Friday, September 18, 2026
Menu

ಸಿಂಧನೂರಿನಲ್ಲಿ ಸಾಧುವೇಷದ ಕಳ್ಳ: ಮೆಡಿಕಲ್‌ ಮಾಲೀಕನಿಗೆ ಮಂಪರು ಬರಿಸಿ ಚಿನ್ನ, ನಗದು ಕಳವು

ರಾಯಚೂರು ಜಿಲ್ಲೆಯ ಸಿಂಧನೂರು ಪಟ್ಟಣದ ಮೆಡಿಕಲ್‌ಗೆ ಬಂದ ಸಾಧು ವೇಷಧಾರಿ ಮಾಲೀಕನ ಬೆರಳಲಲಿದ್ದ ಚಿನ್ನದ ಉಂಗುರ, ನಗದು ದೋಚಿ ಪರಾರಿಯಾಗಿರುವ ಘಟನೆ ನಡೆದಿದೆ. ವಿಷ್ಣು ದತ್ತ ಎಂಬವರ ಶ್ರೀ ಸಾಯಿ ಮೆಡಿಕಲ್‌ಗೆ ಬಂದ ಸಾಧು ವೇಷಧಾರಿ ಕುಡಿಯಲು ನೀರು ಬರುತ್ತಾನೆ, ವಿಷ್ಣು ದತ್ತ ಸಾಧುಗೆ ಕುಡಿಯಲು ಫ್ರಿಡ್ಕ್‌ನಲ್ಲಿದ್ದ ತಣ್ಣೀರು ಕೊಡುತ್ತಾರೆ. ನೀರು ಕುಡಿದ ಬಳಿಕ ಸಾಧು ಆಶೀರ್ವಾದವಾಗಿ ಎರಡು ಹೂಗಳನ್ನು ನೀಡಿದ್ದಾನೆ. ಹೂವಿನ ವಾಸನೆಯಿಂದ ವಿಷ್ಣು ದತ್ತ ಅವರಿಗೆ ಮಂಪರು

ಶಿರಸಿಯ ಸಹಕಾರಿ ಬ್ಯಾಂಕ್‌ನಿಂದ ರೈತರ ಹೆಸರಲ್ಲಿ ಕೋಟ್ಯಂತರ ರೂ. ಸಾಲ ಪಡೆದು ವಂಚನೆ

ಉತ್ತರ ಕನ್ನಡ ಜಿಲ್ಲೆಯ ಶಿರಸಿ ದಾಸನಕೊಪ್ಪದ ಸಹಕಾರಿ ಬ್ಯಾಂಕ್‌ನಲ್ಲಿ ರೈತರ ಹೆಸರಲ್ಲಿ ಸಾಲ ಪಡೆದು ಕೋಟ್ಯಂತರ ರೂಪಾಯಿ ದುರುಪಯೋಗ ಹಗರಣ ಬೆಳಕಿಗೆ ಬಂದಿದೆ. ದಾಸನಕೊಪ್ಪದ ಕಾಳಂಗಿ ಸಹಕಾರಿ ಬ್ಯಾಂಕ್‌ನಲ್ಲಿ ಈ ಗೋಲ್‌ಮಾಲ್ ನಡೆದಿದ್ದು, ವಂಚನೆಗೆ ಒಳಗಾದ ರೈತರು ಮತ್ತು ಷೇರುದಾರರು ಬ್ಯಾಂಕ್‌ಗೆ

ಟ್ರ್ಯಾಕ್ಟರ್‌ನಲ್ಲಿ ಹುಲಿಗೆಮ್ಮ ದರ್ಶನಕ್ಕೆ ಹೋಗುತ್ತಿದ್ದಾಗ ಟ್ಯಾಂಕರ್‌ ಡಿಕ್ಕಿ: ಏಳು ಮಂದಿ ಸಾವು

ದೇವಿಯ ವಾರವೆಂದು ಮುನಿರಾಬಾದ್‌ನ ಹುಲಿಗೆಮ್ಮತಾಯಿ ದರ್ಶನಕ್ಕೆ ಹೊರಟವರು ರಸ್ತೆ ಅಪಘಾತಕ್ಕೆ ಬಲಿಯಾಗಿರುವ ಹೃದಯವಿದ್ರಾವಕ  ಘಟನೆ  ಕೊಪ್ಪಳ-ವಿಜಯನಗರ ಜಿಲ್ಲೆಯ ಗಡಿಭಾಗದ ಮುನಿರಾಬಾದ್ ಸೇತುವೆ ಬಳಿ ಶುಕ್ರವಾರ ನಡೆದಿದೆ. ಬಳ್ಳಾರಿ ಜಿಲ್ಲೆಯ ಸಂಡೂರು ತಾಲೂಕಿನ ಯಶವಂತನಗರ ಹಾಗೂ ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಮರ್ಲಾನಳ್ಳಿಯಿಂದ

ಇಡೀ ಕುಟುಂಬಕ್ಕೆ ವಾರಕ್ಕೆ500 ರೂ.ಸಂಬಳ: ಹೊಸಪೇಟೆಯಲ್ಲಿ ಒಡಿಶಾದ 37 ಮಂದಿ ಜೀತಮುಕ್ತ

ಹೊಸಪೇಟೆ ತಾಲೂಕಿನ ನಂದಿಬಂಡಿಯಲ್ಲಿ ಒಡಿಶಾದ 37 ಮಂದಿ ಜೀತಕ್ಕಿದ್ದ ಮಾಹಿತಿ ಪಡೆದ ಅಧಿಕಾರಿಗಳು ಜೀತದಿಂದ ಮುಕ್ತಿ ನೀಡಿದ್ದಾರೆ.  ಶ್ರೀನಿವಾಸ್, ಮಹಾದೇವ ರಾವ್ ಮತ್ತು ವೆಂಕಟ ಪ್ರಸಾದ್ ಎಂಬವರು ಈ ಕಾರ್ಮಿಕರನ್ನು ಶೆಡ್‌ನಲ್ಲಿ ಕೂಡಿ ಹಾಕಿ ಬಲವಂತವಾಗಿ ಇಟ್ಟಿಗೆ ಬಟ್ಟಿಯಲ್ಲಿ ಕೆಲಸ ಮಾಡಿಸುತ್ತಿದ್ದರು.

ವಿಜಯಪುರದಲ್ಲಿ ಗಾಳಿ ಮಳೆಗೆ ಮನೆ ಚಾವಣಿ ಕುಸಿದು ನಾಲ್ವರ ಸಾವು

ವಿಜಯಪುರದ ಆಲಮೇಲ ತಾಲೂಕಿನ ಮೊರಗಟಿ ಗ್ರಾಮದಲ್ಲಿ ಗಾಳಿ ಮಳೆಗೆ ಮನೆಯ ಚಾವಣಿ ಕುಸಿದು ಒಂದೇ ಕುಟುಂಬದ ನಾಲ್ವರು ಪ್ರಾಣ ಕಳೆದುಕೊಂಡ ದಾರುಣ ಘಟನೆ ನಡೆದಿದೆ. ಗ್ರಾಮದ ಗುರುನಾಥ ಬಡಿಗೇರ (35), ಜ್ಯೋತಿ ಬಡಿಗೇರ (28), ಕಾಳಮ್ಮ ಬಡಿಗೇರ (13) ಮತ್ತು ಕೀರ್ತಿ

ವಿದ್ಯಾರ್ಥಿಗಳು ಧಾರ್ಮಿಕ ಸಂಕೇತ ಧರಿಸಬಹುದು: ಸಿಎಂ ಸಿದ್ದರಾಮಯ್ಯ

ಪ್ರಾಥಮಿಕ ತರಗತಿಯಿಂದ 12 ನೇ ತರಗತಿಯವರೆಗೆ ಜನಿವಾರ, ಹಿಜಾಬ್, ಉಡುದಾರ, ರುದ್ರಾಕ್ಷಿ ಹಾಕಿಕೊಳ್ಳಬಹುದು. ಈಗಾಗಲೇ ಸಾಂಪ್ರದಾಯಿಕವಾಗಿ ಅನುಸರಿಸುವ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು. ಹೊಸದಾಗಿ ಮಾಡುವಂತಿಲ್ಲ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಮೈಸೂರಿನ ತಮ್ಮ ನಿವಾಸದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಧಾರ್ಮಿಕ ಸಂಕೇತಗಳ ವಿಚಾರದಲ್ಲಿ ಬಿಜೆಪಿ ಎತ್ತಿರುವ

ಬಾಲಕರಿಗೆ ಲೈಂಗಿಕ ಕಿರುಕುಳ ದೂರು: ಪೊಲೀಸ್‌ ವಿಚಾರಣೆ, ಮೆಡಿಕಲ್‌ ಟೆಸ್ಟ್‌ಗೆ ಒಳಗಾದ ವಚನಾನಂದಶ್ರೀ

ಗದಗ ಜಿಲ್ಲೆಯ ಲಕ್ಷ್ಮೀಶ್ವರದ ಮಠದ ಸ್ವಾಮೀಜಿ ವಚನಾನಂದ ಶ್ರೀಗಳ ವಿರುದ್ಧ ಪೋಕ್ಸೋ ಕಾಯಿದೆಯಡಿ ದಾಖಲಾಗಿರುವ ಪ್ರಕರಣ ಸಂಬಂಧ ಅವರು ಹರಿಹರ ಗ್ರಾಮಾಂತರ ಠಾಣೆಗೆ ವಿಚಾರಣೆಗೆ ಹಾಜರಾದರು. ಬಳಿಕ ತಾಲೂಕು ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆಗೆ ಒಳಗಾಗಿದ್ದಾರೆ. ಲಕ್ಷ್ಮೀಶ್ವರ ಠಾಣೆಯಲ್ಲಿ ಸಂತ್ರಸ್ತ ಬಾಲಕನ ತಾಯಿ

ಮುಲ್ಕಿಯಲ್ಲಿ 35 ಲಕ್ಷ ರೂ. ಮೌಲ್ಯದ ಗಾಂಜಾ ವಶ: ಕಾಲೇಜು ವಿದ್ಯಾರ್ಥಿನಿ ಅರೆಸ್ಟ್‌

ಮಂಗಳೂರಿನ ಮುಲ್ಕಿ ಪೊಲೀಸರು ಕಾರ್ಯಾಚರಣೆ ನಡೆಸಿ ಲಕ್ಷಾಂತರ ರೂ. ಮೌಲ್ಯದ ಮಾದಕ ವಸ್ತು ವಶಪಡಿಸಿಕೊಂಡಿದ್ದು, ಚೆನ್ನೈನಿಂದ ಮಂಗಳೂರಿಗೆ ಹೈಡ್ರೋವಿಡ್ ಗಾಂಜಾ ಸಾಗಾಟ ಮಾಡುತ್ತಿದ್ದ ಕಾಲೇಜು ವಿದ್ಯಾರ್ಥಿನಿಯನ್ನು ಬಂಧಿಸಿದ್ದಾರೆ. ಕಾಲೇಜು ವಿದ್ಯಾರ್ಥಿನಿ ಸುಹಾನಳನ್ನು ಬಂಧಿಸಿ 35 ಲಕ್ಷ ರೂಪಾಯಿ ಮೌಲ್ಯದ ಹೈಡ್ರೋವಿಡ್ ಗಾಂಜಾ

ನಾನು ಧಾರವಾಡ ಪ್ರತ್ಯೇಕ ಪಾಲಿಕೆ ಪರವೆಂದ ಸಚಿವ ಸಂತೋಷ್‌ ಲಾಡ್‌

ಈ ಹಿಂದೆ  ಧಾರವಾಡ  ಪ್ರತ್ಯೇಕ ಪಾಲಿಕೆ ಕ್ಯಾಬಿನೆಟ್‌ನಲ್ಲಿ ಪಾಸ್ ಆಗಿ ರಾಜ್ಯಪಾಲರ ಬಳಿ ಹೋಗುವಂತೆ ಮಾಡುವಲ್ಲಿ ನಾನು ಪ್ರಾಮಾಣಿಕ ಪ್ರಯತ್ನ ಮಾಡಿದ್ದೇನೆ. ಈಗಲೂ ನಾನು ಪ್ರತ್ಯೇಕ ಪಾಲಿಕೆ ಪರವಾಗಿದ್ದೇನೆ.  ಕ್ಯಾಬಿನೆಟ್ ಸಭೆ ಇದ್ದು, ಸಭೆಯಲ್ಲೂ ಈ ಬಗ್ಗೆ ಪ್ರಸ್ತಾಪ ಮಾಡುವುದಾಗಿ ಸಚಿವ

ಯಾದಗಿರಿಯಲ್ಲಿ ಮಳೆಗೆ ಮನೆ ಗೋಡೆ ಕುಸಿದು ಬಾಲಕಿ ಸಾವು

ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ತುಮಕೂರು ಗ್ರಾಮದಲ್ಲಿ ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಮಳೆಗೆ ಮನೆ ಗೋಡೆ ಕುಸಿದು ಎಂಟು ವರ್ಷದ ಬಾಲಕಿ ಮೃತಪಟ್ಟಿದ್ದಾಳೆ. ತುಮಕೂರು ಗ್ರಾಮದ ಸಿದ್ದಪ್ಪ ಎಂಬವರ ಮನೆಯ ಗೋಡೆ ನಿರಂತರ ಮಳೆಗೆ ಕುಸಿದಿದೆ .ಈ ವೇಳೆ ಮನೆಯ