Thursday, September 17, 2026
Menu

ರಾಜ್ಯದಲ್ಲಿ ಬರ: ಮನಮೋಹನ್‌ ಸಿಂಗ್‌ ಅವರಂತೆ ನರೇಂದ್ರ ಮೋದಿ ನೆರವಿಗೆ ಬರಲಿ ಎಂದ ಮುಖ್ಯಮಂತ್ರಿ ಶಿವಕುಮಾರ್‌

ಕೇಂದ್ರ ಸರ್ಕಾರದವರು ರೈತರ ಸಹಾಯಕ್ಕೆ ಬರಬೇಕು. ಇದು ಬಿಜೆಪಿಯವರ ಜವಾಬ್ದಾರಿ. ಅವರ ಶಾಸಕರು ಕೇಂದ್ರ ಸರ್ಕಾರ, ಪ್ರಧಾನಿ ಮೇಲೆ ಒತ್ತಾಯ ಮಾಡಿ ಸಾಲಮನ್ನಾ ಮಾಡಿಸಬೇಕು. ಹಿಂದೆ ನಮ್ಮ ಸರ್ಕಾರ ಮನಮೋಹನ್ ಸಿಂಗ್ ಅವರು ಮಾಡಿದರು, ಇವರು ಕೂಡ ಮಾಡಬೇಕು. ಬ್ಯಾಂಕ್ ಗಳು ಅವರ ಹಿಡಿತದಲ್ಲಿದೆ ಎಂದು ಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಹೇಳಿದ್ದಾರೆ. ಬಾಗಲಕೋಟೆ ಜಿಲ್ಲೆಯ ಶಿರೂರ್ ಗ್ರಾಮದಲ್ಲಿ ರೈತರ ಜಮೀನಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ಬಳಿಕ ಮಾಧ್ಯಮಗಳಿಗೆ  ಪ್ರತಿಕ್ರಿಯೆ

ಬರ ನಿಖರ ಮಾಹಿತಿ ಕೊಡಿ, ಬೆಳೆವಿಮೆ ಅಕ್ರಮ, ಮೀಟರ್ ಬಡ್ಡಿ, ರೌಡಿ ನಿಗ್ರಹಕ್ಕೆ ಮುಂದಾಗಿ: ಅಧಿಕಾರಿಗಳಿಗೆ ಸಿಎಂ ಸೂಚನೆ

ಬೆಳೆ ವಿಮೆ ಬಗ್ಗೆ ಜಿಲ್ಲೆಯಲ್ಲಿ ಸಾಕಷ್ಟು ದೂರುಗಳು ಬಂದಿವೆ. ಏಜೆಂಟ್ ಗಳು ರೈತರ ದಾರಿ ತಪ್ಪಿಸುವ ಕೆಲಸಕ್ಕೆ ಕಡಿವಾಣ ಹಾಕಬೇಕು. ಕೆಲವು ಫೈನಾನ್ಸ್ ಕಂಪೆನಿಗಳ ಮೀಟರ್ ಬಡ್ಡಿ ದಂಧೆಯನ್ನು ನಿಲ್ಲಿಸಲು ಪೊಲೀಸರು ಮುಂದಾಗಬೇಕು. ಅಮಾಯಕರು ಈ ಜಾಲಕ್ಕೆ ಸಿಲುಕಿಕೊಳ್ಳದಂತೆ ನಿಗಾ ವಹಿಸಬೇಕು. 

ಬೇಲೂರಿನಲ್ಲಿ ದೂರು ನೀಡಲು ಹೋದ ವ್ಯಕ್ತಿ ಮೇಲೆ ಮಹಿಳಾ ಪೇದೆ ಹಲ್ಲೆ

ಹಣಕಾಸಿಗೆ ಸಂಬಂಧಿಸಿದಂತೆ ಗಲಾಟೆ ನಡೆದ ಬಗ್ಗೆ ದೂರು ನೀಡಲೆಂದು ಬೇಲೂರು ಪೊಲೀಸ್‌ ಠಾಣೆಗೆ ಹೋಗಿದ್ದ ವ್ಯಕ್ತಿ ಮೇಲೆ ಮಹಿಳಾ ಪೇದೆ ಹಲ್ಲೆ ನಡೆಸಿರುವ ಘಟನೆ ನಡೆದಿದೆ. ಬೇಲೂರು ಕಬ್ಬಿನಮನೆ ಗ್ರಾಮದ ಪ್ರಕಾಶ್‌ ಎಂಬವರ ಮೇಲೆ ಮಹಿಳಾ ಕಾನ್ಸ್‌ಟೇಬಲ್ ಲಾವಣ್ಯ ಲಾಠಿಯಿಂದ ಹಲ್ಲೆ

ಬಾಗಲಕೋಟೆ ಶಾಲೆ ಛಾವಣಿ ಕುಸಿತ: ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡ ಲೋಕಾಯುಕ್ತ

ಬಾಗಲಕೋಟೆ ತಾಲೂಕಿನ ಮುಗಳೊಳ್ಳಿ ತಾಂಡಾದ ಸರ್ಕಾರಿ ಶಾಲೆಯಲ್ಲಿ ತರಗತಿ ನಡೆಯುತ್ತಿರುವಾಗ ಛಾವಣಿ ಕುಸಿದು ಮಕ್ಕಳು ಗಾಯಗೊಂಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಧ್ಯಮ ವರದಿ ಆಧರಿಸಿ ಲೋಕಾಯುಕ್ತ ನ್ಯಾಯಮೂರ್ತಿ ಬಿಎಸ್‌ ಪಾಟೀಲ್‌ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಇಲಾಖೆಯ ಆಯುಕ್ತ, ಹೆಚುವರಿ ಆಯುಕ್ತ, ಬಾಗಲಕೋಟೆ ಜಿಲ್ಲಾಧಿಕಾರಿ,

ಮೈಸೂರು ದಸರಾಗೆ ದಕ್ಷಿಣ ಭಾರತದ ಎಲ್ಲ ಸಿಎಂಗಳಿಗೆ ಆಹ್ವಾನ

ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅಧ್ಯಕ್ಷತೆಯಲ್ಲಿ ಮೈಸೂರು ದಸರಾ ಆಚರಣೆ ಕುರಿತ ಪ್ರಗತಿ ಪರಿಶೀಲನಾ ಸಭೆ ನಡೆದಿದ್ದು,  ಮೈಸೂರು ದಸರಾಗೆ ದಕ್ಷಿಣ ಭಾರತದ ಎಲ್ಲ ಸಿಎಂಗಳಿಗೆ ಆಹ್ವಾನ ನೀಡಲು ತೀರ್ಮಾನಿಸಲಾಗಿದೆ. ರಾಜ್ಯಗಳ ಕಲಾತಂಡಗಳ ಪ್ರದರ್ಶನ ನೀಡಲು ಆಹ್ವಾನಕ್ಕೆ ನಿರ್ಧರಿಸಿದ್ದು, ಏರ್ ಷೋ ನಡೆಸುವ

ಚಿಕ್ಕಬಳ್ಳಾಪುರದಲ್ಲಿ 26 ಎಕರೆ ಸರ್ಕಾರಿ ಭೂಮಿಗೆ ಮಹಿಳೆ ಹೆಸರಲ್ಲಿ ಇ-ಖಾತೆ: ವಿಶೇಷ ತನಿಖಾ ತಂಡ ರಚನೆ

ಚಿಕ್ಕಬಳ್ಳಾಪುರ ತಾಲೂಕಿನ ಅಣಕೂರು ಗ್ರಾಮದಲ್ಲಿ ೨೬ ಎಕರೆ ಸರ್ಕಾರಿ ಭೂಮಿಗೆ ಮಹಿಳೆಯ ಹೆಸರಿನಲ್ಲಿ ಅಕ್ರಮವಾಗಿ ಇ-ಖಾತೆ ಸೃಷ್ಟಿಸಿರುವ ಆರೋಪದ ತನಿಖೆಗೆ ಜಿಲ್ಲಾಧಿಕಾರಿ ವಿಶೇಷ ತನಿಖಾ ತಂಡವನ್ನು ನೇಮಕಗೊಳಿಸಿ ಆದೇಶಿಸಿದ್ದಾರೆ. ಚಿಕ್ಕಬಳ್ಳಾಪುರ: ತಾಲೂಕಿನ ಅಣಕನೂರು ಗ್ರಾಮದ ಸರ್ವೆ ನಂ.109 ರಲ್ಲಿರುವ 26 ಎಕರೆ

ದಾವಣಗೆರೆ ಹಾಸ್ಟೆಲ್‌ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪಿಯು ವಿದ್ಯಾರ್ಥಿನಿ

ದಾವಣಗೆರೆ ಕಾಲೇಜೊಂದರ ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿನಿಯ ಶವ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದೆ. ಹೂವಿನ ಹಡಗಲಿ ತಾಲೂಕಿನ ಕುರುವತ್ತಿ ಗ್ರಾಮದ ಹದಿನೇಳು ವರ್ಷದ ರಂಜಿತಾ ಅನುಮಾನಾಸ್ಪದವಾಗಿ ಮೃತಪಟ್ಟ ವಿದ್ಯಾರ್ಥಿನಿ. ರಂಜಿತಾ ದಾವಣಗೆರೆಯ ಟೀಮ್ ಅಕಾಡೆಮಿಯಲ್ಲಿ ದ್ವಿತೀಯ ಪಿಯು ಓದುತ್ತಿದ್ದಳು. ಸೆ.2ರ ರಾತ್ರಿ ಹಾಸ್ಟೆಲ್‌ನ

ಚಿತ್ತಾಪುರದಲ್ಲಿ ರಸ್ತೆ ಅಪಘಾತಕ್ಕೆ ತಾಯಿ ಮಗು ಬಲಿ

ಕಲಬುರಗಿ ಜಿಲ್ಲೆಯ ಚಿತ್ತಾಪುರ ವಾಡಿ ಪಟ್ಟಣದ ಹೊರ ವಲಯದಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ತಾಯಿ ಮತ್ತು ಮೂರು ತಿಂಗಳ ಮಗು ಮೃತಪಟ್ಟಿದ್ದಾರೆ.  ಆಟೋಗೆ ಲಾರಿ ಡಿಕ್ಕಿಯಾಗಿ ಈ ದುರಂತ ನಡೆದಿದ್ದು, ಶರಣಮ್ಮ (30) ಮತ್ತು ಆಕೆಯ ಮೂರು ತಿಂಗಳ ಮಗು

ಮದ್ದೂರು ಶಾಲೆಯಲ್ಲಿ ಊಟ ಮಾಡುತ್ತಿದ್ದಾಗಲೇ ವಿದ್ಯಾರ್ಥಿ ಹೃದಯಾಘಾತಕ್ಕೆ ಬಲಿ

ಮಂಡ್ಯದ ಮದ್ದೂರು ತಾಲೂಕಿನ ಸೋಮನಹಳ್ಳಿ ಗ್ರಾಮದಲ್ಲಿರುವ ಶಾಲೆಯಲ್ಲಿ ಮಧ್ಯಾಹ್ನದ ಬಿಸಿಯೂಟ ಸೇವಿಸುತ್ತಿದ್ದ ಒಂಬತ್ತನೇ ತರಗತಿ ವಿದ್ಯಾರ್ಥಿ ಹೃದಯಾಘಾತದಿಂದ ಮಂಗಳವಾರ ಮೃತಪಟ್ಟಿದ್ದಾನೆ. ಸೋಮನಹಲ್ಳಿ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿ ವೀರಮಣಿ (14) ಹೃದಯಾಘಾತಕ್ಕೆ ಬಲಿಯಾದವ. ಶಾಲೆಯಲ್ಲಿ ಮಧ್ಯಾಹ್ನ ಎಂದಿನಂತೆ ಎಲ್ಲರ ಜೊತೆ ಊಟ ಮಾಡುತ್ತಿದ್ದಾಗ

ಸಾವಿನಲ್ಲಿ ಅಂತ್ಯ ಕಂಡ ಅಮ್ಮ-ಮಗಳ ಜಗಳ

ಕೊಡಗಿನ ಮಡಿಕೇರಿ ತಾಲೂಕಿನ ತಲಕಾವೇರಿ ಸಮೀಪ ಕೆಂಪರಾಜಮೊಟ್ಟೆ ಕಾಲೊನಿಯಲ್ಲಿ ಅಮ್ಮ ಮತ್ತು ಮಗಳ ಜಗಳವು ಇಬ್ಬರ ಸಾವಿನಲ್ಲಿ ಕೊನೆಯಾಗಿದೆ. ೧೪ ವರ್ಷದ ಪ್ರಿಯಾಂಕ ಮತ್ತು ೪೫ ವರ್ಷದ ತಾಯಿ ಪ್ರೇಮಾ ಮೃತಪಟ್ಟವರು. ಕರಿಕೆಯಲ್ಲಿರುವ ಆಶ್ರಮ ಶಾಲೆಯಲ್ಲಿ ಓದುತ್ತಿದ್ದ ಪ್ರಿಯಾಂಕ ಮನೆಗೆ ತಡವಾಗಿ