Menu

ತುರುವೇಕೆರೆ ದೇಗುಲ ಹುಂಡಿ ಹಣ, ದೇವರ ಸರ ಕಳವು

ತುರುವೇಕೆರೆ ತಾಲೂಕಿನ ಅರೆಹಳ್ಳಿಯಲ್ಲಿರುವ ಬಸವೇಶ್ವರ ಸ್ವಾಮಿಯ ಕತ್ತು ಅಲಂಕರಿಸಿದ್ದ 500 ಗ್ರಾಂ ತೂಕದ ಬೆಳ್ಳಿಯ ಸರ ಮತ್ತು ದೇವಾಲಯದ ಹುಂಡಿಯಲ್ಲಿದ್ದ 10 ಸಾವಿರರೂಪಾಯಿಗಳನ್ನು ಕಳ್ಳರು ಕದ್ದೊಯ್ದಿದ್ದಾರೆ. ಅರೆಹಳ್ಳಿ ಗ್ರಾಮ ದೇವರಾಗಿರುವ ಶ್ರೀ ಬಸವೇಶ್ವರ ಸ್ವಾಮಿ ದೇವಾಲಯದ ಅರ್ಚಕರಾಗಿರುವ ರುದ್ರೇಶ್ ಬೆಳಗ್ಗೆ ಪೂಜೆಗಾಗಿ ದೇವಾಲಯಕ್ಕೆ ತೆರಳಿದ್ದರು. ದೇವಾಲಯದ ಬಾಗಿಲಿಗೆ ಹಾಕಲಾಗಿದ್ದ ಬೀಗವನ್ನು ಯಾರೋ ಒಡೆದಿದ್ದು ಗಮನಿಸಿ ಗಾಬರಿಯಾಗಿ ಗ್ರಾಮಸ್ಥರಿಗೆ ವಿಷಯ ಮುಟ್ಟಿಸಿದರು. ಗ್ರಾಮಸ್ಥರು ದೇವಾಲಯದ ಒಳಗೆ ಬಂದು ನೋಡಬೇಕಾದರೆ ಬಸವೇಶ್ವರ ಸ್ವಾಮಿಯ

ಕಾಂಗ್ರೆಸ್‌ ನಾಯಕ ಶಾಮನೂರು ಶಿವಶಂಕರಪ್ಪ ನಿಧನ, ದಾವಣಗೆರೆಯಲ್ಲಿ ಇಂದು ಸಂಜೆ ಅಂತ್ಯಸಂಸ್ಕಾರ

ಕಾಂಗ್ರೆಸ್​​ನ ಹಿರಿಯ ನಾಯಕ, ಮಾಜಿ ಸಚಿವ, ಶಾಸಕ ಶಾಮನೂರು ಶಿವಶಂಕರಪ್ಪ ಭಾನುವಾರ ನಿಧನರಾದರು. ಅವರಿಗೆ 94 ವರ್ಷ ಆಗಿತ್ತು. ವಯೋಸಹಜ ಅನಾರೋಗ್ಯದಿಂದ ಬೆಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಅಂತ್ಯಸಂಸ್ಕಾರ ದಾವಣಗೆರೆಯಲ್ಲಿ ಇಂದು ಸಂಜೆ ನಡೆಯಲಿದೆ. ಅವರ ನಿಧನ ಪ್ರಯುಕ್ತ ಗೌರವಾರ್ಥವಾಗಿ ಡಿ.

ರಾಮನಗರದಲ್ಲಿ ಕಾಡಾನೆ ದಾಳಿಗೆ ರೈತ ಬಲಿ

ರಾಮನಗರದ ಹಾರೋಹಳ್ಳಿ ತಾಲೂಕಿನ ದುಮ್ಮಸಂದ್ರ ಗ್ರಾಮದಲ್ಲಿ ಕಾಡಾನೆ ದಾಳಿಗೆ ರೈತರೊಬ್ಬರು ಬಲಿಯಾಗಿದ್ದಾರೆ. ರೈತ ಪುಟ್ಟಮಾದೇಗೌಡ (48) ಆನೆ ದಾಳಿಗೆ ಬಲಿಯಾದವರು. ಮುಂಜಾನೆ ಜಮೀನಿಗೆ ನೀರು ಹಾಯಿಸಲು ಹೋಗುತ್ತಿದ್ದಾಗ ಏಕಾಏಕಿ ಕಾಡಾನೆ ದಾಳಿ ಮಾಡಿದೆ. ಮಾದೇಗೌಡ ಸ್ಥಳದಲ್ಲೇ ಅಸು ನೀಗಿದ್ದಾರೆ. ಬನ್ನೇರುಘಟ್ಟ ಅರಣ್ಯ

ಬೇರೆ ಯುವತಿ ಜೊತೆ ಮದುವೆ: ಮಂಟಪಕ್ಕೆ ಬಂದು ತನ್ನನ್ನೇ ಮದುವೆಯಾಗುವಂತೆ ಹಠ ಹಿಡಿದ ಪ್ರೇಯಸಿ

ಚಿಕ್ಕಮಗಳೂರಿನ ದೊಡ್ಡೇಗೌಡ ಕನ್ವೆನ್ಷನ್‌ ಹಾಲ್‌ನಲ್ಲಿ ಯುವಕ ಮದುವೆಯಾಗುತ್ತಿದ್ದಾಗ ಮಂಟಪಕ್ಕೆ ಬಂದ ಆತನ ಪ್ರೇಯಸಿ, ನಾನು ಇವನನ್ನೇ ಮದುವೆಯಾಗಬೇಕು.ಮದುವೆ ಆಗುವವರೆಗೂ ನಾನು ಇಲ್ಲಿಂದ ಹೋಗುವುದಿಲ್ಲ, ವಿಷ ಕುಡಿದು ಸಾಯುತ್ತೇನೆ ಎಂದು ಗಲಾಟೆ ಮಾಡಿದ್ದಾಳೆ. ಈತ 10 ವರ್ಷ ಪ್ರೀತಿಸಿ ಮೋಸ ಮಾಡಿದ್ದಾನೆಂದು ಯುವತಿ

ಅಕ್ರಮ ಸಂಬಂಧ: ದೊಡ್ಡಬಳ್ಳಾಪುರದಲ್ಲಿ ಯುವಕನ ಕೊಲೆಗೆ ಯತ್ನ

ದೊಡ್ಡಬಳ್ಳಾಪುರ ತಾಲೂಕಿನ ಪುಟ್ಟಯ್ಯನ ಅಗ್ರಹಾರ ಗ್ರಾಮದಲ್ಲಿ ಅಕ್ರಮ‌ ಸಂಬಂಧ ಹಿನ್ನೆಲೆ‌ ಯುವಕನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಕೊಚ್ಚಿ ಕೊಲೆ ಮಾಡಲು ಯತ್ನಿಸಲಾಗಿದೆ. ಹಲ್ಲೆಗೊಳಗಾದ ಕಾರ್ತಿಕ್​​ (26) ಪ್ರಾಣಾಪಾಯದಿಂದ ಪಾರಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ, ಹಲ್ಲೆ ವೇಳೆ ತಡೆಯಲು ಹೋದ ಯುವಕನ

ರಾಜ್ಯ ಪ್ರಶಸ್ತಿ ಚಿನ್ನದ ಪದಕ ಸೇರಿ ಕಲಾವಿದೆ ಮನೆಯಿಂದ ಚಿನ್ನ ಕದ್ದವರ ಬಂಧನ

ಚಿತ್ರನಟಿ, ರಂಗಭೂಮಿ ಕಲಾವಿದೆಯ ರಾಜ್ಯ ಪ್ರಶಸ್ತಿ ಚಿನ್ನದ ಪದಕ ಸೇರಿ 90 ಗ್ರಾಂ ಚಿನ್ನ ದೋಚಿದ್ದ ಕಳ್ಳರನ್ನು ತಿಪಟೂರು ನಗರ ಪೊಲೀಸರು ಬಂಧಿಸಿದ್ದಾರೆ. ಶಂಕರ್ (26), ಗುರುರಾಜು ( 33), ಮನೋಜ್ ( 18) ಬಂಧಿತರು. ತಿಪಟೂರಿನ ವಿಜಯನಗರದಲ್ಲಿ ವಾಸವಿದ್ದ ನಟಿ, ರಂಗಭೂಮಿ

ಯತೀಂದ್ರ ಸಿಎಂ ಬದಲಾವಣೆ ಹೇಳಿಕೆ ಕೊಡಬಾರದಿತ್ತು: ಶಾಸಕ ನಂಜೇಗೌಡ

ಯತೀಂದ್ರ ಸಿದ್ದರಾಮಯ್ಯ ಆರಾಮವಾಗಿ ಇರಬೇಕು ಅಷ್ಟೇ,  ಅಧಿಕಾರ ಹಂಚಿಕೆ ವಿಚಾರವಾಗಿ ಇಂತಹ ಹೇಳಿಕೆ ಕೊಡಬಾರದಿತ್ತು. ಸಿದ್ದರಾಮಯ್ಯ ರಾಜ್ಯದ ನಾಯಕ, ಅವಕಾಶ ಸಿಕ್ಕಿದರೆ ರಾಷ್ಟ್ರೀಯ ನಾಯಕರೂ ಆಗಬಹುದು ಎಂದು ಶಾಸಕ ಕೆವೈ ನಂಜೇಗೌಡ ಹೇಳಿದರು ಕೋಲಾರದ   ಬೆಳಗಾನಹಳ್ಳಿಯಲ್ಲಿರುವ ಹಾಲು ಒಕ್ಕೂಟದ ಕಚೇರಿಯಲ್ಲಿ ಮಾತನಾಡಿದ

ಸಕಲೇಶಪುರದಲ್ಲಿ ಆಸ್ತಿಗಾಗಿ ಮಹಿಳೆಯ ಡೆತ್‌ ಸರ್ಟಿಫಿಕೇಟ್‌ ಮಾಡಿಸಿದ ವಂಚಕ

ಸಕಲೇಶಪುರ ಚಿಕ್ಕನಾಯಕನಹಳ್ಳಿ ಗ್ರಾಮದಲ್ಲಿ ವಯಸ್ಸಾಗಿರುವ ಮಹಿಳೆ ಬದುಕಿರುವಾಗಲೇ ವ್ಯಕ್ತಿಯೊಬ್ಬ ಮೋಸದಿಂದ ಮರಣ ಪ್ರಮಾಣ ಪತ್ರ ಮಾಡಿಸಿ ಆಸ್ತಿ ಲಪಟಾಯಿಸಿದ ಆರೋಪ ಕೇಳಿ ಬಂದಿದೆ. ‌ ಗ್ರಾಮದ ಮಹಿಳೆ ಸಿದ್ದಮ್ಮ ಅವರ ಹೆಸರಿನಲ್ಲಿ ಸರ್ವೆ ನಂ.68 ರಲ್ಲಿ 1 ಎಕರೆ 20 ಗುಂಟೆ

ಲವ್‌, ಸೆಕ್ಸ್‌, ಅಬಾರ್ಷನ್‌ ಬಳಿಕ ರಾಯಚೂರಿನಲ್ಲಿ ಮತ್ತೊಬ್ಬಾಕೆ ಜೊತೆ ಪ್ರಿಯಕರನ ಮದುವೆ ತಡೆದ ಸಂತ್ರಸ್ತೆ

ಕೊಪ್ಪಳದ ಯುವತಿಯೊಬ್ಬಳು ರಾಯಚೂರಿನಲ್ಲಿ ನಡೆಯಬೇಕಿದ್ದ ಅದ್ಧೂರಿ ಮದುವೆಯೊಂದನ್ನು ತಡೆದಿದ್ದು, ಪ್ರಕರಣ ಪೊಲೀಸ್‌ ಠಾಣೆಗೆ ತಲುಪಿದೆ. ಪ್ರೀತಿಸಿ, ದೈಹಿಕ ಸಂಪರ್ಕ ಬೆಳೆಸಿ, ಗರ್ಭಪಾತ ಮಾಡಿಸಿದ ಯುವಕ ಈಗ ಬೇರೊಬ್ಬ ಯುವತಿಯನ್ನು ಮದುವೆಯಾಗಲು ಸಿದ್ಧತೆ ನಡೆಸಿರುವುದಾಗಿ ಸಂತ್ರಸ್ತೆ ಪೊಲೀಸರಿಗೆ ದೂರು ನೀಡಿದ್ದಾಳೆ. ಪ್ರೀತಿಸಿ ದೈಹಿಕ

ಮೊಬೈಲ್‌ ಬಳಸ್ಬೇಡಿ ಅಂದಿದ್ದಕ್ಕೆ ರಾತ್ರಿಯೇ ಬಾಗಲಕೋಟೆ ಹಾಸ್ಟೆಲ್‌ನಿಂದ ವಿದ್ಯಾರ್ಥಿನಿಯರು ಎಸ್ಕೇಪ್‌

ಬಾಗಲಕೋಟೆಯ ನವನಗರದಲ್ಲಿರುವ ಮೊರಾರ್ಜಿ ವಸತಿ ಶಾಲೆಯ ಹಾಸ್ಟೆಲ್​ನಲ್ಲಿ ಮೊಬೈಲ್ ಬಳಸಬೇಡಿ ಎಂದಿದ್ದಕ್ಕೆ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿಯರು ರಾತ್ರೋರಾತ್ರಿ ಹಾಸ್ಟೆಲ್‌ನಿಂದ ಪರಾರಿಯಾಗಿದ್ದಾರೆ. ಮಹಿಳಾ ಠಾಣೆಯಲ್ಲಿ ದಾಖಲಾಗಿದ್ದು, ತಕ್ಷಣ ಪೊಲೀಸರು ಶೋಧ ಕಾರ್ಯಾಚರಣೆ ಕೈಗೊಂಡು ವಿಜಯಪುರದಲ್ಲಿ ವಿದ್ಯಾರ್ಥಿನಿಯರನ್ನು ಪತ್ತೆ ಹಚ್ಚಿ ಸುರಕ್ಷಿತವಾಗಿ ಕರೆತಂದಿದ್ದಾರೆ. ನವನಗರದ ಮೊರಾರ್ಜಿ