ಜಿಲ್ಲಾ ಸುದ್ದಿ
ರೈತ ಯುವಕರನ್ನು ಮದುವೆಯಾಗುವ ಹೆಣ್ಮಕ್ಕಳಿಗೆ 10 ಲಕ್ಷ ರೂ. ಠೇವಣಿ ಯೋಜನೆ?
ರೈತ ಯುವಕರನ್ನು ಮದುವೆಯಾಗುವ ಹೆಣ್ಮಕ್ಕಳಿಗೆ 10 ಲಕ್ಷ ರೂ. ಠೇವಣಿ ಇಡುವ ಯೋಜನೆಯನ್ನು ಸರ್ಕಾರ ಜಾರಿಗೊಳಿಸಬೇಕು ಎಂದು ಶಾಸಕ ಪುಟ್ಟಣ್ಣ ಒತ್ತಾಯಿಸಿದ್ದಾರೆ. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ವಿಧಾನಸಭೆ ಅಧಿವೇಶನದ ಶೂನ್ಯವೇಳೆಯಲ್ಲಿ ಈ ವಿಷಯ ಪ್ರಸ್ತಾಪಿಸಿದ್ದಾರೆ. ಹಳ್ಳಿಗಳಲ್ಲಿ ರೈತರು, ಕೃಷಿ ಕಾರ್ಮಿಕರು, ಕೂಲಿಕಾರ್ಮಿಕರ ಮಕ್ಕಳನ್ನು ಯಾವ ಹೆಣ್ಮಕ್ಕಳು ಮದುವೆ ಆಗಲು ಒಪ್ಪುತ್ತಿಲ್ಲ. ಹೆಣ್ಮಕ್ಕಳೆಲ್ಲರೂ ಸರ್ಕಾರಿ ನೌಕರರು, ನಗರಗಳಲ್ಲಿರುವ ಗಂಡು ಮಕ್ಕಳನ್ನೇ ಮದುವೆಯಾಗಲು ಬಯಸುತ್ತಿದ್ದಾರೆ. ಹೀಗಾಗಿ ಗಂಡುಮಕ್ಕಳ ಮದುವೆ ಸಮಸ್ಯೆಯಾಗಿ ಪರಿಣಮಿಸಿದೆ.
“ಕಲೆಕ್ಷನ್ ಕಿಂಗ್ ವಿಜಯೇಂದ್ರ” ತಂದೆ ಯಡಿಯೂರಪ್ಪ ಹೆಸರು ಕೆಡಿಸಿದವರು: ಡಿಕೆ ಶಿವಕುಮಾರ್
“ಕಲೆಕ್ಷನ್ ಕಿಂಗ್ ” ಎಂದು ಏನಾದರೂ ಇದ್ದರೆ ಅದು ವಿಜಯೇಂದ್ರ. ಮೊದಲು ಅಸೆಂಬ್ಲಿ ಬಂದು ಮಾತನಾಡಲು ಹೇಳಿ. ತಪ್ಪಿಸಿಕೊಂಡು ಹೋಗಿ ಎಲ್ಲೋ ಮಾತನಾಡುವುದಲ್ಲ, ಅವರ ತಂದೆ ಹೆಸರು ಕೆಡಲು ವಿಜಯೇಂದ್ರ ಕಾರಣ. ಇದನ್ನು ಮರೆಯ ಬಾರದು ಎಂದು ಡಿಸಿಎಂ ಡಿಕೆ ಶಿವಕುಮಾರ್
ಧರ್ಮಸ್ಥಳ ಪ್ರಕರಣದಲ್ಲಿ ಜೈಲು ಸೇರಿದ್ದ ಮಾಸ್ಕ್ ಮ್ಯಾನ್ ಚಿನ್ನಯ್ಯ ಬಿಡುಗಡೆ
ಧರ್ಮಸ್ಥಳದ ನೂರಾರು ಶವಗಳ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಳ್ಳು ಮಾಹಿತಿ ನೀಡಿದ ಆರೋಪದಡಿ ಪ್ರಮುಖ ಆರೋಪಿಯಾಗಿ ಜೈಲು ಸೇರಿದ್ದ ಮಾಸ್ಕ್ ಮ್ಯಾನ್ ಚಿನ್ನಯ್ಯ ಶಿವಮೊಗ್ಗದ ಸೋಗಾನೆ ಬಳಿ ಇರುವ ಕೇಂದ್ರ ಕಾರಾಗೃಹದಿಂದ ಬಿಡುಗಡೆಯಾಗಿದ್ದಾರೆ. ಸೆಪ್ಟೆಂಬರ್ 9 ರಂದು ಶಿವಮೊಗ್ಗ ಕೇಂದ್ರ ಕಾರಾಗೃಹಕ್ಕೆ ಬೆಳ್ತಂಗಡಿ
ಧರ್ಮಸ್ಥಳ ಪ್ರಕರಣ: ಮಹೇಶ್ ಶೆಟ್ಟಿ ತಿಮರೋಡಿ ರಾಯಚೂರಿಗೆ ಗಡಿಪಾರು
ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಗೆ ಆಗ್ರಹಿಸಿ ನಡೆಯುತತಿರುವ ಹೋರಾಟದಲ್ಲಿ ಪ್ರಮುಖ ಪಾತ್ರ ವಹಿಸುತ್ತಿರುವ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ದಕ್ಷಿಣ ಕನ್ನಡ ಜಿಲ್ಲೆಯಿಂದ ಒಂದು ವರ್ಷಕ್ಕೆ ರಾಯಚೂರು ಜಿಲ್ಲೆಗೆ ಗಡಿಪಾರು ಮಾಡಿ ಪುತ್ತೂರು ಸಹಾಯಕ ಆಯುಕ್ತೆ ಸ್ಟೆಲ್ಲಾ ವರ್ಗೀಸ್ ಆದೇಶಿಸಿದ್ದಾರೆ. 2026ರ
ಸಚಿವೆ ಹೆಬ್ಬಾಳ್ಕರ್ ಮಗನ ಸಕ್ಕರೆ ಕಾರ್ಖಾನೆಗೆ ಯಂತ್ರ ತರುವಾಗ ವಿದ್ಯುತ್ ದುರಂತಕ್ಕೆ ಯುವಕ ಬಲಿ
ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಮಗ ಮೃಣಾಲ್ ಒಡೆತನದ ಸಕ್ಕರೆ ಕಾರ್ಖಾನೆಗೆ ಕಾಂಕ್ರೀಟ್ ಮಶಿನ್ ಸಾಗಿಸುತ್ತಿದ್ದಾಗ ಮಾರ್ಗಮಧ್ಯೆ ಲಾರಿಗೆ ಹೈ ಟೆನ್ಷನ್ ವಿದ್ಯುತ್ ತಂತಿ ತಗುಲಿ ಯುವಕನೊಬ್ಬ ಪ್ರಾಣ ಕಳೆದುಕೊಂಡ ಘಟನೆ ಧಾರವಾಡ ತಾಲೂಕಿನ ಉಪ್ಪಿನ ಬೆಟಗೇರಿ ಗ್ರಾಮದ ಬಳಿ ನಡೆದಿದೆ. ಮೃತ
ಕುಂದಾಪುರ ಇಎಸ್‌ಐ ಆಸ್ಪತ್ರೆ ವೈದ್ಯರ ನೇಮಕಕ್ಕೆ ಕ್ರಮ: ಸಂತೋಷ್ ಲಾಡ್
ಕುಂದಾಪುರ ತಾಲೂಕಿನ ಇಎಸ್‌ಐ ಆಸ್ಪತ್ರೆಗೆ ವೈದ್ಯರ ನೇಮಕಕ್ಕೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಕಾರ್ಮಿಕ ಸಚಿವ ಸಂತೋಷ್ ಎಸ್ ಲಾಡ್ ಭರವಸೆ ನೀಡಿದರು. ಬೆಳಗಾವಿ ಸುವರ್ಣಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಕಿರಣ್ ಕುಮಾರ್ ಕೊಡ್ಗಿ ಅವರ ಪ್ರಶ್ನೆಗೆ
ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹಾಳು, ಕೈದಿಗಳ ಕೈಯಲ್ಲಿ ಫೋನ್, ಡ್ರಗ್ಸ್: ಆರ್ ಅಶೋಕ
ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹಾಳಾಗಿದೆ. ಜೈಲುಗಳಲ್ಲಿ ಕೈದಿಗಳ ಕೈಯಲ್ಲಿ ಫೋನ್ ಬಂದಿದೆ. ಡ್ರಗ್ಸ್ ಮಾಫಿಯಾ ವ್ಯಾಪಕವಾಗಿ ಬೆಳೆದಿದೆ. ಪೊಲೀಸರೇ ಕಳ್ಳರಾಗಿ ಬದಲಾಗಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಹೇಳಿದರು. ಬಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ವಿಧಾನಸಭೆಯಲ್ಲಿ ಕಾನೂನು ಸುವ್ಯವಸ್ಥೆ ಕುರಿತು
ನಮ್ಮ ಗ್ಯಾರಂಟಿಗಳನ್ನು ನಕಲು ಮಾಡಿ ಬಿಜೆಪಿ ಬೇರೆ ರಾಜ್ಯಗಳಲ್ಲಿ ಗೆಲ್ಲುತ್ತಿದೆ: ಡಿಕೆ ಶಿವಕುಮಾರ್
ನಮ್ಮ ಗ್ಯಾರಂಟಿ ಯೋಜನೆಗಳನ್ನು ನಕಲು ಮಾಡಿಯೇ ಎನ್ ಡಿಎ ಇಡೀ ದೇಶದಲ್ಲಿ ಬೇರೆ ರಾಜ್ಯಗಳಲ್ಲಿ ಚುನಾವಣೆ ಗೆದ್ದು ಅಧಿಕಾರ ಪಡೆಯುತ್ತಿದೆ. ನಮ್ಮ ಗ್ಯಾರಂಟಿ ಯೋಜನೆಗಳು ಇಲ್ಲವಾಗಿದ್ದರೆ, ನೀವು ಗೆಲ್ಲಲು ಸಾಧ್ಯವಾಗುತ್ತಿರಲಿಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ಬೆಳಗಾವಿಯ ಸುವರ್ಣ ಸೌಧದಲ್ಲಿ
ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಜನಪದ ಗಾಯಕ ಮೈಲಾರಿ ಅರೆಸ್ಟ್
ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎನ್ನಲಾಗಿರುವ ಮೈಲಾರಿ ಎಂಬಾತನನ್ನು ಬಾಗಲಕೋಟೆಯ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಮೈಲಾರಿಹಾಗೂ ಆತನ ಐವರು ಸಹಚರರ ವಿರುದ್ಧ ಪೋಕ್ಸೋ ಕೇಸ್ ದಾಖಲಾಗಿದೆ. ಘಟನೆ ಅಕ್ಟೋಬರ್ 24 ರಂದು
ದ್ವೇಷ ರಾಜಕಾರಣ ಬಿಜೆಪಿ ಆಸ್ತಿ, ನ್ಯಾಷನಲ್ ಹೆರಾಲ್ಡ್ ದೇಶದ ಆಸ್ತಿ, ನಮಗೆ ನ್ಯಾಯ ಸಿಕ್ಕಿದೆ: ಡಿಕೆ ಶಿವಕುಮಾರ್
ನ್ಯಾಷನಲ್ ಹೆರಾಲ್ಡ್ ಈ ದೇಶದ ಆಸ್ತಿ. ದ್ವೇಷ ರಾಜಕಾರಣ ಬಿಜೆಪಿ ಆಸ್ತಿ. ಸತ್ಯಕ್ಕೆ ಸಾವಿಲ್ಲ, ಸುಳ್ಳು ಕೇಸ್ ಗಳಿಗೆ ಆಯುಷ್ಯವಿಲ್ಲ ಎಂಬುದಕ್ಕೆ ಮಂಗಳವಾರ ಬಂದ ನ್ಯಾಯಾಲಯದ ಆದೇಶವೇ ಸಾಕ್ಷಿ. ಸತ್ಯ ಮೇವ ಜಯತೆ, ಬಿಜೆಪಿಗಿಲ್ಲ ಘನತೆ. ನಮ್ಮನ್ನು ಪಿತೂರಿಯಿಂದ ಸೋಲಿಸಲು ಸಾಧ್ಯವಿಲ್ಲ,




