಎಂ

“ದೇವರು ಕಷ್ಟ ಕೊಡುತ್ತಾನೆ ಜೊತೆಗೆ ಅದನ್ನು ಎದುರಿಸುವ ಶಕ್ತಿಯನ್ನೂ ನೀಡುತ್ತಾನೆ. ದಾರಿ ತೋರಿಸುವುದು ದೇವರ ಕೆಲಸ, ಗುರಿ ತಲುಪಬೇಕಿರುವುದು ನಮ್ಮ ಕೆಲಸ. ದೇವರು, ದೇವಸ್ಥಾನ ಎಲ್ಲರ ಆಸ್ತಿ. ದೇವರು ನೀಡುವ ಅವಕಾಶವನ್ನು ಬಳಸಿಕೊಳ್ಳಬೇಕು. ಅವಕಾಶ ಸಿಕ್ಕಾಗ ಕೈಯಿಂದ ದಾನ ಮಾಡಿ” ಎಂದು

ಶೀಘ್ರ ಮೇಕೆದಾಟು ಡಿಪಿಆರ್ ಸಲ್ಲಿಕೆ, ಕೇಂದ್ರದ ಅನುಮತಿ ಬಳಿಕ ಭೂಮಿಪೂಜೆ: ಡಿಕೆ ಶಿವಕುಮಾರ್

“ಮೇಕೆದಾಟು ಯೋಜನೆಗೆ ಡಿಪಿಆರ್ ಸಿದ್ಧಪಡಿಸಲಾಗಿದ್ದು, ಈ ಯೋಜನೆಯ ಕಚೇರಿ ಆರಂಭಿಸಿದ್ದೇವೆ. ಮುಳುಗಡೆಯಾಗುವ ಅರಣ್ಯ ಪ್ರದೇಶಕ್ಕೆ ಪರ್ಯಾಯ ಜಮೀನು ನೀಡಲು ಜಮೀನು ಗುರುತಿಸುತ್ತಿದ್ದೇವೆ. ಶೀಘ್ರವೇ ಕೇಂದ್ರಕ್ಕೆ ಡಿಪಿಆರ್ ಸಲ್ಲಿಕೆ ಮಾಡಲಿದ್ದು, ಕೇಂದ್ರ ಸರ್ಕಾರದ ಅನುಮತಿ ಬಳಿಕ ಯೋಜನೆಯ ಭೂಮಿ ಪೂಜೆ ಮಾಡಲಾಗುವುದು” ಎಂದು 

ನಿಡಗುಂದಿಯಲ್ಲಿ ಮಳೆಗೆ ಮನೆ ಕುಸಿದು ಮಹಿಳೆ ಜೀವಂತ ಸಮಾಧಿ

ವಿಜಯಪುರ ಜಿಲ್ಲೆಯ ನಿಡಗುಂದಿ ಪಟ್ಟಣದಲ್ಲಿ ಮಳೆಗೆ ಮಣ್ಣಿನ ಮನೆಯ ಮೇಲ್ಚಾವಣಿ ಕುಸಿದು 55 ವರ್ಷದ ಮಹಿಳೆ ಮಹಾದೇವಿ ಜೀವಂತ ಸಮಾಧಿಯಾಗಿದ್ದಾರೆ. ಮೃತರ ಪತಿ ಶಿವಾನಂದ ಸ್ವಲ್ಪದರಲ್ಲೇ ಸಾವಿನಿಂದ ಪಾರಾಗಿದ್ದಾರೆ. ಗೌರೀಶ್ವರ ದೇವಸ್ಥಾನ ಸಮೀಪವಿರುವ ಮಹಾದೇವಿ ಅವರ ಹಳೆಯ ಮಣ್ಣಿನ ಮನೆ ಮಳೆಗೆ

ಪೊದೆಯೊಳಗೆ ನವಜಾತ ಹೆಣ್ಣು ಶಿಶು ಪತ್ತೆ: ಜಿಲ್ಲಾಡಳಿತದಿಂದ ರಕ್ಷಣೆ

ಚಿಕ್ಕಮಗಳೂರು ಎನ್.ಆರ್.ಪುರ ತಾಲೂಕಿನ ಮುತ್ತಿನಕೊಪ್ಪ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಣಿವೆ ಗ್ರಾಮದ ಕುಮಾರ ದೇವಸ್ಥಾನದ ಬಳಿ ನವಜಾತ ಹೆಣ್ಣು ಮಗುವನ್ನು ಹೆತ್ತ ತಾಯಿ ರಸ್ತೆ ಬದಿಯ ಮುಳ್ಳಿನ ಪೊದೆಯಲ್ಲಿ ಬಿಟ್ಟು ಹೋಗಿರುವ ಘಟನೆ ಬೆಳಕಿಗೆ ಬಂದಿದೆ. ಒಂದು ದಿನದ ಹಸುಗೂಸನ್ನು ಟವೆಲ್‌ನಲ್ಲಿ

ಧಾರವಾಡಕ್ಕೆ ಪ್ರತ್ಯೇಕ ಪಾಲಿಕೆ ರಚನೆಗೆ ಅನುಮೋದನೆ ನೀಡಿ: ರಾಜ್ಯಪಾಲರಿಗೆ ಸಚಿವ ಲಾಡ್‌ ಮನವಿ

ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜಿಸಿ ಧಾರವಾಡಕ್ಕೆ ಪ್ರತ್ಯೇಕ ಪಾಲಿಕೆ ರಚನೆ ಪ್ರಸ್ತಾವಕ್ಕೆ ಅನುಮೋದನೆ ನೀಡಬೇಕು ಎಂದು ರಾಜ್ಯಪಾಲರಿಗೆ ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್‌ ಎಸ್‌ ಲಾಡ್‌ ಮನವಿ ಮಾಡಿದ್ದಾರೆ. ಧಾರವಾಡ ಶಾಸಕರ ನಿಯೋಗದೊಂದಿಗೆ ರಾಜ್ಯಪಾಲ ಥಾವರ್‌ ಚಂದ್‌