ಜಿಲ್ಲಾ ಸುದ್ದಿ
ರಾಯಚೂರಿನಲ್ಲಿ ಬೀದಿ ಬದಿ ವ್ಯಾಪಾರಿಯ ಹತ್ಯೆ
ರಾಯಚೂರು ನಗರದ ರೇಡಿಯೋ ಸ್ಟೇಷನ್ ಸಮೀಪ ನಾಲ್ವರು ದುಷ್ಕರ್ಮಿಗಳ ಗುಂಪು ಬೀದಿಬದಿ ವ್ಯಾಪಾರಿಯನ್ನು ಕಲ್ಲಿನಿಂದ ಜಜ್ಜಿ ಹತ್ಯೆ ಮಾಡಿದೆ. ಹತ್ಯೆಯಾದ ಯುವಕನನ್ನು ಆಂಧ್ರಪ್ರದೇಶ ಕಡಪದ ಇಮಾಮ್ ಹುಸೇನ್ (24) ಎಂದು ಗುರುತಿಸಲಾಗಿದೆ. ಮೃತ ಇಮಾಮ್ ಹುಸೇನ್ 15 ದಿನಗಳಿಂದ ರಾಯಚೂರಿನ ಬೀದಿಬದಿಯಲ್ಲಿ ಡ್ರೈ ಫ್ರೂಟ್ಸ್ ಮಾರಾಟ ಮಾಡಿಕೊಂಡಿದ್ದನು. ತಡರಾತ್ರಿ ನಾಲ್ವರು ಇಬ್ಬರ ಮೇಲೆ ದಾಳಿ ನಡೆಸಿದ್ದಾರೆ. ತೀವ್ರವಾಗಿ ಗಾಯಗೊಂಡ ಮತ್ತೊಬ್ಬನನ್ನು ಚಿಕಿತ್ಸೆಗಾಗಿ ರಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸ್ಥಿತಿ ಗಂಭೀರವಾಗಿದೆ. ಇಮಾಮ್
ಕಲ್ಯಾಣ ಕರ್ನಾಟಕ ಅಭಿವೃದ್ಧಿಯಲ್ಲಿ ಹಿಂದೆ ಬೀಳಲು ಡೈರಿ ಚಟುವಟಿಕೆ ದುರ್ಬಲ ಕಾರಣ: ಸಿಎಂ ಸಿದ್ದರಾಮಯ್ಯ
ಈ ಬಾರಿ ಅಧಿವೇಶನ ಪ್ರಾರಂಭವಾಗಿ ಎರಡನೇ ದಿನದಿಂದಲೇ ಕಲ್ಯಾಣ ಕರ್ನಾಟಕದ ಸಮಸ್ಯೆಗಳ ಕುರಿತಂತೆ ಚರ್ಚೆ ಆರಂಭಗೊಂಡಿದೆ. ಈ ಕಾರಣಕ್ಕಾಗಿ ವಿರೋಧ ಪಕ್ಷದವರೂ ಸರ್ಕಾರವನ್ನೂ ಹಾಗೂ ಸಭಾಧ್ಯಕ್ಷರನ್ನು ಅಭಿನಂದಿಸಿದ್ದಾರೆ. ನಾನೂ ಸಹ ಮಾನ್ಯ ಸಭಾಧ್ಯಕ್ಷರನ್ನು ಅಭಿನಂದಿಸುತ್ತೇನೆ. ಇದೊಂದು ದಾಖಲೆ. ನಾವು ಈ ಭಾಗದ
ನನಗೆ ಭ್ರಷ್ಟಾಚಾರದ ಪಿತಾಮಹ ಎಂದ ವಿಜಯೇಂದ್ರಗೆ ಕಾಲವೇ ಉತ್ತರಿಸಲಿದೆ: ಡಿಕೆ ಶಿವಕುಮಾರ್
“ವಿಜಯೇಂದ್ರ ಅವರಿಗೆ ಸೂಕ್ತ ಸಮಯದಲ್ಲಿ ಉತ್ತರ ನೀಡೋಣ. ಉತ್ತರಕ್ಕೆ ಸಮಯ ಬರುತ್ತದೆ, ಕಾಲವೇ ಉತ್ತರ ನೀಡುತ್ತದೆ. ಅವರಿಗೆ ಏನು ಬೇಕೋ ಆ ಉತ್ತರ ಈಗಾಗಲೇ ನೀಡಿದ್ದೇನೆ. ಹೈಕಮಾಂಡ್ ಗೆ ನಾವು ಎಟಿಎಂ ಎಂದು ವಿಜಯೇಂದ್ರ ಹೇಳಿದ್ದಾರೆ. ಇದನ್ನು ಅವರು ಸಾಬೀತು ಮಾಡಬೇಕು.
ಚಿಕ್ಕಬಳ್ಳಾಪುರ: ಕಾರಲ್ಲಿ ಬಂದು ಕೆಎಸ್ಸಾರ್ಟಿಸಿ ಬಸ್‌ನಲ್ಲಿ ಉದ್ಯಮಿಯ 55 ಲಕ್ಷ ರೂ. ಇದ್ದ ಬ್ಯಾಗ್ ದರೋಡೆ
ಹೈದರಾಬಾದ್‌ನ ಉದ್ಯಮಿಯೊಬ್ಬರು ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಚಿಕ್ಕಬಳ್ಳಾಪುರದಲ್ಲಿ 55 ಲಕ್ಷ ರೂಪಾಯಿ ಇದ್ದ ಅವರ ಹಣದ ಬ್ಯಾಗ್ ಅನ್ನು ಕಳ್ಳ ದೋಚಿಕೊಂಡು ಹೋಗಿದ್ದಾನೆ. ಉದ್ಯಮಿ ಬೆಂಗಳೂರಿನಲ್ಲಿ ಮನೆ ಮಾರಾಟ ಮಾಡಿದ್ದು, ಅದರಿಂದ ಬಂದ ಹಣವನ್ನು ಬಸ್‌ನಲ್ಲಿ ಕೊಂಡೊಯ್ಯುತ್ತಿದ್ದಾಗ ಕಳ್ಳರು ಎಗರಿಸಿ
ಮುಂದಿನ ಜೂನ್ ಒಳಗೆ ತುಂಗಭದ್ರಾ ಡ್ಯಾಂನ ಎಲ್ಲ ಗೇಟ್ ಬದಲಾವಣೆ: ಡಿಕೆ ಶಿವಕುಮಾರ್
“2026ರ ಜೂನ್ ತಿಂಗಳ ವೇಳೆಗೆ ತುಂಗಭದ್ರಾ ಅಣೆಕಟ್ಟಿನ ಎಲ್ಲಾ 33 ಗೇಟ್ ಗಳನ್ನು ಬದಲಾವಣೆ ಕಾರ್ಯ ಪೂರ್ಣಗೊಳ್ಳಲಿದ್ದು, ಯಾರೂ ಆತಂಕಕ್ಕೆ ಒಳಗಾಗುವ ಅಗತ್ಯವಿಲ್ಲ” ಎಂದು ಡಿಸಿಎಂ ಡಿಕೆ ಶಿವಕುಮಾರ್ ಭರವಸೆ ನೀಡಿದ್ದಾರೆ. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಅಧಿವೇಶನದ ವಿಧಾನ ಪರಿಷತ್
ಬಿಜೆಪಿ ವಿರೋಧದ ನಡುವೆಯೇ ದ್ವೇಷ ಭಾಷಣ ಅಪರಾಧಗಳ ವಿಧೇಯಕ ವಿಧಾನಸಭೆಯಲ್ಲಿ ಅಂಗೀಕಾರ
ಪ್ರತಿಪಕ್ಷ ಬಿಜೆಪಿ ಸದಸ್ಯರ ತೀವ್ರ ವಿರೋಧ ಮತ್ತು ಪ್ರತಿಭಟನೆ ಸಭಾತ್ಯಾಗದ ನಡುವೆ ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ(ಪ್ರತಿಬಂಧಕ) ವಿಧೇಯಕ ಬೆಳಗಾವಿ ಸುವರ್ಣಸೌಧದಲ್ಲಿ ನಡೆಯುತ್ತಿರುವ ವಿಧಾನಸಭೆ ಅಧಿವೇಶನದ ಕಲಾಪದಲ್ಲಿ ಅಂಗೀಕಾರಗೊಂಡಿದೆ. ಗೃಹ ಸಚಿವ ಡಾ. ಜಿ. ಪರಮೇಶ್ವರ್ ಮಂಡನೆಯಾಗಿದ್ದ ವಿಧೇಯಕ ಕುರಿತು
ವಿಧಾನ ಪರಿಷತ್ತಿನಲ್ಲಿ ಗ್ರೇಟರ್ ಬೆಂಗಳೂರು ಆಡಳಿತ 2ನೇ ತಿದ್ದುಪಡಿ ವಿಧೇಯಕ ಅನುಮೋದನೆ
ವಿಧಾನಸಭೆಯಿಂದ ತಿದ್ದುಪಡಿಯೊಂದಿಗೆ ಅಂಗೀಕಾರ ರೂಪದಲ್ಲಿರುವ ಗ್ರೇಟರ್ ಬೆಂಗಳೂರು ಆಡಳಿತ ವಿಧೇಯಕ 2025ಕ್ಕೆ (2ನೇ ತಿದ್ದುಪಡಿ) ವಿಧಾನ ಪರಿಷತ್ತಿನಲ್ಲಿ ಗುರುವಾರ ಅಂಗೀಕಾರ ದೊರೆಯಿತು. ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆಗಿರುವ ಶಿವಕುಮಾರ್ ವಿಧಾನ ಪರಿಷತ್ತಿನಲ್ಲಿ 2024ನೇ ಸಾಲಿನ ಗ್ರೇಟರ್ ಬೆಂಗಳೂರು ಆಡಳಿತ ವಿಧೇಯಕ (2ನೇ ತಿದ್ದುಪಡಿ)
“ನೀವು ಕರಾವಳಿಯವರು ಬೆಂಕಿ ಹಚ್ಚುವವರು” ಸದನದಲ್ಲಿ ಕಿಚ್ಚು ಹೊತ್ತಿಸಿದ ಸಚಿವ ಬೈರತಿ
ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಅವರು “ನೀವು ಕರಾವಳಿಯವರು ಬೆಂಕಿ ಹಚ್ಚೋರು” ಎಂದು ನೀಡಿದ ಹೇಳಿಕೆ ಬೆಳಗಾವಿ ಸುವರ್ಣಸೌಧದದಲ್ಲಿ ನಡೆಯುತ್ತಿರುವ ಅಧಿವೇಶನದಲ್ಲಿ ಕೋಲಾಹಲ ಸೃಷ್ಟಿಸಿತು. ಈ ಹೇಳಿಕೆಗೆ ಬಿಜೆಪಿ ಶಾಸಕರು ತೀವ್ರ ಆಕ್ಷೇಪ ವ್ಯಕ್ತಪಡಿಸಿ ಸಚಿವರು ಕ್ಷಮೆ ಕೇಳಬೇಕೆಂದು ಆಗ್ರಹಿಸಿ ಪ್ರತಿಭಟನೆ
ಡೆತ್‌ನೋಟ್‌ನಲ್ಲಿ ಸಿಕ್ತು ಧಾರವಾಡದ ವಿದ್ಯಾರ್ಥಿನಿ ಪಲ್ಲವಿ ಆತ್ಮಹತ್ಯೆಗೆ ಕಾರಣ
ಇತ್ತೀಚೆಗೆ ಧಾರವಾಡದ ಶಿವಗಿರಿ ಬಳಿ ರೈಲು ಹಳಿಗೆ ಬಿದ್ದು ಪಲ್ಲವಿ ಎಂಬ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಹರಡಿದ್ದ ಊಹಾಪೋಹಗಳಿಗೆ ಈಗ ತೆರೆ ಬಿದ್ದಿದೆ. ಆಕೆ ಬರೆದಿಟ್ಟ ಡೆತ್‌ನೋಟ್‌ನಲ್ಲಿ ಸುಸೈಡ್ ಮಾಡಿಕೊಳ್ಳಲು ಕಾರಣ ಏನು ಎಂಬುದು ಪತ್ತೆಯಾಗಿದೆ. ಸರ್ಕಾರಿ ಹುದ್ದೆಗಳ
ಕೃಷ್ಣಾ ಮೇಲ್ದಂಡೆ ಯೋಜನೆ ಭೂ ಸಂತ್ರಸ್ತ ವರ್ತಕರಿಗೆ ಪುನರ್ವಸತಿ ಕಲ್ಪಿಸಲು ಸಿದ್ಧ: ಡಿಸಿಎಂ
“ಕೃಷ್ಣಾ ಮೇಲ್ದಂಡೆ ಯೋಜನೆಯಿಂದ ಮುಳುಗಡೆಗೊಂಡ ಭೂಸಂತ್ರಸ್ತ ವರ್ತಕರಿಗೆ ಬಾಗಲಕೋಟೆಯಲ್ಲೇ 200 ಎಕರೆ ಪ್ರದೇಶದಲ್ಲಿ ಪುನರ್ ವಸತಿ ಕಲ್ಪಿಸಿ, ವಾಣಿಜ್ಯ ಚಟುವಟಿಕೆಗೆ ಅವಕಾಶ ಕಲ್ಪಿಸಿಕೊಡಲು ನಾವು ಸಿದ್ಧವಿದ್ದೇವೆ” ಎಂದು ಡಿಸಿಎಂ ಡಿಕೆ ಶಿವಕುಮಾರ್ ಭರವಸೆ ನೀಡಿದರು. ಬೆಳಗಾವಿ ಸುವರ್ಣಸೌಧದಲ್ಲಿ ನಡೆಯುತ್ತಿರುವ ವಿಧಾನ ಪರಿಷತ್ ಪ್ರಶ್ನೋತ್ತರ




